ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಶಿವಮೊಗ್ಗ: ಮನೆಯಲ್ಲಿ ಪತಿ ಪತ್ನಿ ಮಗ ಸಜೀವ ದಹನ; ಆತ್ಮಹತ್ಯೆ ಶಂಕೆ

Posted by Vidyamaana on 2023-10-08 15:25:14 |

Share: | | | | |


ಶಿವಮೊಗ್ಗ: ಮನೆಯಲ್ಲಿ ಪತಿ ಪತ್ನಿ ಮಗ ಸಜೀವ ದಹನ; ಆತ್ಮಹತ್ಯೆ ಶಂಕೆ

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯ ಅರಳಸುರಳಿ ಗ್ರಾಮದ ಬಳಿ ನಡೆದಿದೆ.ಹೊಸನಗರ ರಸ್ತೆಯ ಗಣಪತಿ ಕಟ್ಟೆ ರೈಸ್‌ಮಿಲ್​ ಹತ್ತಿರದ ಮನೆಯೊಂದರಲ್ಲಿ ದುರಂತ ನಡೆದಿದೆ .


ರಾಘವೇಂದ್ರ (63), ಪತ್ನಿ ನಾಗರತ್ನ (55) ಹಾಗೂ ಪುತ್ರ ಶ್ರೀರಾಮ್ (34) ಮೃತರು. ಇನ್ನೊಬ್ಬ ಪುತ್ರ ಭರತ್ (30) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ಮನೆ ಭಾಗಶಃ ಸುಟ್ಟು ಹೋಗಿದೆ. ತೀರ್ಥಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ


ಆತ್ಮಹತ್ಯೆ ಶಂಕೆ: ರಾಘವೇಂದ್ರಗ್ರಾಮದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದರು. ಮನೆಯ ಹಾಲ್​ನಲ್ಲಿಯೇ ಕಟ್ಟಿಗೆ ಜೋಡಿಸಿಟ್ಟು ಬೆಂಕಿ ಹಚ್ಚಿಕೊಂಡಿರುವ ಕುರುಹುಗಳು ಪತ್ತೆಯಾಗಿವೆ. ಗ್ರಾಮಸ್ಥರು ಹೊಗೆ ಗಮನಿಸಿ ಮನೆಯಲ್ಲಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಓರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.


ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: "ಘಟನೆ ತೀವ್ರ ನೋವುಂಟು ಮಾಡಿದೆ" ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅರಳಸುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, "ಕೆಕೋಡು ರಾಘವೇಂದ್ರ ಅವರ ಕುಟುಂಬ ನನಗೆ ತುಂಬ ಹತ್ತಿರವಾದ ಕುಟುಂಬ. ಮೂವರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪುತ್ರ ಭರತ್ ಗಾಯಗೊಂಡಿದ್ದಾನೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ" ಎಂದರು.


"ಇವರ ಕುಟುಂಬದ ಬ.ರಾ.ಕೃಷ್ಣಮೂರ್ತಿ ಎಂಬವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ದೆಹಲಿಯಲ್ಲಿದ್ದರು. ಈಗ ಬೆಂಗಳೂರಿಗೆ ಬಂದಿದ್ದಾರೆ. ನನಗೆ ಕಳೆದ 40 ವರ್ಷಗಳಿಂದ ಪರಿಚಯ. ಆರ್ಥಿಕವಾಗಿಅನುಕೂಲಸ್ಥರು. ಇವರಿಗೆ 10 ಎಕರೆ ಅಡಿಕೆ ತೋಟವಿದೆ. ಸಹೋದರರ ಪೈಕಿ ಒಬ್ಬ ವೈದ್ಯ, ಒಬ್ಬರು ಟೆಲಿಪೋನ್ ಇಲಾಖೆಯಲ್ಲಿದ್ದಾರೆ. ರಾಘವೇಂದ್ರರ ಮಗ ಭರತ್ ಅಡಿಕೆ ವ್ಯಾಪಾರ ಮಾಡಿಕೊಂಡು ಇದ್ದಾರೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಲಿದ್ದು, ಎಫ್‌ಎಸ್‌ಎಲ್ ತಂಡ ಆಗಮಿಸಲಿದೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ" ಎಂದು ಹೇಳಿದರು.

ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

Posted by Vidyamaana on 2024-04-11 13:08:15 |

Share: | | | | |


ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ

ಮಂಗಳೂರು : ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಣೆ ಮಾಡಿ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.


ಮೂರು ಮಂದಿಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ


ಅಸ್ವಸ್ಥರಾದ ಮೂರು ಮಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಹಿಳೆಯರು ಮತ್ತು 12 ವರ್ಷದ ಮಗು ಸೇರಿದೆ. ಅವರ ಮೋಷನ್ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸುಮಾರು 13 ಮಂದಿ ಈಗಾಗಲೇ ಹೊರ ರೋಗಿಗಳಾಗಿ‌ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

ಯತ್ನಾಳ್ - ಬೊಮ್ಮಾಯಿ ವಾಕ್ಸಮರ - ಡಿಕೆಶಿ ಭೇಟಿ ವಿಚಾರಕ್ಕೆ ಏಟು ಎದಿರೇಟು

Posted by Vidyamaana on 2023-06-26 04:19:54 |

Share: | | | | |


ಯತ್ನಾಳ್ - ಬೊಮ್ಮಾಯಿ ವಾಕ್ಸಮರ - ಡಿಕೆಶಿ ಭೇಟಿ ವಿಚಾರಕ್ಕೆ ಏಟು ಎದಿರೇಟು

ಬೆಳಗಾವಿ : ಬೆಳಗಾವಿಯಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ನಡೆಯಿತು. ಡಿಸಿಎಂ ಡಿಕೆ ಶಿವಕುಮಾರ್ ಅವರು ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ವಿಚಾರವಾಗಿ ಯತ್ನಾಳ್ ನೀಡಿದ ಮಾತಿನೇಟಿಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.ಕಾರ್ಯಕರ್ತರ ಸಭೆಯಲ್ಲಿ ಮೊದಲು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ಸರ್ಕಾರ ಐದು ವರ್ಷ ಉಳಿಯಲ್ಲ. ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವುದಿಲ್ಲ. ಆಗ ಡಿಕೆ ಶಿವಕುಮಾರ್ ಬಸವರಾಜ ಬೊಮ್ಮಾಯಿ ಅವರ ಮನೆಗೆ ಬರುತ್ತಾರೆ. ಆ ಮೂಲಕ ಸೋನಿಯಾ ಗಾಂಧಿ ಅವರನ್ನು ಹೆದರಿಸುತ್ತಾರೆ. ಬೊಮ್ಮಾಯಿ ಅವರೇ ಇಂಥದ್ದಕ್ಕೆ ಅವಕಾಶ ಕೊಡಬೇಡಿ. ಅಂಥವರನ್ನು ಮನೆಯೊಳಗೆ ಬಿಟ್ಟುಕೊಳ್ಳಬೇಡಿ ಎಂದು ಆಗ್ರಹಿಸಿದರು.ಇನ್ನು, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಈಚೆಗೆ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮನೆಗೆ ಭೇಟಿ ನೀಡಿದ್ದಾರೆ. ಇದನ್ನು ಸೌಜನ್ಯದ ಭೇಟಿ ಎನ್ನುತ್ತಾರೆ. ಆದರೆ, ಆ ಭೇಟಿಯ ಉದ್ದೇಶವೇ ಬೇರೆ. ಸಿಎಂ ಕುರ್ಚಿಗಾಗಿ ಬರುವ ಅವರನ್ನು ನಾವೇಕೆ ಮನೆಗೆ ಬಿಟ್ಟುಕೊಳ್ಳಬೇಕು ಎಂದೂ ಪ್ರಶ್ನಿಸಿದರು. ವಿರೋಧ ಪಕ್ಷದವರ ಜತೆಗೆ ಮಾತನಾಡಲ್ಲ, ಅವರ ಮನೆಗೆ ಹೋಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದೇ ರೀತಿ ನಾವು ಕೂಡ ಇನ್ಮುಂದೆ ಡಿಕೆ ಶಿವಕುಮಾರ್ ಮನೆಗೆ ಹೋಗಲ್ಲ, ಫೋನ್‌ನಲ್ಲಿ ಮಾತನಾಡಲ್ಲ. ಹಲ್ಲು ಕಿಸಿಯಲ್ಲ ಎಂದು ನಿರ್ಧಾರ ಮಾಡೋಣ.ಆಗ ಮಾತ್ರ ಪಕ್ಷ ಉಳಿಯುತ್ತದೆ. ನೀವು ಕಾಂಗ್ರೆಸ್‌ನವರಿಗೆ ಸ್ವಾಗತ – ಸುಸ್ವಾಗತ ಎಂದರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.

ಯತ್ನಾಳ್‌ಗೆ ತಿರುಗೇಟು ನೀಡಿದ ಬೊಮ್ಮಾಯಿ

ಬಸನಗೌಡ ಪಾಟೀಲ್ ಯತ್ನಾಳ್ ಟೀಕೆಗೆ ಅದೇ ವೇದಿಕೆ ಮೇಲೆ ತಿರುಗೇಟು ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನಾನು ಎಂದಿಗೂ ರಾಜಿ ರಾಜಕಾರಣ ಮಾಡಿಲ್ಲ. ಮಾಡೋದು ಇಲ್ಲ. ಮನೆಗೆ ಬರುವವರನ್ನು ಬೇಡ ಎನ್ನಲು ಆಗಲ್ಲ. ಅದು ಕನ್ನಡಿಗರ ಸೌಜನ್ಯ, ಗೌಡೇ ನೀವು ತಲೆ ಕೆಡಿಸಿಕೊಳ್ಳಬೇಡಿ, ಯಾರೋ ಮನೆಗೆ ಬಂದ ತಕ್ಷಣ ನಾವು ರಾಜಿ ಆಗಲ್ಲ. ಕೆಲವರು ಮನೆಗೆ ಹೋಗದೆಯೇ ಒಳಗೊಳಗೇ ರಾಜಿ ಆಗಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ನಾವು ಬಹಿರಂಗವಾಗಿ, ಸ್ಪಷ್ಟವಾಗಿದ್ದೇವೆ ಎಂದರು.

ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ- ನಿತಿನ್ ಗಡ್ಕರಿ

Posted by Vidyamaana on 2024-01-20 09:34:21 |

Share: | | | | |


ಚಾರ್ಮಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ- ನಿತಿನ್ ಗಡ್ಕರಿ

ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರೆತಿದೆ.

ಚಾರ್ಮಾಡಿ ಘಾಟ್ ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.


ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ’ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿದೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ಬರೆದುಕೊಂಡಿದ್ದಾರೆ

ಹೋಟೆಲ್‌ ನೌಕರರಿಂದಲೇ ಉಜ್ಬೇಕಿಸ್ತಾನ ಮಹಿಳೆ ಹತ್ಯೆ

Posted by Vidyamaana on 2024-03-16 13:15:45 |

Share: | | | | |


ಹೋಟೆಲ್‌ ನೌಕರರಿಂದಲೇ ಉಜ್ಬೇಕಿಸ್ತಾನ ಮಹಿಳೆ ಹತ್ಯೆ

ಬೆಂಗಳೂರು : ಪ್ರತಿಷ್ಠಿತ ಹೋಟೆಲ್‌ವೊಂದರ ಕೊಠಡಿಯಲ್ಲಿ ತಂಗಿದ್ದ ಉಜ್ಬೇಕಿ ಸ್ತಾನ ಮಹಿಳೆ ಜರೀನಾ ಅವರನ್ನು ಕೊಲೆ ಮಾಡಿದ್ದ ಹೋಟೆಲ್‌ನ ಇಬ್ಬರು ಕೆಲಸಗಾರರನ್ನು ಶೇಷಾದ್ರಿ ಪುರ ಪೊಲೀಸರು ಬಂಧಿಸಿದ್ದಾರೆ.ಅಸ್ಸಾಂನ ರಾಬರ್ಟ್‌, ಅಮ್ರಿತ್‌ ಬಂಧಿತರು. ಮಹಿಳೆ ಬಳಿಯ ವಸ್ತುಗಳು ಹಾಗೂ ನಗದು ದೋ ಚುವ ಉದ್ದೇಶದಿಂದ ಮಾ.13 ರಂದು ತಡರಾತ್ರಿ ಕೊಲೆ ಮಾಡಿ ಆರೋಪಿಗಳು ಕೇರಳಕ್ಕೆ ಹೋಗಿದ್ದರು.ಈ ಮಾಹಿತಿ ಪಡೆದ ವಿಶೇಷ ತಂಡ, ಆರೋಪಿಗಳನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದೆ. ಆರೋಪಿಗಳು ಮಹಿಳೆಯ ಬಳಿಯಿದ್ದ 13,000 ರೂ. ನಗದು, 2,000 ಮುಖಬೆಲೆಯ ಹಾಗೂ 5,000 ಉಜ್ಬೇಕಿಸ್ತಾನ 3 ನೋಟುಗಳು, ಮೊಬೈಲ್‌ ಜಪ್ತಿ ಮಾಡಲಾಗಿದೆ.


ಉಸಿರುಗಟ್ಟಿಸಿ ಹತ್ಯೆ: ಜರೀನಾ ಪ್ರವಾಸ ಕ್ಕೆಂದು ಮಾ. 5ರಂದು ನಗರಕ್ಕೆ ಬಂದಿದ್ದರು. ಆನ್‌ಲೈನ್‌ ಮೂಲಕ ಕಾಯ್ದಿರಿಸಿ ಕೊಠಡಿಯಲ್ಲಿ ಉಳಿದುಕೊಂಡಿದ್ದರು. ರಾಬರ್ಟ್‌ ಹಾಗೂ ಅಮ್ರಿತ್‌, ಹೋಟೆಲ್‌ನಲ್ಲಿ ಸ್ವತ್ಛತೆ ಕೆಲಸ ಮಾಡಿಕೊಂಡಿದ್ದರು. ಮಹಿಳೆಯನ್ನು ಆಗಾಗ ಮಾತನಾಡಿಸುತ್ತಿದ್ದರು. ಮಹಿಳೆ ಬಳಿ ಸಾಕಷ್ಟು ಹಣ ಹಾಗೂ ಆಭರಣ ಇರಬಹುದೆಂದು ತಿಳಿದು ರಾತ್ರಿ ಕೊಠಡಿಗೆ ನುಗ್ಗಿದ್ದ ಆರೋಪಿಗಳು, ಮಹಿಳೆ ಬಳಿಯ ನಗದು, ಇತರ ವಸ್ತುಗಳನ್ನು ಕಸಿದುಕೊಳ್ಳಲು ಮುಂದಾಗಿದ್ದರು. ಅದಕ್ಕೆ ಮಹಿಳೆ ವಿರೋಧಿಸಿದಾಗ ಉಸಿರುಗಟ್ಟಿಸಿ ಕೊಂದಿದ್ದರು. ನಂತರ, ಬಾಗಿಲು ಹೊರಗಿನಿಂದ ಲಾಕ್‌ ಮಾಡಿ ಕೊಂಡು ಸ್ಥಳದಿಂದಪರಾರಿಯಾಗಿದ್ದರು. ಹಲವು ಗಂಟೆಯಾದರೂ ಜರೀನಾ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಹೋಟೆಲ್‌ ವ್ಯವಸ್ಥಾಪಕ, ಕೊಠಡಿ ಬಾಗಿಲು ತೆರೆದು ನೋಡಿದಾಗ ಮೃತದೇಹ ಕಂಡಿತ್ತು. ಅವರೇ ಠಾಣೆಗೆ ಮಾಹಿತಿ ನೀಡಿದ್ದರು.

ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

Posted by Vidyamaana on 2024-02-17 21:20:23 |

Share: | | | | |


ಮಣಿಪಾಲ ; ಪರೀಕ್ಷೆ ಭಯದಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಸುಮನ್ ಆತ್ಮಹತ್ಯೆ

ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. 


ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ. 


ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



Leave a Comment: