ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

Posted by Vidyamaana on 2023-09-30 12:45:02 |

Share: | | | | |


ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.



ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು.

ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹರೀಶ್ ಪೂಂಜ ಭರ್ಜರಿ ಗೆಲುವು

Posted by Vidyamaana on 2023-05-13 23:08:00 |

Share: | | | | |


ಹರೀಶ್ ಪೂಂಜ ಭರ್ಜರಿ ಗೆಲುವು

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಎಂದೇ ಗುರುತಿಸಿಕೊಂಡ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹರೀಶ್ ಪೂಂಜಾ ಅವರು ಭರ್ಜರಿ ಮತಗಳ ಅಂತರದಿಂದ ಗೆದ್ದು, ಎರಡನೇ ಬಾರಿಗೆ ಜಯ ಪಡೆದುಕೊಂಡಿದ್ದಾರೆ.

ಜಿದ್ದಾಜಿದ್ದಿನ ಪೈಪೋಟಿಯ ನಡುವೆಯೂ 101004 ಮತಗಳನ್ನು ಪಡೆದುಕೊಂಡು, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ, ಬೆಸ್ಟ್ ಪೌಂಡೇಶನ್ನ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಅಂಚೆಯ ಮತ ಸೇರಿ ಸುಮಾರು 18216 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಹರೀಶ್ ಪೂಂಜ ಅವರು ದ್ವಿತೀಯ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರೊಂದಿಗೆ ಮತ್ತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರವನ್ನು ಬಿಜೆಪಿ ಪಕ್ಷಕ್ಕೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಗೆ ತೀವ್ರ ಪ್ರತಿಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ರಕ್ಷಿತ್ ಶಿವರಾಂ 82788 ಮತಗಳನ್ನು ಪಡೆದುಕೊಂಡು ಸೋಲು ಅನುಭವಿಸಿದ್ದಾರೆ.

ಜಾತ್ಯಾತೀತ ಜನತಾದಳದಿಂದ ಸ್ಪರ್ಧಿಸಿದ್ದ ಆಶ್ರಫ್ ಆಲಿಕುಂಞಿ ಅವರು ಕೇವಲ 556 ಮತಗಳನ್ನು ಪಡೆದುಕೊಂಡು ಪರಾಜಯಗೊಂಡರೆ, ಪ್ರಥಮ ಬಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಹಳಷ್ಟು ಹೋರಾಟ ನಡೆಸಿ 2513 ಮತಗಳನ್ನು ಪಡೆದುಕೊಂಡು ಬೆಳ್ತಂಗಡಿ ಕ್ಷೇತ್ರದಲ್ಲಿ ತನ್ನ ಶಕ್ತಿಯನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಳುವರೆ ಪಕ್ಷದಿಂದ ಸ್ಪರ್ಧಿಸಿದ್ದ ಶೈಲೇಶ್ ಆರ್.ಜೆ 308 ಮತ, ಆಮ್ಆದ್ಮಿ ಪಾರ್ಟಿಯಿಂದ ಸ್ಪರ್ಧಿಸಿದ್ದ ಜನಾರ್ದನ ಬಂಗೇರ 278 ಮತ, ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ಆದಿತ್ಯ ನಾರಾಯಣ ಕೊಲ್ಲಾಜೆ 454 ಮತ, ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಹೇಶ್ ಆಟೋ 272 ಮತಗಳನ್ನು ಪಡೆದು ಇಡಗಂಟು ಕಳೆದುಕೊಂಡಿದ್ದಾರೆ. ನೋಟಾಕ್ಕೆ 877 ಮತಗಳು ಬಿದ್ದಿದೆ.

15 ಲಕ್ಷ ರೂ.ಗಾಗಿ ನಮ್ಮ ಮನೆಯಲ್ಲಿ 11 ಬ್ಯಾಂಕ್ ಖಾತೆ ತೆರೆದೆವು..!; ಲಾಲು

Posted by Vidyamaana on 2023-09-01 16:21:30 |

Share: | | | | |


15 ಲಕ್ಷ ರೂ.ಗಾಗಿ ನಮ್ಮ ಮನೆಯಲ್ಲಿ 11 ಬ್ಯಾಂಕ್ ಖಾತೆ ತೆರೆದೆವು..!; ಲಾಲು

ಮುಂಬಯಿ: ‘ನರೇಂದ್ರ ಮೋದಿ ಕೊಡುತ್ತೇನೆ ಎಂದು ಹೇಳಿದ 15 ಲಕ್ಷ ರೂ.ಗಾಗಿ ನಾನು, ನನ್ನ ಪತ್ನಿ,ಏಳು ಪುತ್ರಿಯರು ಸೇರಿ ಇಬ್ಬರು ಪುತ್ರರು 11 ಬ್ಯಾಂಕ್ ಖಾತೆಗಳನ್ನೂ ತೆರೆದೆವು’ ಎಂದು ಆರ್ ಜೆಡಿ ನಾಯಕ ಲಾಲು ಯಾದವ್ ತಮ್ಮ ಹಳೇ ಸ್ಟೈಲ್ ನಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಗಮನ ಸೆಳೆದರು.



ಶುಕ್ರವಾರ ಇಂಡಿಯಾ ಮೈತ್ರಿಕೂಟದ ವೇದಿಕೆಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ಮಾತನಾಡಿದರು. ಈ ವೇಳೆ ಅಲ್ಲಿದ್ದ ನಾಯಕರು ನಗುತ್ತಿರುವುದು ಕಂಡು ಬಂತು. ತಮ್ಮ ಭಾಷಣದಲ್ಲಿ, ಮೈತ್ರಿಯಲ್ಲಿ ಭಾಗಿಯಾಗಿರುವ ಎಲ್ಲಾ ಪಕ್ಷಗಳು ಒಟ್ಟಾಗಿ ಹೋರಾಡುವ ಬಗ್ಗೆಯೂ ಲಾಲು ಹೇಳಿದರು.


‘ನನ್ನ ಹಾಗೂ ದೇಶದ ಇತರ ನಾಯಕರ ಹಣ ಸ್ವಿಸ್ ಬ್ಯಾಂಕ್ ನಲ್ಲಿದೆ ಎಂದು ಪ್ರಚಾರ ಮಾಡಿದ್ದರು. ನಾವು ಬರುತ್ತೇವೆ ಸ್ವಿಸ್ ಬ್ಯಾಂಕಿನಿಂದ ಹಣ ತಂದು ದೇಶದ ಎಲ್ಲ ಜನರಿಗೂ ಖಾತೆ ತೆರೆದು 15 ಲಕ್ಷ ರೂ.ರೂ.ಗಳನ್ನು ಠೇವಣಿ ಇಡುವುದಾಗಿ ಹೇಳಿದರು. ನಾವೂ ಬಲೆಗೆ ಬಿದ್ದೆವು’ ಎಂದರು.


‘ವಿರೋಧ ಪಕ್ಷಗಳು ಒಟ್ಟಿಗೆ ಇರದಿರುವ ಲಾಭವನ್ನು ಪ್ರಧಾನಿ ಮೋದಿ ಬಳಸಿಕೊಂಡಿದ್ದಾರೆ  ಬೆಲೆಗಳು ನಿರಂತರವಾಗಿ ಏರುತ್ತಿವೆ’ ಎಂದು ಲಾಲು ಆರೋಪಿಸಿದರು

ಯಶಸ್ವಿಯಾಗಿ ನಡೆದ ದಿವಂಗತ ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಸ್ಮರಣಾರ್ಥ ಪುರುಷರಕಟ್ಟೆಯಲ್ಲಿ ಮಾದರಿ ರಕ್ತದಾನ ಶಿಬಿರ..!

Posted by Vidyamaana on 2024-06-24 18:27:43 |

Share: | | | | |


ಯಶಸ್ವಿಯಾಗಿ ನಡೆದ ದಿವಂಗತ ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಸ್ಮರಣಾರ್ಥ ಪುರುಷರಕಟ್ಟೆಯಲ್ಲಿ ಮಾದರಿ ರಕ್ತದಾನ ಶಿಬಿರ..!

ಪುತ್ತೂರು :ಇಲ್ಲಿನ ಪುರುಷರಕಟ್ಟೆಯ ನಿವಾಸಿಯಾಗಿದ್ದ ದಿ.ಪ್ರಕಾಶ್ ಪುರುಷರಕಟ್ಟೆ ಹಾಗೂ ಮರ್ಹೂಂ ಹಮೀದ್ ಕೋಡಿ ಶಾಂತಿಗೋಡು ಇವರ ಸ್ಮರಣಾರ್ಥ ಟೈ ಬ್ರೇಕರ್ಸ್ ಪುರುಷರಕಟ್ಟೆ ಹಾಗೂ ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ ಜಂಟಿ ಸಾರಥ್ಯದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು (ರಿ.) ಸಹಯೋಗದಲ್ಲಿ ರೋಟರಿ ಕ್ಯಾಂಪ್ಕೊ ಪುತ್ತೂರು ಬ್ಲಡ್ ಸೆಂಟರ್ ಸಹಕಾರದೊಂದಿಗೆ ಮಾದರಿ ರಕ್ತದಾನ ಶಿಬಿರವು ಪುರುಷರಕಟ್ಟೆ ಜಂಕ್ಷನ್ ನಲ್ಲಿ ಜೂ 24ರಂದು ಯಶಸ್ವಿಯಾಗಿ ನಡೆಯಿತು.

 60 ಮಂದಿ ಸ್ವಯಂ ಪ್ರೇರಿತರಾಗಿ ಈ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಜೀವದಾನಿಗಳಾದರು.

ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

Posted by Vidyamaana on 2024-02-03 22:26:23 |

Share: | | | | |


ಕಾಞಂಗಾಡ್ ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಮೃತ್ಯು

ಕಾಞಂಗಾಡ್ : ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಾಞಂಗಾಡ್ ನಲ್ಲಿ ಸಂಭವಿಸಿದೆ.ಇಲ್ಲಿನ ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ (36) ಮೃತ ದುರ್ದೈವಿಯಾಗಿದ್ದಾರೆ .ಸೇನಾ ಅಧಿಕಾರಿ ಕೋಝಿಕ್ಕೋಡ್ ಶರೀದ್ ಅವರ ಪತ್ನಿಯಾಗಿರುವ ಶುಹೈರಾ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಬಾತ್ ರೂಂ ಗೆ ಸ್ನಾನಕ್ಕೆಂದು ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ತಳಿಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಶುಹೈರಾ ಆದಾಗಲೇ ಇಹಲೋಕ ತ್ಯಜಿಸಿದ್ದರು ಎನ್ನಲಾಗಿದ್ದು. ಹೃದಯಾಘಾತದಿಂದ ಈ ಸಾವು ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

Posted by Vidyamaana on 2023-12-23 13:24:19 |

Share: | | | | |


ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ  ಜೊತೆಯಲ್ಲಿದ್ದ ಭಿನ್ನ ಕೋಮಿನ ಯುವಕ, ಯುವತಿಗೆ ತರಾಟೆ

ಮಂಗಳೂರು: ಜೊತೆಯಲ್ಲಿ ಇದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮಂಗಳೂರು ನಗರದ ಮಿಲಾಗ್ರಿಸ್ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದನ್ನು ಗಮನಿಸಿ ಯುವಕನನ್ನ ಹಿಂದೂ ಸಂಘಟನೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.


ಇಂದು ಸಂಜೆ ವೇಳೆಗೆ ಘಟನೆ ನಡೆದಿದ್ದು ಹಲ್ಲೆಗೆ ಯತ್ನ ಕೂಡಾ ನಡೆದಿದೆ ಎನ್ನಲಾಗಿದೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.


ಹಲ್ಲೆಗೆ ಯತ್ನಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ಥಳದಿಂದ ಪರಾರಿಯಾಗಿದ್ದು, ಬಂದರು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



Leave a Comment: