ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

Posted by Vidyamaana on 2023-11-20 18:51:17 |

Share: | | | | |


ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

ಅಹಮದಾಬಾದ್‌, ನ.20: ಆಸ್ಟ್ರೇಲಿಯ 6ನೇ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ


ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ


ವೈರಲ್​ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್‌ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್​ ಪಂದ್ಯಕ್ಕೂ ಮುನ್ನ ಮಾರ್ಷ್​ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್​ಗೆ 450 ರನ್​ ಬಾರಿಸುತ್ತದೆ, ಭಾರತ 65 ರನ್​ಗೆ ಆಲೌಟ್​ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್​ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ 15ರನ್​ಗೆ ಔಟಾಗಿದ್ದರು.


ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.


ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ವಯನಾಡ್ ದುರಂತ: ಸಂತ್ರಸ್ತರಿಗೆ SKSSF ದ. ಕ ಈಸ್ಟ್ ಜಿಲ್ಲೆ ವತಿಯಿಂದ ಅಗತ್ಯ ವಸ್ತುಗಳ ನೆರವು

Posted by Vidyamaana on 2024-08-06 12:41:46 |

Share: | | | | |


ವಯನಾಡ್ ದುರಂತ: ಸಂತ್ರಸ್ತರಿಗೆ  SKSSF ದ. ಕ ಈಸ್ಟ್ ಜಿಲ್ಲೆ ವತಿಯಿಂದ ಅಗತ್ಯ ವಸ್ತುಗಳ ನೆರವು

ಪುತ್ತೂರು : ವಯನಾಡು ದುರಂತ ಸ್ಥಳಕ್ಕೆ ಸುಮಾರು ಹತ್ತು ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮೊದಲ ಭಾರಿ SKSSF ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ವಿವಿಧ ವಲಯ ಸಮಿತಿಗಳ ಸಹಕಾರದೊಂದಿಗೆ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು. 

 ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ನವವಿ ಯವರ ನೇತೃತ್ವದಲ್ಲಿ ವಸ್ತ್ರ ಮತ್ತು ಆಹಾರ ಸಾಮಗ್ರಿಗಳನ್ನು ಜೆಎಸ್ಎಂ ಅಲ್ ಬಿರ್ರ್ ಸಂಸ್ಥೆಯಲ್ಲಿ ಸಂಗ್ರಹಿಸಿ ಆಗಸ್ಟ್ ಒಂದರಂದು ರಾತ್ರಿ 10 ಗಂಟೆಗೆ ಕಳುಹಿಸಿಕೊಡಲಾಯಿತು.

ಲೋಕಾಯುಕ್ತ ಪೊಲೀಸರು​ ದಾಳಿ ಮಾಡ್ತಿದ್ದಂತೆ 5 ಸಾವಿರ ರೂ. ಲಂಚದ ಹಣ ನುಂಗಿದ ಕಂದಾಯ ಅಧಿಕಾರಿ

Posted by Vidyamaana on 2023-07-25 01:59:35 |

Share: | | | | |


ಲೋಕಾಯುಕ್ತ ಪೊಲೀಸರು​ ದಾಳಿ ಮಾಡ್ತಿದ್ದಂತೆ 5 ಸಾವಿರ ರೂ. ಲಂಚದ ಹಣ ನುಂಗಿದ ಕಂದಾಯ ಅಧಿಕಾರಿ

ಜಬಲ್ಪುರ: ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಸಿಕ್ಕಿಬೀಳುತ್ತೇನೆ ಎಂಬ ಭಯದಲ್ಲಿ ಲಂಚವಾಗಿ ಪಡೆದಿದ್ದ 5 ಸಾವಿರ ರೂ. ಹಣವನ್ನು ಕಂದಾಯ ಅಧಿಕಾರಿಯೊಬ್ಬ ನುಂಗಿ ನೀರು ಕುಡಿದಿರುವ ಘಟನೆ ಮಧ್ಯಪ್ರದೇಶದ ಕತ್ನಿಯಲ್ಲಿ   ಸೋಮವಾರ ದಂದು ನಡೆದಿದೆ.ಅಧಿಕಾರಿ ಗಜೇಂದ್ರ ಸಿಂಗ್​ ತನ್ನ ಖಾಸಗಿ ಕಚೇರಿಯಲ್ಲಿ 5 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದ ಸಂಗತಿ ಗೊತ್ತಾದ ಹಿನ್ನೆಲೆ ಮಧ್ಯಪ್ರದೇಶದ ಲೋಕಾಯುಕ್ತ ಸ್ಪೆಷಲ್​ ಪೊಲೀಸ್​ ಎಸ್ಟಾಬ್ಲಿಶ್​ಮೆಂಟ್ (ಎಸ್​ಪಿಇ) ರೆಡ್​ಹ್ಯಾಂಡ್​ ಆಗಿ ಹಿಡಿಯಲು ಬಲೆ ಬೀಸಿದ್ದರು. ಹಣ ಪಡೆಯುವಾಗ ದಾಳಿ ಮಾಡುತ್ತಿದ್ದಂತೆ ಹೆದರಿದ ಗಜೇಂದ್ರ ಸಿಂಗ್​ ಲಂಚದ ಹಣವನ್ನು ನುಂಗಿದನು ಎಂದು ಎಸ್​ಇಪಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್​ ಸಾಹು ತಿಳಿಸಿದ್ದಾರೆಅಧಿಕಾರಿ ಗಜೇಂದ್ರ ಸಿಂಗ್, ಜಮೀನು ವಿವಾದವನ್ನು ಬಗೆಹರಿಸಲು ಬರ್ಖೇದಾ ಗ್ರಾಮದ ಚಂದನ್ ಸಿಂಗ್ ಲೋಧಿಯಿಂದ 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಬಳಿಕ ಚಂದನ್ ಸಿಂಗ್ ಜಬಲ್‌ಪುರದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಲೋಕಾಯುಕ್ತರ ತಂಡ ಬಲೆ ಬೀಸಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆದರೆ ಗಜೇಂದ್ರ ಸಿಂಗ್ ಲಂಚವಾಗಿ ಪಡೆದಿದ್ದ 500 ರೂಪಾಯಿಯ 9 ನೋಟುಗಳನ್ನು ನುಂಗಿದ್ದಾನೆ.


ಈ ವೇಳೆ 7 ಸದಸ್ಯರ ಲೋಕಾಯುಕ್ತ ತಂಡ ನೋಟುಗಳನ್ನು ತೆಗೆಯಲು ಪ್ರಯತ್ನಿಸಿತು. ಆದರೆ ಸಾಧ್ಯವಾಗದಿದ್ದಾಗ ಗಜೇಂದ್ರ ಸಿಂಗ್​ನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದರು. ನಂತರ ಹಣವನ್ನು ವಾಪಸ್​ ತೆಗೆಯಲಾಯಿತು. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಜೇಂದ್ರ ಸಿಂಗ್​ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

Posted by Vidyamaana on 2023-03-25 05:08:39 |

Share: | | | | |


ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜಾಗದಲ್ಲಿ ಆಶ್ಲೇಷ ಬಲಿ ಪೂಜೆ, ಅರ್ಧ ಏಕಾಹ ಭಜನೆ, ಜನಜಾಗೃತಿ ಸಭೆ

ಪುತ್ತೂರು: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ನಗರದ ಬೊಳುವಾರಿನಲ್ಲಿರುವ ಜಾಗದಲ್ಲಿ ಆಶ್ಲೇಷ ಬಲಿ, ಅರ್ಧ ಏಕಾಹ ಭಜನೆ ಹಾಗೂ ಜನಜಾಗೃತಿ ಸಭೆ ಶುಕ್ರವಾರ ರಾತ್ರಿ ನಡೆಯಿತು.

ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಯಬಾರದು ಎಂಬ ಹೋರಾಟಕ್ಕೆ ಸಂಘಟನೆ ಮೂಲಕ ಯಶಸ್ಸು ಸಿಕ್ಕಿದೆ. ಬೊಳುವಾರಿ ಕುಕ್ಕೆ ಕ್ಷೇತ್ರಕ್ಕೆ ಜಾಗ ದಾನ ಕೊಟ್ಟವರು ಬ್ರಾಹ್ಮಣರು. ಈ ಜಾಗವನ್ನು ಮತ್ತೆ ಸ್ವಾಧೀನ ಪಡೆಯಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಾಗಲಿ, ಅಧಿಕಾರಿಗಳ ತಂಡಗಳಾಗಲಿ ಮುಂದೆ ಬಂದಿಲ್ಲ. ಇದೀಗ ಹಿಂದೂ ಜಾಗರಣಾ ವೇದಿಕೆ ಹೋರಾಟದ ಫಲವಾಗಿ ಜಾಗವನ್ನು ಮತ್ತೆ ದೇವಸ್ಥಾನದ ಹೆಸರಿನಲ್ಲಿ ಪಡೆಯುವಂತಾಗಿದ್ದು, ಈ ಮೂಲಕ ಹಿಂದೂ ಜಾಗರಣ ವೇದಿಕೆ ಧರ್ಮ ಜಾಗೃತಿ ಮಾಡಿದೆ ಎಂದರು.


ಬ್ರಹ್ಮಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿ ದಿಕ್ಸೂಚಿ ಭಾಷಣ ಮಾಡಿ, ಆತ್ಮ ಸ್ಥೈರ್ಯದೊಂದಿಗೆ ಮುನ್ನುಗ್ಗುವ ಸಂಘ ಜಗತ್ತಿನಲ್ಲಿದ್ದರೆ ಅದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಸಂಘ ಪರಿವಾರದ ಸಂಘಟನೆ. ಈ ನಿಟ್ಟಿನಲ್ಲಿ ನಾವು ಸ್ವಾಭಿಮಾನಿಯಾಗಿ ಎದ್ದು ನಿಂತರೆ ಯಾವ ಕಾರ್ಯವನ್ನು ಮಾಡಲು ಸಾಧ್ಯವಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ ಎಂದ ಅವರು, ಈ ಜಾಗದಲ್ಲಿ ಭವಿಷ್ಯತ್ ನಲ್ಲಿ ಹಿಂದೂ ಸಮಾಜಕ್ಕೆ ಉಪಯೋಗವಾಗುವ ಮಂದಿರವನ್ನು ನಿರ್ಮಾಣ ಮಾಡುವ ತೀರ್ಮಾನ ಮಾಡಲಾಗಿದೆ. ಅದಕ್ಕೆ ದೇವರ ಅನುಗ್ರಹ ಇದೆ ಎಂದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೊಳುವಾರಿನಲ್ಲಿ ಇಂದು ಅನ್ಯರ ಪಾಲಾಗಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಕೊಡುವಲ್ಲಿ ಸಂಘಟನೆಯ ಪಾತ್ರ ಮಹತ್ವದಾಗಿದೆ ಎಂದರು.


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಯ ಮಾತನಾಡಿ, ಭಜನೆ ಮೂಲಕ ಎಲ್ಲರೂ ಒಂದುಗೂಡಲು ಸಾಧ್ಯ. ಹಿಂದೂ ಜಾಗರಣ ವೇದಿಕೆ ಭಜನೆ ಮೂಲಕ ಧರ್ಮ ಜಾಗೃತಿ ಮೂಡಿಸಿದೆ. ಸುಬಬ್ರಹ್ಮಣ್ಯದ ಪುಣ್ಯ ಭೂಮಿಯನ್ನು ನಮಗೆ ಒಪ್ಪಿಸುವ ಕೆಲಸ ಮಾಡಿದ ಹಿಂದೂ ಜಾಗರಣ ವೇದಿಕೆ ಮಾಡಿದ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.


ರವಿರಾಜ ಶೆಟ್ಟಿ ಕಡಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ದಿನೇಶ್ ಪಂಜಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯ ಪ್ರಮುಖರಾದ ಚಿನ್ಮಯ್ ರೈ ಈಶ್ವರಮಂಗಲ, ರಾಕೇಶ್ ಪಂಜೋಡಿ, ನರಸಿಂಹ ಮಾಣಿ, ಜಯರಾಮ, ಪ್ರೀತಮ್, ಚರಣ್, ಅಭಿ, ಅಶೋಕ್ ಸ್ವಾಮೀಜಿಗಳು ಹಾಗೂ ರವೀಶ ತಂತ್ರಿಯವರನ್ನು ಫಲಪುಷ್ಪ ನೀಡಿ ಗೌರವಿಸಿದರು. ತಾಲೂಕು ಸಮಿತಿ ಸದಸ್ಯರಾದ ಮನೀಶ್ ದರ್ಬೆ, ಲತೇಶ್ ಕೆಮ್ಮಾಯಿ ಅತಿಥಿಗಳನ್ನು ಗೌರವಿಸಿದರು. ಪ್ರೀತಿ ಕುಡ್ವ ಪ್ರಾರ್ಥಿಸಿದರು. ಹಿಂಜಾವೇ ತಾಲೂಕು ಸಹ ಸಂಚಾಲಕ ಸ್ವಸ್ತಿಕ್ ಮೇಗಿನಗುತ್ತು ಸ್ವಾಗತಿಸಿದರು. ಸಹಸಂಚಾಲಕ ಗಿರೀಶ್ ಮಡಪ್ಪಾಡಿ ವಂದಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆಶ್ಲೇಷ ಬಲಿ ಪೂಜೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಿತು. ಬೆಳಿಗ್ಗೆ ವೇ.ಮೂ. ರಾಜೇಶ್ ಭಟ್ ಗಣಪತಿ ಹೋಮ ನೆರವೇರಿಸಿದರು

ಸಾರ್ವಜನಿಕರೇ ಗಮನಿಸಿ : ಗುಡುಗು-ಸಿಡಿಲು ಹಾನಿಯಿಂದ ಸಂರಕ್ಷಣೆಗೆ ಈ ಕ್ರಮಗಳನ್ನು ಅನುಸರಿಸಿ

Posted by Vidyamaana on 2024-04-20 20:42:12 |

Share: | | | | |


ಸಾರ್ವಜನಿಕರೇ ಗಮನಿಸಿ :  ಗುಡುಗು-ಸಿಡಿಲು ಹಾನಿಯಿಂದ ಸಂರಕ್ಷಣೆಗೆ ಈ ಕ್ರಮಗಳನ್ನು ಅನುಸರಿಸಿ

ಬೆಂಗಳೂರು : ಆರಂಭದ ಮಳೆಗಾಲದಲ್ಲಿ ಕಂಡುಬರಬಹುದಾದ ಗುಡುಗು-ಸಿಡಿಲು ಹಾನಿಯಿಂದ ಸಂರಕ್ಷಣೆಗೆ ಅಗತ್ಯ ಕ್ರಮ ಅನುಸರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಕಂಡುಬರುವ ಮಳೆಗಾಲದ ಆರಂಭದ ಹಂತದಲ್ಲಿ ತೀವ್ರತರದ ಗುಡುಗು-ಸಿಡಿಲು ಕಂಡುಬರುವುದು ಸಾಮಾನ್ಯವಾಗಿದ್ದು, ಜೊತೆಗೆ ಬಿರುಸಾಗಿ ಗಾಳಿ ಸಹಿತ ಮಳೆ ಕಂಡುಬರುವುದು ವಾಡಿಕೆಯಾಗಿದೆ.

ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Posted by Vidyamaana on 2023-12-05 09:00:22 |

Share: | | | | |


ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ

30ರ ತನಕ ಜಾರಿಯಲ್ಲಿರಲಿದೆ.



ಡಿ.8 ಅಧಿಸೂಚನೆ ಪ್ರಕಟ


ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ


ಡಿ.16 ನಾಮಪತ್ರ ಪರಿಶೀಲನೆ


ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ


ಡಿ.27 ಮತದಾನ

 ಡಿ.30 ಮತ ಎಣಿಕೆ



Leave a Comment: