ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ಜಿಎಲ್ ವನ್ ಮಾಲ್ ಲೋಕಾರ್ಪಣೆ

Posted by Vidyamaana on 2023-04-02 15:39:58 |

Share: | | | | |


ಜಿಎಲ್ ವನ್ ಮಾಲ್ ಲೋಕಾರ್ಪಣೆ

ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ಪ್ರಥಮ ಸರ್ವಸುಸಜ್ಜಿತ ಜಿಎಲ್ ವನ್ ಮಾಲ್ ಏ 2ರಂದು ಲೋಕಾರ್ಪಣೆಗೊಂಡಿತು.

ಒಂದೇ ಸೂರಿನಡಿ ಎಲ್ಲಾ ವಸ್ತು: ಎಡನೀರು ಶ್ರೀ

ಉದ್ಘಾಟನೆ ನೆರವೇರಿಸಿ ಆಶೀರ್ವಚನ ನೀಡಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸಂಸ್ಕ್ರತಿ, ಪರಿಕಲ್ಪನೆ ನಮ್ಮ ದೇಶದ್ದೇ ಆಗಿರಬೇಕು. ಅದರಂತೆ ಜಿಎಲ್ ವನ್ ಮಾಲ್ ಪುತ್ತೂರಿಗೆ ಬಂದಿದೆ‌. ಮುಂದಿನ ದಿನಗಳಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯುವಂತಾಗಲಿ.

SSLC ರಿಸಲ್ಟ್ : ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಪ್ರೋತ್ಸಾಹ ಧನವಾಗಿ ಡಿ ಕೆ ಶಿವಕುಮಾ‌ರ್ ಕೊಟ್ಟ ಹಣವೆಷ್ಟು?

Posted by Vidyamaana on 2024-05-14 17:09:13 |

Share: | | | | |


SSLC ರಿಸಲ್ಟ್ : ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಪ್ರೋತ್ಸಾಹ ಧನವಾಗಿ ಡಿ ಕೆ ಶಿವಕುಮಾ‌ರ್ ಕೊಟ್ಟ ಹಣವೆಷ್ಟು?

ಬೆಂಗಳೂರು , ಮೇ 14: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ರಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3 ನೇ ರಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು. ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಆಕರ್ಷಣ್ ಇಂಡಸ್ಟ್ರಿಸ್ ನಿಂದ ಕೃಷಿಕರಿಗೆ ಆಕರ್ಷಕ ಆಫರ್

Posted by Vidyamaana on 2024-02-23 12:38:43 |

Share: | | | | |


ಆಕರ್ಷಣ್ ಇಂಡಸ್ಟ್ರಿಸ್ ನಿಂದ ಕೃಷಿಕರಿಗೆ ಆಕರ್ಷಕ ಆಫರ್

ಪುತ್ತೂರು : ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ ಛಾಪನ್ನು ಒತ್ತಿ ಯಶಸ್ಸಿನ ಹೆಜ್ಜೆ ಇಡುತ್ತಿರುವ ಪುತ್ತೂರಿನ ಆಕರ್ಷಣ್‌ ಇಂಡಸ್ಟ್ರಿಸ್ ಈ ಬಾರಿ ಕೃಷಿಕರಿಗೆ ವಿಶೇಷ ಕೊಡುಗೆಯೊಂದನ್ನು ಘೋಷಿಸಿದೆ.


ಸಂಸ್ಥೆಯೂ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಪ್ರತಿ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಲಕ್ಕಿ ಕೂಪನ್‌ಗಳನ್ನು ನೀಡಿದೆ. ಕೃಷಿಕರು ಈ ಕೂಪನ್‌ಗಳನ್ನು ಪಡೆದುಕೊಂಡು, ಮಾಹಿತಿಗಳನ್ನು ತುಂಬಿಸಿ ಹಿಂದಿರುಗಿಸಲು ಇಂದಿನಿಂದ ಫೆ. 29ರ ವರೆಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಮಾ. 4ರಂದು ಕೂಪನ್‌ನ ಲಕ್ಕಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಕೂಪನ್ ವಿಜೇತರಾದ ಕೃಷಿ ಮಿತ್ರರಿಗೆ 5 ಚಿನ್ನ ಹಾಗೂ 25 ಬೆಳ್ಳಿಯ ನಾಣ್ಯ ಗೆಲ್ಲುವ ಸುವರ್ಣಾವಕಾಶವನ್ನು ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ಸಂಸ್ಥೆಯು ಒದಗಿಸಿದೆ.


ಅಲ್ಲದೆ ಫೆ.21ರಿಂದ ಕೃಷಿಕರ ಅನುಕೂಲಕ್ಕಾಗಿ ವಿವಿಧ ಕೃಷಿ ಉಪಯೋಗಿ ಉತ್ಪನ್ನಗಳಾದ ಡ್ರಾಗನ್ ಫುಟ್ ಸ್ಟಾಂಡ್, ಬೇಲಿ ಕಂಬ, ವೈ ಪೋಲ್ ಅಲ್ಲದೆ ಕಾಳುಮೆಣಸು ಫಾರ್ಮ್‌ಗಳಲ್ಲಿ ಬಳಕೆಯಾಗುವ ವಿಯೆಟ್ನಾಮ್ ಮಾಡೆಲ್‌ನ ಕಾಂಕ್ರೀಟ್ ಪೋಲ್‌ಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ನಿಗದಿತ ಸ್ಥಳಗಳಿಗೆ ಕೃಷಿಕರ ಮನೆ ಬಾಗಿಲಿಗೆ ಉಚಿತವಾಗಿ ಸಾಗಾಟ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಉಚಿತ ಡೆಲಿವರಿ ಕೆಲವು ದಿನಗಳವರೆಗೆ ಮಾತ್ರ ಇರಲಿದ್ದೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.

1996ರ ಅ.21 ರಂದು ಸಿಮೆಂಟ್ ಇಟ್ಟಿಗೆ ತಯಾರಿ ಹಾಗೂ ಮಾರಾಟದ ಮೂಲಕ ಉದ್ಯಮ ಜಗತ್ತಿಗೆ ಕಾಲಿಟ್ಟ ಸಂಸ್ಥೆಯು ಇದೀಗ ಹತ್ತು ಹಲವು ಉತ್ಪನ್ನಗಳ ಮೂಲಕ ಜಿಲ್ಲೆಯಾದ್ಯಂತ ಮನೆ ಮಾತಾಗಿದೆ. ಈ ಸಂಸ್ಥೆಯು ಹಲವು ಉತ್ಪನ್ನಗಳು ರಾಜ್ಯಾದ್ಯಂತ ಸರಬರಜಾಗುತ್ತಿದ್ದು, ಡೀಲರ್ ಗಳ ಮೆಚ್ಚಿನ ಸಂಸ್ಥೆಯಾಗಿಯೂ ಬೆಳೆದಿದೆ.

ಪುತ್ತೂರು : ಅಪ್ರಾಪ್ತ ಬಾಲಕಿಯ ಮೇಲೆ ಕಿರುಕುಳ ಆರೋಪ -ಕಡಬ ಮೂಲದ ಶಾಕಿರ್ ಪೊಲೀಸ್ ವಶಕ್ಕೆ

Posted by Vidyamaana on 2024-01-28 05:12:54 |

Share: | | | | |


ಪುತ್ತೂರು : ಅಪ್ರಾಪ್ತ  ಬಾಲಕಿಯ ಮೇಲೆ ಕಿರುಕುಳ ಆರೋಪ -ಕಡಬ ಮೂಲದ ಶಾಕಿರ್ ಪೊಲೀಸ್ ವಶಕ್ಕೆ

ಪುತ್ತೂರು:  ಯುವಕನೊಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಪುತ್ತೂರು  ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.ಆರೋಪಿಯನ್ನು ತಮ್ಮವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್‌ ಕುಮಾರ ಪುತ್ತಿಲ ಸಮಾಧಾನಗೊಳಿಸಿದರು. ಆರೊಪಿಯ ವಿರುದ್ದ ಪೊಕ್ಕೋ ಪ್ರಕರಣ ದಾಖಲಿಸಲಾಗಿದೆ.

ಸುರತ್ಕಲ್‌ : ಘೋರ ದುರಂತ: ನದಿಯಲ್ಲಿ ಮುಳುಗಿ ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಾವು

Posted by Vidyamaana on 2024-02-28 07:17:47 |

Share: | | | | |


ಸುರತ್ಕಲ್‌ : ಘೋರ ದುರಂತ: ನದಿಯಲ್ಲಿ ಮುಳುಗಿ  ವಿದ್ಯಾದಾಯಿನಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಾವು

ಸುರತ್ಕಲ್‌ : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್  ಖಾಸಗಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಹಳೆಯಂಗಡಿಯ ಕೊಪ್ಪಳ ಆಣೆಕಟ್ಟಿನ ರೈಲ್ವೆ ಸೇತುವೆಯ ಕೆಳಭಾಗದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಮಗ ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಮಗ ರಾಘವೇಂದ್ರ (15), ಸುರತ್ಕಲ್ ಗುಡ್ಡೆಕೊಪ್ಪ, ನಿವಾಸಿ ವಿಶ್ವನಾಥ ಎಂಬವರ ಮಗ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್‌ (15) ಎಂದು ಗುರುತಿಸಲಾಗಿದೆ. 

ಮೃತರೆಲ್ಲರೂ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾಗಿದ್ದು, ಮಂಗಳವಾರ ನಡೆದ ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ಮನೆಗೆ ಬಾರದೆ ಕಾಣೆಯಾಗಿದ್ದರು. ಈ ಕುರಿತು ಮಕ್ಕಳ ಪೋಷಕರು ರಾತ್ರಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದ ಸುರತ್ಕಲ್ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿತ್ತಾರೆ. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.

ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈದ್-ಮಿಲಾದ್ ಸಂಭ್ರಮ: ಕೋಮು ಸಾಮರಸ್ಯಕ್ಕೆ ಮಾದರಿಯಾದ ದೇವಿ ಪ್ರಸಾದ್ ಪೂಂಜ

Posted by Vidyamaana on 2023-09-28 13:09:39 |

Share: | | | | |


ಈದ್-ಮಿಲಾದ್ ಸಂಭ್ರಮ: ಕೋಮು ಸಾಮರಸ್ಯಕ್ಕೆ ಮಾದರಿಯಾದ ದೇವಿ ಪ್ರಸಾದ್ ಪೂಂಜ

ಬಂಟ್ವಾಳ: ಇಂದು ನಾಡಿನೆಲ್ಲೆಡೆ ಈದ್-ಮಿಲಾದ್ ಸಂಭ್ರಮ ಮನೆಮಾಡಿದೆ. ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.

ಈ ನಡುವೆ, ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಬೇಂಕ್ಯದಲ್ಲಿ ಈದ್ ಮಿಲಾದ್ ಸಂಭ್ರಮದ ಮೆರವಣಿಗೆ ಸಾಗಿ ಬಂದ ಸಂದರ್ಭದಲ್ಲಿ ಸಜೀಪ ಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿರುವ ದೇವಿ ಪ್ರಸಾದ್ ಪೂಂಜ (ಶೋಭಿತ್ ಪೂಂಜ) ಅವರು ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ತಿಳಿಸುತ್ತಾ ಸಿಹಿ ವಿತರಿಸಿ ಗಮನಸೆಳೆದಿದ್ದಾರೆ ಮತ್ತು ಈ ಮೂಲಕ ಕೋಮು ಸಾಮರಸ್ಯಕ್ಕೊಂದು ಹೊಸ ಭಾಷ್ಯ ಬರೆದಿದ್ದಾರೆ.

ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸಿದ್ದಿಕ್, ಚೆನ್ನಪ್ಪ ಪೂಜಾರಿ ಯೋಗಿಶ್ ಸಾಲ್ಯಾನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು

ದೇವಿ ಪ್ರಸಾದ್ ಪೂಂಜ ಅವರು ಪ್ರತೀ ವರ್ಷವೂ ಈದ್ ಮಿಲಾದ್ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿ ಹಂಚುವ ಮೂಲಕ ಈ ಭಾಗದಲ್ಲಿ ಹಿಂದು-ಮುಸ್ಲಿಂ ಸೌಹಾರ್ದಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಾ ಮಾದರಿ ಜನಪ್ರತಿನಿಧಿ ಎಣಿಸಿಕೊಂಡಿದ್ದಾರೆ.



Leave a Comment: