ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಬೆಳ್ತಂಗಡಿ : ನೆರಿಯ ಮೂವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತು

Posted by Vidyamaana on 2023-10-04 07:53:37 |

Share: | | | | |


ಬೆಳ್ತಂಗಡಿ : ನೆರಿಯ ಮೂವರು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಅಮಾನತು


ಬೆಳ್ತಂಗಡಿ : ಬಿಜೆಪಿ ಪಕ್ಷದ ಆದೇಶ ಉಲ್ಲಂಘಟನೆ - ಮೂವರನ್ನು ಜವಾಬ್ದಾರಿಯಿಂದ ಮುಕ್ತಗೊಳಿಸಿದ ಬಿಜೆಪಿ

ಬೆಳ್ತಂಗಡಿ : ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳಾಗಿದ್ದು, ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ) , ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಶ್ರೀಮತಿ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ)  ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದೆ.

ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ ಪ್ರವೀಣ್

Posted by Vidyamaana on 2024-03-16 17:46:35 |

Share: | | | | |


ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿದ ಯುವತಿಯ ತಂದೆಯನ್ನು ಬರ್ಬರ ಕೊಲೆಗೈದ  ಪ್ರವೀಣ್

ಬಾಗಲಕೋಟೆ : ಮಗಳ ಮೇಲೆ ಕಣ್ಣು ಹಾಕಬೇಡ ಎಂದಿದ್ದಕ್ಕೆ ಯುವತಿಯ ತಂದೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಬಾಗಲಕೋಟೆಯಲ್ಲಿ ನಡೆದಿದೆ.ಪ್ರವೀಣ್ ಎಂಬ ಪ್ರೇಮಿ ಸಂಗನಗೌಡನನ್ನು ಕೊಲೆಗೈದಿದ್ದಾನೆ.ಅವನೊಬ್ಬ ಪಾಗಲ್ ಪ್ರೇಮಿ ಊರಿನ ಬಸ್‌ ನಿಲ್ದಾಣದಲ್ಲಿ ಬಳಿ ಟೀ ಅಂಗಡಿ ಇಟ್ಟುಕೊಂಡಿದ್ದ ಅದೇ ಬಸ್‌ ಸ್ಟಾಪ್‌ಗೆ ಬಸ್ ಹತ್ತಲು ಬರ್ತಿದ್ದ ಸಂಗನಗೌಡ ಮಗಳನ್ನ ಪ್ರೀತಿಸೋದಕ್ಕೆ ಶುರು ಮಾಡಿದ್ದ. ಆದರೆ ಆಕೆ ಮಾತ್ರ ಇವನ ಪ್ರೀತಿಗೆ ಯಾವತ್ತೂ ಸಹ ಓಕೆ ಅನ್ನಲಿಲ್ಲ. ಆದ್ರೂ ಅವಳ ಬೆನ್ನು ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ.


ವರ್ಷದ ಹಿಂದೆ ಇದೇ ವಿಷಯವಾಗಿ ಸಂಗನಗೌಡ ಆತನನ್ನ ಮನೆಗೆ ಕರೆಸಿ ವಾರ್ನ್ ಮಾಡಿ ಕಳುಹಿಸಿದ್ದ. ಅದೇ ಕೋಪ ಇಟ್ಟುಕೊಂಡಿದ್ದ ಪ್ರವೀಣ ಆವತ್ತು ಎಳೆನೀರು ಕೊಚ್ಚುವ ಮಚ್ಚು ತಂದು ಸಂಗನಗೌಡನ ಕಥೆಯನ್ನ ಮುಗಿಸಿಯೇಬಿಟ್ಟ. ನಮ್ಮ ಮಗಳ ಸಹವಾಸಕ್ಕೆ ಬರಬೇಡ ಎಂದು ಬುದ್ದಿವಾದ ಹೇಳಿ ವಾರ್ನ್ ಮಾಡಿದ್ದಕ್ಕೆ, ಮನಸ್ಸಲ್ಲಿ ಸೇಡಿಟ್ಟುಕೊಂಡು, ಯುವತಿಯ ತಂದೆಯನ್ನ ಮಚ್ವಿನಿಂದ ಕೊಚ್ವಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಊರಿಡಿ ಮಳೆ ಮತ್ತು ನೀರಿಗೆ ಕೊರತೆ – ಇಲ್ಲಿ ಮಾತ್ರ ಚಿಮ್ಮುತ್ತಿದೆ ನೀರಿನ ಕೃತಕ ಒರತೆ!

Posted by Vidyamaana on 2023-12-06 04:38:28 |

Share: | | | | |


ಊರಿಡಿ ಮಳೆ ಮತ್ತು ನೀರಿಗೆ ಕೊರತೆ – ಇಲ್ಲಿ ಮಾತ್ರ ಚಿಮ್ಮುತ್ತಿದೆ ನೀರಿನ ಕೃತಕ ಒರತೆ!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಈ ಬಾರಿ ಮಳೆ ಕೈಕೊಟ್ಟಿದೆ. ಮುಂಬರುವ ಬೇಸಗೆಯಲ್ಲಿ ಕುಡಿಯುವ ನೀರಿಗೆ ಏನು ಮಾಡುವುದು ಎಂದು ಸ್ಥಳೀಯಾಡಳಿತಗಳು ತಲೆಕೆಡಿಸಿಕೊಂಡಿವೆ.


ಆದರೆ ನಮ್ಮ ಪುತ್ತೂರಿನ ಅಧಿಕಾರಿಗಳಿಗೆ ಮಾತ್ರ ಇದ್ಯಾವ ಚಿಂತೆಯೇ ಇದ್ದಂತಿಲ್ಲ! ಯಾಕಂತೀರಾ, ಇಲ್ಲಿ ನೋಡಿ. ಈ ಫೊಟೋದಲ್ಲಿ ಕಾಣುತ್ತಿರುವಂತೆ ಕಳೆದ 2ದಿನಗಳಿಂದ ನಗರದ ಪ್ರಮುಖ ರಸ್ತೆಯ ಬದಿಯಲ್ಲೇ  ನೀರಿನ ಪೈಪೊಂದು ಒಡೆದು ಹೋಗಿ ಝರಿಯಂತೆ ನೀರು ಉಕ್ಕಿ ರಸ್ತೆ ತುಂಬೆಲ್ಲಾ ಹರಿದಾಡುತ್ತಿದ್ದರೂ ಸಂಬಂಧ ಪಟ್ಟ  ಅಧಿಕಾರಿಗಳು ನಮ್ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ತಣ್ಣಗೆ ಕುಳಿತಿದ್ದಾರೆ.


ಇದು ಬೊಳುವಾರು ಬೈಪಾಸ್ ಸಮೀಪ, ವಿಶ್ವಕರ್ಮ ಸಭಾಭವನಕ್ಕೆ ಹೋಗುವ ರಸ್ತೆಯ ಪಕ್ಕದಲ್ಲೇ  ನೀರು ಪೋಲಾಗುತ್ತಿರುವ ದೃಶ್ಯ.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಕ್ಷೇತ್ರದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ತುರ್ತು ಸ್ಪಂದನೆ ನೀಡಬೇಕೆಂಬ ಖಡಕ್ ಸೂಚನೆ ನೀಡಿದ್ದರೂ ನಮ್ಮ  ಅಧಿಕಾರಿಗಳಿಗೆ ಮಾತ್ರ ಇದ್ಯಾವುದೇ ತಾಗುವುದೇ ಇಲ್ಲ ಎಂಬಂತಿದ್ದಾರೆ.

ಇನ್ನು, ಬೇಸಗೆಯಲ್ಲಿ ನೀರಿನ ಸಮಸ್ಯೆ ಎದುರಾದಾಗ ಟ್ಯಾಂಕರ್ ನಲ್ಲಿ ನೀರು ಪೂರೈಸುವ ನೆಪದಲ್ಲಿ ಸರಕಾರಿ ಹಣವನ್ನು ಪೋಲು ಮಾಡಲು ಉತ್ಸಾಹ ತೋರುವ ಅಧಿಕಾರಿಗಳು, ಇರುವ ನೀರಿನ ಮೂಲ ಮತ್ತು ಹರಿವನ್ನು ಕಾಪಾಡಿಕೊಳ್ಳು ವ ಕಡೆ ಉತ್ಸಾಹ ತೋರಿಸದಿರುವುದು ಮಾತ್ರ ವಿಪರ್ಯಾಸವೇ ಸರಿ!

ಪುತ್ತೂರು : ಅನಾರೋಗ್ಯದಿಂದಾಗಿ ಮರೀಲ್ ನಿವಾಸಿ ಯತೀಶ್ ನಿಧನ

Posted by Vidyamaana on 2023-10-01 18:15:15 |

Share: | | | | |


ಪುತ್ತೂರು : ಅನಾರೋಗ್ಯದಿಂದಾಗಿ ಮರೀಲ್ ನಿವಾಸಿ ಯತೀಶ್ ನಿಧನ

ಪುತ್ತೂರು : ಅನಾರೋಗ್ಯದ ಹಿನ್ನೆಲೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಮರೀಲ್ ನಿವಾಸಿ ಯತೀಶ್ (31) ಮೃತ ಯುವಕ.

ಕೆಲ ಸಮಯದಿಂದ ಅನಾರೋಗ್ಯದಿಂದಿದ್ದ ಯತೀಶ್ ರವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಂದೆ-ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

Posted by Vidyamaana on 2023-04-05 08:26:14 |

Share: | | | | |


 ಇದ್ರೀಸ್ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಸೇರಿ ಐವರ ಬಂಧನ

ಕನಕಪುರ: ಸಾತನೂರು ಸಮೀಪ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಠಾಣೆ ಪೊಲೀಸರು ಬುಧವಾರ ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಮಂಡ್ಯ ಮೂಲದ ಇದ್ರೀಸ್ ಪಾಷಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಕುಟುಂಬ ಆರೋಪಿಸಿದೆ

ಕಳೆದೊಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರನ್ನೊಳಗೊಂಡ ರಾಮನಗರ ಪೊಲೀಸರ ವಿಶೇಷ ತಂಡಗಳು ಇಂದು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ.

ಕಳೆದ ಮಾ.31ರ ಮಧ್ಯರಾತ್ರಿ ಸಾತನೂರು ಪೊಲೀಸ್ ಠಾಣೆ ಮುಂಭಾಗ ಜಾನುವಾರುಗಳನ್ನು ತುಂಬಿದ್ದ ಕ್ಯಾಂಟರ್‌ ವಾಹನವನ್ನು ಅಡ್ಡಗಟ್ಟಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ, ಇತರೆ ನಾಲ್ವರು  ಆರೋಪಿಗಳೊಂದಿಗೆ ತಲೆಮರೆಸಿಕೊಂಡಿದ್ದ. ಏ.2 ರಾತ್ರಿ ವಿಡಿಯೊವೊಂದನ್ನು ಹರಿಬಿಟ್ಟಿದ್ದ ಪುನೀತ್‌, ‘ನಾನೇ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿಕೊಂಡು  ನಾಪತ್ತೆ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ‌ ತಂಡಗಳು ಯಶಸ್ವಿಯಾಗಿವೆ.

ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ ಎಸ್‌ ಎಲ್) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ. ಕನಕಪುರದ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಎಫ್‌ ಎಸ್‌ ಎಲ್‌ ವರದಿಯನ್ನೂ ಪಡೆಯಲಾಗುತ್ತದೆ.

ಮೂರು ಎಫ್‌ಐಆರ್‌: ಪ್ರಕರಣ ಸಂಬಂಧ ಸಾತನೂರು ಠಾಣೆಯಲ್ಲಿ ಮೂರು ಎಫ್‌ ಐಆರ್‌ ಗಳು ದಾಖಲಾಗಿವೆ. ಮೊದಲಿಗೆ ಅಕ್ರಮ ಗೋವು ಸಾಗಣೆಗೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿ ದೂರು ನೀಡಿದ್ದ. ಗೋವು ಸಂರಕ್ಷಣೆ ನೆಪದಲ್ಲಿ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ಕ್ಯಾಂಟರ್‌ ಚಾಲಕ ಪ್ರತಿ ದೂರು ನೀಡಿದ್ದರು. ಮರು ದಿನ ಬೆಳಿಗ್ಗೆ 8ರ ಸುಮಾರಿಗೆ ಘಟನೆ ನಡೆದ ಸ್ಥಳದ 100 ಮೀಟರ್‌ ದೂರದಲ್ಲಿ ಇದ್ರೀಷ್‌ ಅವರ ಶವ ಪತ್ತೆ ಆಗಿದ್ದು, ಅವರ ಸಹೋದರ ಯೂನುಸ್‌ ಪಾಷ ನೀಡಿದ ದೂರಿನ ಅನ್ವಯ ಮತ್ತೊಂದು ಎಫ್‌ ಐಆರ್‌ ದಾಖಲಿಸಿದ್ದೇವೆ ಎಂದು ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

Posted by Vidyamaana on 2024-03-05 17:45:47 |

Share: | | | | |


ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.



Leave a Comment: