ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Posted by Vidyamaana on 2024-04-15 21:29:18 |

Share: | | | | |


ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನೋಟ ಮತ ಪತ್ರ ಬಿಡುಗಡೆಗೊಳಿಸಲಾಯಿತು.

ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮದ ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. ನಮಗೆ ಮೇಲಿನವರು ಯಾರು ಅರ್ಹರಲ್ಲ ಎಂಬ ಉದ್ದೇಶದಿಂದ ನೋಟಾ ಅಭಿಯಾನ ಮಾಡುತ್ತಿದ್ದೇವೆ. ೧೨ ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಹಲವು ಕೇಸು ಹಾಕಿದ್ದಾರೆ. ಇಲ್ಲಿ ಶಾಶಾಂಗ ಸತ್ತಿದೆ. ಹಾಗಾಗಿ ನಾವು ನೋಟಾ ಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆಯಿದೆ ಎಂದರು. 

ದಾಂಪತ್ಯದಲ್ಲಿ ಜಗಳವಾಡಿ ಬೇರ್ಪಟ್ಟವರ ಎಲೆಕ್ಷನ್ ಕಾದಾಟ

Posted by Vidyamaana on 2024-03-11 12:14:11 |

Share: | | | | |


ದಾಂಪತ್ಯದಲ್ಲಿ ಜಗಳವಾಡಿ ಬೇರ್ಪಟ್ಟವರ ಎಲೆಕ್ಷನ್ ಕಾದಾಟ

ಕೊಲ್ಕತ್ತಾ: ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ವಿಚ್ಛೇದಿತ ಪತಿ- ಪತ್ನಿ ಪರಸ್ಪರ ಸೆಣೆಸಲು ಅನುವು ಮಾಡಿಕೊಟ್ಟಿದೆ. ಸುಜಾತಾ ಮಂಡಲ್ ಅವರು ತಮ್ಮ ಮಾಜಿ ಪತಿ ಹಾಗೂ ಬಿಷ್ಣುಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೌಮಿತ್ರಾ ಖಾನ್ ವಿರುದ್ಧ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.


ಬಿಷ್ಣುಪುರದ ಸೌಮಿತ್ರಾ ಖಾನ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಈ ತಿಂಗಳ ಆರಂಭದಲ್ಲಿ ಘೋಷಿಸಲಾಗಿತ್ತು. ಇಂದು ಮಂಡಲ್ ಅವರನ್ನು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಟಿಸಲಾಗಿದೆ.


ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ್ದ 2021ರ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ದಂಪತಿ ಬೇರ್ಪಟ್ಟಿತ್ತು. ಪತ್ನಿ ತೃಣಮೂಲ ಕಾಂಗ್ರೆಸ್ ಸದಸ್ಯೆಯಾಗಿ ರಾಜಕೀಯಕ್ಕೆ ಧುಮುಕಿದ ತಕ್ಷಣ ಕ್ಯಾಮೆರಾ ಮುಂದೆಯೇ ಖಾನ್ ವಿಚ್ಛೇದನ ಘೋಷಿಸಿದ್ದರು.


ಬಿಷ್ಣುಪುರ ಮೂಲದ ಖಾನ್ 2019ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಆ ಸಮಯದಲ್ಲಿ ಅವರ ಪತ್ನಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದರು. ರಾಜ್ಯದ 42 ಸ್ಥಾನಗಳಿಗೆ ತೃಣಮೂಲ ಕಾಂಗ್ರೆಸ್ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಪಕ್ಷ ಮುಂದಾಗಿದೆ.


ಚುನಾವಣಾ ಫಲಿತಾಂಶ ಬಂದ ಬಳಿಕವಷ್ಟೇ ವಿರೋಧ ಪಕ್ಷಗಳ ಕೂಟವನ್ನು ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿರುವುದು ಕಾಂಗ್ರೆಸ್ ಪಾಲಿಗೆ ದೊಡ್ಡ ಹಿನ್ನಡೆಯಾಗಿದೆ.

ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

Posted by Vidyamaana on 2023-05-12 12:00:38 |

Share: | | | | |


ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಇದೀಗ ಮತ ಎಣಿಕೆಗೆ ಕ್ಷಣಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣಗೊಳ್ಳಬಹುದೆಂಬ ಸೂಚನೆ ಸಿಕ್ಕಿರುವುದರಿಂದ ರಾಜ್ಯದಲ್ಲಿ ಮೂರೂ ಪಕ್ಷಗಳೂ ‘ಹೈ ಅಲರ್ಟ್’ನಲ್ಲಿವೆ.

ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವ ಸಾಧ್ಯತೆಗಳು ಕಡಿಮೆಯಿದ್ದು ಕಾಂಗ್ರೆಸ್ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳನ್ನು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವುದು ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಇದೀಗ ಫಲಿತಾಂಶದ ಬಳಿಕ ‘ಅಪರೇಷನ್ ಕಮಲ’ ನಡೆಯುವ ಸಾಧ್ಯತೆ ದಟ್ಟವಾಗಿರುವ ಕಾರಣ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೊಸ ಪ್ಲ್ಯಾನ್ ಹೆಣೆದಿದ್ದು, ಮೇ13ರಂದು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಕಾಂಗ್ರೆಸ್ ಅಭ್ಯರ್ಥಿ ತನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ನೇರವಾಗಿ ಬೆಂಗಳೂರಿಗೆ ಬರುವಂತೆ ಪಕ್ಷದ ಹೈಕಮಾಂಡ್ ‘ಸ್ಟ್ರಿಕ್ಟ್ ಆದೇಶ’ ರವಾನಿಸಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ಜೊತೆ ವರ್ಚ್ಯವಲ್ ಮೀಟಿಂಗ್ ನಡೆಸಿದ್ದು ಈ ಸಂದರ್ಭದಲ್ಲಿ ಇಂತಹದ್ದೊಂದು ಸೂಚನೆಯನ್ನು ‘ಕೈ’ ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ನಾವು ಕಾಣುತ್ತಿರುವುದು ಅಡ್ಡಸ್ಟ್ ಮೆಂಟ್ ಪಾಲಿಟಿಕ್ಸ್. ಯಾರು, ಯಾವಾಗ, ಯಾರ ಜೊತೆ ಹೋಗುತ್ತಾರೆ ಎನ್ನುವುದೇ ಅರ್ಥವಾಗುವುದಿಲ್ಲ :ಮಾಜಿ ಸಿಎಂ ಸದಾನಂದ ಗೌಡ

Posted by Vidyamaana on 2024-06-03 19:17:55 |

Share: | | | | |


ನಾವು ಕಾಣುತ್ತಿರುವುದು ಅಡ್ಡಸ್ಟ್ ಮೆಂಟ್ ಪಾಲಿಟಿಕ್ಸ್. ಯಾರು, ಯಾವಾಗ, ಯಾರ ಜೊತೆ ಹೋಗುತ್ತಾರೆ ಎನ್ನುವುದೇ ಅರ್ಥವಾಗುವುದಿಲ್ಲ :ಮಾಜಿ ಸಿಎಂ ಸದಾನಂದ ಗೌಡ

ಮಂಡ್ಯ : (ಜೂ.03): ಪ್ರಸ್ತುತ ದಿನಗಳಲ್ಲಿ ನಾವು ಕಾಣುತ್ತಿರುವುದು ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್. ಯಾರು, ಯಾವಾಗ, ಯಾರ ಜೊತೆ ಹೋಗುತ್ತಾರೆ ಎನ್ನುವುದೇ ಅರ್ಥವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೂಚ್ಯವಾಗಿ ಹೇಳಿದರು. ನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ಕರ್ನಾಟಕ ಸಂಘ, ಇಂಡುವಾಳು ಎಚ್.ಹೊನ್ನಯ್ಯ ಕುಟುಂಬ ವರ್ಗದ ಸಹಯೋಗದಲ್ಲಿ ಆಯೋಜಿಸಿದ್ದ ಇಂಡುವಾಳು ಎಚ್.ಹೊನ್ನಪ್ಪ ಅವರನ್ನು ಕುರಿತ ನೆಲದ ಕಣ್ಣು ಕೃತಿ ಬಿಡುಗಡೆ ಹಾಗೂ ಎಚ್.ಹೊನ್ನಪ್ಪ ಕ್ರೀಡಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಹೊಂದಾಣಿಕೆ ರಾಜಕಾರಣ ಒಮ್ಮೊಮ್ಮೆ ಸಾಕಷ್ಟು ಇಕ್ಕಟ್ಟಿಗೆ ಸಿಲುಕಿಸುವುದು ಸಹಜ. ಕೆಲವೊಮ್ಮೆ ಅನಿವಾರ್ಯವೂ ಆಗುತ್ತದೆ. ಅದರೊಂದಿಗೆ ಹೊಂದಿಕೊಂಡು ರಾಜಕಾರಣ ಮುನ್ನಡೆಸುವುದು ಸುಲಭವೂ ಅಲ್ಲ ಎಂದು ಹೇಳಿದರು. ರಾಜಕಾರಣಿಗಳಿಗೆ ಪ್ರಶಂಸೆಯನ್ನು ಜೀರ್ಣಿಸಿಕೊಳ್ಳುವ ಶಕ್ತಿ ಇರಬೇಕು. ಪ್ರಶಂಸೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದಿದ್ದರೆ ಅಹಂಕಾರ ಹೆಚ್ಚಾಗುತ್ತದೆ. ಇದರಿಂದ ಮುಂದೆ ಯಾವ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಪ್ರಶಂಸೆ, ಟೀಕೆಗಳನ್ನು ಜೀರ್ಣಿಸಿಕೊಂಡಾಗ ಆ ವ್ಯಕ್ತಿ ಸಮಾಜಕ್ಕೆ ಶಕ್ತಿಯಾಗುತ್ತಾನೆ, ಜನರ ಗೌರವಕ್ಕೆ ಪಾತ್ರರಾಗಿ ಆದರ್ಶ ವ್ಯಕ್ತಿಯಾಗಿಯೂ ರೂಪುಗೊಳ್ಳುತ್ತಾನೆ ಎಂದು ಹೇಳಿದರು.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 11

Posted by Vidyamaana on 2023-09-11 08:58:28 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 11

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 11 ರಂದು


ಬೆಳಿಗ್ಗೆ 9.30 ಮಂಗಳೂರಿನ‌ ನಹರೂ‌ಮೈದಾನದಲ್ಲಿ‌ ಸಚಿವರ ಕಾರ್ಯಕ್ರಮ


10.30 ಕ್ಕೆ ಬಂಟರ ಭವನದಲ್ಲಿ ರಾಜ್ಯ ಅತ್ಲೆಟಿಕ್ ಒಕ್ಕೂಟದ ಸಭೆ


11.30 ಕ್ಕೆ ಆರ್ಯಾಪು ಸಹಕಾರಿ‌ಸಂಘದ ಮಹಾಸಭೆ


12.30 ಕ್ಕೆ ಬನ್ನೂರು ಸಹಕಾರಿ ಸಂಘದ ಮಹಾಸಭೆ


ಸಂಜೆ 4 ಗಂಟೆಗೆ ಸುದ್ದಿ ಚಾನೆಲ್ ನಲ್ಲಿ ಸಾರ್ವಜನಿಕರ ಜೊತೆ‌ಸಂವಾದ , ಫೋನ್ ಇನ್ ಕಾರ್ಯಕ್ರಮ ಲೈವ್

 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌



Leave a Comment: