ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

Posted by Vidyamaana on 2023-12-05 13:50:20 |

Share: | | | | |


ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

ಚಿಕ್ಕಮಗಳೂರು: ನಾಯಿ ಬೊಗಳಿದ್ದಕ್ಕೆ ಮನೆ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ.


ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿಯಾದರೆ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ. ಜೇಮ್ಸ್ ಹಾಗೂ ಸುಂದರ್ ರಾಜ್ ಅಕ್ಕಪಕ್ಕದ ಮನೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು. ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು.


ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ.

ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

Posted by Vidyamaana on 2024-06-26 20:07:03 |

Share: | | | | |


ಪ್ಯಾಲೆಸ್ತೀನ್ ಪರ ಘೋಷಣೆ ವಿವಾದ; ಪೊಳ್ಳು ಬೆದರಿಕೆಗೆ ಹೆದರುವುದಿಲ್ಲ: ಅಸಾದುದ್ದೀನ್ ಓವೈಸಿ

ದೆಹಲಿ ಜೂನ್ 26: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಾಡಿದ ಹೇಳಿಕೆ ಭಾರೀ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಓವೈಸಿ ಅವರು ಪ್ಯಾಲೆಸ್ತೀನ್‌ನ ಯುದ್ಧ ಪೀಡಿತ ಪ್ರದೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಇದನ್ನು ಆಡಳಿತಾರೂಢ ಪಕ್ಷದ ಸಂಸದರು ಖಂಡಿಸಿದ್ದಾರೆ.

ಐದು ಬಾರಿ ಹೈದರಾಬಾದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಓವೈಸಿ ಜೈ ತೆಲಂಗಾಣ ಮತ್ತು ಜೈ ಪ್ಯಾಲೆಸ್ತೀನ್ ಘೋಷಣೆಗಳನ್ನು ಕೂಗಿದ್ದರು. ಈ ಘೋಷಣೆಗೆ ಆಕ್ರೋಶ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ, ಓವೈಸಿ ಇಂಥಾ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೂ ಸಂವಿಧಾನದ ಬಗ್ಗೆ ಸ್ವಲ್ಪ ತಿಳಿದಿದೆ, ಈ ಪೊಳ್ಳು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಅಸಾದುದ್ದೀನ್ ಓವೈಸಿ ಟ್ವೀಟ್

ಪೆರುವಾಜೆ:ಮರಕ್ಕೆ ಡಿಕ್ಕಿಯಾಗಿ ಸ್ಕೂಟರ್ ಪಲ್ಟಿ ಸಹಸವಾರ ಮಹಮ್ಮದ್ ರಾಝಿಕ್ ಸಾವು

Posted by Vidyamaana on 2024-04-13 11:45:27 |

Share: | | | | |


ಪೆರುವಾಜೆ:ಮರಕ್ಕೆ ಡಿಕ್ಕಿಯಾಗಿ ಸ್ಕೂಟರ್ ಪಲ್ಟಿ ಸಹಸವಾರ ಮಹಮ್ಮದ್ ರಾಝಿಕ್ ಸಾವು

ಬೆಳ್ಳಾರೆ :ಸ್ಕೂಟರೊಂದು ಮರಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದು ಸಹಸವಾರ ಮೃತಪಟ್ಟ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಪೆರುವಾಜೆ ಬೋರಡ್ಕ ಎಂಬಲ್ಲಿ ನಡೆದಿರುವ ಕುರಿತು ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಪೆರುವಾಜೆ ನಿವಾಸಿ ಜಬ್ಬಾರ್ ಕೆ ಎಂಬವರು ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದಾರೆ.ಏ.11ರಂದು ರಾತ್ರಿ ನನ್ನ ಬಾಬು ಕೆ.ಎ.21 ಇಎ-2558ನೇ ಸ್ಕೂಟರಿನಲ್ಲಿ ಸಂಬಂಧಿಕರಾದ ಮಹಮ್ಮದ್ ಮುಸಾಬ್ ಸವಾರನಾಗಿ ಹಾಗೂ ಮಹಮ್ಮದ್ ರಾಜೀಕ್‌ರವರು ಸಹಸವಾರನಾಗಿ ಪ್ರಯಾಣಿಸುತ್ತಾ, ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಬೋರಡ್ಕ ಎಂಬಲ್ಲಿಗೆ ತಲುಪಿದಾಗ, ಮಹಮ್ಮದ್ ಮುಸಾಬ್ ಸ್ಕೂಟರನ್ನು ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ, ಸದ್ರಿ ಸ್ಕೂಟರ್ ರಸ್ತೆಬದಿಯ ಮರಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದಿತ್ತು.ಸ್ಕೂಟರ್‌ನ ಹಿಂದಿನಿಂದ ಬರುತ್ತಿದ್ದ ನಾನು ಕಾರನ್ನು ನಿಲ್ಲಿಸಿ,

ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2024-02-27 18:09:20 |

Share: | | | | |


ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು.ಇನ್ನೂ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನಿಂದ ಜಿಸಿ ಚಂದ್ರಶೇಖರ್‌, ನಾಸೀರ್‌ ಹುಸೇನ್‌, ಅಜಯ್‌ ಮಾಕೇನ್‌ ಸ್ಪರ್ಧಿಸಿ ಗೆಲುವು ಕಂಡರೇ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರಾಯಣಸಾ ಭಾಂಡಗೆ ಅವರು ಗೆಲವು ಕಂಡಿದ್ದಾರೆ.ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರು, ಆದರೆ ಅವರು ಸೋಲನ್ನು ಕಂಡಿದ್ದಾರೆ.


ಅಜಯ್ ಮಾಕನ್ -47, ನಾಸೀರ್ ಹುಸೇನ್ - 46, ಜಿ.ಸಿ. ಚಂದ್ರಶೇಖರ - 45, ನಾರಾಯಣಸಾ ಭಾಂಡಗೆ - 48, ಕುಪೇಂದ್ರ ರೆಡ್ಡಿ - 35 ಮತಗಳನ್ನು ಗಳಿಸಿದ್ದಾರೆ.


ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ 6, ಪಶ್ಚಿಮ ಬಂಗಾಳ 5, ಮಧ್ಯ ಪ್ರದೇಶ 5, ಗುಜರಾತ್ 4, ಆಂಧ್ರ ಪ್ರದೇಶ 3, ತೆಲಂಗಾಣ 3, ರಾಜಸ್ಥಾನ 3, ಕರ್ನಾಟಕ 4, ಉತ್ತರಾಖಂಡ 1, ಛತ್ತೀಸ್‌ಗಢ 1, ಒಡಿಶಾ 3, ಹರ್ಯಾಣ 1 ಹಾಗೂ ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಕ್ಕೆ ಚುನಾವಣೆ ನಡೆದಿದೆ.


ಈ ನಡುವೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಜಿ.ಪಾಟೀಲ್, ಈ ಬಗ್ಗೆ ಪಕ್ಷ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ. ದೊಡ್ಡನಗೌಡ ಜಿ.ಪಾಟೀಲ್ ಮಾತನಾಡಿ, ಬಿಜೆಪಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿದೆ. ಏನು ಮಾಡಬಹುದು ಮತ್ತು ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಚರ್ಚಿಸುತ್ತಿದ್ದೇವೆ" ಎಂದು ಅವರು ಹೇಳಿದರು. ಮತ ಚಲಾಯಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, "ನನ್ನ ಕ್ಷೇತ್ರದ ನೀರು ಮತ್ತು ಇತರ ನಿರ್ವಹಣೆಗೆ ಅವರು ಹಣ ನೀಡುತ್ತಾರೆ ಎಂಬ ಭರವಸೆ ನೀಡುವವರ ಪರವಾಗಿ ನಾನು ಮತ ಚಲಾಯಿಸುತ್ತೇನೆ" ಎಂದು ಹೇಳಿದರು

ದಿಡೀರ್ ನಾಪತ್ತೆಯಾದ ವಿದ್ಯಾರ್ಥಿ ತಡ ರಾತ್ರಿ ಶಾಸಕ ಅಶೋಕ್ ರೈ ಸ್ಪಂದನೆ- ಬಾಲಕ ಪತ್ತೆ

Posted by Vidyamaana on 2024-01-18 13:07:07 |

Share: | | | | |


ದಿಡೀರ್ ನಾಪತ್ತೆಯಾದ ವಿದ್ಯಾರ್ಥಿ  ತಡ ರಾತ್ರಿ ಶಾಸಕ ಅಶೋಕ್ ರೈ ಸ್ಪಂದನೆ- ಬಾಲಕ ಪತ್ತೆ

ಪುತ್ತೂರು:ಮನೆಯಿಂದ ಪೇಟೆಗೆಂದು ಬಂದ ಬಾಲಕ ದಿಡೀರನೆ ನಾಪತ್ತೆಯಾಗಿದ್ದು ಮನೆಯವರ ಹುಡುಕಾಟದ ಬಳಿಕ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಆದರ್ಶ ನಗರದಲ್ಲಿ ನಡೆದಿದೆ.


ಆದರ್ಶ ನಗರ ನಿವಾಸಿ ಪ್ರಥಮ ಪಿಯುಸಿ ಬಾಲಕ ಜ.೧೭ ರಂದು ಸಂಜೆ ಸುಮಾರು ಏಳು ಗಂಟೆಗೆ ಮನೆಯಿಂದ ಉಪ್ಪಿನಂಗಡಿ ಹೋಗಿ ಬರುವುದಾಗಿ ಬಂದಿದ್ದಾನೆ. ಆ ಬಳಿಕ ರಾತ್ರಿ ಸುಮಾರು ೧೧ ಗಂಟೆಯವರೆಗೂ ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಮನೆಯವರು ರಾತ್ರಿ ಉಪ್ಪಿನಂಗಡಿಯಲ್ಲಿ ಹುಡುಕಾಟ ನಡೆಸಿದ್ದಾರೆ, ಬಾಲಕ ಎಲ್ಲಿಯೂ ಪತ್ತೆಯಾಗದ ವಿಚಾರ ತಿಳಿದು ರಾತ್ರಿ ಶಾಸಕರಾದ ಅಶೋಕ್ ರೈ ಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ನಾಪತ್ತೆಯಾದ ಬಾಲಕನ ವಿವರಣೆಯನ್ನು ನೀಡಿದ್ದರು. ಶಾಸಕರ ಸೂಚನೆಯಂತೆ ಪೊಲೀಸರು ವಿವಿಧ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಿಗೆ ಮಾಹಿತಿ ರವಾನೆ ಮಾಡಿದ್ದರು. ಹುಡುಕಾಟದ ವೇಳೆ ನಾಪತ್ತೆಯಾದ ಬಾಲಕ ಬೆಳಿಗ್ಗಿನ ಜಾವ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾನೆ. ಆತನನ್ನು ಕರೆದುಕೊಂಡು ಬರಲು ಪೋಷಕರು ಬೆಂಗಳೂರಿಗೆ ತೆರಳಿದ್ದಾರೆ. ತಡ ರಾತ್ರಿ ಕರೆ ಮಾಡಿದಾಗಲೂ ತುರ್ತು ಸ್ಪಂದನೆ ನೀಡುವ ಮೂಲಕ ಬಾಲಕನ ಪತ್ತೆಗೆ ನೆರವು ನೀಡಿದ ಸಸಕರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ನನ್ನ ಹೆಂಡತಿಗೂ ಸಿಗುತ್ತೆ ರೀ: ಸಿದ್ದರಾಮಯ್ಯ ಹಾಸ್ಯ ಚಟಾಕಿ

Posted by Vidyamaana on 2023-06-02 14:25:24 |

Share: | | | | |


ನನ್ನ ಹೆಂಡತಿಗೂ ಸಿಗುತ್ತೆ ರೀ: ಸಿದ್ದರಾಮಯ್ಯ ಹಾಸ್ಯ ಚಟಾಕಿ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಘೋಷಣೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಫ್ & ಟಫ್ ಆಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.ಸುದ್ದಿಗೋಷ್ಠಿಯ ವೇಳೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕುರಿತು ಪತ್ರಕರ್ತರೊಬ್ಬರು ಈ ಯೋಜನೆ ದುಡಿಯುವ ವರ್ಗ, ಸರ್ಕಾರಿ ಉದ್ಯೋಗಿ ಮಹಿಳೆಯರಿಗೆ ಸಿಗುತ್ತದೆಯಾ ಎಂದು ಪ್ರಶ್ನಿಸಿದರು. ಉತ್ತರಿಸಿದ ಸಿಎಂ, ”ಎಲ್ಲರಿಗೂ ಸಿಗುತ್ತದೆ, ನನ್ನ ಹೆಂಡತಿಗೂ ಸಿಗುತ್ತದೆ” ಎಂದು ಉತ್ತರಿಸಿದರು. ಈ ವೇಳೆ ಉಪಸ್ಥಿತರಿದ್ದ ಸಚಿವರೆಲ್ಲರೂ ಗೊಳ್ಳನೇ ನಕ್ಕು ನಗೆ ಗಡಲಲ್ಲಿ ತೇಲಾಡಿದರು.

ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರನ್ನೊಳಗೊಂಡಂತೆ ಬಸ್ ನಲ್ಲಿ ಉಚಿತ ಪ್ರಯಾಣ ಜೂನ್ 11 ರಿಂದ ಜಾರಿ ಮಾಡುತ್ತೇವೆ. ಕರ್ನಾಟಕದೊಳಗೆ ಪ್ರಯಾಣಿಸಲು ಅನ್ವಯ. ರಾಜ್ಯದ ಒಳಗಡೆ ಎಸಿ, ರಾಜಹಂಸ ಬಸ್ ಹೊರತುಪಡಿಸಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ನಲ್ಲೂ ಫ್ರೀ ಆಗಿ ಪ್ರಯಾಣ ಮಾಡಬಹುದು. ಕೆಎಸ್ ಆರ್ ಟಿಸಿ ಯಲ್ಲಿ ಪುರುಷರಿಗೆ 50% ಮೀಸಲಿಡುತ್ತೇವೆ, ಇದು ಬಿಎಂಟಿಸಿ ಬಸ್ ನಲ್ಲಿ ಅನ್ವಯವಾಗುವುದಿಲ್ಲ ಎಂದರು.



Leave a Comment: