ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಎಚ್.ಡಿ.ಕೆ ಹುಟ್ಟುಹಬ್ಬ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

Posted by Vidyamaana on 2022-12-17 07:33:16 |

Share: | | | | |


ಎಚ್.ಡಿ.ಕೆ ಹುಟ್ಟುಹಬ್ಬ  ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್

ಎಚ್.ಡಿ.ಕೆ ಹುಟ್ಟುಹಬ್ಬ: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಜೆಡಿಎಸ್


ಪುತ್ತೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ೬೪ನೆಯ ಹುಟ್ಟು ಹಬ್ಬದ ಪ್ರಯುಕ್ತ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ಮಾತನಾಡಿ, ಜೆಡಿಎಸ್ ವರಿಷ್ಠಿರಾದ ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಬಡವರ ಹಾಗೂ ರೋಗಿಗಳ ಬಗ್ಗೆ ಬಹಳಷ್ಟು ಕಾಳಜಿ ವಹಿಸಿದ್ದರು. ಇಂದು ಅವರ ೬೪ನೆಯ ಹುಟ್ಟು ಹಬ್ಬವಾಗಿದ್ದು, ಆ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ ಎಂದರು.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ವೈದ್ಯ ಡಾ. ಯದುರಾಜ್ ಡಿ.ಕೆ., ಜೆಡಿಎಸ್‌ನ ಮುಖಂಡರಾದ ಇಬ್ರಾಹಿಂ ಗೋಳಿಕಟ್ಟೆ, ಐ.ಸಿ. ಕೈಲಾಸ್, ಅಬ್ದುಲ್ಲ ಕೆದುವಡ್ಕ, ನಝೀರ್ ಬಪ್ಪಳಿಗೆ, ಪದ್ಮಾ ಮಣಿಯನ್, ಜಯರಾಜ್ ಅಮೀನ್, ಶಿವು ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಅಡೂರು : ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು

Posted by Vidyamaana on 2023-04-11 10:04:02 |

Share: | | | | |


ಅಡೂರು : ಹೊಳೆಯಲ್ಲಿ ಮುಳುಗಿ ಇಬ್ಬರು ಮಕ್ಕಳು  ಮೃತ್ಯು

ಸುಳ್ಯ: ಗಡಿ ಪ್ರದೇಶ ಅಡೂರ್ ಎಂಬಲ್ಲಿ ಅಡೂರ್ ಹೊಳೆಯಲ್ಲಿ  ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಕೂಡಲೇ ಸ್ಥಳೀಯರು ಅಸ್ಪತ್ರೆಗೆ ತಲುಪಿಸಿದರು ಮಕ್ಕಳ ಪ್ರಾಣ ಉಳಿಯಲ್ಲ.

ನಾಲ್ಕು ವರ್ಷದ ಮಕ್ಕಳು ಮನೆಯವರಿಗೆ ತಿಳಿಯದೆ ಹೊಳೆಗೆ ಹೋಗಿದ್ದಾರೆನ್ನಲಾಗಿದೆ

BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

Posted by Vidyamaana on 2024-04-03 08:35:16 |

Share: | | | | |


BIG NEWS: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಎಂಬ ಸುದ್ದಿ ಸುಳ್ಳು : ಪರೀಕ್ಷಾ ಮಂಡಳಿ ಸ್ಪಷ್ಟನೆ

ಬೆಂಗಳೂರು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವ ಸಂಬಂಧ ಏಪ್ರಿಲ್ 3 ರ ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ಆಯೋಜಿಸಿದೆ ಎಂದು ಹಬ್ಬಿರುವ ಮಾಹಿತಿ ಸುಳ್ಳು ಎಂದು ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಸ್ಪಷ್ಟಪಡಿಸಿದ್ದಾರೆ.ಕಿಡಿಗೇಡಿಗಳು ಮಂಡಳಿ ಹೆಸರಿನಲ್ಲಿ ನಕಲಿ ಪತ್ರಿಕಾ ಹೇಳಿಕೆಯನ್ನು ಸೃಷ್ಟಿಸಿ ಸಾಮಾಜಕ ಜಾಲತಾಣದಲ್ಲಿ ಹರಿಬಿಟ್ಟು ಗೊಂದಲ ಸೃಷ್ಟಿಸುವ ಕೆಲಸ ಮಾಡಿದ್ದಾರೆ. ಮಂಡಳಿಯಿಂದ ಅಂತಹ ಯಾವುದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿಲ್ಲ ಎಂದು ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ಫಲಿತಾಂಶ ಪ್ರಕಟಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಎಡಕ್ಕಾನ ಗಣಪತಿ ಭಟ್ ನಿಧನ

Posted by Vidyamaana on 2024-01-14 06:19:26 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಪ್ರಧಾನ ಅರ್ಚಕ ಎಡಕ್ಕಾನ ಗಣಪತಿ ಭಟ್ ನಿಧನ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಯ್ಯಪ್ಪ ಗುಡಿಯ ಮಾಜಿ ಅರ್ಚಕ, ಸುಳ್ಯ ತಾಲೂಕಿನ ಕಲ್ಮಡ್ಕ ಎಡಕ್ಕಾನ ಗಣಪತಿ ಭಟ್ (79) ನಿಧನರಾದರು.ಮೂಲತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಎಡಕ್ಕಾನ ನಿವಾಸಿಯಾಗಿರುವ ಗಣಪತಿ ಭಟ್ ಅವರು ಹಲವು ವರ್ಷಗಳ ಕಾಲ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿರುವ ಅಯ್ಯಪ್ಪ ಗುಡಿಯಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಇತ್ತಿಚೆಗೆ ಅಲ್ಪಕಾಲದ ಅಸೌಖ್ಯದಿಂದ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.


ಮೃತರು ಪತ್ನಿ ಲಕ್ಷ್ಮೀ ಭಟ್, ಪುತ್ರ ಉದ್ಯಮಿ ರಾಜಾರಾಮ್ ಭಟ್ ಎಡಕ್ಕಾನ, ಪುತ್ರಿಯರಾದ ಸಂಧ್ಯಾ ಗಣಪತಿ ಭಟ್ ಹಾಗೂ ಗೀತಾ ಗಣಪತಿ ಭಟ್ ರನ್ನು ಅಗಲಿದ್ದಾರೆ.

ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ

Posted by Vidyamaana on 2023-07-02 14:33:40 |

Share: | | | | |


ಈಶ್ವರಪ್ಪಗೆ ಸನ್ಮಾನಿಸಲು ನಿರಾಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ರಾಜಕೀಯ ಬದ್ಧವೈರಿಗಳು ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಹೌದು…ಇಂದು (ಜುಲೈ 02) ಬೆಂಗಳೂರಿನ  ಕೇತೋಹಳ್ಳಿಯಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಶಾಖಾ ಮಠದ ಭೂಮಿ ಪೂಜೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಕುರುಬ ಸಮುದಾಯದ ಎಲ್ಲಾ ಪ್ರಮುಖ ರಾಜಕೀಯ ನಾಯಕರು ಪಾಲ್ಗೊಂಡಿದ್ದರು. ಆದ್ರೆ, ಈ ವೇಳೆ ಈಶ್ವರಪ್ಪನವರಿಗೆ ಸನ್ಮಾನಿಸಲು ಸಿದ್ದರಾಮಯ್ಯ ನಿರಾಕರಿಸಿರುವ ಪ್ರಸಂಗ ನಡೆದಿದೆ.ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿ  ಅವರು ಕೆಎಸ್​ ಈಶ್ವರಪ್ಪ ಅವರಿಗೆ ಸನ್ಮಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೇಳಿಕೊಂಡಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ನೀವೇ ಸನ್ಮಾನಿಸಿ ಎಂದು ಕೈಸನ್ನೇ ಮಾಡಿದ್ದಾರೆ.  ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.  ಸಿದ್ದರಾಮಯ್ಯ ಅವರು ಈಶ್ವರಪ್ಪನವರನ್ನು ಸನ್ಮಾನಿಸಿಸಲು ಬೇಕಂತಲೇ ಹಿಂಜರಿದಿದ್ದಾರೋ ಅಥವಾ ಸಾಮಾನ್ಯವಾಗಿ ನೀವೇ ಮಾಡಿ ಮುಗಿಸಿ ಎನ್ನುವ ಅರ್ಥದಲ್ಲಿ ಕೈಸನ್ನೇ ಮಾಡಿ ಹೇಳಿದ್ದಾರೋ ಗೊತ್ತಿಲ್ಲ

ಆಗಿದ್ದೇನು?

ಈಶ್ವರಪ್ಪನವರು ಮಠದ ಶ್ರೀರಕ್ಷೆ ಸ್ವೀಕರಿಸುವಂತೆ ನಿರೂಪಕರು ಮೈಕ್​ನಲ್ಲಿ ಹೇಳಿದ್ದಾರೆ. ಅದರಂತೆ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಈಶ್ವರಪ್ಪ ಅವರಿಗೆ ಸನ್ಮಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲು ನೀಡಲು ಮುಂದಾಗಿದ್ದಾರೆ. ಆದ್ರೆ, ಸಿದ್ದರಾಮಯ್ಯ ಸನ್ಮಾನಿಸಲು ನಿರಾಕರಿಸಿ, ನೀವೆ ಮಾಡಿ ಎಂದಿದ್ದಾರೆ. ಕೊನೆಗೆ ಶ್ರೀಗಳೇ ಈಶ್ವರಪ್ಪರನ್ನು ಸನ್ಮಾನಿಸಿದರು. ಈ ಮೂಲಕ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ನಡುವಿನ ರಾಜಕೀಯ ಗುದ್ದಾಟ ಸಮುದಾಯದ ವೇದಿಕೆ ಮೇಲೆ ಬಹಿರಂಗವಾದಂತಾಯ್ತು.

ಈಶ್ವರಪ್ಪ ಹೋದಲ್ಲಿ ಬಂದಲೆಲ್ಲ ಸಿದ್ದರಾಮಯ್ಯ ವಿರುದ್ಧ ಮಾತನಾಡದೇ ಇರುವುದಿಲ್ಲ. ಏನಾದರೂ ಒಂದು ವಿಚಾರಕ್ಕೆ ಸಿದ್ದರಾಮಯ್ಯ ವಿರುದ್ಧ ತೆಗಳುತ್ತಲೇ ಇರುತ್ತಾರೆ.



Leave a Comment: