ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2024-04-08 15:19:41 |

Share: | | | | |


ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಗ್ಯಾರಂಟಿ ಫಲಾನುಭವಿಗಳು ಕಾಂಗ್ರೆಸ್ ಗೆ ವೋಟು ಹಾಕುತ್ತಾರೆ ಎಂಬ ಪೀರ್ಣ ನಂಬಿಕೆ ನಮ್ಮಲ್ಲಿದೆ ಎಂದು ಅವರು ಹೇಳಿದರು.

ಬಿಎಂಟಿಸಿಯಲ್ಲಿ ಗೋಲ್​ಮಾಲ್​ ಪ್ರಕರಣ: ಮುಖ್ಯ ಲೆಕ್ಕಾಧಿಕಾರಿ ಬಂಧನ

Posted by Vidyamaana on 2024-02-05 07:28:22 |

Share: | | | | |


ಬಿಎಂಟಿಸಿಯಲ್ಲಿ ಗೋಲ್​ಮಾಲ್​ ಪ್ರಕರಣ: ಮುಖ್ಯ ಲೆಕ್ಕಾಧಿಕಾರಿ ಬಂಧನ

ಬೆಂಗಳೂರು, ಫೆ.5: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ BMTC ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ಸಂಬಂಧ FIR ವಿಳಂಬದ ಬಗ್ಗೆ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಬಳಿಕ BMTC ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್​ ಠಾಣೆಯಲ್ಲಿ FIR ದಾಖಲಾಗಿತ್ತು.ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ 11.81 ಕೋಟಿ ಹಗರಣ ನಡೆದಿತ್ತು. ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ದೂರಿನ ಅನ್ವಯ FIR ದಾಖಲಾಗಿತ್ತು. ಅಲ್ಲದೆ, ಮುಖ್ಯ ಲೆಕ್ಕಾಧಿಕಾರಿ ಆಗಿದ್ದ ಅಬ್ದುಲ್‌ ಖುದ್ದುಸ್ ಅವರನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.ವಂಚನೆಯಲ್ಲಿ ಶಾಮೀಲಾದ ಇತರರ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜನವರಿ 19 ರಂದು ಅಬ್ದುಲ್ ಖುದ್ದುಸ್ ಅವರನ್ನು ಅಮಾನತು ಮಾಡಿ ಕೆಎಸ್​ಆರ್​ಡಿಸಿ ಎಂಡಿ ಆದೇಶಿಸಿದ್ದರು. ಆದರೂ ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಈ ಬಗ್ಗೆ ಟಿವಿ9 ವರದಿ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು.


ಚುನಾವಣಾ ಶಿರಸ್ತೇದಾರ್ ಪೂರ್ಣಿಮಾ ಅಮಾನತ್ತು


ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಡಿ ಗ್ರೂಪ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಶಿಸ್ತು ಪ್ರಾಧಿಕಾರ ಅಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಿರಸ್ತೇದಾರ್ ಆಗಿದ್ದ ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.ಚುನಾವಣಾ ಶಾಖಾ ಸಿಬ್ಬಂದಿ ಸುರೇಶ್ (49) ಆತ್ಮಹತ್ಯೆ ಎಂಬವರು ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆತ್ಮಹತ್ಯೆಗೂ ಮುನ್ನ ಸುರೇಶ್ ಅವರು ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ಶಿರಸ್ತೇದಾರ್ ಪೂರ್ಣಿಮಾ ಕಿರುಕುಳ ನೀಡಿದ್ದಾಗಿ ಉಲ್ಲೇಖಿಸಿದ್ದರು.


ಪ್ರಕರಣ ಸಂಬಂಧ ಪೂರ್ಣಿಮಾ‌ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಪೂರ್ಣಿಮಾ ಅವರನ್ನು ವಶಕ್ಕೆ ಪಡೆದ ಬೆನ್ನೆಲೆ ಶಿಸ್ತು ಇಲಾಖೆಯು ಪೂರ್ಣಿಮಾ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

ಯುವಶಕ್ತಿ ಸೇವಾಪಥದ ದ್ವಿತೀಯ ವಾರ್ಷಿಕೋತ್ಸವ ಸೇವಾ ಸಂಭ್ರಮ ಸಂಪನ್ನ

Posted by Vidyamaana on 2024-03-29 11:47:20 |

Share: | | | | |


ಯುವಶಕ್ತಿ ಸೇವಾಪಥದ ದ್ವಿತೀಯ ವಾರ್ಷಿಕೋತ್ಸವ ಸೇವಾ ಸಂಭ್ರಮ ಸಂಪನ್ನ

ಬಂಟ್ವಾಳ :ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ  ಸೇವಾಕಾರ್ಯದಲ್ಲಿ  ಸಮಾಜಕ್ಕೆ ನಿರಂತರವಾಗಿ ಸ್ಪಂದಿಸುತ್ತಿರುವ ಯುವಶಕ್ತಿ ಸೇವಾಪಥವು  ತನ್ನ ದ್ವೀತಿಯ ವಾರ್ಷಿಕೋತ್ಸವವನ್ನು  "ಸೇವಾ ಸಂಭ್ರಮ" ಎಂಬ ವಿನೂತನ ಪರಿಕಲ್ಪನೆಯ ಮೂಲಕ ಕಟ್ಟದ ಪಡ್ಪು ಅರುಣೋದಯ ಸಭಾಭವನದಲ್ಲಿ ಆಚರಿಸಿಕೊಂಡಿತು .

ಸಮಾಜ ಬಂಧುಗಳಿಂದ ಸಂಗ್ರಹಿಸಿ ಜಿಲ್ಲೆಯ ವಿವಿಧ ಭಾಗದ ಒಟ್ಟು 11 ಜನ ಅನಾರೋಗ್ಯ ಪೀಡಿತ ಫಲಾನುಭವಿಗಳಿಗೆ ನಾಲ್ಕು ಲಕ್ಷ ರೂಗಳ ಆರ್ಥಿಕ ಸಹಕಾರ ನೀಡುವುದರ ಮೂಲಕ ಯುವಶಕ್ತಿ ಸೇವಾಪಥವು ಶಕ್ತ ಸಮಾಜ ಮತ್ತು ಅಶಕ್ತ ಸಮಾಜದ ನಡುವಿನ ಕೊಂಡಿಯೆನಿಸಿತು.


ಬರ್ಸಲಾ ಇಜ್ಜಿ – ಕರೆಂಟ್ ಲಾ ಇಜ್ಜಿ : ಇಂಚಾಂಡ ಎಂಚ ಕಥೆ!?

Posted by Vidyamaana on 2023-10-10 13:14:17 |

Share: | | | | |


ಬರ್ಸಲಾ ಇಜ್ಜಿ – ಕರೆಂಟ್ ಲಾ ಇಜ್ಜಿ : ಇಂಚಾಂಡ ಎಂಚ ಕಥೆ!?

ಪುತ್ತೂರು: ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ಬೇಸಿಗೆಗೂ ಮುನ್ನವೇ ವಿದ್ಯುತ್ ಬರ ಎದುರಾಗಿದೆ.

ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ನಿರೀಕ್ಷೆಯಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಹೀಗಾಗಿ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ರೈತರಿಗೆ ಬಿಗ್ ಶಾಕ್ ಎದುರಾಗಿದೆ.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಗಣನೀಯ ಹೆಚ್ಚಳ ಕಂಡಿದೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ವಿದ್ಯುತ್ ಬಳಕೆ ಪ್ರಮಾಣ ಶೇ. 20ರಷ್ಟು ಹೆಚ್ಚಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಹೀಗಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.

ಪುತ್ತೂರಿನಲ್ಲೂ ಲೋಡ್ ಶೆಡ್ಡಿಂಗ್!

ಏಪ್ರಿಲ್, ಮೇನಲ್ಲಿ ಲೋಡ್ ಶೆಡ್ಡಿಂಗ್ ಆಗುವುದನ್ನು ಕೇಳಿದ್ದೇವೆ. ಆದರೆ ಈ ಬಾರಿ ಪುತ್ತೂರು ಸೇರಿದಂತೆ ಹಲವು ಭಾಗಗಳಲ್ಲಿ ಅಕ್ಟೋಬರ್ ನವಂಬರ್ ನಲ್ಲೇ ಲೋಡ್ ಶೆಡ್ಡಿಂಗ್ ಆಗುವ ಭೀತಿ ಎದುರಾಗಿದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಈಗಾಗಲೇ ಕೃಷಿಕರು ಕಂಗಾಲಾಗಿದ್ದಾರೆ.

ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿ

Posted by Vidyamaana on 2023-10-01 18:36:02 |

Share: | | | | |


ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ  ಎಂದು ತಿಳಿದುಬಂದಿದೆ.


ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.


ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ. 

ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್​ಪಾತ್​ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್​ ಪಾತ್​​ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.

ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

Posted by Vidyamaana on 2023-10-24 09:14:52 |

Share: | | | | |


ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮ

ಪುತ್ತೂರು: ದೋಪಾವಳಿ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ವಸ್ತ್ರ ವಿತರಣೆ ಮಾಡುತ್ತಿದ್ದೇನೆ , ನಾನೇನು ಅಹಂಕಾರದಿಂದ ಇದನ್ನು ಮಾಡುತ್ತಿಲ್ಲ ಕ್ಷೇತ್ರದ ಬಡವರ ಜೊತೆ ಒಂದು ಹೊತ್ತು ಸಹಭೋಜನ ಮಾಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇನೆ. ನ. ೧೩ ರಂದು ಪುತ್ತೂರಿನಲ್ಲಿ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಮಾಡುವಂತೆ ಶಾಸಕರಾದ ಅಶೋಕ್ ರೈ ಮನವಿ ಮಾಡಿದರು.


ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರ ಪಡ್ಡಾಯೂರು ಇಲ್ಲಿ ನಡೆದ ೧೯ ನೇ ವರ್ಷದ ನವರಾತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪುತ್ತೂರಿನಲ್ಲಿ ಈ ಬಾರಿ ಸುಮಾರು ೫೦ ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು , ನಾನು ಕಾರ್ಯಕ್ರಮಕ್ಕೆ ಭಾಗವಹಿಸುವ ಬಡವರ ಜೊತೆ ಸಹಭೋಜನವನ್ನು ಮಾಡಲಿದ್ದೇನೆ ಎಂದು ಹೇಳಿದರು. ಇನ್ನೊಬ್ಬರ ಕಷ್ಟಕ್ಕೆ ನೆರವಾಗುವುದೇ ಧರ್ಮವಾಗಿದೆ. ಜಾತಿಮತಗಳ ಭೇದವಿಲ್ಲದೆ ಎಲ್ಲರೊಂದಿಗೆ ಸಹೋದರ ಭಾವನೆಯಿಂದ ಬದುಕುವುದು ಮತ್ತು ಧರ್ಮಗಳ ನಡುವೆ ಪರಸ್ಪರ ಸೌಹಾರ್ಧತೆಯ ವಾತಾವರಣ ಇದ್ದರೆ ಮಾತ್ರ ನಮ್ಮ ಭಾರತ ವಿಶ್ವಗುರುವಾಗಲು ಸಾಧ್ಯವಾಗಿದೆ. ಇಲ್ಲಿ ಹಿಂಸೆ, ಪ್ರಚೋಧನೆಯನ್ನು ಯಾರೂ ಮಾಡಬಾರದು. ನಮ್ಮ ನೆರೆಯ ವರ ಜೊತೆ ನಾವು ಸದಾ ಉತ್ತಮ ಬಾಂಧವ್ಯ ಹೊಂದರಬೇಕು ಅವರ ನೋವುಗಳಿಗೆ ಸಪಂದಿಸಬೇಕು ಎಂದು ಹೇಳಿದರು. ವೃದ್ದರಾದ ತಂದೆ ತಾಯಿಯನ್ನು ಆರೈಕೆ ಮಾಡುವ ಮೂಲಕ ಅವರಲ್ಲಿ ದೇವರನ್ನು ಕಾಣುವ ಮನೋಭಾವ ನಮ್ಮಲ್ಲಿರಬೇಕು ಎಂದು ಹೇಳಿದರು

ಮನೆ ಒಡತಿಯ ಕೈ ಗಟ್ಟಿಮಾಡಲು ೨೦೦೦ ಕೊಟ್ಟಿದ್ದೇವೆ ಮನೆ ಒಡತಿಯ ಕೈ ಗಟ್ಟಿಯಾದರೆ ಮಾತ್ರ ಕುಟುಂಬ ನೆಮ್ಮದಿಯಾಗಿರಲು ಸಾಧ್ಯ ಎಂಬುದನ್ನು ಮನಗಂಡು ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರ ಖಾತೆಗೆ ೨೦೦೦ ನೀಡುತ್ತಿದ್ದೇವೆ. ಮಹಿಳೆಯರು ಸ್ವಾವಲಂಬಿಗಳಾಗಬೇಕು, ಅವರಿಗೂ ನೆಮ್ಮದಿಯ ಜೀವನ ದೊರೆಯಬೇಕು ಎಂಬ ಉದ್ದೇಶದಿಂದ ಸರಕಾರ ಉಚಿತ ವಿದ್ಯುತ್, ಪಡಿತರ ಉಚಿತ ಬಸ್ಸಿನ ಜೊತೆಗೆ ಗೃಹಲಕ್ಷ್ಮಿಯನ್ನು ನೀಡುತ್ತಿದೆ. ಎಲ್ಲರಿಗೂ ಈ ಹಣ ಜಮೆಯಾಗಲಿದ್ದು ತಾಂತ್ರಿಕ ಕಾರಣಗಳಿಂದ ಹಣ ಜಮೆಯಾಗದೇ ಇದ್ದಲ್ಲಿ ನನ್ನ ಕಚೇರಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಮಾತನಾಡಿ ಪುತ್ತೂರಿನ ಶಾಸಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ. ಬಡವರ ಕಣ್ಣೀರೊರೆಸುವ ಮೂಲಕ ಅವರ ಕಷ್ಟಗಳಿಗೆ ನೆರವಾಗುತ್ತಿದ್ದಾರೆ. ಪುತ್ತೂರಿನಲ್ಲಿ ಗೆದ್ದು ಬಂದ ಯಾವುದೇ ಶಾಸಕರು ಈ ಕೆಲಸವನ್ನು ಮಾಡಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ಮಾತ್ರವಲ್ಲದೆ ಅದು ಇಲ್ಲಿನ ಕಟ್ಟಕಡೇಯ ವ್ಯಕ್ತಿಗೂ ಸಿಗುವಂತಾಗಬೇಕು ಎಂಬುದೇ ಶಾಸಕರ ಕನಸಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಭಜನಾಮಂದಿರ ಅಧ್ಯಕ್ಷ ಗಣೇಶ್ ಗೌಡ, ಪಡ್ಡಾಯೂರು ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ಲೋಕೇಶ್ ಪಡ್ಡಾಯೂರು, ಉಪಸ್ಥಿತರಿದ್ದರು. ಮೋಹನ್ ಪಡ್ಡಾಯೂರು ಸ್ವಾಗತಿಸಿ ವಂದಿಸಿದರು.



Leave a Comment: