ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿ ನೌಫಾಲ್ ಆತ್ಮಹತ್ಯೆ

Posted by Vidyamaana on 2024-05-07 07:49:06 |

Share: | | | | |


ವೆನ್ಲಾಕ್ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿ ನೌಫಾಲ್ ಆತ್ಮಹತ್ಯೆ

ಮಂಗಳೂರು, ಮೇ.6: ಮಾನಸಿಕ ಖಿನ್ನತೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯಾಗಿದ್ದ ಯುವಕನೊಬ್ಬ ಆಸ್ಪತ್ರೆ ಕೊಠಡಿಯಲ್ಲಿ ನೇಣು ಹಾಕ್ಕೊಂಡು ಸಾವಿಗೆ ಶರಣಾಗಿದ್ದಾನೆ.

ಮಂಜೇಶ್ವರ ಬಳಿಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್ (24) ಮೃತ ಕೈದಿ. 2022ರ ಡಿಸೆಂಬರ್ ನಲ್ಲಿ ನೌಫಾಲ್ ಎನ್ ಡಿಪಿಎಸ್ ಕಾಯ್ದೆಯಡಿ ಕೋಣಾಜೆ ಪೊಲೀಸರಿಂದ ಬಂಧನಕ್ಕೀಡಾಗಿದ್ದ. ಆನಂತರ ಮಂಗಳೂರು ಜೈಲಿನಲ್ಲೇ ಇದ್ದು ಯುವಕನ ಪರವಾಗಿ ಜಾಮೀನು ಕೊಡಿಸುವುದಕ್ಕೂ ಯಾರೂ ಬಂದಿರಲಿಲ್ಲ.

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ - ಭರ್ಜರಿ ಚಿನ್ನದ ಆಮಿಷ ತೋರಿಸಿದ್ದ ಆರೋಪಿ

Posted by Vidyamaana on 2024-03-25 19:42:27 |

Share: | | | | |


ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ - ಭರ್ಜರಿ ಚಿನ್ನದ ಆಮಿಷ ತೋರಿಸಿದ್ದ ಆರೋಪಿ


ಬೆಳ್ತಂಗಡಿ : ತುಮಕೂರಿನಲ್ಲಿ  ಕಾರಿಗೆ ಬೆಂಕಿ ಹಚ್ಚಿ ಮೂವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು. ಪ್ರಕರಣದ ಇಂಚಿಂಚೂ ಮಾಹಿತಿಯನ್ನು ವಿದ್ಯಾಮಾನ ನ್ಯೂಸ್ ನಿಮ್ಮ ಮುಂದೆ ಇಡುತ್ತಿದೆ.

ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಾ ಪೊಲೀಸರು ಒಟ್ಟು ಎರಡು ಜನರನ್ನು ಬಂಧಿಸಿದ್ದು ಉಳಿದ ಆರು ಜನರಿಗಾಗಿ ಬಲೆ ಬೀಸಿದ್ದಾರೆ. ಈ ಬಗ್ಗೆ ತುಮಕೂರು ಎಸ್ಪಿ ಅಶೋಕ್ ಕೆವಿ ಮಾ.25 ರಂದು ತುಮಕೂರು ಎಸ್ಪಿ ಕಚೇರಿಯಲ್ಲಿ ಕರೆದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.


ಪ್ರಕರಣ ಬೆಳಕಿಗೆ ಬಂದದ್ದು ಹೇಗೆ?

22-03-2024 ರಂದು ಮಧ್ಯಾಹ್ನ ಸುಮಾರು 1.15 ಗಂಟೆಗೆ ಕೋರಾ ಪೊಲೀಸ್ ಠಾಣಾವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ಒಂದು ಕಾರಿನಲ್ಲಿ 3 ಮನುಷ್ಯರ ದೇಹಗಳು ಸುಟ್ಟ ಸ್ಥಿತಿಯಲ್ಲಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ ಕೋರಾ ಪೊಲೀಸ್ ಠಾಣೆಯ ಪಿಎಸ್‌ಐ ರವರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ  ಒಂದು ಮಾರುತಿ ಸುಜುಕಿ S-PRESSO ಕಾರಿನ ಹಿಂಭಾಗದ ಸೀಟಿನಲ್ಲಿ ಒಂದು ಮತ್ತು ಡಿಕ್ಕಿಯಲ್ಲಿ ಎರಡು ದೇಹಗಳು ಸುಟ್ಟು ಕರಕಲಾಗಿದ್ದು, ಯಾರೋ ದುಷ್ಕರ್ಮಿಗಳು ಯಾರೋ 3 ಜನರನ್ನು ಯಾವುದೋ ಕಾರಣಕ್ಕೆ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಪೆಟ್ರೋಲ್ ಅಥವಾ ಬೇರಾವುದೋ ಇಂಧನ ಸುರಿದು ಬೆಂಕಿ ಹಚ್ಚಿ ಸುಟ್ಟಿರೋದು ಕಂಡು ಬಂದಿತ್ತು.

ಅದರಂತೆ ಕೋರಾ ಪೊಲೀಸ್ ಪ್ರಕರಣ ದಾಖಲಾಗಿತ್ತು.ನಂತರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅಶೋಕ್ ಕೆ.ವಿ, ಐ.ಪಿ.ಎಸ್ ರವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿ ಮರಿಯಪ್ಪ ಮತ್ತು ಬಿ.ಎಸ್ಅಬ್ದುಲ್ ಖಾದರ್ ಕೆ.ಎಸ್.ಪಿ.ಎಸ್ ರವರ ಸೂಚನೆ ಮತ್ತು ಮಾರ್ಗದರ್ಶನದಂತೆ ತುಮಕೂರಿನ ಪೊಲೀಸರ ತಂಡ ವಿಚಾರಣೆ ನಡೆಸಿದಾಗ ಕರಾಳ ದಂಧೆಯು ಬೆಳಕಿಗೆ ಬಂದಿದೆ.



ಇಬ್ಬರು ಆರೋಪಿಗಳ ಬಂಧನ, ಆರು ಜನರಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತುಮಕೂರಿನ

ಶಿರಾ ಗೇಟ್‌ನಲ್ಲಿ ವಾಸವಿರುವ 1) ಪಾತರಾಜು @ ರಾಜು @ ರಾಜಗುರು @ಕುಮಾರ್,  ಇನ್ನೊರ್ವ ಆರೋಪಿಸತ್ಯಮಂಗಲದ ವಾಸಿ ಗಂಗರಾಜು ಬಿನ್ ಹನುಮಂತರಾಯಪ್ಪ ಎಂಬಾತನನ್ನು ಬಂಧಿಸಿದ್ದಾರೆ. ಇನ್ನು ಆರು ಜನ ತಲೆಮರೆಸಿಕೊಂಡಿದ್ದು ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

ಮೃತರಿಗೂ ಪ್ರಮುಖ ಆರೋಪಿಗೂ ಹೇಗೆ ಪರಿಚಯ?

ಅಂದ್ಹಾಗೆ ಮೃತರಾದ ಬೆಳ್ತಂಗಡಿಯ ಬೆಳ್ತಂಗಡಿಯ  ಇಶಾಕ್ ಸೀಮಮ್,ಶಾಹುಲ್ ಹಮೀದ್, ಸಿದ್ದಿಕ್ ಇವರಿಗೆ ಪಾತರಾಜನ ಜೊತೆ ಸೇರಿ ಸುಮಾರು 6-7 ತಿಂಗಳಿನಿಂದ ಸಂಪರ್ಕವಿತ್ತು. ಇವರೆಲ್ಲಾ ನಿಧಿ ಹುಡುಕುವ ಕೆಲಸ ಮಾಡುತ್ತಿದ್ದು, ಪಾತರಾಜನಿಗೆ ಸುಮಾರು 6 ಲಕ್ಷ ರೂ ಹಣ ನೀಡಿದ್ದರು. ಹಣ ನೀಡಿ 6 ತಿಂಗಳು ಕಳೆದರೂ ನಿಧಿ ಹುಡುಕಿ ಕೊಟ್ಟಿಲ್ಲವಾದ್ದರಿಂದ ಹಣ ವಾಪಸ್ ಕೊಡುವಂತೆ ಇಲ್ಲವಾದರೆ ಪೊಲೀಸರಿಗೆ ದೂರು ನೀಡುವುದಾಗಿ ಮೃತರು ಪಾತರಾಜನ ಹಿಂದೆ ಬಿದ್ದಿದ್ದರಿಂದ ಅವರನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ಪಾತರಾಜು ತನಗೆ ಪರಿಚಯದ ಸತ್ಯಮಂಗಲದ ವಾಸಿ ಗಂಗರಾಜು ಮತ್ತು ಅವನ 6 ಜನ  ಸಹಚರರಾದ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂಧನ್,  ನವೀನ್, ವೆಂಕಟೇಶಪುರದ ಕೃಷ್ಣ, ಹೊಂಬಯ್ಯನಪಾಳ್ಯದ ಗಣೇಶ, ನಾಗಣ್ಣನಪಾಳ್ಯದ ಕಿರಣ್, ಕಾಳಿದಾಸನಗರದ ಸೈಮನ್, ಸೇರಿಸಿಕೊಂಡು ಮೂರು ಜನರನ್ನು ಕೊಲೆ ಮಾಡು ಪ್ಲ್ಯಾನ್ ಮಾಡಿ ಕೊಲೈಗೈದಿದ್ದರು.

ಕೊಲೆಗಾರರಿಗೂ 3 ಕೆ ಜಿ ಚಿನ್ನ ಕೊಡೋದಾಗಿ ಹೇಳಿದ್ದ ಪ್ರಕರಣದ ಮಾಸ್ಟರ್ ಮೈಂಡ್ ಪಾತರಾಜು

ಇನ್ನು ಕೊಲೆ ಮಾಡುವ ಪ್ಲ್ಯಾನ್ ವೇಳೆ ಪ್ರಕರಣದ ಮಾಸ್ಟರ್ ಮೈಂಡ್ ಪಾತರಾಜು ಕೊಲೆಗಾರರಿಗೂ 3 ಕೆ.ಜಿ ಚಿನ್ನ ಕೊಡೋದಾಹಿ ಆಸೆ ತೋರಿಸಿದಂತೆ. ಇನ್ನು ಪ್ಲ್ಯಾನ್ ನಂತೆ ದಿನಾಂಕ: 22.03.2024 ರಂದು ಬೆಳಗಿನ ಜಾವ 12 ಗಂಟೆ ಸುಮಾರಿಗೆ ಮೃತರನ್ನು ಚಿನ್ನ ನೀಡುವುದಾಗಿ ಬೀರನಕಲ್ಲು ಬೆಟ್ಟದ ಸಮೀಪ ಕರೆಸಿಕೊಂಡುಅವರುಗಳನ್ನು ಮಚ್ಚು, ಲಾಂಗ್ ಮತ್ತು ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಅವರದೇ ಕಾರಿನಲ್ಲಿ ಕುಚ್ಚಂಗಿ ಕೆರೆಗೆ ತೆಗೆದುಕೊಂಡು ಹೋಗಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.


ಪರಾರಿಯಾದ ಆರು ಜನ ಆರೋಪಿಗಳು

ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಅರೆಸ್ಟ್ ಮಾಡಲಾಗಿದ್ದು ಇನ್ನುಳಿದಂತೆ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂದನ್(24) , ಸಂತೇಪೇಟೆಯ ನವೀನ್(24) ,ವೆಂಕಟೇಶಪುರದ ಕೃಷ್ಣ(22), ಹೊಂಬಯ್ಯನಪಾಳ್ಯದ ಗಣೇಶ್(19), ನಾಗಣ್ಣನಪಾಳ್ಯದ ಕಿರಣ್(23) ,ಕಾಳಿದಾಸನಗರದ ಸೈಮನ್(18) ಪರಾರಿಯಾಗಿದ್ದು ಇವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ..

ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

Posted by Vidyamaana on 2023-08-12 11:14:48 |

Share: | | | | |


ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ : ಇಬ್ಬರು ವಿದ್ಯಾರ್ಥಿಗಳ ಬಂಧನ

ಹುಬ್ಬಳ್ಳಿ: ಖಾಸಗಿ ಕಾಲೇಜುವೊಂದರ ವಿದ್ಯಾರ್ಥಿನಿಯ ಹೆಸರಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ತಿರುವು ಪಡೆದಿದ್ದು, ಮೂಲ ಆರೋಪಿಗಳಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಏಳು ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಶಂಕಿತ ಆರೋಪಿ ಹಾಗೂ ಖಾಸಗಿ ಕಾಲೇಜಿನ ಹಳೇ ವಿದ್ಯಾರ್ಥಿ ರಜನಿಕಾಂತ್ ತಳವಾರ ಎಂಬಾತನನ್ನು ಸಂಶಯದ ಮೇಲೆ ಬಂಧಿಸಿ ಏಳು ದಿನ ವಿಚಾರಣೆಗೆ ಒಳಪಡಿಸಿದ್ದರು. ಅಷ್ಟೇ ಅಲ್ಲದೆ ಈ ಪ್ರಕರಣದ ಹಿಂದೆ ಇನ್ನೂ ಕೆಲವರು ಇದ್ದಾರೆ ಎಂಬ ಸಂಶಯದ ಮೇರೆಗೆ ತನಿಖೆ ಮುಂದುವರಿಸಿದ್ದರು.


ಜಾಲತಾಣದ ಅಧಿಕೃತ ಮಾಹಿತಿಯ ಹಿಂದೆ ಬಿದ್ದಾಗ ರಜನಿಕಾಂತ್ ಆರೋಪಿ ಅಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ. ಶಂಕಿತ ಆರೋಪಿಯಾಗಿದ್ದ ರಜನಿಕಾಂತ್‌ನ ಇನ್‌ಸ್ಟಾಗ್ರಾಂ ಖಾತೆ, ಇ-ಮೇಲ್ ಐಡಿ ಹಾಗೂ ಸಾಮಾಜಿಕ ಜಾಲತಾಣದ ವಿವವರಗಳನ್ನು ಪೊಲೀಸರು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ ಈ ವರದಿ ಬರುವವರೆಗೂ ಉಳಿದ ಆರೋಪಿಗಳನ್ನು ಪತ್ತೆ ಮಾಡುವುದು ಪೊಲೀಸರಿಗೆ ಕಷ್ಟವಾಗಿತ್ತು. ಪ್ರಕರಣ ಗಂಭೀರವಾಗಿದ್ದರಿಂದ ಸೈಬರ್ ಠಾಣಾ ಪೊಲೀಸರು ಹ್ಯಾಕ್ ಮಾಡಲಾದ ವಿದ್ಯಾರ್ಥಿನಿಯರ ಇನ್‌ಸ್ಟಾಗ್ರಾಂ ಖಾತೆ ವಿವರ ಸಂಗ್ರಹಿಸಿ ಫೇಸ್‌ಬುಕ್ ಸಂಸ್ಥೆಗೆ ಮಾಹಿತಿ ನೀಡಲು ಪತ್ರ ಬರೆದಿದ್ದರು.


ಅಲ್ಲಿಂದ ದೊರೆತ ಅಧಿಕೃತ ಮಾಹಿತಿಯೇ ಆರೋಪಿಗಳ ಪತ್ತೆಗೆ ಸಹಕಾರಿಯಾಗಿದೆ. ಬಂಧನಕ್ಕೆ ಒಳಗಾದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಓದುತ್ತಿರುವ ಕಾಲೇಜಿನಲ್ಲಿಯೇ ಅಧ್ಯಯನ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿನಿ ಇನ್ನೊಬ್ಬ ವಿದ್ಯಾರ್ಥಿಯ ಜೊತೆ ಸಲುಗೆಯಿಂದ ಇದ್ದಳು. ಅದನ್ನು ಸಹಿಸದ ಆರೋಪಿ ತಮ್ಮ ಊರಿನ ಮತ್ತೊಂದು ಕಾಲೇಜಿನಲ್ಲಿ ಓದುತ್ತಿದ್ದ ಸ್ನೇಹಿತನ ಸಹಾಯ ಪಡೆದು, ಆ ವಿದ್ಯಾರ್ಥಿನಿಯ ಇನ್‌ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿಸಿದ್ದಾನೆ. ತನ್ನ ಹೆಸರು ಎಲ್ಲಿಯೂ ಬರಬಾರದು ಎಂದು ದಿಕ್ಕು ತಪ್ಪಿಸಲು ಪೊಲೀಸ್ ಬಗ್ಗೆ ಅವಹೇಳನ ಪದ ಬಳಸಿ ಪೋಸ್ಟ್ ಮಾಡಿದ್ದ. ಎಲ್ಲಾ ವಿಚಾರ ತಿಳಿದ ಬೆನ್ನಲ್ಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

Posted by Vidyamaana on 2024-03-24 10:56:55 |

Share: | | | | |


ಮಾ. 24 : ವಿಟ್ಲದಲ್ಲಿ ಸೌಹಾರ್ದ ಬೃಹತ್ ಇಫ್ತಾರ್ ಕೂಟ

ವಿಟ್ಲ: ವಿ.ಫೌಂಡೇಶನ್ ವಿಟ್ಲ ವತಿಯಿಂದ ಮಾ. 24ರ ಭಾನುವಾರ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಲಿದೆ. ಸುಮಾರು ಒಂದು ಸಾವಿರದಷ್ಟು ಮಂದಿಗೆ ಇಫ್ತಾರ್ ಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸರ್ವಧರ್ಮಿಯರಿಗೆ ಇಫ್ತಾರ್ ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ವಿ ಫೌಂಡೇಶನ್ ನ ಸಂಘಟಕರು ತಿಳಿಸಿದ್ದಾರೆ.

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್

Posted by Vidyamaana on 2023-10-19 12:53:03 |

Share: | | | | |


ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್

ಜಾಹಿರಾತು :


   ಬ್ರೈಟ್ ಭಾರತ್ ಆರಂಭಿಸಿದ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆ ಇದಾಗಿದ್ದು,

ಇದರ ಪೂರ್ಣ ವಿವರ ಕೆಳಗಿದೆ.

ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.


ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?


ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8867340630/9606590729 /8867340630

ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.


ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ

ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್, ನಗದು ಸೇರಿದಂತೆ, ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು.

ಯಾರಿಗೆಲ್ಲ ಸೇರಬಹುದು

ಬ್ರೈಟ್ ಭಾರತ್ ನಲ್ಲಿ ಪ್ರತಿಯೊಬ್ಬರಿಗೂ ಸದಸ್ಯರಾಗಲು ಮುಕ್ತ ಅವಕಾಶವಿದೆ, ಈಗಾಗಲೇ ಕರ್ನಾಟಕ ಕೇರಳದ ಜೊತೆಗೆ ಅನಿವಾಸಿ ಭಾರತೀಯರು ಕೂಡ ಸದಸ್ಯರಾಗಿದ್ದಾರೆ. ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.


ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.


ಬ್ರೈಟ್ ಭಾರತ್‌ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಬೈಕು, ಆಕ್ಟೀವಾ, ಚಿನ್ನ, ಡೈಮಂಡ್, ನಗದು ಬಹುಮಾನವಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರು ಗೆಲ್ಲುವ ಅವಕಾಶವಿದೆ. ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.


ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿ ಸಧ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ.

ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.

8867340630 / 9606590729/8867340630

ನವಜಾತ ಶಿಶುವಿಗಾಗಿ ಮಿಡಿದ ಸಿದ್ದು ಹೃದಯ ಪ್ರಧಾನಿಗೆ ಮನವಿ

Posted by Vidyamaana on 2023-11-01 19:52:31 |

Share: | | | | |


ನವಜಾತ ಶಿಶುವಿಗಾಗಿ ಮಿಡಿದ ಸಿದ್ದು ಹೃದಯ  ಪ್ರಧಾನಿಗೆ ಮನವಿ

ಬೆಂಗಳೂರು : ರಾಜ್ಯದ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಲ್ಲಿ ಕೆಲವೊಮ್ಮೆ ಮನವಿ ಮಾಡಿಕೊಳ್ಳುವುದಿರುತ್ತದೆ. ಆದರೆ ಈ ಸಲ ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.


ಪ್ರಧಾನಿ ಮೋದಿಗೆ ಸಿಎಂ ಸಿದ್ದು ಮಾಡಿದ ಕಳಕಳಿಯ ಮನವಿ ಪತ್ರ

ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆ ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.



Leave a Comment: