ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

Posted by Vidyamaana on 2023-04-19 08:33:01 |

Share: | | | | |


142 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿದ ಭಾರತ

ಹೊಸದಿಲ್ಲಿ: ಭಾರತವು 142.86 ಕೋಟಿ ಜನಸಂಖ್ಯೆಯೊಂದಿಗೆ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ ಎಂದು ವಿಶ್ವಸಂಸ್ಥೆ ಇಂದು ಬಿಡುಗಡೆ ಮಾಡಿರುವ  ಅಂಕಿ-ಅಂಶಗಳಿಂದ ತಿಳಿದುಬಂದಿದೆ.

1960ರಲ್ಲಿ ಮಾಜಿ ನಾಯಕ ಮಾವೋ ಝೆಡಾಂಗ್ ಅವರ ವಿನಾಶಕಾರಿ ಕೃಷಿ ನೀತಿಗಳ ಅಡಿಯಲ್ಲಿ ಲಕ್ಷಾಂತರ ಜನರು ಹಸಿವಿನಿಂದ ಸತ್ತ ನಂತರ ಮೊದಲ ಬಾರಿಗೆ ಚೀನಾದಲ್ಲಿ ಜನರ ಸಂಖ್ಯೆ ಕಳೆದ ವರ್ಷ ಕುಸಿತ ಕಂಡಿತ್ತು.

ಲೋಕಸಭಾ ಚುನಾವಣೆ ಹಿನ್ನೆಲೆ: ಬಿಜೆಪಿಯಿಂದ ಮಹತ್ವದ ಸಭೆ

Posted by Vidyamaana on 2024-01-08 15:48:55 |

Share: | | | | |


ಲೋಕಸಭಾ ಚುನಾವಣೆ ಹಿನ್ನೆಲೆ: ಬಿಜೆಪಿಯಿಂದ ಮಹತ್ವದ ಸಭೆ

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಯೋಜನಾ ಸಭೆ ನಡೆಯಿತು. ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಯೋಜನಾ ಸಭೆ ನಡೆಸಲಾಯಿತು.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್.‌ ಯಡಿಯೂರಪ್ಪ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಸ್ತಿದ್ದೇವೆ ಸಂಘಟನೆ ಬಲ ಪಡಿಸಲು ಪ್ರಮುಖರನ್ನು ಸಭೆಗೆ ಕರೆದಿದ್ದೇವೆ ಅನೇಕ‌ ಸಂಗತಿಗಳು ಚರ್ಚೆ ಆಗಲಿವೆ ಲೋಕಸಭೆ ಸಿದ್ಧತೆ ಸೇರಿದಂತೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,


ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

Posted by Vidyamaana on 2024-02-28 11:19:42 |

Share: | | | | |


ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ನಿಧನ

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.


ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.


ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.


ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.32 ವರ್ಷಗಳಿಂದ ತಾಯಿಯನ್ನು ನೋಡಿಲ್ಲ ಎಂದಿದ್ದರು

ನನ್ನನ್ನು ಶ್ರೀಲಂಕಾಕ್ಕೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರು ಮತ್ತು ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದರು. ನನ್ನ ಪಾಸ್‌ಪೋರ್ಟ್ ಅನ್ನು ನವೀಕರಿಸಲು ಚೆನ್ನೈನಲ್ಲಿರುವ ಶ್ರೀಲಂಕಾದ ಡೆಪ್ಯುಟಿ ಹೈಕಮಿಷನ್ ಕಚೇರಿಗೆ ಹೋಗಲು ನನಗೆ ಅನುಮತಿ ನೀಡುವಂತೆ ನಾನು ಅಧಿಕಾರಿಗಳನ್ನು ವಿನಂತಿಸಿದೆ. ನನಗೆ ಇನ್ನೂ ಯಾವುದೇ ಉತ್ತರವೇ ಬಂದಿಲ್ಲ ಎಂದಿದ್ದರು.

ಮೆಸ್ಕಾಂ ತುರ್ತು ಕಾಮಗಾರಿ: ನಾಳೆ (ಜೂನ್ 3) ವಿದ್ಯುತ್ ನಿಲುಗಡೆ

Posted by Vidyamaana on 2023-06-02 14:50:26 |

Share: | | | | |


ಮೆಸ್ಕಾಂ ತುರ್ತು ಕಾಮಗಾರಿ: ನಾಳೆ (ಜೂನ್ 3) ವಿದ್ಯುತ್ ನಿಲುಗಡೆ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ, ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಮುಕ್ತ, ಮುಂಡೂರು ಮತ್ತು ಪೀಡಿರ್‌ನಲ್ಲಿ ದಿನಾಂಕ ಜೂನ್ 3ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುವುದು. 

33/1142 ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಪೀಡರ್‌ನಿಂದ ವಿದ್ಯುತ್‌ ಸರಬರಾಜಾಗುವ ಮುಂಡೂರು, ಕೆಮ್ಮಿಂಜೆ ಮತ್ತು ಆರ್ಯಾಪು ಗ್ರಾಮದ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BREAKING:ಬೆಂಗಳೂರು ಕೆಫೆ ಸ್ಫೋಟ:ಮಾಸ್ಕ್ ಟೋಪಿ ಇಲ್ಲದ ಶಂಕಿತನ ಫೋಟೋ ಬಿಡುಗಡೆ

Posted by Vidyamaana on 2024-03-07 12:18:52 |

Share: | | | | |


BREAKING:ಬೆಂಗಳೂರು ಕೆಫೆ ಸ್ಫೋಟ:ಮಾಸ್ಕ್ ಟೋಪಿ ಇಲ್ಲದ ಶಂಕಿತನ ಫೋಟೋ ಬಿಡುಗಡೆ

ಬೆಂಗಳೂರು : ಬೆಂಗಳೂರು ಕೆಫೆ ಸ್ಫೋಟದ ಶಂಕಿತ ವ್ಯಕ್ತಿಯು ಬಸ್ ನಲ್ಲಿ ಪ್ರಯಾಣಿಸುತ್ತಿರುವುದನ್ನು ತೋರಿಸುವ ಚಿತ್ರಗಳು ಹೊರಬಂದಿವೆ. ಪೂರ್ವ ಬೆಂಗಳೂರಿನ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.ಒಂದು ಚಿತ್ರದಲ್ಲಿ ಶಂಕಿತನು ಟೋಪಿ ಅಥವಾ ಮುಖವಾಡವಿಲ್ಲದೆ ಕಾಣಿಸಿಕೊಂಡಿದ್ದಾನೆ.ಮತ್ತೊಂದು ಫೋಟೋದಲ್ಲಿ ಶಂಕಿತನು ಮಾಸ್ಕ್ ಮತ್ತು ಕ್ಯಾಪ್ ಯೊಂದಿಗೆ ಬಸ್ಸಿನಲ್ಲಿ ಕಾಣಿಸಿಕೊಂಡಿದ್ದಾನೆ.

ಈ ಹಿಂದೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೆಫೆಗೆ ಪ್ರವೇಶಿಸುವಾಗ ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ ಶಂಕಿತ ಬಾಂಬರ್ನ ಚಿತ್ರವನ್ನು ಪೋಸ್ಟ್ ಮಾಡಿತ್ತು.ಏಜೆನ್ಸಿಯು ಫೋನ್ ಸಂಖ್ಯೆಗಳು ಮತ್ತು ಇಮೇಲ್ಗಳನ್ನು ಹಂಚಿಕೊಂಡಿದೆ, ಅಲ್ಲಿ ಜನರು ಪ್ರಮುಖ ಶಂಕಿತ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಳುಹಿಸಬಹುದು.

ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭರವಸೆ ನೀಡಿದೆ.ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಈ ವಾರದ ಆರಂಭದಲ್ಲಿ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಸ್ಫೋಟದ ನಂತರ, ಕರ್ನಾಟಕ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

Posted by Vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.



Leave a Comment: