ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

Posted by Vidyamaana on 2024-02-28 07:52:06 |

Share: | | | | |


ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

ಮಂಗಳೂರು : ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.ಗಾಂಜಾ ಪ್ರಕರಣದ ಆರೋಪಿ, ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಸ್ಪಷ್ಟವಾಗಿದೆ ಎನ್ನಲಾಗುತ್ತಿದೆ.ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಶಾರೂಕ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದರು.


ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ. ಆನಂತರ ಊರಿಗೆ ಬಂದು ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸುತ್ತಿದ್ದ ಎನ್ನಲಾಗಿದೆ.ಯಾವುದೇ ಉದ್ಯೋಗ ಇಲ್ಲದ ಶಾರೂಖ್ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನಲಾಗಿದೆ.


ಠಾಣಾಧಿಕಾರಿ ಜೊತೆ ಮಾತನಾಡಿದ ಪುತ್ತಿಲ, ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಈಗಾಗಲೇ ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯರನ್ನು ಸಿಲುಕಿಸಿ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಸಿಲುಕಿಸಿರುವುದು ಗೊತ್ತಿರುವಾಗ ಈ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.


ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರುಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಆಕೆ ಆಗಮಿಸಿದ ಕೂಡಲೇ ಸೂಕ್ತ ಹಾಸ್ಟೇಲ್ ವ್ಯವಸ್ಥೆಗೆ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಬೇಕೆಂದು ಪುತ್ತಿಲರ ಜೊತೆ ಠಾಣಾಧಿಕಾರಿ ಹೇಳಿದರು.


ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

ಪುತ್ತೂರು :ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಝ ಹೃದಯಾಘಾತಕ್ಕೆ ಬಲಿ

Posted by Vidyamaana on 2024-02-16 08:59:27 |

Share: | | | | |


ಪುತ್ತೂರು :ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹಫೀಝ ಹೃದಯಾಘಾತಕ್ಕೆ ಬಲಿ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

ಕೆ.ಎ. ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಮೃತ ಬಾಲಕಿ.

ಹಫೀಝ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಇಂದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು.

ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಹಫೀಝ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.

ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

Posted by Vidyamaana on 2023-04-03 08:48:19 |

Share: | | | | |


ನೋ ಬಾಲ್‌ ಕೊಟ್ಟ ಅಂಪೈರ್ ನನ್ನು ಚಾಕುವಿನಿಂದ ಇರಿದ ಆಟಗಾರ

ಭುವನೇಶ್ವರ್: ಕ್ರಿಕೆಟ್‌ ಆಡುವಾಗ ಸಣ್ಣಪುಟ್ಟ ವಿಚಾರಕ್ಕೆ ವಾಗ್ವಾದ ನಡೆಯುವುದು ಸಾಮಾನ್ಯ. ಆದರೆ ಇಲ್ಲೊಂದು ಘಟನೆ ಒಡಿಶಾ ರಾಜ್ಯವನ್ನು ಬೆಚ್ಚಿ ಬೀಳಿಸಿದೆಭಾನುವಾರ (ಏ. 2 ರಂದು) ಒಡಿಶಾದ ಕಟಕ್‌ ನಲ್ಲಿ ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಮ್ಯಾವ್‌ ನಡೆಯುತ್ತಿತ್ತು. ಈ ಪಂದ್ಯಕ್ಕೆ 22 ವರ್ಷದ ಲಕ್ಕಿ ರಾವುತ್ ತೀರ್ಪುಗಾರನಾಗಿ ನಿಂತಿದ್ದರು. ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ ʼನೋ ಬಾಲ್‌ʼ ಎಂದು ಅಂಪೈರ್ ತೀರ್ಪು ನೀಡಿದ್ದಾರೆ. ಈ ವೇಳೆ ಇದು ನೋ ಬಾಲ್‌ ಅಲ್ಲ ಎಂದು ಸ್ಮೃತಿ ರಂಜನ್ ರೌತ್ ಎಂಬಾತ ಅಂಪೈರ್  ನೊಂದಿಗೆ ವಾದಕ್ಕೆ ಇಳಿದಿದ್ದಾನೆ.ವಾದ ಜಗಳಕ್ಕೆ ತಿರುಗಿ ಚೂರಿಯಿಂದ ತೀರ್ಪುಗಾರನಾಗಿ ನಿಂತಿದ್ದ ಲಕ್ಕಿ ರಾವುತ್ ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಕಿ ರಾವುತ್‌ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸುವಾಗಲೇ ಆತ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ.

ಗ್ಯಾರಂಟಿ ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ

Posted by Vidyamaana on 2023-06-17 09:18:29 |

Share: | | | | |


ಗ್ಯಾರಂಟಿ ಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರ : ಅಪ್ಪಿ ತಪ್ಪಿ ಈ ಲಿಂಕ್ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಮುನ್ನಾ ಎಚ್ಚರವಾಗಿರಿ, ಗ್ಯಾರಂಟಿಗೆ ಅರ್ಜಿ ಸಲ್ಲಿಸುವವರ ಮಾಹಿತಿ ಕದಿಯಲು ಸೈಬರ್ ಕದೀಮರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆಕರ್ನಾಟಕ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ.


ಹೌದು, ಸೈಬರ್ ಕಳ್ಳರು ಸೋಶಿಯಲ್ ಮೀಡಿಯದಲ್ಲಿ ನಕಲಿ ಲಿಂಕ್ ಗಳನ್ನು ಹರಿಬಿಡುತ್ತಿದ್ದಾರೆ. ಅಪ್ಪಿ ತಪ್ಪಿ ಈ ಲಿಂಕ್ ದ್ರೆ ಬ್ಯಾಂಕ್‌ನಲ್ಲಿರುವ ನಿಮ್ಮ ಹಣ ಸೈಬರ್ ಕಳ್ಳರ ಪಾಲಾಗಲಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

Posted by Vidyamaana on 2024-03-11 07:24:23 |

Share: | | | | |


ದ.ಕ.ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳ ನೇಮಕವಾಗಿದ್ದು ಪುತ್ತೂರು,ಉಪ್ಪಿನಂಗಡಿ ಮತ್ತು ಕಡಬದ ಐವರಿಗೆ ಅವಕಾಶ ನೀಡಲಾಗಿದೆ.ವಿಧಾನಪರಿಷತ್ ಶಾಸಕರೂ ಆಗಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ.

ಹೊಸದಾಗಿ ಎಂಟು ಮಂದಿ ಸಕ್ರಿಯ ಕಾರ್ಯಕರ್ತರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ನಾಲ್ವರನ್ನು ಉಪಾಧ್ಯಕ್ಷರಾಗಿ ಮತ್ತು 8 ಮಂದಿಯನ್ನು  ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ. ಉಪ್ಪಳಿಗೆಯ ಕೃಷ್ಣಪ್ರಸಾದ್ ಆಳ್ವ, ಕಡಬದ ಸಿ.ಜೆ.ಸೈಮನ್, ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ, ಅಶ್ರಫ್ ಬಸ್ತಿಕಾರ್ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಳಿಸಲಾಗಿದೆ.ಅರ್ಷದ್ ದರ್ಬೆ ಅವರನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೃಷ್ಣಪ್ರಸಾದ್ ಆಳ್ವ ಅವರು ಈ ಹಿಂದೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಪ್ರಸ್ತುತ ಅವರು ಭೂನ್ಯಾಯ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.ಉಪ್ಪಿನಂಗಡಿಯ ಅಬ್ದುಲ್ ನಝೀರ್ ಮಠ ಅವರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ, ಜಿಲ್ಲಾ  ಯುವ ಕಾಂಗ್ರೆಸ್‌ ಉಪಾಧ್ಯಕ್ಷ, ರಾಜ್ಯ ಇಂಟಕ್ ಕಾರ್ಯದರ್ಶಿಯಾಗಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷರಾಗಿ ಹುದ್ದೆ ನಿರ್ವಹಿಸಿದ್ದು, ಪ್ರಸ್ತುತ ಕೆಪಿಸಿಸಿ ಅಲ್ಪಸಂಖ್ಯಾತ ಘಟ ಕದ ರಾಜ್ಯ ಕಾರ್ಯದರ್ಶಿಯಾಗಿರುತ್ತಾರೆ. ಉಪ್ಪಿನಂಗಡಿಯ ಆಶ್ರಫ್ ಬಸ್ತಿಕಾರ್ ಅವರು ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಕೆಡಿಪಿ ಸದಸ್ಯರಾಗಿ,  ಗಾಂಪಾ ಗೆಳೆಯರು ಸಂಘಟನೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ವಕ್ತಾರ ಹಾಗೂ ಉಪಾಧ್ಯಕ್ಷರಾಗಿರುತ್ತಾರೆ.ಕಡಬ  ನಿವಾಸಿಯಾಗಿರುವ ಸೈಮನ್ ಸಿ.ಜೆ.ಅವರು ವಿದ್ಯಾರ್ಥಿಯಾಗಿದ್ದಾಗ ಎನ್.ಎಸ್.ಯು.ಐ. # ಕಾರ್ಯದರ್ಶಿಯಾಗಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ  ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಜಿಲ್ಲಾ ಪ್ರಧಾನ  ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಈ ಅರ್ಷದ್ ದರ್ಬೆ ಅವರು ಈ ಹಿಂದೆ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಹಿತ ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.

ರಾಜ್ಯದ 108 ಸಿಬ್ಬಂದಿ ಮುಷ್ಕರ ವಾಪಾಸ್‌: ಎಂದಿನಂತೆ ಕೆಲಸಕ್ಕೆ ಹಾಜರ್

Posted by Vidyamaana on 2024-05-07 21:05:44 |

Share: | | | | |


ರಾಜ್ಯದ 108 ಸಿಬ್ಬಂದಿ ಮುಷ್ಕರ ವಾಪಾಸ್‌: ಎಂದಿನಂತೆ ಕೆಲಸಕ್ಕೆ ಹಾಜರ್

ಬೆಂಗಳೂರು : 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಮ್ಮ ಮುಷ್ಕರದಿಂದ ಹಿಂದೆ ಸರಿದಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಹಾಗೂ ಜಿವಿಕೆ ಇಎಂಆರ್ ಸಂಸ್ಥೆಯವರೊಂದಿಗೆ ಚರ್ಚೆ ನಡೆಸಿದ್ದಾರೆ.ಸರ್ಕಾರದಿಂದ ಯಾವುದೇ ವೇತನವನ್ನ ಬಾಕಿ ಉಳಿಸಿಕೊಂಡಿಲ್ಲ ಎಂದರು.

ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು. ಸಂಸ್ಥೆಯವರೊಂದಿಗೆ ಒಡಂಬಡಿಕೆಯ ಪ್ರಕಾರ ಸರ್ಕಾರದಿಂದ ಕೊಡಬೇಕಾದ ಅನುದಾನವನ್ನ ಪಾವತಿಸಲಾಗಿದೆ. ಅನಗತ್ಯವಾಗಿ ವಿಪಕ್ಷಗಳು ಸರ್ಕಾರದ ಮೇಲೆ ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ.



Leave a Comment: