2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಸುದ್ದಿಗಳು News

Posted by vidyamaana on 2024-07-23 07:07:38 |

Share: | | | | |


2ನೇ ರಾಜ್ಯಭಾಷೆಯಾಗಿ ತುಳು ಘೋಷಣೆಗೆ ಯತ್ನ

ಪುತ್ತೂರು: ರಾಜ್ಯದಲ್ಲಿ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಪ್ರಯತ್ನ ಕೈಗೂಡುವ ವಿಶ್ವಾಸವಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಮತ್ತು ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಹಯೋಗದಲ್ಲಿ ಪುತ್ತೂರಿನ ರೋಟರಿ ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ - ಉಪನ್ಯಾಸ- ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಶ್ಚಿಮ ಬಂಗಾಳ ಸೇರಿದ ಅನೇಕ ರಾಜ್ಯಗಳಲ್ಲಿ ೨ನೇ ರಾಜ್ಯಭಾಷೆ ಘೋಷಣೆ ಸಂದರ್ಭ ಯಾವೆಲ್ಲ ಮಾನದಂಡ ಅನುಸರಿಸಲಾಗಿದೆ ಎಂಬುದರ ಅಧ್ಯಯನ ನಡೆಸಿ ವರದಿ ತಯಾರಿಸಲಾಗಿದೆ. ಇದನ್ನು ಸರಕಾರ ಪರಿಶೀಲಿಸಿ ಶೀಘ್ರದಲ್ಲೇ ತುಳು ಭಾಷೆಯನ್ನು ೨ನೇ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವ ಸಂಬAಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡ ಮೇಲೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಲಾಗುವುದು. ಅದೇ ರೀತಿ ತುಳು ಭಾಷೆಯನ್ನು ಸಂವಿಧಾನದ ೮ನೇ ಪರಿಚ್ಛೇದದಲ್ಲಿ ಸೇರಿಸುವ ವಿಚಾರದಲ್ಲೂ ಕೇಂದ್ರದ ಮೇಲೆ ರಾಜ್ಯದಿಂದ ಒತ್ತಡ ತರುವ ಕೆಲಸ ಮಾಡಲಾಗುತ್ತದೆ. ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದೇನೆ. ಮುಂದಿನ ಬಜೆಟ್‌ನಲ್ಲಿ ಘೋಷಣೆಯ ಆಶಾವಾದ ಇದೆ ಎಂದವರು ಹೇಳಿದರು.

ಸೋಷಿಯಲ್ ಮೀಡಿಯಾದ ಅಬ್ಬರದ ನಡುವೆಯೇ ಜನ ಪತ್ರಿಕೆ ಓದುವುದು ಕಡಿಮೆ ಮಾಡಿಲ್ಲ. ಪತ್ರಿಕಾ ರಂಗದಲ್ಲಿ ಪ್ರಾಮಾಣಿಕತೆ ಬೇಕು. ಅದಿರುವ ಕಾರಣವೇ ದಕ್ಷಿಣಕನ್ನಡದ ಪತ್ರಕರ್ತರು ಎಲ್ಲಿ ಹೋದರೂ ಛಾಪು ಮೂಡಿಸುತ್ತಾರೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭ ಅಭಿವ್ಯಕ್ತಿ ಸ್ವಾತಂತ್ರö್ಯ ಮತ್ತು ಪತ್ರಿಕಾ ಸ್ವಾತಂತ್ರö್ಯ ದಮನ ಮಾಡಲಾಗಿತ್ತು. ಆಗ ಧೀಮಂತ ಪತ್ರಿಕೆಗಳು ಭೂಗತರಾಗಿದ್ದುಕೊಂಡೇ ಪತ್ರಿಕೆ ನಡೆಸಿ ಜನಜಾಗೃತಿ ಮೂಡಿಸಿದ್ದರು. ದೇಶ ಕಟ್ಟುವಲ್ಲಿ ಪತ್ರಿಕೆಗಳ ಪಾತ್ರ ಬಹಳಷ್ಟು ದೊಡ್ಡದು. ಸೋಷಿಯಲ್ ಮೀಡಿಯಾದಿಂದ ಉಪಯೋಗವಿದೆಯಾದರೂ ಅಷ್ಟೇ ಕೆಟ್ಟದೂ ಇದೆ ಎಂದರು.


ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಉಪನ್ಯಾಸ ನೀಡಿದರು. ಮಾಧ್ಯಮ ವರದಿ ಇವತ್ತು ಪ್ರತಿಯೊಬ್ಬರ ಕೈಗೂ ಬಂದಿದೆ. ಜಗತ್ತಿನಲ್ಲಿ ಜೀವರಕ್ಷಕ ಔಷಧಿ ಮೊದಲ ಸ್ಥಾನದಲ್ಲಿದ್ದರೆ, ೨ನೇ ಸ್ಥಾನದಲ್ಲಿ ಮುದ್ರಣ ಮಾಧ್ಯಮಗಳಿವೆ. ಇಷ್ಟಾದರೂ ಮಾಧ್ಯಮಗಳು ಕೆಲವೊಂದು ಅಪವಾದಗಳನ್ನು ಕೂಡ ಎದುರಿಸುತ್ತಿವೆ. ಆರೋಪಿಯೊಬ್ಬನನ್ನು ನ್ಯಾಯಾಲಯ ವಿಚಾರಣೆ ನಡೆಸುವ ಮೊದಲೇ ಮಾಧ್ಯಮಗಳು ವಿಚಾರಣೆ ನಡೆಸಿ ತಪ್ಪಿತಸ್ಥನೆಂದು ಘೋಷಿಸುವುದು ಆತಂಕಕಾರಿ ಬೆಳವಣಿಗೆ. ಅದೇ ರೀತಿ ಪೀತ ಪತ್ರಿಕೋದ್ಯಮದ ಬಗ್ಗೆಯೂ ಜಾಗೃತಿ ಅಗತ್ಯ ಎಂದರು. ಪ್ರತಿಯೊಬ್ಬ ಪತ್ರಕರ್ತರಿಗೂ ವೃತ್ತಿಪರತೆ ಮತ್ತು ನೈತಿಕತೆ ಅಗತ್ಯವಾಗಿ ಬೇಕು ಎಂದವರು ನುಡಿದರು. ಮಾಹಿತಿ ಎಂಬುದು ನೀರಿನ ಥರ. ಕಡಿಮೆಯಾದರೂ ಕಷ್ಟ, ಜಾಸ್ತಿಯಾದರೂ ಕಷ್ಟ. ಇದನ್ನು ಪತ್ರಕರ್ತರು ಅರ್ಥಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.


ಇದೇ ಸಂದರ್ಭದಲ್ಲಿ ಶೇಟ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಕೊಡುಗೆಯಾಗಿ ನೀಡಿದ ಸಿಸಿ ಕ್ಯಾಮೆರಾವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪತ್ರಕರ್ತರಿಗೆ ಹಸ್ತಾಂತರ ಮಾಡಿದರು.


ಪತ್ರಿಕಾ ವಿತರಕರಾದ ವಿಶ್ವನಾಥ್ ಪುತ್ತೂರು ಅವರನ್ನು ಶಾಸಕರು ಪತ್ರಕರ್ತರ ಸಂಘದ ಪರವಾಗಿ ಸನ್ಮಾನಿಸಿದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಾದ ಹಷೇಂದ್ರ ಪ್ರಸಾದ್, ಮಹೇಶ್ ಪ್ರಸಾದ್, ದೀಪ್ತಿ ಭಟ್, ಎ.ಯು. ಅವನೀಶ್ ಕುಮಾರ್, ಸಮ್ಯಕ್, ಸಿಹಾ ಶಮ್ರಾ, ಪುಣ್ಯಶ್ರೀ ಪಿ. ಅವರನ್ನು ಸಂಘದ ಪರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಸಿದ್ಧಿಕ್ ನೀರಾಜೆ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್,ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ,ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವನಿಕೃಷ್ಣ, ಎಸೋಸಿಯೇಶನ್ ಆಫ್ ಸಿವಿಲ್ ಎಂಜಿನಿರ‍್ಸ್ (ಎಸಿಸಿಇ-ಐ) ಪುತ್ತೂರು ಸೆಂಟರ್ ಅಧ್ಯಕ್ಷರಾದ ಪ್ರಮೋದ್ ಕುಮಾರ್ ಕೆ.ಕೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸುಧಾಕರ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯ ಮೇಘಾ ಪಾಲೆತ್ತಾಡಿ ಮತ್ತು ರೋಟರಿ ಯುವ ಸಂಸ್ಥೆಯ ಕಾರ್ಯದರ್ಶಿ ವಚನಾ ಜಯರಾಂ,ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ, ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ,ಕಾರ್ಯಕಾರಿ ಸಮಿತಿ ಸದಸ್ಯರಾದ ಐ. ಬಿ. ಸಂದೀಪ್,ಕುಮಾರ್,ಪ್ರಸಾದ್ ಬಲ್ನಾಡ್, ಸಂಘದ ಕಾರ್ಯದರ್ಶಿ ಅಜಿತ್ ಕುಮಾರ್, ಸದಸ್ಯರಾದ ಅನಿಶ್ ಕುಮಾರ್ ಮರೀಲ್,ಶರತ್, ರಾಜೇಶ್ ಪಟ್ಟೆ, ಪಾರೂಕ್ ಶೇಕ್ , ಮತ್ತಿತ್ತರರು ಉಪಸ್ಥಿತರಿದ್ದರು.

 Share: | | | | |


ಜಾರಿಯಾಯ್ತು ಕಾಂಗ್ರೆಸ್ ಗ್ಯಾರಂಟಿ - ವೈರಲ್ ಆಯ್ತು ಬಿಜೆಪಿಗೆ ಟಾಂಗ್ ನೀಡಿದ ಕೈ ಟ್ವೀಟ್

Posted by Vidyamaana on 2023-06-02 12:05:08 |

Share: | | | | |


ಜಾರಿಯಾಯ್ತು ಕಾಂಗ್ರೆಸ್ ಗ್ಯಾರಂಟಿ - ವೈರಲ್ ಆಯ್ತು ಬಿಜೆಪಿಗೆ ಟಾಂಗ್ ನೀಡಿದ ಕೈ ಟ್ವೀಟ್

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.


ಇದರ ಬೆನ್ನಲ್ಲೇ ಮಾಜಿ ಸಿಎಂ ಬೊಮ್ಮಾಯಿ ಸೇರಿ ವಿಪಕ್ಷ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಎಲ್ಲರಿಗೂ ತಲುಪಲಿದೆ ಎಂದು ತಿಳಿಸಿದೆ. 


ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ!, ಶೋಭಾ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ ಎಂದು ಕಾಂಗ್ರೆಸ್  ಕುಟುಕಿದೆ. 


ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ. ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

BREAKING: ಚುನಾವಣಾ ಬಾಂಡ್ ಪ್ರಕರಣ: ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ SBI

Posted by Vidyamaana on 2024-03-13 13:39:43 |

Share: | | | | |


BREAKING: ಚುನಾವಣಾ ಬಾಂಡ್ ಪ್ರಕರಣ: ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ SBI

ನವದೆಹಲಿ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣಾ ಬಾಂಡ್ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ ಒಂದು ದಿನದ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬುಧವಾರ ಚುನಾವಣಾ ಬಾಂಡ್ಗಳ ಪ್ರಕರಣದಲ್ಲಿ ಅನುಸರಣಾ ಅಫಿಡವಿಟ್ ಸಲ್ಲಿಸಿದೆ.ಅಫಿಡವಿಟ್ನಲ್ಲಿ, SBI ಫೆಬ್ರವರಿ 15, 2024 ರವರೆಗೆ ಖರೀದಿಸಿದ ಮತ್ತು ರಿಡೀಮ್ ಮಾಡಿದ ಚುನಾವಣಾ ಬಾಂಡ್ಗಳ ವಿವರಗಳನ್ನು ಹಂಚಿಕೊಂಡಿದೆ.ಎಸ್ಬಿಐ ಒದಗಿಸಿದ ಮಾಹಿತಿಯ ಪ್ರಕಾರ, ಏಪ್ರಿಲ್ 1, 2019 ರಿಂದ ಅದೇ ವರ್ಷದ ಏಪ್ರಿಲ್ 11 ರ ನಡುವೆ ಒಟ್ಟು 3,346 ಚುನಾವಣಾ ಬಾಂಡ್ಗಳನ್ನು ಖರೀದಿಸಲಾಗಿದೆ. ಒಟ್ಟು 1,609 ಬಾಂಡ್ಗಳನ್ನು ಹಿಂಪಡೆಯಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.


ಏಪ್ರಿಲ್ 12, 2019 ರಿಂದ ಫೆಬ್ರವರಿ 15 ರವರೆಗೆ ಒಟ್ಟು 18,871 ಚುನಾವಣಾ ಬಾಂಡ್ಗಳನ್ನು ಖರೀದಿಸಲಾಗಿದೆ ಮತ್ತು 20,421 ಬಾಂಡ್ಗಳನ್ನು ಹಿಂಪಡೆಯಲಾಗಿದೆ ಎಂದು ಎಸ್ಬಿಐ ಅಂಕಿ ಅಂಶಗಳು ತಿಳಿಸಿವೆ.


ಚುನಾವಣಾ ಬಾಂಡ್ಗಳ ಡೇಟಾವನ್ನು ಎರಡು ಪಾಸ್ವರ್ಡ್ ರಕ್ಷಿತ ಪಿಡಿಎಫ್ ಫೈಲ್ಗಳೊಂದಿಗೆ ಪೆನ್ ಡ್ರೈವ್ನಲ್ಲಿ ಹಸ್ತಾಂತರಿಸಲಾಯಿತು. ಪಾಸ್ ವರ್ಡ್ ಗಳನ್ನು ಪ್ರತ್ಯೇಕ ಲಕೋಟೆಯಲ್ಲಿ ನೀಡಲಾಯಿತು.ಜೂನ್ 30 ರವರೆಗೆ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ ಎಸ್ಬಿಐ ಚುನಾವಣಾ ಬಾಂಡ್ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿತ್ತು.


ಕಳೆದ 26 ದಿನಗಳಲ್ಲಿ ನೀವು ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ? ನಿಮ್ಮ ಅರ್ಜಿ ಈ ಬಗ್ಗೆ ಮೌನವಾಗಿದೆ" ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಉನ್ನತ ನ್ಯಾಯಾಲಯದ ನ್ಯಾಯಪೀಠ ಎಸ್ಬಿಐಗೆ ಕೇಳಿದೆ.

ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

Posted by Vidyamaana on 2023-01-10 11:32:15 |

Share: | | | | |


ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಕಚೇರಿ ಕಾರ್ಯಾರಂಭ

ಪುತ್ತೂರು: ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಕೇಂದ್ರೀಕರಿಸಿಕೊಂಡು ಪುತ್ತೂರಿನಲ್ಲಿ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಕಚೇರಿ ಕಾರ್ಯಾರಂಭ ಮಾಡಿದೆ.

ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದ ಹಿಂಬದಿಯ ಕೊಠಡಿಯಲ್ಲಿದೆ ಇಲಾಖೆಯ ಕಚೇರಿ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಇದೇ ಕೊಠಡಿಯಲ್ಲಿತ್ತು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಜುಳಾಶ್ರೀ ಶೆಣೈ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಂಗಳೂರಿನಲ್ಲಿದ್ದ ಕಚೇರಿಯ ವಿಸ್ತರಿತ ಭಾಗ ಇದೀಗ ಪುತ್ತೂರಿನಲ್ಲಿ ಕಾರ್ಯಾರಂಭ ಮಾಡಿದೆ. ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುವ ಹಲವು ಯೋಜನೆಗಳು ಇಲಾಖೆಯಲ್ಲಿದ್ದು, ಮೀನುಗಾರಿಕೆ ಕೃಷಿ ಮಾಡುವವರಿಕೆ, ಎಫ್ಓಪಿ ಸಂಸ್ಥಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.


ಜ. 4ರಂದು ಸಚಿವ ಎಸ್. ಅಂಗಾರ ಅವರು ಕಚೇರಿಯನ್ನು ಉದ್ಘಾಟಿಸಿದರು. ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಉಪನಿರ್ದೇಶಕಿ ಸುಶ್ಮಿತಾ ರಾವ್, ತಾ.ಪಂ. ಇಓ ನವೀನ್ ಕುಮಾರ್ ಭಂಡಾರಿ, ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಪುತ್ತೂರ್ದ ಮುತ್ತು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.


Read More:ಬೆಟ್ಟಂಪಾಡಿ: ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಶಂಕುಸ್ಥಾಪನೆ

ಪುತ್ತೂರು ನಗರಸಭೆ ಬೈ ಎಲೆಕ್ಷನ್ ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

Posted by Vidyamaana on 2023-12-14 20:49:14 |

Share: | | | | |


ಪುತ್ತೂರು ನಗರಸಭೆ ಬೈ ಎಲೆಕ್ಷನ್  ಹೊರಬಿತ್ತು ಬಿಜೆಪಿ ಅಭ್ಯರ್ಥಿಗಳ ಹೆಸರು ಎರಡು ವಾರ್ಡ್ ಗಳಿಗೆ ಕಮಲ ಕಲಿಗಳು ಯಾರು?

ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ರನ್ನು., ಅದೇ ರೀತಿ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.


ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರು‌ಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.


ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.

ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

Posted by Vidyamaana on 2024-01-31 08:13:29 |

Share: | | | | |


ಚಿನ್ನದ ಅಂಗಡಿ ಮೇಲೆ ನಕಲಿ ಅಧಿಕಾರಿಗಳ ದಾಳಿ 1 ಕೇಜಿ ಬಂಗಾರ ತೆಗೆದುಕೊಂಡು ಪರಾರಿಯಾಗುತ್ತಿದ್ದವರು ಪೊಲೀಸರ ಬಲಗೆ ಬಿದ್ದಿದ್ದೇ ರೋಚಕ

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದೆ. ಜನವರಿ 27 ರಂದು ಕೆಆರ್​ಪುರಂನಲ್ಲಿರುವ (KR Puram) ಚಿನ್ನದ ಅಂಗಡಿ (Gold Shop) ಮೇಲೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ದಾಳಿ ಮಾಡಿದ್ದರು. ಆದರೆ ದಾಳಿ ಮಾಡಿದವರು ಅಸಲಿ ಅಧಿಕಾರಿಗಳಲ್ಲ, ಬದಲಿಗೆ ನಕಲಿ ಅಧಿಕಾರಿಗಳು. 45 ನಿಮಿಷದ ಕಾರ್ಯಾಚರಣೆ ಥೇಟ್ ಸಿನಿಮಾ ಕಥೆಯನ್ನೇ ಹೊಲುವ ರೀತಿ ಇದೆ. ಯಾವಾಗ ಇವರು ನಕಲಿ ಅಧಿಕಾರಿಗಳು ಎಂದು ತಿಳಿಯಿತು, ಆಗ 30 ನಿಮಿಷದ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಇದು ಪ್ರಕರಣದ ಮೇಜರ್ ಟ್ವಿಸ್ಟ್ ಆಗಿದೆ.


ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಧಿಕಾರಿಗಳು ಅಂತ ಹೇಳಿ ಇದೇ ತಿಂಗಳು 27 ರಂದು ಇನೋವ್​ ಕಾರ್​ನಲ್ಲಿ ಎಂಟ್ರಿ ಕೊಟ್ಟಿದ್ದ ನಾಲ್ವರು ಕೆಆರ್​ಪುರಂನಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರ್ಸ್ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ ಅದರಲ್ಲಿ‌ ನಿಮ್ಮದೂ ಒಂದು. ಹಾಲ್ ಮಾರ್ಕ್ ಇಲ್ಲದೆ ಅಕ್ರಮವಾಗಿ ನೀವು ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ನಮಗೆ ದೊರೆತಿದೆ ಹೀಗಾಗಿ ದಾಳಿ ಮಾಡಿದ್ದೇವೆ ಎಂದು ನಕಲಿ ಅಧಿಕಾರಿಗಳು ಹೇಳಿದ್ದಾರೆ. ಬಳಿಕ 45 ನಿಮಿಷ ಕಾರ್ಯಾಚರಣೆ ನಡೆಸಿದ ನಕಲಿ ಅಧಿಕಾರಿಗಳು, ಅಂಗಡಿಯಲ್ಲಿದ್ದ 80 ಲಕ್ಷ ರೂ. ಮೌಲ್ಯದ 1 ಕೆಜಿಗೂ ಅಧಿಕ ಚಿನ್ನ ತೆಗೆದುಕೊಂಡರು.


ಇವೆಲ್ಲವನ್ನೂ ಸೀಜ್ ಮಾಡುವುದಾಗಿ ನಕಲಿ ಅಧಿಕಾರಿಗಳು ಹೇಳಿದ್ದರು. ಬಳಿಕ ಅಂಗಡಿ ಮಾಲಿಕನ ಕೈಗೆ ನಕಲಿ ನೋಟಿಸ್ ನೀಡಿ, ಮುಂದಿನ ವಾರ ತಮಿಳುನಾಡಿನ ಕಚೇರಿಗೆ ಬರುವಂತೆ ಹೇಳಿ ಹೋದರು. ಹೀಗೆ ಹೋಗುವಾಗ ನಕಲಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.ಊರು ಬಿಡುವ ಮುನ್ನವೇ ನಕಲಿ ಅಧಿಕಾರಿಗಳು ಲಾಕ್ ಆಗಿದ್ದೇಗೆ ?


ನಕಲಿ ಅಧಿಕಾರಿಗಳು ಚಿನ್ನದ ಅಂಗಡಿಯಿಂದ ಹೊರಡುವಾಗ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಕಂಡು ಅನುಮಾನಗೊಂಡ ಚಿನ್ನದ ಅಂಗಡಿ ಕೆಲ ಸಿಬ್ಬಂದಿಗಳು, ನಕಲಿ ಅಧಿಕಾರಿಗಳನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಇದನ್ನು ತಿಳಿದ ನಕಲಿ ಅಧಿಕಾರಿಗಳು, ತಪ್ಪಿಸಿಕೊಳ್ಳುವ ಬರದಲ್ಲಿ ಟಿಸಿ ಪಾಳ್ಯದಲ್ಲಿ ಬೈಕ್​​ಗಳಿಗೆ ಗುದ್ದಿದ್ದಾರೆ.


ಇತ್ತ ಅಂಗಡಿ ಮಾಲಿಕರಿಗೂ ಅನುಮಾನ ಬಂದು ಕೆಆರ್​ಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಾಗುತಿದ್ದಂತೆ, ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ. ಕೂಡಲೇ ಅಲರ್ಟ್ ಆದ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದಾರೆ. ಪೊಲೀಸರು ಬರುವುದನ್ನು ಕಂಡ ನಕಲಿ ಅಧಿಕಾರಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಚೇಸ್​​ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಸಂಪತ್ ಕುಮಾರ್, ಜೊಶಿ ಥಾಮಸ್, ಅವಿನಾಶ್, ಸಂದೀಪ್ ಬಂಧಿತಕ ನಕಲಿ ಅಧಿಕಾರಿಗಳು. ಸಂಪತ್ ಈ ಹಿಂದೆ ಮಂಡ್ಯದಲ್ಲಿ ಸಹ ಕಳ್ಳತನ ಕೃತ್ಯ ಎಸಗಿದ್ದನು. ಈ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸಿ ಬಿಡುಗಡೆಯಾಗಿದ್ದನು. ಅದಾದ ಬಳಿಕ ತಮಿಳುನಾಡು ಮೂಲದ ಓರ್ವ ವ್ಯಕ್ತಿಯ ಸಂರ್ಪಕಕ್ಕೆ ಬಂದಿದ್ದಾನೆ. ಆತನ ನಿರ್ದೇಶನದಂತೆ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ.


ಆರೋಪಿಗಳು ಅರೆಸ್ಟ್​ ಆಗುತ್ತಿದ್ದಂತೆ ತಮಿಳುನಾಡು ಮೂಲದ ಮಾಸ್ಟರ್ ಮೈಂಡ್ ನಾಪತ್ತೆಯಾಗಿದ್ದಾನೆ. ಕೆಆರ್​ಪುರಂ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಕಳ್ಳತನವಾಗಿದ್ದ ಸಂಪೂರ್ಣ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: ವಿದ್ಯುತ್‌ ಪ್ರವಹಿಸಿ ಯುವತಿ ದುರ್ಮರಣ

Posted by Vidyamaana on 2024-06-27 22:16:16 |

Share: | | | | |


ದಕ್ಷಿಣ ಕನ್ನಡದಲ್ಲಿ ಮಳೆಗೆ ಮತ್ತೊಂದು ಬಲಿ: ವಿದ್ಯುತ್‌ ಪ್ರವಹಿಸಿ ಯುವತಿ ದುರ್ಮರಣ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮಳೆಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಂಬವನ್ನು ಮುಟ್ಟಿದ ಪರಿಣಾಮ, ವಿದ್ಯುತ್ ಪ್ರವಹಿಸಿ ಯುವತಿಯೊಬ್ಬಳು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ಮಳೆಗೆ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಸಾವನ್ನಪ್ಪಿದ್ದಾರೆ.



Leave a Comment: