ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

Posted by Vidyamaana on 2023-04-21 05:11:29 |

Share: | | | | |


ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣ, ದ. ಕನ್ನಡ ಪ್ರಥಮ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9ರಿಂದ 29ರವರೆಗೆ ನಡೆದಿತ್ತು.

ಈ ಬಾರಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಈ ಬಾರಿ ಒಂದು ಬದಲಾವಣೆ ಮಾಡಲಾಗಿದ್ದು, ಮರು ಮೌಲ್ಯಮಾಪನದಲ್ಲಿ ಕನಿಷ್ಠ ಒಂದು ಮಾರ್ಕ್ ಬದಲಾವಣೆಯಾದರೂ ಅದನ್ನು ಮಾರ್ಕ್ ಕಾರ್ಡ್ ನಲ್ಲಿ ಅಳವಡಿಸಲಾಗುವುದುhttps://karresults.nic.in ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಬಹುದು.

ನರಿಮೊಗರು: ಜುಲೈ 1ರಂದು ನೂತನ ಶಾಸಕರಿಗೆ ಅಭಿನಂದನೆ

Posted by Vidyamaana on 2023-06-30 15:51:57 |

Share: | | | | |


ನರಿಮೊಗರು: ಜುಲೈ 1ರಂದು ನೂತನ ಶಾಸಕರಿಗೆ ಅಭಿನಂದನೆ

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಜುಲೈ 1ರಂದು ಪುರುಷರಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.

ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಸನ್ಮಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

Posted by Vidyamaana on 2023-08-18 10:36:47 |

Share: | | | | |


ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು,  ಅವುಗಳಲ್ಲೂಂದು ತೆಂಗಿನಕಾಯಿಯ ಗೆರಟೆಯಿಂದ ಉತ್ಪನ್ನಗಳ ತಯಾರಿಸುವುದು. ಈ ಕುರಿತು ತರಬೇತಿಗಳನ್ನು ಸಂಸ್ಥೆಯು ನೀಡುತ್ತಿದ್ದು ತರಬೇತಿಯ ಪ್ರಗತಿ ಪರಿಶೀಲನಾ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ಆ. 16ರಂದು ನಡೆದಿದೆ.

ಈ ಸಂದರ್ಭ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತದ ಅಧಿಕಾರಿಗಳು ಉಪಸ್ಥಿತರಿದ್ದರು. 

ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್.ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ., NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಉಪಸ್ಥಿತರಿದ್ದರು.

ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರು ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಪಯಾಜ್‌ - ಸಚಿನ್‌ ಪರಾರಿ

Posted by Vidyamaana on 2023-06-01 08:12:26 |

Share: | | | | |


ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ:  ಪಯಾಜ್‌ - ಸಚಿನ್‌ ಪರಾರಿ

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್‌ ಮತ್ತು ಸಚಿನ್‌ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ:ಸುಳ್ಯ ಮೂಲದ ನಾಗರಾಜ್ ಸ್ಥಳದಲ್ಲೇ ಮೃತ್ಯು

Posted by Vidyamaana on 2023-06-28 09:38:12 |

Share: | | | | |


ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ:ಸುಳ್ಯ ಮೂಲದ ನಾಗರಾಜ್ ಸ್ಥಳದಲ್ಲೇ ಮೃತ್ಯು

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಕಲ್ಲರ್ಪೆಯಲ್ಲಿ ಜೂ 28 ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ.ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. 

ಮಂಗಳೂರು: ಡೆಂಗ್ಯೂ ಜ್ವರಕ್ಕೆ ಗೆ ನಾಟೆಕಲ್ ನಿವಾಸಿ ನವಾಜ್ ಮೃತ್ಯು

Posted by Vidyamaana on 2023-12-22 20:25:35 |

Share: | | | | |


ಮಂಗಳೂರು: ಡೆಂಗ್ಯೂ ಜ್ವರಕ್ಕೆ ಗೆ ನಾಟೆಕಲ್ ನಿವಾಸಿ ನವಾಜ್  ಮೃತ್ಯು

ಮಂಗಳೂರು: ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (32) ಎಂಬ ಯುವಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ ಗುರುವಾರ ಜ್ವರ ತೀವ್ರವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಾವನ್ನಪ್ಪಿದ್ದಾರೆ. ಮೃತರು ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಜಿ ಎಲ್‌ ಜಿ ಫಿಶರೀಸ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು

Recent News


Leave a Comment: