ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಗ್ರಾಮೀಣ ರೈತ ಮಹಿಳೆಯರಿಗೆ ನಾಟಿಕೋಳಿ ಮರಿ ಉಚಿತ ವಿತರಣೆ

Posted by Vidyamaana on 2022-12-15 14:17:04 |

Share: | | | | |


ಗ್ರಾಮೀಣ ರೈತ ಮಹಿಳೆಯರಿಗೆ ನಾಟಿಕೋಳಿ ಮರಿ ಉಚಿತ ವಿತರಣೆ

ಪುತ್ತೂರು: ಪೌಷ್ಠಿಕತೆ ಹಾಗೂ ರುಚಿಯ ಜತೆಗೆ ರೋಗ ನಿರೋಧಕ ಶಕ್ತಿ ಹೊಂದಿರುವ ನಾಟಿ ಕೋಳಿ ಮರಿಗಳನ್ನು ಸಾಕುವ ಉದ್ದೇಶದಿಂದ ರಾಜ್ಯ ಸರಕಾರದ ಕುಕ್ಕುಟ ಮಹಾ ಮಂಡಳಿ ನಿಗಮ ಬೆಂಗಳೂರು ಮತ್ತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಇದರ ಗ್ರಾಮೀಣ ಭಾಗದ ಅರ್ಹ ರೈತ ಮಹಿಳೆಯರಿಗೆ ಉಚಿತ ನಾಟಿ ಕೋಳಿ ಮರಿಗಳನ್ನು ಪುತ್ತೂರು ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಉಚಿತವಾಗಿ ವಿತರಿಸಲಾಯಿತು.

ನಾಟಿ ಕೋಳಿ ಮರಿ ವಿತರಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಗ್ರಾಮೀಣ ಭಾಗದ ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಶುಸಂಗೋಪನಾ ಇಲಾಖೆಯಿಂದ ಉಚಿತವಾಗಿ ನಾಟಿಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ನೂರಿನ್ನೂರು ಕೋಳಿಮರಿಗಳನ್ನು ಸಾಕಿಕೊಂಡು, ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದು ಹೇಳಿದರು.

ರೈತ ಮಹಿಳೆಯರ ಆದಾಯ ಹೆಚ್ಚಿಸುವ ನಿಟ್ಟನಲ್ಲಿ ಸರಕಾರ ಹಲವಾರು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಲ್ಲಿ ಇದು ಕೂಡ ಒಂದು. ಐವತ್ತು ಸಾವಿರ ಕೋಳಿಮರಿಗಳನ್ನು ಸಾಕಿಕೊಂಡು, ಕುಕ್ಕುಟೋದ್ಯಮ ನಡೆಸುವ ಉದ್ಯಮಿಗಳನ್ನು ನಾವು ಕಾಣುತ್ತೇವೆ. ಆದರೆ ನೂರಿನ್ನೂರು ನಾಟಿ ಕೋಳಿ ಮರಿಗಳನ್ನು ಸಾಕಿಕೊಂಡು ಉದ್ಯಮ ನಡೆಸುತ್ತಾ, ಉತ್ತಮ ಜೀವನ ಸಾಗಿಸಬಹುದು ಎಂದು ಅವರು ಹೇಳಿದರು.

ಮೈಸೂರು ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳಿ ನಿಗಮದ ಜಾನುವಾರು ಅಭಿವೃದ್ಧಿ ಅಧಿಕಾರಿ ಶಿವಮೂರ್ತಿ, ಕಚೇರಿ ಸಿಬ್ಬಂದಿ ಅಮೃತ್ ಉಪಸ್ಥಿತರಿದ್ದರು.

ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಪ್ರಸನ್ನ ಕುಮಾರ್ ಹೆಬ್ಬಾರ್ ಸ್ವಾಗತಿಸಿ, ಜಾನುವಾರು ಅಭಿವೃದ್ಧಿ ಅಧಿಕಾರಿ ಶಿವಪ್ರಸಾದ್ ವಂದಿಸಿದರು.


ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ. ಅಧಿಕಾರಿಗಳಿಗೆ ಹಲ್ಲೆ

Posted by Vidyamaana on 2023-02-23 23:23:37 |

Share: | | | | |


ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ. ಅಧಿಕಾರಿಗಳಿಗೆ ಹಲ್ಲೆ

ಕಡಬ, ಫೆ.23. ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಂತರ ಉಳಿದ ಆನೆಗಳನ್ನು ಸೆರೆ ಹಿಡಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ವರದಿಯಾಗಿದೆ.ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದು, ಇದಕ್ಕೊಪ್ಪದ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯಾರೋ ಕಿಡಿಗೇಡಿಗಳು ಇಲಾಖೆಯ ವಾಹನಗಳಿಗೆ ಹಾನಿ ಉಂಟುಮಾಡಿ ಅಧಿಕಾರಿಗಳಿಗೆ ಹಲ್ಲೆಗೈದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ )ಅಕ್ರಮ ಮಾರಾಟ ಪ್ರಕರಣ: ಆರೋಪಿಗೆ ಜಾಮೀನು

Posted by Vidyamaana on 2023-12-29 21:33:56 |

Share: | | | | |


ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ )ಅಕ್ರಮ ಮಾರಾಟ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು :ಅಕ್ರಮವಾಗಿ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂಬ ಪ್ರಕರಣದ  ಆರೋಪಿ ಎನ್ನಲಾಗಿದ್ದ ಅಬೂಬಕ್ಕರ್ ಸಿದ್ದೀಕ್ ರವರಿಗೆ ಪುತ್ತೂರು  ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೌಡ ಆರ್. ಪಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.

ಪೋಲೀಸ್ ಸಿ.ಐ ಡಿ ಅರಣ್ಯ ಸಂಚಾರಿ ದಳ ಮಂಗಳೂರು ರವರು ತಮಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ದಿನಾಂಕ 19 /12/2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರದ ಕೋರ್ಟ್ ರಸ್ತೆ ಬಳಿ ಅಂದರೆ ಪುತ್ತೂರು ಕೋರ್ಟ್ ನಿಂದ ಪುತ್ತೂರು ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ಸಾರ್ವಜನಿಕರ ರಸ್ತೆಯಲ್ಲಿ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ K A.21  Z 3733 ನೇ ಮಾರುತಿ ಸುಜುಕಿ ಕಾರಿನಲ್ಲಿ ಅಕ್ರಮವಾಗಿ ಸುಮಾರು 3.5  ಕಿಲೋ ತೂಕದ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ ಹಾಗೂ ಕಾರನ್ನು ಮತ್ತು ಸೊತ್ತುಗಳನ್ನು ಪಂಚರ ಸಮಕ್ಷಮ ಮಹಜಾರು ಮೂಲಕ ವಶಪಡಿಸಿಕೊಂಡಿದ್ದು, ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಪ್ರಕರಣವನ್ನು  ದಾಖಲಿಸಿದ್ದರು. ತದನಂತರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿತ್ತು. ಆರೋಪಿ ಅಬೂಬಕ್ಕರ್  ಸಿದ್ದೀಕ್ ತನ್ನ ಪರ ವಕೀಲರಾದ ಶ್ರೀ ಮಹೇಶ್ ಕಜೆಯವರ ಮುಖಾಂತರ ಮಾನ್ಯ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರು  ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಅಕ್ಷೇಪವನ್ನು ಸಲ್ಲಿಸಿದ್ದರು. ವಾದ ವಿವಾದವನ್ನು ಆಲಿಸಿದ  ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯವು ಆರೋಪಿಗೆ ಶರ್ತಬದ್ಧ ಜಾಮೀನು ಮಂಜೂರು ಮಾಡಿದೆ.

ಉಪ್ಪಿನಂಗಡಿ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಂಜೂರು: ಶಾಸಕ ಅಶೋಕ್ ರೈ ಗೆ ಮಾಹಿತಿ ನೀಡಿದ ಅಧಿಕಾರಿ

Posted by Vidyamaana on 2024-01-12 18:24:13 |

Share: | | | | |


ಉಪ್ಪಿನಂಗಡಿ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣ ಮಂಜೂರು: ಶಾಸಕ ಅಶೋಕ್ ರೈ ಗೆ ಮಾಹಿತಿ ನೀಡಿದ ಅಧಿಕಾರಿ

ಪುತ್ತೂರು: ರಾ.ಹೆದ್ದಾರಿ 75 ರ ಉಪ್ಪಿನಂಗಡಿಯಲ್ಲಿ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ,ರಸ್ತೆ ಕಾಮಗಾರಿ ಬಳಿಕ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಓಡಾಟಕ್ಕೆ ತೊಂದರೆಯಾಗುತ್ತಿದ್ದು ಅಂಡರ್ ಪಾಸ್ ನಿರ್ಮಾಣ ಮಾಡುವಂತೆ ನಾನು ಈ ಹಿಂದೆ ಸೂಚನೆಯನ್ನು ನೀಡಿದೆ ಆ ವಿಚಾರ ಏನಾಯ್ತು ಎಂದು ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕರಾದ ಅಶೋಕ್ ರೈ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಉಪ್ಪಿನಂಗಡಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಇಲಾಖೆ ಅನುಮತಿ ನೀಡಿದ್ದು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಇದರಿಂದ ಉಪ್ಪಿನಂಗಡಿಯ ಜನತೆಯ ಬಹುವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ಬೆಂಗಳೂರಿನಲ್ಲಿ ಖತರ್ನಾಕ್ ಹ್ಯಾಕರ್ ಲಕ್ಷ್ಮೀಪತಿ ಬಂಧನ; 4.16 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ

Posted by Vidyamaana on 2023-09-12 20:31:24 |

Share: | | | | |


ಬೆಂಗಳೂರಿನಲ್ಲಿ ಖತರ್ನಾಕ್ ಹ್ಯಾಕರ್ ಲಕ್ಷ್ಮೀಪತಿ ಬಂಧನ; 4.16 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ಗಿಫ್ಟ್‌ ವೋಚರ್‌ ವೆಬ್‌ಸೈಟ್‌ ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಲಪಟಾಯಿಸಿದ್ದ (cyber crime) ಹ್ಯಾಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಹಕರಿಗೆ ಕೊಡುವ ಆನ್‌ಲೈನ್‌ ಗಿಫ್ಟ್‌ ವೋಚರ್‌ಗಳನ್ನು ಹ್ಯಾಕ್‌ ಮಾಡಿ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡುತ್ತಿದ್ದ ಯುವಕ ಸೆರೆಯಾಗಿದ್ದು, ಆತನಿಂದ 11 ಲಕ್ಷ ನಗದು, ಚಿನ್ನ, ಬೆಳ್ಳಿ ಗಟ್ಟಿ, ಏಳು ಬೈಕ್‌ ಸೇರಿ 4.16 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.


ಸೀಮಾಂಧ್ರದ ಚಿತ್ತೂರು ಮೂಲದ ಲಕ್ಷ್ಮೀಪತಿ ಬಂಧಿತ ಆರೋಪಿ. ಒಂಗೋಲು ಐಐಐಟಿ (IIIT Ongole) ಸಂಸ್ಥೆಯ ಬಿ.ಟೆಕ್ ಪದವೀಧರನಾಗಿರುವ ಈತ ತನ್ನ ನೈಪುಣ್ಯವನ್ನು ವಂಚನೆಗೆ ಬಳಸಿದ್ದಾನೆ. ಗ್ರಾಹಕರಿಗೆ ಕೊಡುವ ವೋಚರ್‌ಗಳು ಹ್ಯಾಕ್ ಆಗಿರುವ ಬಗ್ಗೆ ರಿವಾರ್ಡ್‌ 360 ಸಂಸ್ಥೆಯಿಂದ ಆಗ್ನೇಯ ಸೈಬರ್ ಸೆನ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.


ತನಿಖೆ ವೇಳೆ ಆಂಧ್ರ ಮೂಲದ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದಿತ್ತು. ಹೀಗಾಗಿ ಆರೋಪಿ ಲಕ್ಷ್ಮೀಪತಿಯನ್ನು ಪೊಲೀಸರು ಬಂಧಿಸಿ, ಆತನಿಂದ 3.40 ಕೋಟಿ ರೂ. ಮೌಲ್ಯದ 5 ಕೆ.ಜಿ ಚಿನ್ನ, 21.80 ಲಕ್ಷ ರೂ. ಮೌಲ್ಯದ 27.250 ಕೆ.ಜಿ ಬೆಳ್ಳಿ, 11 ಲಕ್ಷ ರೂ., ಪ್ಲಿಫ್ ಕಾರ್ಟ್ ವ್ಯಾಲೆಟ್‌ನ 26 ಲಕ್ಷ ರೂ., ಅಮೆಜಾನ್ ವ್ಯಾಲೆಟ್‌ನ 3.50 ಲಕ್ಷ ರೂ., 7 ದ್ವಿಚಕ್ರ ವಾಹನ ಸೇರಿ ಒಟ್ಟು 4.16 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆಗ್ನೇಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ ಜು 24

Posted by Vidyamaana on 2023-07-24 06:33:25 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 24

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಸೋಮವಾರ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ, ಸಮಾಲೋಚನೆ ನಡೆಸಲಿದ್ದಾರೆ.



Leave a Comment: