ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಸುದ್ದಿಗಳು News

Posted by vidyamaana on 2024-07-03 08:00:29 |

Share: | | | | |


ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.


ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.

ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

 Share: | | | | |


538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

Posted by Vidyamaana on 2023-09-02 02:04:57 |

Share: | | | | |


538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ : 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಕೆನರಾ ಬ್ಯಾಂಕ್ ಗೆ 538 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ.ಕಳೆದ ಮೇ ನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.


ಗೋಯಲ್ ಅವರ ವಿರುದ್ಧ ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್

Posted by Vidyamaana on 2023-08-18 04:36:27 |

Share: | | | | |


ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್

ಮಂಗಳೂರು : ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ.ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌(Chandrashekhar) ಎಂಬವರೇ ತನ್ನದಲ್ಲದ ತಪ್ಪಿಗೆ ರಿಯಾದ್‌ನಲ್ಲಿ ಕಂಬಿ ಎಣಿಸುತ್ತಿದ್ದಾರೆ.ಇವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಕದತಟ್ಟುತ್ತಿದ್ದಾರೆ. ಈ ಬಗ್ಗೆ ಚಂದ್ರಶೇಖರ್‌ ಕುಟುಂಬದ ಪರವಾಗಿ ನಿಕಟವರ್ತಿಗಳಾದ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ(Sridhara Gowda, President of Anti-Endo Struggle Committee) ಹಾಗೂ ಮಂಗಳೂರಿನ ಎನ್‌ಇಸಿಎಫ್‌ ಕಾರ್ಯದರ್ಶಿ ಶಶಿಧರ ಶೆಟ್ಟಿ(NECF Secretary Shasidhara Shetty)ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.


ವಿದೇಶದಲ್ಲಿ ಉದ್ಯೋಗ ಪಡೆದು ಕುಟುಂಬ ಪೋಷಣೆಗಾಗಿ ಚಂದ್ರಶೇಖರ್‌ ಅವರು 2022ರಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ (Alpanor Ceramics company)ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇರಿದ್ದರು. ಅದೇ ನವೆಂಬರ್‌ನಲ್ಲಿ ಯಾವುದೇ ಹ್ಯಾಕರ್‌ಗಳ ಸಂಚಿಗೆ ಸಿಲುಕಿ ಅಲ್ಲಿನ ಜೈಲಿನಲ್ಲಿ ಬಂಧಿತರಾಗಿದ್ದಾರೆ.ರಿಯಾದ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಆಗ ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು ಸಹಿ ನೀಡಿದ್ದರು. ವಾರದ ಬಳಿಕ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶವೊಂದು ಬಂದಿತ್ತು. ಅದನ್ನು ಕ್ಲಿಕ್‌ ಮಾಡಿ ನೋಡಿದ್ದರು. ಎರಡು ದಿನ ಬಳಿಕ ದೂರವಾಣಿ ಕರೆಯೊಂದು ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಿತ್ತು. ಅಲ್ಲದೆ ಒಟಿಪಿ ಸಂಖ್ಯೆ ತಿಳಿಸುವಂತೆ ಸೂಚಿಸಿತ್ತು. ಅದರಂತೆ ಚಂದ್ರಶೇಖರ್‌ ಅವರು ಒಟಿಪಿ ಸಂಖ್ಯೆ ತಿಳಿಸಿದ್ದರು. ಜನವರಿಯಲ್ಲಿ ಊರಿನಲ್ಲಿ ನಿಗದಿಯಾಗಿದ್ದ ನಿಶ್ಚಿತಾರ್ಥ, ವಿವಾಹ ಕೆಲಸಗಳಿಗೆ ತಯಾರಿಯಲ್ಲಿ ಮಗ್ನರಾಗಿದ್ದರು. ಒಂದು ವಾರ ಬಳಿಕ ಯಾವುದೇ ಮಾಹಿತಿ ನೀಡದೇ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.ರಿಯಾದ್‌ನಲ್ಲಿದ್ದ ಅವರ ಸ್ನೇಹಿತರು ವಿಚಾರಿಸಿದಾಗ ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕ್‌ವೊಂದರಲ್ಲಿ ಅವರದೇ ಹೆಸರಿನಲ್ಲಿ ಖಾತೆ ತೆರೆಯಲಾಗಿತ್ತು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆ ಚಂದ್ರಶೇಖರ್‌ ಅವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರ ನೀಡಿದ್ದರು. ಹೀಗಾಗಿ ಚಂದ್ರಶೇಖರ್‌ ಅವರನ್ನು ಏಕಾಏಕಿ ಬಂದು ಪೊಲೀಸರು ಜೈಲಿಗೆ ತಳ್ಳಿದ್ದರು. ಚಂದ್ರಶೇಖರ್‌ನ ಸ್ನೇಹಿತರು ಈ ಮಾಹಿತಿಯನ್ನು ಕುಟುಂಬಕ್ಕೆ ತಿಳಿಸಿದ್ದರು. ಹ್ಯಾಕರ್‌ಗಳ ಕಿರುಕುಳದಿಂದ ಚಂದ್ರಶೇಖರ್‌ಗೆ ಅನ್ಯಾಯವಾಗಿದ್ದು, ಇದನ್ನು ತಿಳಿದ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ.ಕಳೆದ ಎಂಟು ತಿಂಗಳಿಂದ ಅವರ ಕುಟುಂಬ ನ್ಯಾಯಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಮಗನನ್ನು ಕ್ಷೇಮವಾಗಿ ಸ್ವದೇಶಕ್ಕೆ ಕರೆತರಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ರಿಯಾದ್‌ ಸರ್ಕಾರ ಚಂದ್ರಶೇಖರ್‌ನ್ನು ಬಂಧಿಸಿದ್ದೇ ಹೊರತು ಸಮಗ್ರ ತನಿಖೆ ನಡೆಸಿಲ್ಲ. ಆತನ ಖಾತೆಗೆ ಹಣ ಎಲ್ಲಿಂದ ಬಂತು ಎಂಬ ಬಗ್ಗೆ, ಅಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ ಎಂಬ ಕುರಿತು ತನಿಖೆ ನಡೆಸದೆ ಕೇವಲ ಮಹಿಳೆಗೆ ವಂಚನೆಯಾಗಿದೆ ಎಂದಷ್ಟೆಕೇಸು ದಾಖಲಿಸಿ ಬಂಧಿಸಿದ್ದಾರೆ.ಚಂದ್ರೇಖರ್‌ ಕೆಲಸ ಮಾಡುವ ಅಲ್ಪಾನರ್‌ ಸೆರಾಮಿಕ್ಸ್‌ ಸಂಸ್ಥೆ ಅವರಿಗೆ ಸೂಕ್ತ ಭದ್ರತೆ ಮತ್ತು ಕಾನೂನು ನೆರವು ನೀಡಬೇಕಿತ್ತು. ಈ ಘಟನೆ ಕುರಿತು ಮನೆಯವರಿಗೂ ಸಂಸ್ಥೆ ಮಾಹಿತಿ ನೀಡಿಲ್ಲ. ಹೀಗಾಗಿ ಸಂಸ್ಥೆಯ ವಿರುದ್ಧ ಕೂಡ ಕಾನೂನು ಸಮರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

Posted by Vidyamaana on 2023-05-12 12:00:38 |

Share: | | | | |


ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಇದೀಗ ಮತ ಎಣಿಕೆಗೆ ಕ್ಷಣಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣಗೊಳ್ಳಬಹುದೆಂಬ ಸೂಚನೆ ಸಿಕ್ಕಿರುವುದರಿಂದ ರಾಜ್ಯದಲ್ಲಿ ಮೂರೂ ಪಕ್ಷಗಳೂ ‘ಹೈ ಅಲರ್ಟ್’ನಲ್ಲಿವೆ.

ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವ ಸಾಧ್ಯತೆಗಳು ಕಡಿಮೆಯಿದ್ದು ಕಾಂಗ್ರೆಸ್ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳನ್ನು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವುದು ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಇದೀಗ ಫಲಿತಾಂಶದ ಬಳಿಕ ‘ಅಪರೇಷನ್ ಕಮಲ’ ನಡೆಯುವ ಸಾಧ್ಯತೆ ದಟ್ಟವಾಗಿರುವ ಕಾರಣ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೊಸ ಪ್ಲ್ಯಾನ್ ಹೆಣೆದಿದ್ದು, ಮೇ13ರಂದು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಕಾಂಗ್ರೆಸ್ ಅಭ್ಯರ್ಥಿ ತನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ನೇರವಾಗಿ ಬೆಂಗಳೂರಿಗೆ ಬರುವಂತೆ ಪಕ್ಷದ ಹೈಕಮಾಂಡ್ ‘ಸ್ಟ್ರಿಕ್ಟ್ ಆದೇಶ’ ರವಾನಿಸಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ಜೊತೆ ವರ್ಚ್ಯವಲ್ ಮೀಟಿಂಗ್ ನಡೆಸಿದ್ದು ಈ ಸಂದರ್ಭದಲ್ಲಿ ಇಂತಹದ್ದೊಂದು ಸೂಚನೆಯನ್ನು ‘ಕೈ’ ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಮೋದಿ ನಿಮ್ಗೆ ಸೆಲ್ಯೂಟ್ ಯುವಕರು ನಿಮ್ಮಿಂದ ಕಲಿಯಬೇಕು : ನಮೋ ಈ ಕಾರ್ಯವೈಖರಿಗೆ ನೆಟ್ಟಿಗರು ಫಿದಾ ಕಾರಣವೇನು ಗೊತ್ತಾ.?

Posted by Vidyamaana on 2024-03-01 19:26:40 |

Share: | | | | |


ಮೋದಿ ನಿಮ್ಗೆ ಸೆಲ್ಯೂಟ್ ಯುವಕರು ನಿಮ್ಮಿಂದ ಕಲಿಯಬೇಕು : ನಮೋ ಈ ಕಾರ್ಯವೈಖರಿಗೆ ನೆಟ್ಟಿಗರು ಫಿದಾ ಕಾರಣವೇನು ಗೊತ್ತಾ.?

ನವದೆಹಲಿ : ಪ್ರಧಾನಿ ಮೋದಿ ಅವರು ಸಾರ್ವಜನಿಕರಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಹತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ, ಸಾರ್ವಜನಿಕರೊಂದಿಗಿನ ಮೋದಿಯವರ ಅದ್ಭುತ ಸಂಪರ್ಕ ಉಳಿಸಿಕೊಂಡಿದ್ದಾರೆ. ಯಾಕಂದ್ರೆ, ಅವ್ರು ಕೇವಲ ಪ್ರಧಾನಿಯಾಗಿಲ್ಲ, ದೇಶಕ್ಕೆ ಅವರ ಅಚಲ ಸಮರ್ಪಣೆ ಇದೆ.ಏತನ್ಮಧ್ಯೆ, ಪಿಎಂ ಮೋದಿ ಈ ಉತ್ಸಾಹಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಪ್ರಶಂಸೆ ಪಡೆಯುತ್ತಿದ್ದಾರೆ.


ತಡರಾತ್ರಿ ಸಭೆ, ನಂತರ ಬೆಳಿಗ್ಗೆ ಕೆಲಸಕ್ಕೆ ಹಿಂತಿರುಗಿದ ಮೋದಿ.!

ವಾಸ್ತವವಾಗಿ, ಜನರು ನಿನ್ನೆ ಮತ್ತು ಇಂದು ಪ್ರಧಾನಿ ಮೋದಿಯವರ ಬಿಡುವಿಲ್ಲದ ವೇಳಾಪಟ್ಟಿಯನ್ನು ಶ್ಲಾಘಿಸುತ್ತಿದ್ದಾರೆ. ನಿನ್ನೆ, ಪಿಎಂ ಮೋದಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಮ್ಯಾರಥಾನ್ ಸಭೆಯಲ್ಲಿ ಭಾಗವಹಿಸಿದ್ದರು ಮತ್ತು ಅಲ್ಲಿಂದ ಮುಂಜಾನೆ 3.30ರ ಸುಮಾರಿಗೆ ಮರಳಿದರು. ಇದಾದ ನಂತರ, ಬೆಳಿಗ್ಗೆ 8 ಗಂಟೆಗೆ ಅವರು ಜಾರ್ಖಂಡ್, ಬಿಹಾರ ಮತ್ತು ಬಂಗಾಳದ ಎರಡು ದಿನಗಳ ಪ್ರವಾಸಕ್ಕೆ ತೆರಳಿದರು, ಅಲ್ಲಿ ಅವರು ಸಾವಿರಾರು ಕೋಟಿ ಮೌಲ್ಯದ ಯೋಜನೆಗಳನ್ನ ಉದ್ಘಾಟಿಸಲಿದ್ದಾರೆ.ಪ್ರಧಾನಿ ಮೋದಿ ಉತ್ಸಾಹಕ್ಕೆ ನೆಟ್ಟಿಗರು ಫಿದಾ.!

73ನೇ ವಯಸ್ಸಿನಲ್ಲಿ, ಪ್ರಧಾನಿಯವರ ಉತ್ಸಾಹವು ಜನರನ್ನು ದಿಗ್ಭ್ರಮೆಗೊಳಿಸಿದ್ದು, ಅದಕ್ಕಾಗಿಯೇ ನೆಟ್ಟಿಗರು ಅವರನ್ನ ಸಾಕಷ್ಟು ಹೊಗಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕ ಜನರು ಪ್ರಧಾನಿಯನ್ನ ಶ್ಲಾಘಿಸುತ್ತಿದ್ದರೆ, ಕೆಲವರು ರಾಷ್ಟ್ರದ ಬಗ್ಗೆ ಅವರ ಸಮರ್ಪಣೆ ಮತ್ತು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ.


ತಡರಾತ್ರಿಯವರೆಗೆ ಮತ್ತು ನಂತರ ಬೆಳಿಗ್ಗೆ ಕೆಲಸ ಮಾಡಲು ಸಭೆ ಸೇರಿದರೆ, ಮೋದಿ ಮಾತ್ರ ಇದನ್ನ ಮಾಡಬಹುದು ಎಂದು ಜನರು ಹೇಳುತ್ತಿದ್ದಾರೆ.


ಏತನ್ಮಧ್ಯೆ, ಎಕ್ಸ್ ಬಳಕೆದಾರರೊಬ್ಬರು "ಪ್ರಧಾನಿ ಮೋದಿಗೆ ಸೆಲ್ಯೂಟ್, ನಾನು ಎಚ್ಚರಗೊಳ್ಳುವ ಮೊದಲೇ ಅವರ ಕೆಲಸವನ್ನ ಪ್ರಾರಂಭಿಸಿ, ಬಿಜೆಪಿ ಗೆಲ್ಲಲು ಮತ್ತು ಭಾರತ ಗೆಲ್ಲಲು ಇದು ಒಂದು ಕಾರಣವಾಗಿದೆ" ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರ "ಪ್ರಧಾನ ಸೇವಕ" ಎಂಬ ತಮ್ಮ ಹೇಳಿಕೆಯನ್ನ ಮೋದಿ ಈಡೇರಿಸುತ್ತಿದ್ದಾರೆ ಎಂದು ಹೇಳಿದರು.


ಗೆಲುವಿನ ಪೂರ್ಣ ಅವಕಾಶ, ಆದರೆ ಉತ್ಸಾಹ ಕಡಿಮೆಯಾಗಿಲ್ಲ.!

ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ, "ತಮ್ಮ ಗೆಲುವು ಖಚಿತವಾಗಿದ್ದರೂ, ಪ್ರಧಾನಿಯವರ ಸಮರ್ಪಣೆ, ಉತ್ಸಾಹ ಮತ್ತು ಮಾಡು ಅಥವಾ ಮಡಿ ಎಂಬ ಸ್ಪರ್ಧಾತ್ಮಕ ಮನೋಭಾವವು ಅವರನ್ನ ಎದ್ದು ಕಾಣುವಂತೆ ಮಾಡುತ್ತದೆ ಎಂದು ಹೇಳಿದರು. ಪ್ರತಿಯೊಬ್ಬ ಯುವಕರು ಪ್ರಧಾನಿ ಮೋದಿಯಿಂದ ಕಲಿಯಬೇಕು" ಎಂದರು.

ಪುತ್ತೂರಿನ ಎಲ್ ಟಿ.ಮುಹಮ್ಮದ್ (ಬಾವು) ಹೃದಯಾಘಾತದಿಂದ ನಿಧನ

Posted by Vidyamaana on 2023-06-15 08:25:21 |

Share: | | | | |


ಪುತ್ತೂರಿನ ಎಲ್ ಟಿ.ಮುಹಮ್ಮದ್ (ಬಾವು) ಹೃದಯಾಘಾತದಿಂದ ನಿಧನ

ಪುತ್ತೂರು: ಮೂಲತಃ ಚಿಕ್ಕಪುತ್ತೂರು ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಎಲ್.ಟಿ. ಮುಹಮ್ಮದ್ (ಬಾವು) ಜೂನ್ 15ರಂದು ಸೌದಿ ಅರೇಬಿಯಾದ ರಿಯಾದಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಇವರು ಪುತ್ತೂರಿನ ಅನ್ಸಾರುದ್ದೀನ್ ಜಮಾಅತ್ ಕಮಿಟಿಯ ಅಧ್ಯಕ್ಷ ಎಲ್.ಟಿ. ಅಬ್ದುಲ್ ರಝಾಕ್ ಹಾಜಿ ಅವರ ಸಹೋದರ.

ಶಾಸಕರ ಇಂದಿನ ಕಾರ್ಯಕ್ರಮ ಜು 26

Posted by Vidyamaana on 2023-07-25 23:17:13 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 26

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 26 ರಂದು


ಬೆಳ್ಳಗ್ಗೆ 9 ಗಂಟೆಗೆ ಕಾರ್ಗಿಲ್* *ದಿನಾಚರಣೆ*

ಕಿಲ್ಲೆ ಮೈದಾನ


11 ಗಂಟೆಗೆ CET ಕೋಚಿಂಗ್ ಕ್ಲಾಸ್ ಇನ್ಸ್ಟಾಲೇಷನ್ ಕೊಂಬೆಟ್ಟು ಜೂನಿಯರ್ ಕಾಲೇಜು


ಸಂಜೆ 6 ಗಂಟೆಗೆ 

ಪುತ್ತೂರು ಬಸ್ ನಿಲ್ದಾಣ ಬಳಿ*ಕಾರ್ಗಿಲ್ ದಿನಾಚರಣೆ*ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ



Leave a Comment: