KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ನಿಮ್ಮ ವಾಹನದ RCಗೆ ಆಧಾರ್ ಲಿಂಕ್ ಮಾಡಿ: ಬಂತು ಮತ್ತೊಂದು ಹೊಸ ನಿಯಮ

Posted by Vidyamaana on 2023-10-11 09:22:24 |

Share: | | | | |


ನಿಮ್ಮ ವಾಹನದ RCಗೆ ಆಧಾರ್ ಲಿಂಕ್ ಮಾಡಿ: ಬಂತು ಮತ್ತೊಂದು ಹೊಸ ನಿಯಮ

ಬೆಂಗಳೂರು: ಹೊಸ ವಾಹನಗಳ ನೋಂದಣಿ ಸೇರಿದಂತೆ 2021 ರಿಂದ ಎಲ್ಲಾ ವಾಹನ ಸಂಬಂಧಿತ ವಹಿವಾಟುಗಳಿಗೆ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ. ಈ ಮೂಲಕ ವಾಹನ ನೋಂದಣಿ ಮತ್ತು ಇತರ ಪ್ರಕ್ರಿಯೆಗಳಲ್ಲಿ ನಕಲಿ ವಹಿವಾಟುಗಳನ್ನು ತಡೆಯಲು ಸರ್ಕಾರ ಮುಂದಾಗಿದೆ.


ಈ ಹಿಂದೆ ಪಡೆಯಲಾದ ಆಧಾರ್‌ ಕಾರ್ಡ್‌ನಲ್ಲಿ ಹಾಗು RC ಅಲ್ಲಿ ಹೆಸರು ಮತ್ತು ಮೊಬೈಲ್‌ ಫೋನ್‌ ಸಂಖ್ಯೆ ಬೇರೆ ಬೇರೆಯಾಗಿದ್ದರೆ ವಾಹನಕ್ಕೆ ಸಂಬಂಧಿಸಿದ ಸೇವೆಗಳನ್ನು ಪಡೆಯುವಲ್ಲಿ ಸಮಸ್ಯೆ ಎದುರಾಗಲಿದೆ.


ಆಧಾರ್ ಲಿಂಕ್ ಮಾಡಲಾದ ಫೋನ್ ಸಂಖ್ಯೆಯನ್ನು ಸೇರಿಸುವ ಮೂಲಕ ಮಾಲೀಕತ್ವದ ವರ್ಗಾವಣೆಗೆ ಅರ್ಜಿ ಸಲ್ಲಿಸುವಾಗ ವ್ಯಕ್ತಿಯು ಒನ್-ಟೈಮ್ ಪಾಸ್ವರ್ಡ್ ಅನ್ನು ಸ್ವೀಕರಿಸುತ್ತಾನೆ. ಈ ಪಾಸ್ವರ್ಡ್ ಆಧಾರದ ಮೇಲೆ ಒಬ್ಬರು ತಮ್ಮ ಅರ್ಜಿಯನ್ನು ಪೂರ್ಣಗೊಳಿಸಬಹುದಾಗಿದೆ. ಆಧಾರ್ ಲಿಂಕ್ ಮಾಡಲಾದ ಸಂಖ್ಯೆಯನ್ನು ಸೇರಿಸಲು MVD ತನ್ನ ವಾಹನ ಸಾಫ್ಟ್ವೇರ್ ನಲ್ಲಿ 3 ಹೊಸ ಕ್ಷೇತ್ರಗಳನ್ನು ಸೇರಿಸಿದೆ. ಮಾಲೀಕರ ಆಧಾರ್ ಸಂಖ್ಯೆ, ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಅರ್ಜಿಯಲ್ಲಿನ ವಿವರಗಳು ಮತ್ತು ಆಧಾರ್ ಕಾರ್ಡ್ ವಿವರಗಳು ಹೊಂದಾಣಿಕೆಯಾಗದಿದ್ದರೆ ನೋಂದಣಿಯನ್ನು ನಿರಾಕರಿಸಲಾಗುತ್ತದೆ.


ವಾಹನ ಸಂಬಂಧಿತ ವಹಿವಾಟುಗಳಲ್ಲಿ ಆಧಾರ್ ಸಂಖ್ಯೆ ಇದ್ದರೆ ಪ್ರತಿ ವ್ಯಕ್ತಿಯ ಬಳಿ ಇರುವ ವಾಹನಗಳ ಸಂಖ್ಯೆ ಬಗ್ಗೆ ಸ್ಪಷ್ಟ ಮಾಹಿತಿಯನ್ನು ತಿಳಿಯಲು ಸರ್ಕಾರಕ್ಕೆ ಸುಲಭವಾಗಲಿದೆ.

ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು ಸಮಿತಿ ರಚನೆ ಆಶಿಫ್ ಮುಕ್ವೆ ಅಧ್ಯಕ್ಷ, ಸುಹೈಲ್ ಬಡಕೋಡಿ ಕಾರ್ಯದರ್ಶಿ

Posted by Vidyamaana on 2024-05-29 06:32:45 |

Share: | | | | |


ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು ಸಮಿತಿ ರಚನೆ  ಆಶಿಫ್ ಮುಕ್ವೆ ಅಧ್ಯಕ್ಷ, ಸುಹೈಲ್ ಬಡಕೋಡಿ ಕಾರ್ಯದರ್ಶಿ

ಪುತ್ತೂರು: SDTU ಇದರ ಸಹ ಸಂಘಟನೆಯಾದ ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ವಾರ್ಷಿಕ ಕಾರ್ಯಕ್ರಮ ಯೂನಿಯನ್ ಅಧ್ಯಕ್ಷ ಮೊಹಮ್ಮದ್ ಕುಞ ಬಾಬ ರವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಮನೀಶ್ ಹಾಲ್ ನಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಹಮೀದ್ ಕೆ. ಎಸ್ ವಾಚಿಸಿದರೆ, ಕಾರ್ಯದರ್ಶಿ ಹನೀಫ್ ಪೈಸಾರಿ ಸ್ವಾಗತಿಸಿದರು. ಬಳಿಕ ನೂತನ ಸಮಿತಿ ರಚನೆ ನಡೆಸಲಾಯಿತು

ಯೂನಿಯನ್ ಉಸ್ತುವಾರಿಯಾಗಿ ಶಮೀರ್ ನಾಜೂಕು, ಅಧ್ಯಕ್ಷರಾಗಿ ಆಶಿಫ್ ಮುಕ್ವೆ, ಉಪಾಧ್ಯಕ್ಷರಾಗಿ ಶಾಕಿರ್ ಬೆಳಂದೂರು, ಕಾರ್ಯದರ್ಶಿಯಾಗಿ ಸುಹೈಲ್ ಬಡಕೋಡಿ, ಜೊತೆ ಕಾರ್ಯದರ್ಶಿಯಾಗಿ ನೌಷಾದ್ ಸಾಲ್ಮರ

ಸಮಸ್ತ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯ ಮಹಾಸಭೆ

Posted by Vidyamaana on 2023-09-05 21:24:41 |

Share: | | | | |


ಸಮಸ್ತ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯ ಮಹಾಸಭೆ

ಪುತ್ತೂರು : ಸಮಸ್ತ ಜಂ ಇಯ್ಯತುಲ್ ಉಲಮಾ ಪುತ್ತೂರು ತಾಲೂಕು ಸಮಿತಿಯ ಮಹಾ ಸಭೆಯು ಇತ್ತೀಚೆಗೆ ಬದ್ರಿಯಾ ಮಸೀದಿ ಮದ್ರಸಾ ಹಾಲ್ ನಲ್ಲಿ ನಡೆಯಿತು. ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಸಮಸ್ತ ಮುಶಾವರ ಸದಸ್ಯರಾದ ಉಸ್ಮಾನುಲ್ ಫೈಝಿ ಸಾಲ್ಮರ ಉದ್ಘಾಟನೆ ಗೈದರು.ಹಸನ್ ಬಾಖವಿ ವಾಲೆ ಮುಂಡೋವು ಕಿರಾಅತ್ ನಡೆಸಿದರು. ರಶೀದ್ ರಹ್ಮಾನಿ ಪರ್ಲಡ್ಕ ವರದಿ ವಾಚಿಸಿ, ಆಸಿಫ್ ಅಝ್ಹರಿ ಇರ್ದೆ ಲೆಕ್ಕ ಪತ್ರ ಮಂಡಿಸಿದರು.

        ಸಮಿತಿಯ ನೂತನ ಅಧ್ಯಕ್ಷರಾಗಿ ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್, ಉಪಾಧ್ಯಕ್ಷರುಗಳಾಗಿ ಉಸ್ಮಾನುಲ್ ಫೈಝಿ ತೋಡಾರ್,ಉಮರ್ ದಾರಿಮಿ ಸಾಲ್ಮರ, ಉಮರ್ ಫೈಝಿ ಸಾಲ್ಮರ, ಅಬ್ಬಾಸ್ ಮದನಿ ಮೊಟ್ಟೆತಡ್ಕ,ಶಂಸುದ್ದೀನ್ ದಾರಿಮಿ ಪಮ್ಮಲೆ,ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಕೋಶಾಧಿಕಾರಿಯಾಗಿ ಉಮರ್ ಮುಸ್ಲಿಯಾರ್ ನಂಜೆ, ಕಾರ್ಯದರ್ಶಿಗಳಾಗಿ ಅಬ್ದುಲ್ ರಶೀದ್ ರಹ್ಮಾನಿ ಪರ್ಲಡ್ಕ, ಅಬ್ದುಲ್ ಕರೀಂ ದಾರಿಮಿ ಕುಂಬ್ರ,ಅಬ್ಬಾಸ್ ದಾರಿಮಿ ಕೆಲಿಂಜ, ಅಶ್ರಫ್ ದಾರಿಮಿ ಸಂಟ್ಯಾರ್, ಫತ್ವಾ ಸಮಿತಿ ಸದಸ್ಯರಾಗಿ ಇಬ್ರಾಹಿಂ ದಾರಿಮಿ ಮಾಡನ್ನೂರು,ಅಝೀಝ್ ದಾರಿಮಿ ಕೊಡಾಜೆ,ಅಬೂಬಕ್ಕರ್ ದಾರಿಮಿ ಕಟ್ಟತ್ತಾರು,ಶಾಫಿ ಇರ್ಫಾನಿ ಕಲ್ಲೆಗ, ಸಂಘಟನಾ ಕಾರ್ಯದರ್ಶಿಯಾಗಿ ಆಸಿಫ್ ಅಝ್ಹರಿ ಇರ್ದೆ,ಸಹ ಕಾರ್ಯದರ್ಶಿಗಳಾಗಿ ಶುಕೂರ್ ದಾರಿಮಿ ಕಾವು,ಹಸನ್ ಬಾಖವಿ ವಾಲೆಮುಂಡೋವು,ಪತ್ರಿಕಾ ಕಾರ್ಯದರ್ಶಿಗಳಾಗಿ ಅಶ್ರಫ್ ರಹ್ಮಾನಿ ವೀರಮಂಗಿಲ,ಅಲೀ ಮನ್ನಾನಿ ಮಿತ್ತೂರು ಆಯ್ಕೆ ಮಾಡಲಾಯಿತು. ಅಬ್ದುಲ್ ಹಮೀದ್ ದಾರಿಮಿ ಸಂಪ್ಯ ಸ್ವಾಗತಿಸಿ,ಆಸಿಫ್ ಅಝ್ಹರಿ ಇರ್ದೆ ಧನ್ಯವಾದಗೈದರು.

ಪ್ರಜ್ವಲ್‌ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

Posted by Vidyamaana on 2024-05-03 07:03:38 |

Share: | | | | |


ಪ್ರಜ್ವಲ್‌ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣವು ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದನ್ನು ಇಡೀ ಎನ್ ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದೆ.

ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

Posted by Vidyamaana on 2023-08-19 07:11:04 |

Share: | | | | |


ಬೈಕ್ ಗಳ ನಡುವೆ ಭೀಕರ ಅಪಘಾತ: ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು

ಕೊಡಗು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮ ಅಪಘಾತ ಸಂಭವಿಸಿದ್ದು, ಅಮೃತ (24) ಹೆಸರಿನ ಬ್ಯಾಂಕ್ ಉದ್ಯೋಗಿ ಮೃತಪಟ್ಟಿದ್ದಾರೆ.

ಮೂಲತಃ ಕೇರಳದ ತ್ರಿಶೂರ್ ಮೂಲದ ಅಮೃತ, ಅಮ್ಮತಿ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪುತ್ತೂರು ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Posted by Vidyamaana on 2023-08-23 07:32:14 |

Share: | | | | |


ಪುತ್ತೂರು  ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯಿಂದ ಹಲ್ಲೆ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಪುತ್ತೂರು: ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದಿದ್ದು, ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಕೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಹಲ್ಲೆ ಮಾಡಿದ ಆರೋಪಿ.

ಮಹಿಳೆಯರಿಬ್ಬರು ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಸುಲೇಖ ಅವರ ದೂರದ ಸಂಬಂಧಿ ಸುರೇಶ್ ನಾಯ್ಕ ಬಂದು ಸುಲೇಖ ಅವರ ಕುತ್ತಿಗೆ ಬಟ್ಟೆ ಸುತ್ತಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಇದನ್ನು ನೋಡಿದ ಕೆಲಸಾಕೆ ಗಿರಿಜಾ ಅವರಿಗೂ ಆತ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಇನ್ನು ಗಾಯಾಳುಗಳಿಬ್ಬರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Recent News


Leave a Comment: