ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಬೆಂಗಳೂರು ಕಂಬಳ ಈ ಎರಡು ದಿನ ಅರಮನೆ ಮೈದಾನ ರಸ್ತೆಯಲ್ಲಿ ಟ್ರಾಫಿಕ್ ಡೈವರ್ಟ್

Posted by Vidyamaana on 2023-11-24 09:47:55 |

Share: | | | | |


ಬೆಂಗಳೂರು ಕಂಬಳ  ಈ ಎರಡು ದಿನ ಅರಮನೆ ಮೈದಾನ ರಸ್ತೆಯಲ್ಲಿ ಟ್ರಾಫಿಕ್ ಡೈವರ್ಟ್

ಬೆಂಗಳೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ    ಅರಮನೆ ಮೈದಾನದಲ್ಲಿ ನ.25 ಮತ್ತು 26 ರಂದು ಬೆಂಗಳೂರು ಕಂಬಳ-ನಮ್ಮ ಕಂಬಳ ಕಾರ್ಯಕ್ರಮ ಆಯೋಜನೆಯಾಗಿದ್ದು, ಈ ಸಂಬಂಧ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವ ಸಾಧ್ಯತೆ ಇದೆ. ಹೀಗಾಗಿ ಅರಮನೆ ಮೈದಾನ ರಸ್ತೆಯಲ್ಲಿ ಕೆಲ ಸಂಚಾರ ಮಾರ್ಪಾಡು ಮತ್ತು ವಾಹನಗಳ ನಿಲುಗಡೆ ಸ್ಥಳ ನಿಯೋಜಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.



ನಗರದ ಸಿಬಿಡಿ ಪ್ರದೇಶ, ಬಳ್ಳಾರಿ ರಸ್ತೆ ಹೆಬ್ಟಾಳ, ಯಶವಂತಪುರ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್‌ ತಿರುವ ಪಡೆದು ಗೇಟ್‌ ನಂ-01ರ ಕೃಷ್ಣವಿಹಾರ್‌ರಲ್ಲಿ ಪ್ರವೇಶಿಸಿ, ವಾಹನ ಪಾರ್ಕ್‌ ಮಾಡಬೇಕು. ಕ್ಯಾಬ್‌ ಸೇವೆ ಬಳಸಿಕೊಳ್ಳುವವರು ಗೇಟ್‌ ನಂ.2 ಪ್ರವೇಶಿಸಿ ನಿಗದಿತ ಸ್ಥಳದಲ್ಲಿ ಇಳಿದು ಗೇಟ್‌ ನಂ.03 ಮೂಲಕ ಕ್ಯಾಬ್‌ಗಳು ನಿರ್ಗಮಿಸಬೇಕು. ವಾಪಸ್‌ ಹೋಗುವ ವಾಹನಗಳು ಕಡ್ಡಾಯವಾಗಿ ಜಯಮಹಲ್‌ ರಸ್ತೆಯ ಅಮಾನುಲ್ಲಾ ಖಾನ್‌ ಗೇಟ್‌ ಮೂಲಕ ತೆರಳಬೇಕು ಎಂದು ಸಂಚಾರ ಪೊಲೀಸರು ಹೇಳಿದರು.


ಪರ್ಯಾಯ ಮಾರ್ಗ: ಅರಮನೆ ರಸ್ತೆ, ಎಂ.ವಿ. ಜಯರಾಮ್‌ ರಸ್ತೆ, ಬಳ್ಳಾರಿ ರಸ್ತೆ, ಕನ್ನಿಂಗ್‌ ಹ್ಯಾಂ ರಸ್ತೆ, ಮಿಲ್ಲರ್‌ ರಸ್ತೆ, ಜಯಮಹಲ್‌ ರಸ್ತೆಗಳನ್ನು ಬಳಸದೆ ಬೇರೆ ಮಾರ್ಗದಲ್ಲಿ ಹೋಗಲು ಕೋರಲಾಗಿದೆ. ಹಾಗೆಯೇ ಪ್ಯಾಲೆಸ್‌ ರಸ್ತೆ, ಎಂ.ವಿ.ಜಯರಾಮ್‌ ರಸ್ತೆ. ಸಿ.ವಿ ರಾಮನ್‌ ರಸ್ತೆ, ವಸಂತನಗರ, ಜಯಮಹಲ್‌ ರಸ್ತೆ, ರಮಣ ಮಹರ್ಷಿ ರಸ್ತೆ, ನಂದಿ ದುರ್ಗ ರಸ್ತೆ, ಬಳ್ಳಾರಿ ರಸ್ತೆ, ತರಳಬಾಳು ರಸ್ತೆ, ಮೌಂಟ್‌ ಕಾರ್ಮೆಲ್‌ ಕಾಲೇಜು ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.


ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ

Posted by Vidyamaana on 2024-04-03 16:35:43 |

Share: | | | | |


ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ


ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

Posted by Vidyamaana on 2024-03-10 12:54:02 |

Share: | | | | |


ಯಡಿಯೂರಪ್ಪ ಧರ್ಮ ದ್ವೇಷಿಯಲ್ಲ: ಕಾಂಗ್ರೆಸ್‌ ಶಾಸಕ

ಚಿಕ್ಕಮಗಳೂರು: ಬಿ.ಎಸ್‌. ಯಡಿಯೂರಪ್ಪ ಬಿಜೆಪಿಯಲ್ಲಿದ್ದರೂ ಎಂದಿಗೂ ಯಾವುದೇ ಧರ್ಮವನ್ನು ದ್ವೇಷಿಸಲಿಲ್ಲ ಎಂದು ಕಾಂಗ್ರೆಸ್‌ ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಉರ್ದು ಅದಬ್, ರಾಜ್ಯ ಅಂಜುಮನ್ ತಾರಕಿ ಉರ್ದು ವತಿಯಿಂದ ನಗರದಲ್ಲಿ ಶನಿವಾರ ಏರ್ಪಡಿಸಿದ್ದ ಉರ್ದು ಸಮ್ಮೇಳನ ಹಾಗೂ ಗಜಲ್-ಕವಾಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಿಕಾರಿಪುರದಲ್ಲಿ ಯಡಿಯೂರಪ್ಪ ಅನಭಿಶಕ್ತ ದೊರೆ ಇದ್ದಂತೆ. ಯಾವ ವ್ಯಕ್ತಿ ತನ್ನ ಧರ್ಮದೊಂದಿಗೆ ಇತರೆ ಧರ್ಮವನ್ನು ಪ್ರೀತಿಸುತ್ತಾನೆಯೋ ಆ ವ್ಯಕ್ತಿಯನ್ನು ಎಲ್ಲರೂ ಗೌರವಿಸುತ್ತಾರೆ ಎಂದರು.

ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶ

Posted by Vidyamaana on 2024-03-05 17:06:22 |

Share: | | | | |


ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನ ವಿದೇಶಾಂಗ ಸಚಿವ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ 2022ರಲ್ಲಿ ಮಂಡ್ಯದ ಸಂಜಯ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತ ರುಪಾಕಿಸ್ತಾನ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿದ್ದರು. ಘೋಷಣೆ ಕೂಗುವ ಬರದಲ್ಲಿ ಕಾರ್ಯಕರ್ತ ರವಿ ಎನ್ನುವವರು ಗೊಂದಲದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ.

ತಕ್ಷಣ ಅರವಿಂದ ಎಂಬ ಕಾರ್ಯಕರ್ತ ರವಿ ಬಾಯಿ ಮುಚ್ಚಿದ್ದರು. ಎರಡು ವರ್ಷಗಳ ಬಳಿಕ ಈ ಘಟನೆ ಸಂಬಂಧ ಕಾಂಗ್ರೆಸ್ ರವಿ ಮೇಲೆ ದೂರು ಸಲ್ಲಿಸಿದೆ. ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಬಿಜೆಪಿ ಕಾರ್ಯಕರ್ತ ರವಿಯನ್ನು ವಶಕ್ಕೆ ಪಡೆದಿದ್ದಾರೆ.

ಆ. 29 : ಪುತ್ತೂರು ಎಸ್‌ಡಿಪಿಐ ಆಂತರಿಕ ಚುನಾವಣಾ ಸಭೆ

Posted by Vidyamaana on 2024-08-28 21:00:35 |

Share: | | | | |


ಆ. 29 : ಪುತ್ತೂರು ಎಸ್‌ಡಿಪಿಐ ಆಂತರಿಕ ಚುನಾವಣಾ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 2024-2027ರ ಅವಧಿಯ ಆಂತರಿಕ ಚುನಾವಣೆಯು ರಾಷ್ಟ್ರವ್ಯಾಪಿಯಾಗಿ ನಡೆಯುತ್ತಿದ್ದು ಅದರ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಆಂತರಿಕ ಚುನಾವಣೆಯು ಆ.29ರಂದು ಪಡೀಲಿನ ಟ್ರಿನಿಟಿ ಹಾಲ್‌ನಲ್ಲಿ ನಡೆಯಲಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 4ರಿಂದ 6 ರೂಪಾಯಿ ಕಡಿತಕ್ಕೆ ಚಿಂತನೆ

Posted by Vidyamaana on 2023-12-31 04:55:39 |

Share: | | | | |


ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 4ರಿಂದ 6 ರೂಪಾಯಿ ಕಡಿತಕ್ಕೆ ಚಿಂತನೆ

ನವದೆಹಲಿ: 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಪ್ರತಿ ಲೀಟರ್‌ಗೆ 4 ರಿಂದ 6 ರೂಪಾಯಿಗಳವರೆಗೆ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ ತಗ್ಗಿಸಲು ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ. ಬೆಲೆ ಕಡಿತದ ಸಮಾನ ಹೊರೆಯನ್ನು ಸರ್ಕಾರ ಮತ್ತು ತೈಲ ಮಾರುಕಟ್ಟೆ ಕಂಪೆನಿಗಳಿಗೆ ವಹಿಸುವ ಪ್ರಸ್ತಾವನೆಯು ಪರಿಗಣನೆಯಲ್ಲಿದೆ ಎಂದು ಬಿಸಿನೆಸ್‌ ಟುಡೇ ವರದಿ ತಿಳಿಸಿದೆ. ಕೇಂದ್ರವು ಪ್ರತಿ ಲೀಟರ್‌ಗೆ 10 ರೂ.ವರೆಗೆ ಹೆಚ್ಚಿನ ಬೆಲೆ ಕಡಿತಕ್ಕೆ ಮುಂದಾಗಬಹುದು. ಇಂಧನ ಬೆಲೆ ಕಡಿತವು ನವೆಂಬರ್‌ನಲ್ಲಿ ಮೂರು ತಿಂಗಳ ಗರಿಷ್ಠ 5.55% ಕ್ಕೆ ಏರಿದೆ. ಪೆಟ್ರೋಲಿಯಂ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಇತ್ತೀಚೆಗೆ ಚರ್ಚೆ ನಡೆಸಿದ್ದು, ಈ ಕುರಿತು ಪ್ರಧಾನಿ ಕಾರ್ಯಾಲಯಕ್ಕೆ ಆಯ್ಕೆಗಳನ್ನು ಸಲ್ಲಿಸಿದೆ. ಈ ಎರಡು ಸಚಿವಾಲಯಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಇಂಧನ ಬೆಲೆಗಳ ಬಗ್ಗೆ ಚರ್ಚೆ ನಡೆಸುತ್ತವೆ. ವಾಹನ ಸವಾರರಿಗೆ ಗುಡ್ ನ್ಯೂಸ್: ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ! ಕಳೆದ ಮೂರು ತಿಂಗಳಿನಿಂದ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70-80 ಡಾಲರ್‌ಗಳ ಮಧ್ಯೆ ಏರಿಳಿತವಾಗುತ್ತಿರುವ ಕಾರಣ ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿತಕ್ಕೆ ಚಿಂತನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರವು ಕೇಂದ್ರ ಅಬಕಾರಿ ಸುಂಕವನ್ನು ನವೆಂಬರ್ 2021 ಮತ್ತು ಮೇ 2022 ರಲ್ಲಿ ಎರಡು ಕಂತುಗಳಲ್ಲಿ ಕ್ರಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ ಒಟ್ಟು ರೂ 13 ಮತ್ತು ರೂ 16 ರಷ್ಟು ಕಡಿಮೆ ಮಾಡಿದೆ. ಅಬಕಾರಿ ಕಡಿತವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ವರ್ಗಾಯಿಸಲಾಯಿತು ಮತ್ತು ಇದರ ಪರಿಣಾಮವಾಗಿ ಚಿಲ್ಲರೆ ಬೆಲೆಗಳು ಕುಸಿಯಿತು. ಕಡಿಮೆ ಕಚ್ಚಾ ತೈಲ ಬೆಲೆಗಳು ಮೂರು ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪ್ (IOC), ಭಾರತ್ ಪೆಟ್ರೋಲಿಯಂ ಕಾರ್ಪ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪ್ (HPCL) ದೊಡ್ಡ ಲಾಭವನ್ನು ನೀಡಿದೆ. ಗುರುವಾರ ತೈಲ ಬೆಲೆಗಳು ಸ್ಥಿರವಾಗಿವೆ. ಬ್ರೆಂಟ್ ಒಂದು ಬ್ಯಾರೆಲ್‌ಗೆ $80 ರ ಸಮೀಪದಲ್ಲಿ ವ್ಯಾಪಾರ ಮಾಡುವುದರೊಂದಿಗೆ ಹೆಚ್ಚಿನ ದಾಸ್ತಾನುಗಳು ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿನ ದಾಖಲೆಯ ಉತ್ಪಾದನೆಯು ಕೆಂಪು ಸಮುದ್ರದಲ್ಲಿನ ಜಾಗತಿಕ ವ್ಯಾಪಾರದ ಅಡೆತಡೆಗಳ ಮೇಲೆ ಆತಂಕವನ್ನು ಕಡಿಮೆ ಮಾಡಿದೆ.

Recent News


Leave a Comment: