ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ತನ್ನ ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು 8.2 ಲಕ್ಷ ರೂಪಾಯಿ ಕಳೆದುಕೊಂಡಳೋರ್ವ ಯುವತಿ

Posted by Vidyamaana on 2024-01-24 06:34:18 |

Share: | | | | |


ತನ್ನ ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು 8.2 ಲಕ್ಷ ರೂಪಾಯಿ ಕಳೆದುಕೊಂಡಳೋರ್ವ ಯುವತಿ

ಬೆಂಗಳೂರಿನ ಜಾಲಹಳ್ಳಿಯಲ್ಲಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ ಯುವತಿಯೊಬ್ಬಳು ₹8.2 ಲಕ್ಷ ಕಳೆದುಕೊಂಡ ಘಟನೆಯೊಂದು ನಡೆದಿದೆ.ಮೋಸ ಹೋದ ಯುವತಿ ಓರ್ವ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಕಾರಣಾಂತರಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿ ದೂರ ಆಗಿದ್ದರು.ಬ್ರೇಕ್‌ ಅಪ್‌ನಿಂದ ನೊಂದಿದ್ದ ಯುವತಿ ತಾನು ಪ್ರೀತಿ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ಮಾಟ ಮಂತ್ರ ಅಥವಾ ವಶೀಕರಣದ ಮೂಲಕ ಮತ್ತೆ ತನ್ನ ಬಳಿ ಸೆಳೆಯಲು ತನ್ನ ಸ್ನೇಹಿತನ ಸಹಾಯದಿಂದ ಆನ್‌ಲೈನ್ ಮೂಲಕ ವಶೀಕರಣ ಮಾಡುವ ಜ್ಯೋತಿಷಿಯೊಬ್ಬರನ್ನು ಸಂಪರ್ಕ ಮಾಡುತ್ತಾಳೆ. ಮೊದಲಿಗೆ ಆನ್‌ಲೈನ್ ಮುಖಾಂತರ ಭೇಟಿ ಮಾಡಿದ ಜ್ಯೋತಿಷಿ, ನಿನ್ನ ಪ್ರಿಯಕರ ನಿನಗೆ ಸಿಗುತ್ತಾನೆ. ಆದಷ್ಟು ಬೇಗ ಬಂದು ನಿನ್ನನ್ನು ತಲುಪುತ್ತಾನೆ ಎಂದು ಯುವತಿಯಲ್ಲಿ ಮೊದಲಿಗೆ ಭರವಸೆ ತುಂಬಿದ್ದಾನೆ. ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು ಡಿಸೆಂಬರ್ 22 ರಂದು ಮೊದಲ ಹಂತವಾಗಿ ₹2.4 ಲಕ್ಷ ಯುವತಿ ಆನ್‌ಲೈನ್​​ ಮೂಲಕ ಜ್ಯೋತಿಷಿಗೆ ಪಾವತಿ ಮಾಡಿದ್ದಾಳೆ. ಬಳಿಕ, ಪದೇ ಪದೆ ಹಣಕಾಸಿನ ಬೇಡಿಕೆ ಇಟ್ಟ ಸ್ವಾಮೀಜಿ, ಕೆಲವು ದಿನಗಳ ನಂತರ, ಹೆಚ್ಚುವರಿ ₹1.7 ಲಕ್ಷ ಪಾವತಿ ಮಾಡುವಂತೆ ಕೇಳುತ್ತಾನೆ.ನಿರಂತರವಾಗಿ ಹಣ ಕೇಳಿದಾಗ ಯುವತಿ ಹಣವಿಲ್ಲ ಎಂದಾಗ ಹಣ ನೀಡದಿದ್ದರೆ ನಿನ್ನ ಮಾಜಿ ಪ್ರಿಯಕರನಿಗೆ ಈ ವಿಷಯ ತಿಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವತಿ ಜನವರಿ 10ರಂದು ₹4.1 ಲಕ್ಷ ನೀಡಿದ್ದಾಳೆ. ಹೀಗೆ ಯುವತಿ ಜ್ಯೋತಿಷಿಗೆ ಬರೋಬ್ಬರಿ ₹8.2 ಲಕ್ಷ ನೀಡಿದ್ದಾಳೆ. ಯುವತಿಯ ಈ ವಿಚಾರ ತಿಳಿದ ಪೋಷಕರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯಾಗಿದೆ.

ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

Posted by Vidyamaana on 2023-09-22 21:34:50 |

Share: | | | | |


ಮಂಗಳೂರು ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಬಂಧನ

ಮಂಗಳೂರು: “ಡ್ರಗ್ಸ್ ಫ್ರೀ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿವೆ. 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆಗೆ ಇಳಿದಿದ್ದ.

ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಕೈಗೊಂಡಿದ್ದಾರೆ

ಸೈಕಲ್​ನಲ್ಲಿ ಓಡಾಡುತ್ತ ಮನೆಗಳ್ಳತನ, ಬಂಧಿತನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶ

Posted by Vidyamaana on 2024-02-28 21:37:12 |

Share: | | | | |


ಸೈಕಲ್​ನಲ್ಲಿ ಓಡಾಡುತ್ತ ಮನೆಗಳ್ಳತನ, ಬಂಧಿತನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು, ಫೆ.28: ದಿಢೀರ್ ಶ್ರೀಮಂತನಾಗೊ ಕನಸು ಕಂಡಿದ್ದ ಪ್ರದೀಪ್ ಮಂಡಲ್ ಎಂಬ ವ್ಯಕ್ತಿ ಸೈಕಲ್​ನಲ್ಲಿ ರೌಂಡ್ಸ್ ಹಾಕುತ್ತಲೇ ಕಳ್ಳತನಕ್ಕೆ (Theft) ಪ್ಲಾನ್ ಮಾಡ್ತಿದ್ದ. ಸೈಕಲ್‌ ನಲ್ಲಿ ಬಂದು 2 ಕೆಜಿ ಚಿನ್ನಾಭರಣದ (Jewels) ಜೊತೆ ಎಸ್ಕೇಪ್ ಆಗಿದ್ದ. ಸದ್ಯ ಈಗ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ (Sesh

non

ripuram Police). ಮಧ್ಯರಾತ್ರಿ ಕೈಯಲ್ಲೊಂದು ಕೋಲು ಹಿಡಿದುಕೊಂಡು ಅತ್ತಿಂದ ಇತ್ತ, ಇತ್ತಿಂದ ಅತ್ತ ಓಡಾಡ್ಕೊಂಡು ದೊಡ್ಡ ಕುಳ‌ ಇರೊ ಮನೆಯನ್ನೇ ಟಾರ್ಗೆಟ್ ಮಾಡಿ ಮನೆಯಲ್ಲಿನ ಚಿನ್ನಾಭರಣ ದೋಚಿ ಹೆಗಲಮೇಲೆ ಬ್ಯಾಗ್ ಏರಿಸಿಕೊಂಡು ಈತ ಕಳ್ಳತನ ಮಾಡಿದ್ದ.


ಶೇಷಾದ್ರಿಪುರಂ ನಲ್ಲಿ ವಾಸವಿರುವ ಮಂಜುಳಾ ದೇವಿ ಹಾಗೂ ಕುಟುಂಬಸ್ಥರು ಜನವರಿ 17 ರಂದು ಹುಟ್ಟೂರು ರಾಜಸ್ಥಾನಕ್ಕೆ ತೆರಳಿದ್ರು. ವಾಪಸ್ಸು ಫೆಬ್ರವರಿ 4 ರಂದು ಬಂದು ನೋಡಿದಾಗ ಶಾಕ್ ಆಗಿತ್ತು. ಯಾಕಂದ್ರೆ ಮನೆಯಲ್ಲಿ‌ ಇಟ್ಟಿದ್ದ ಎರಡು ಕೆಜಿ ಚಿನ್ನಾಭರಣ ಕಾಣೆಯಾಗಿತ್ತು. ತಕ್ಷಣ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ರು. ಅಲರ್ಟ್ ಆದ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಲ್ಲಿಗೆ ಕಳ್ಳತನ ಆಗಿದೇ ಅನ್ನೋದು ಕನ್ಫರ್ಮ್ ಆಗಿತ್ತು. ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಳ್ಳನ ಅಸಲಿ ಆಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರದೀಪ್ ಮಂಡಲ್ ಎಂಬ ಅಸ್ಸಾಂ ಮೂಲದ ವ್ಯಕ್ತಿ ಕಳ್ಳತನ ಮಾಡಿರೋದು ಬಯಲಾಗಿದೆ.


23 ರ ಮಧ್ಯರಾತ್ರಿ ಸೈಕಲ್ ನಲ್ಲಿ ಬಂದ ಕಳ್ಳ ಸೈಕಲ್ ಬಿಟ್ಟು ನಡೆದುಕೊಂಡೇ ಬಂದಿದ್ದ. ಹೀಗೆ ಬಂದವನಿಗೆ ಮನೆ ಲೈಟ್ ಆಫ್ ಆಗಿರೋದು ಕಂಡಿದೆ. ಹಾಗಾಗಿ ಮನೆಗಳ್ಳತನಕ್ಕೆ ನಿರ್ಧಾರ ಮಾಡಿಬಿಟ್ಟಿದ್ದ. ಮನೆ ಮೇಲೆ ಹತ್ತಿದ್ದ ಆರೋಪಿ ಕಿಟಕಿ ಸರಳುಗಳನ್ನು ಮುರಿದು ರೂಮಿನೊಳಗೆ ಪ್ರವೇಶಿಸಿದ್ದ. ಲಾಕರ್ ಮುರಿದು ನೋಡಿದವ್ನಿಗೆ ಅಪಾರ ಪ್ರಮಾಣದ ಚಿನ್ನಾಭರಣ ಕಂಡಿದೆ. ಎಲ್ಲವನ್ನು ಬ್ಯಾಗ್ ನಲ್ಲಿ‌ ತುಂಬಿಕೊಂಡವನೇ ಹೆಗಲ‌ ಮೇಲೇರಿಸಿಕೊಂಡು ಹುಟ್ಟೂರು ಅಸ್ಸಾಂಗೆ ತೆರಳಿದ್ದ. ಅಲ್ಲದೇ ಸ್ವಲ್ಪ ಪ್ರಮಾಣದ ಚಿನ್ನ ಮಾರಿ ಒಂದು ಸ್ವಿಫ್ಟ್ ಡಿಜೈರ್ ಕಾರು ಕೂಡ ಖರೀದಿ ಮಾಡಿದ್ದ. ಆತನಿಗಾಗಿ ಬಲೆ ಬೀಸಿದ್ದ ಪೊಲೀಸರು ಅಸ್ಸಾಂ ನಿಂದ ಬಂಧಿಸಿ ಕರೆತಂದಿದ್ದಾರೆ. ಬಂಧಿತನಿಂದ 1 ಕೋಟಿ 29 ಲಕ್ಷದ 35 ಸಾವಿರ ಮೌಲ್ಯದ 2141 ಗ್ರಾಂ ಚಿನ್ನ, 1313 ಗ್ರಾಂ ಬೆಳ್ಳಿ 70 ಸಾವಿರ ನಗದು ಹಣ ಹಾಗೂ ಒಂದು ಸ್ವಿಫ್ಟ್ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ.


ಸದ್ಯ ಪೊಲೀಸರ ಉತ್ತಮ‌ ಕೆಲಸದಿಂದ ಮಾಲೀಕ ನಿಟ್ಟುಸಿರು ಬಿಟ್ರೆ. ಬೇಗ ಶ್ರೀಮಂತನಾಗೊ ಆಸೆಗೆ ಕಳ್ಳತನ ಮಾಡಿದ್ದ ಖದೀಮ‌ ಜೈಲು ಪಾಲಾಗಿದ್ದಾನೆ. ಮನೆಯಿಂದ ಹೊರಗೆ ಹೋಗಬೇಕಾದ್ರೆ ಸ್ವಲ್ಪ ಎಚ್ಚರಿಕೆ ವಹಿಸಿಹೋದ್ರೆ ಒಳ್ಳೆಯದು. ಇಲ್ಲದಿದ್ರೆ ನಿಮ್ಮ ಮನೆಗೂ ಇಂತಹ ಕಳ್ಳರು ಕನ್ನ ಹಾಕಬಹುದು.

ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

Posted by Vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ವಿಶ್ವದಾದ್ಯಂತ X ಡೌನ್: ಬಳಕೆದಾರರ ಪರದಾಟ

Posted by Vidyamaana on 2023-09-19 21:21:50 |

Share: | | | | |


ವಿಶ್ವದಾದ್ಯಂತ X ಡೌನ್: ಬಳಕೆದಾರರ ಪರದಾಟ

ನವದೆಹಲಿ: ಟ್ವಿಟ್ಟರ್ ಎಕ್ಸ್ ಆಗಿ ಬದಲಾವಣೆ ಮಾಡಲಾಗಿತ್ತು. ಈ ಬಳಿಕ ಎಕ್ಸ್ ಅನ್ನು ಪಾವತಿ ವ್ಯವಸ್ಥೆ ಜಾರಿಗೊಳಿಸೋದಾಗಿ ಎಲೋನ್ ಮಸ್ಕ್ ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಜನಪ್ರಿಯ ಸಾಮಾಜಿಕ ಮಾಧ್ಯಮ ಎಕ್ಸ್ ಡೌನ್ ಆಗಿದೆ. ಬಳಕೆದಾರರು ಈಗ ಪರದಾಡುತ್ತಿರೋದಾಗಿ ತಿಳಿದು ಬಂದಿದೆ.ಈ ಹಿಂದೆ ಟ್ವಿಟರ್ ಎಂದು ಕರೆಯಲ್ಪಡುತ್ತಿದ್ದ ಪ್ಲಾಟ್ ಫಾರ್ಮ್ ಎಕ್ಸ್ ಕೆಲಸ ಮಾಡುವುದನ್ನು ನಿಲ್ಲಿಸಿದೆ. ಎಲೋನ್ ಮಸ್ಕ್ ಅವರು ಸೈಟ್ಗೆ ಪ್ರವೇಶಕ್ಕಾಗಿ ಎಲ್ಲರಿಗೂ ಪಾವತಿಸಲು ಒತ್ತಾಯಿಸಲು ಯೋಜಿಸುತ್ತಿದ್ದಾರೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಸೈಟ್ ಡೌನ್ ಆಗಿದೆ.


ಎಕ್ಸ್ ಕೆಲವು ಬಳಕೆದಾರರಿಗೆ ಕೈಕೊಟ್ಟ ಕಾರಣ, ಸರ್ವರ್ ಡೌನ್ ಆಗಿ, ಬಳಕೆದಾರರು ಪರದಾಡುವಂತೆ ಆಗಿದೆ. ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ ಡಿಟೆಕ್ಟರ್ ಮಂಗಳವಾರ ಮಧ್ಯಾಹ್ನ ವಿಶ್ವದಾದ್ಯಂತ ಸಮಸ್ಯೆಗಳ ವರದಿಗಳ ದೊಡ್ಡ ಒಳಹರಿವನ್ನು ತೋರಿಸಿದೆ. ಆ ಸೈಟ್ X ನ ವರದಿಗಳ ಮೇಲೆ ಅವಲಂಬಿತವಾಗಿರುತ್ತದೆ, ಮತ್ತು ಆದ್ದರಿಂದ ಸಮಸ್ಯೆಗಳನ್ನು ಸ್ವತಃ ಅನುಭವಿಸಬಹುದು.

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Posted by Vidyamaana on 2023-04-02 02:14:11 |

Share: | | | | |


2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

ಪುತ್ತೂರು : 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಈ ಪ್ರಕಟಣೆಯ ಪ್ರಕಾರ ಈ ಸಾಲಿನ ಮೊದಲನೇ ಶೈಕ್ಷಣಿಕ ಅವಧಿಯು ಮೇ 29 ರಿಂದ ತರಗತಿಗಳು ಆರಂಭವಾಗಲಿವೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.

ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ ಮಾಹೆವಾರು ಪಾಠ ಹಂಚಿಕೆ, ಪತ್ಯೇತರ ಚಟುವಟಿಕೆಗಳು, ಪರೀಕ್ಷೆ ಮತ್ತು ಮೌಲ್ಯಾಂಕನ ವಿಶ್ಲೇಷಣೆ, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ ಸಿಸಿಇ ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯ ಆಗುವಂತೆ ಶೈಕ್ಷಣಿಕ ಅವಧಿಗಳು, ರಜಾದಿನಗಳನ್ನು ಯೋಜಿಸಿ ಸಿದ್ಧಪಡಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

2023-24ನೇ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಅಕ್ಟೋಬರ್ 7 ರವರಗೆ ನಡೆಯಲಿದೆ. ಎರಡನೇ ಶೈಕ್ಷಣಿಕ ಅವಧಿ ಅಕ್ಟೋಬರ್ 25, 2023 ರಿಂದ ಆರಂಭವಾಗಿ ಏಪ್ರಿಲ್ 10, 2024 ಕ್ಕೆ ಮುಕ್ತಾಯವಾಗಲಿದೆ.

ಇನ್ನು ಮಧ್ಯಂತರ ರಜೆ 2023ರ ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ಇರಲಿದೆ. ಬೇಸಿಗೆ ರಜೆ 2024ರ ಏಪ್ರಿಲ್ 11 ರಿಂದ ಮೇ 28 ರ ವರೆಗೆ ನೀಡಲಾಗಿದೆ.



Leave a Comment: