ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

Posted by Vidyamaana on 2024-01-02 21:03:12 |

Share: | | | | |


ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಎಂಬಲ್ಲಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿಗೆ ಗಾಯಗಳು ಆಗಿವೆ.ನವದುರ್ಗಾ ಹೆಸರಿನ ಖಾಸಗಿ ಬಸ್ ಅಪಘಾತಕ್ಕಿಡಾದ ಬಸ್ಸು ಬಸ್ಸು ಕೈಕಂಬದಿಂದ ಪೊಳಲಿ ಮಾರ್ಗವಾಗಿ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು. ಆದರೇ ಬಸ್ಸು ಕೈಕಂಬ ಪೊಳಲಿ ದ್ವಾರದ ಬಳಿ ಬರುತ್ತಲೇ ಚಾಲಕನ ಹತೋಟಿ ಕಳಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ.ಅಪಘಾತವು ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಪಾಯದಿಂದ ಪಾರಾಗಿದ್ದಾರೆ.

ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

Posted by Vidyamaana on 2023-10-15 08:24:18 |

Share: | | | | |


ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

ಪುತ್ತೂರು: ಪಿಲಿ ರಾಧಣ್ಣ ಮತ್ತು ಬಳಗದ ಪುತ್ತೂರ್ದ ಪಿಲಿ ಇದರ ಊದು ಪೂಜೆ ಕಾರ್ಯಕ್ರಮ ಅ. 23ರಂದು ಸಂಜೆ 7:30ಕ್ಕೆ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಪಿಲಿ ರಾಧಣ್ಣ ಮತ್ತು ಬಳಗದ 47ನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮವು ಅ. 24 ರಂದು ಬೆಳಗ್ಗೆ 10 ಗಂಟೆಯಿಂದ ಹಲವು ಕಡೆಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸುಮಾರು 47 ವರುಷಗಳಿಂದ ಹುಲಿ ವೇಷ ಹಾಕಿ ಜನರನ್ನು ಮನರಂಜಿಸುತ್ತಿರುವ ಪಿಲಿ ರಾಧಣ್ಣ ಮತ್ತು ಬಳಗವು ಪುತ್ತೂರು ಮಾತ್ರವಲ್ಲದೇ ಜಿಲ್ಲೆಯ ಇನ್ನೂ ಹಲವು ಕಡೆಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಬಂಟ್ವಾಳ ಕೆರೆ ನೀರಿನಲ್ಲಿ ಮುಳುಗಿ ಶಾಲಾ ವಿದ್ಯಾರ್ಥಿ ಅಝೀಂ ಮೃತ್ಯು

Posted by Vidyamaana on 2023-04-08 23:13:50 |

Share: | | | | |


ಬಂಟ್ವಾಳ ಕೆರೆ ನೀರಿನಲ್ಲಿ ಮುಳುಗಿ ಶಾಲಾ ವಿದ್ಯಾರ್ಥಿ ಅಝೀಂ ಮೃತ್ಯು

ಬಂಟ್ವಾಳ :ಬಿ ಸಿ ರೋಡು ಸಮೀಪದ ಮಿತ್ತಬೈಲು ನಿವಾಸಿ ಶಾಲಾ ಬಾಲಕನೋರ್ವ ಶನಿವಾರ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಏ :8 ರಂದು ವರದಿಯಾಗಿದ್ದು, ಮೃತದೇಹ ಶನಿವಾರ ತಡ ರಾತ್ರಿ ವೇಳೆಗೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ ಸಿ ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಎಂಬಾತನೇ ಮೃತ ಬಾಲಕ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ.ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಇಕ್ಬಾಲ್ ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

Posted by Vidyamaana on 2024-01-06 04:42:27 |

Share: | | | | |


ಇಕ್ಬಾಲ್  ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

ಅಯೋಧ್ಯೆ: ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಮೊಕದ್ದಮೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಶುಕ್ರವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದು, ಈ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.ಇದು ಅಯೋಧ್ಯೆ ನಗರಿ, ಇದು ಧರ್ಮದ ನಗರ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ದೇವತೆಗಳು ಇಲ್ಲಿ ಇದ್ದಾರೆ. ಅಯೋಧ್ಯೆಯ ಹಿಂದೂಗಳು ಮತ್ತು ಮುಸ್ಲಿಮರಲ್ಲಿ ಸಹೋದರತೆ ಮತ್ತು ಏಕತೆ ಇದೆ ಮತ್ತು ಯಾವುದೇ ಅಶಾಂತಿ ಇಲ್ಲ. ದೇವಸ್ಥಾನ, ಮಸೀದಿ, ಗುರುದ್ವಾರ ಎಂಬ ಭೇದಭಾವವಿಲ್ಲ. ಅಯೋಧ್ಯೆಗೆ ಬರುವವರಲ್ಲಿ ಸೌಹಾರ್ದತೆಯ ಭಾವನೆ ಇದೆ’ ಎಂದು ಆಹ್ವಾನ ಸ್ವೀಕರಿಸಿದ ಕೂಡಲೇ ಪಿಟಿಐಗೆ ಹೇಳಿಕೆ ನೀಡಿದ್ದಾರೆ.ರಾಮ್ ಪಥ್ ಬಳಿಯ ಕೋಟ್ಯ ಪಂಜಿತೋಲದಲ್ಲಿರುವ ನಿವಾಸದಲ್ಲಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಲಾಯಿತು ಎಂದು ಅವರ ಪುತ್ರಿ ಶಮಾ ಪರ್ವೀನ್ ಪಿಟಿಐಗೆ ತಿಳಿಸಿದ್ದಾರೆ.


ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯ ಪಟ್ಟಣಕ್ಕೆ ಬರುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಆಹ್ವಾನಿತರ ಪಟ್ಟಿಯಲ್ಲಿ ಭಾರತ ಮತ್ತು ವಿದೇಶಗಳಿಂದ ಸುಮಾರು 7,000 ಅತಿಥಿಗಳು ಸೇರಿದ್ದಾರೆ.ಅನ್ಸಾರಿ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಮ ಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ 2019ರ ತೀರ್ಪನ್ನು ಮುಸ್ಲಿಂ ಸಮುದಾಯ ಗೌರವಿಸುತ್ತದೆ ಎಂದು ಹೇಳಿದ್ದರು.



ಅನ್ಸಾರಿಯವರ ತಂದೆ ಹಾಶಿಮ್ ಅನ್ಸಾರಿ ಅವರು 2016 ರಲ್ಲಿ 90 ರ ಹರೆಯದಲ್ಲಿ ನಿಧನ ಹೊಂದಿದ್ದು ಕೊನೆಯವರೆಗೂ ಅಯೋಧ್ಯೆ ಪ್ರಕರಣದ ಪ್ರಮುಖ ದಾವೆದಾರರಲ್ಲಿ ಒಬ್ಬರಾಗಿದ್ದರು.

ಮಗನ ಉತ್ತರಕ್ರಿಯೆ ನಡೆದ ಎರಡೇ ದಿನದಲ್ಲಿ ತಂದೆ ಆತ್ಮಹತ್ಯೆಗೆ ಶರಣು

Posted by Vidyamaana on 2024-01-16 15:32:09 |

Share: | | | | |


ಮಗನ ಉತ್ತರಕ್ರಿಯೆ ನಡೆದ ಎರಡೇ ದಿನದಲ್ಲಿ ತಂದೆ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ, ಜ.16: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ಮಾಡಿಕೊಂಡವರು.‌


ಜ.4 ರಂದು ಎಂಟನೇ ತರಗತಿ ಓದುತ್ತಿದ್ದ ಮಗ ಯಕ್ಷಿತ್ (14) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಉತ್ತರ ಕ್ರಿಯೆ ಜ.14ರಂದು ಭಾನುವಾರ ನಡೆದಿತ್ತು. ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ (14) ಸಾವಿಗೆ ತಮ್ಮನ ಜೊತೆಗಿನ ಕ್ಷುಲ್ಲಕ ಜಗಳ ಕಾರಣ ಎನ್ನಲಾಗಿತ್ತು. 


ಆರು ವರ್ಷದ ತಮ್ಮನ ಜೊತೆ ಪದೇ ಪದೇ ಗಲಾಟೆ ನಡೆದಿತ್ತು.‌ ಈ ಸಲ ಗಲಾಟೆಯಲ್ಲಿ ತಮ್ಮ ಅಣ್ಣನ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ. ಇದೇ ವಿಚಾರದಲ್ಲಿ ನೊಂದು ತಮ್ಮನ ಎದುರೇ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಯಕ್ಷಿತ್ ಉಜಿರೆ ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿದ್ದ. 


ಮನೆಯ ಕೊಠಡಿಯಲ್ಲೇ ತಾಯಿಯ ಸೀರೆಯನ್ನು ಬಿಗಿದುಕೊಂಡು ನೇಣಿಗೆ ಶರಣಾಗಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ದುರಂತ ಸಾವಿಗೀಡಾಗಿದ್ದು ಉಜಿರೆಯ ಜನರ ಮನ ಕಲಕಿತ್ತು. ಬೆಳ್ತಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರು. ಇದೀಗ ಮಗನ ಉತ್ತರ ಕ್ರಿಯೆ ನಡೆದು ಎರಡೇ ದಿನದಲ್ಲಿ ತಂದೆಯೂ ಸಾವಿಗೆ ಶರಣಾಗಿದ್ದಾರೆ

ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Posted by Vidyamaana on 2023-10-02 07:54:25 |

Share: | | | | |


ಬಂಟ್ವಾಳ : ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ LIC  ಏಜೆಂಟ್ ನಾರಾಯಣ ಕುಲಾಲ್  ಆತ್ಮಹತ್ಯೆ

ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಅ 02 ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.


    ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.


  ಅ 2 ಸೋಮವಾರ ಮುಂಜಾನೆ 5 ರ ವೇಳೆಗೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆ ಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದಾರೆ.


   ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಅಲ್ಲಿ ಸೇರಿದವರು ಮೃತನನ್ನು ಗುರುತಿಸಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


   ಪ್ರಥಮ ನೋಟದಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದರೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿಯಬೇಕಷ್ಟೆ.



Leave a Comment: