KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?ಸೂಲಿಬೆಲೆ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದ ಮಧು ಬಂಗಾರಪ್ಪ... ಕಾರಣವೇನು ಗೊತ್ತಾ

Posted by Vidyamaana on 2024-02-07 12:40:04 |

Share: | | | | |


ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?ಸೂಲಿಬೆಲೆ ವಿರುದ್ಧ  ಏಕವಚನದಲ್ಲೇ ಹರಿಹಾಯ್ದಿದ್ದ ಮಧು ಬಂಗಾರಪ್ಪ... ಕಾರಣವೇನು ಗೊತ್ತಾ

ಬೆಂಗಳೂರು, ಫೆ 07: ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..? ಇದೇ ತಾನೆ ವಿಷ ಬೀಜ ಬಿತ್ತೋ ಕೆಲಸ..? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದಾರೆ.


ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡುವಾಗ ಶೀಕ್ಷಣ ಸಚಿವ ಮಧು ಬಂಗಾರಪ್ಪ, ಸೂಲಿಬೆಲೆ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಮಾಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲೂನ ಮಾಜ್‌ಗಾಗಿ ಪರೀಕ್ಷೆಯ ಸಮಯವೇ ಬದಲು ಮಾಡಿದೆ ಎಂದು ಸುಳ್ಳು ಸುದ್ದಿ ಹಬ್ಬಿದ್ದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ದೂರುಗಳು ಬಂದಿವೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ಮಾಧ್ಯಮಗೋಷ್ಠಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, "ಅವನ್ಯಾರು ಚಕ್ರವರ್ತಿ ಸೂಲಿಬೆಲೆನಾ ತಲೆಹರಟೆ, ಅವ್ನಗೇನ್ ಮಾನ ಮಾರ್ಯಾದೆ ಇದೆಯಾ..?. ಪುಸ್ತಕದಲ್ಲಿ ಮಕ್ಕಳನ್ನು ದಿಕ್ಕು ತಪ್ಪಿಸುವ ಕೆಲಸ ಬರೆದಿದ್ದರು, ನಾನು ಬಂದಾಗ ಅದಕ್ಕೆ ಹೇಳಿದ್ದು ಅದನ್ನು ಕಿತ್ತು ಬಿಸಾಡುತ್ತೇನೆ ಅಂತ. ಅದು ಕೂಡ ದೊಡ್ಡ ಚರ್ಚೆ ಮಾಡಿದ್ದರು. ಇಂಥದ್ದನ್ನು ಕಿತ್ತು ಬಿಸಾಕದೆ ಇನ್ನೇನು ಮಾಡೋದು? ಹೊಲಸನ್ನು ಮನೆಯಲ್ಲಿ ಇಟ್ಟುಕೊಳ್ತೀರಾ?"ಎಂದು ಸಚಿವರು ಪ್ರಶ್ನಿಸಿದ್ದಾರೆ.


ಅವ ಮತ್ತೆ ಮೊನ್ನೆ ಟ್ವೀಟ್ ಮಾಡಿದ್ದಾನೆ. ಮಾನ ಮರ್ಯಾದೆ ಇಲ್ಲ... ಹತ್ತನೆ ಕ್ಲಾಸ್ ಪರೀಕ್ಷೆ ದಿನ ಒಂಬತ್ತು ಗಂಟೆಗೆ ಮಾಡ್ತಿರಾ ಮಾರ್ಚ್ 1 ಕ್ಕೆ ಶುಕ್ರವಾರ ಯಾಕೆ

ಎರಡು ಗಂಟೆಗೆ... ವೈ ...? ನಮಾಜ್‌ಗಾ? ಅಂತ ಟ್ವಿಟ್ ಮಾಡಿದ್ದಾರೆ. ವಿಷ ಬೀಜ ಬಿತ್ತೋದು ಇಂತಹವರೆ ಅಲ್ವಾ? ದೂರುಗಳು ಬಂದಿವೆ. ಕಂಪ್ಲೈಂಟ್ಸ್ ಹೋಗುತ್ತಿವೆ ಅವರ ಮೇಲೆ" ಎಂದಿದ್ದಾರೆ


ಮಾರ್ಚ್ 1 ರಿಂದ ಸೆಕೆಂಡ್ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಅದೇ ಶಾಲೆಯಲ್ಲಿ ಬೆಳಗ್ಗೆ ದ್ವಿತೀಯ ಪಿಯುಸಿ ಪರೀಕ್ಷೆ ಇದೆ. ಮಧ್ಯಾಹ್ನಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿದೆ. ಪರೀಕ್ಷೆಯನ್ನು ಪುಶ್ ಮಾಡಿರೋದಷ್ಟೆ. ಇವರಿಗೆ ಒಂದು ಕಾಮನ್ ಸೆನ್ಸ್ ಇಲ್ವಲ್ಲ? ಇವರು ಒಂದು ಪಠ್ಯ ಪುಸ್ತಕ ಪರೀಷ್ಕರಣಗೆ ಅಧ್ಯಕ್ಷನೋ ಸುಡುಗಾಡೋ ಆಗಿದ್ದರು. ಮಾನ ಮರ್ಯಾದೆ ಇದೆಯಾ ಇವರಿಗೆ.. ಒಂದು ಕಡೆ ಕೆಲಸ ಮಾಡಿ ಎಲೆಕ್ಷನ್ ಬಂದ ತಕ್ಷಣ ತಲೆ ಎತ್ತುತ್ತವೆ. ಇದೆಲ್ಲಾ ಬಿಟ್ಟು ಬಿಡಿ ಬಿಜೆಪಿ. ಇವು ಯಾವುದು ನಡೆಯುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ.


ಇಡೀ ದೇಶದ ಬಗ್ಗೆ ನಾನು ಮಾತಾಡಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಭಾವನಾತ್ಮಕ ವಿಷಯ ಇಟ್ಟುಕೊಂಡು ಬಂದರೆ ನಡೆಯುವುದಿಲ್ಲ. ನೀವು ವಿಷಯಗಳನ್ನು ಭಾವನಾತ್ಮ ಮಾಡಿದಷ್ಟು ಈ ರಾಜ್ಯದ ಜನ ಮತ್ತಷ್ಟು ಶಿಕ್ಷೆ ಕೊಡ್ತಾರೆ. ಗ್ಯಾರಂಟಿ, ಓಟು, ನಂಬಿಕೆ, ವಿಶ್ವಾಸ ಉಳಿಸಿಕೊಂಡಿರೋದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ" ಎಂದು ವಿಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.


ಎಸ್‌ಎಸ್‌ಎಲ್‌ಸಿಯ ಎಲ್ಲ ಪರೀಕ್ಷೆಗಳು ಬೆಳಗೆಗ ಒಂಬತ್ತು ಗಂಟೆಗೆ ನಡೆಸಲಾಗುತ್ತಿದೆ. ಆದರೆ, ಮಾರ್ಚ್ ಒಂದರಂದು ಮಾತ್ರ ಒಂದು ಪರೀಕ್ಷೆಯನ್ನು ಮಧ್ಯಾಹ್ನ ನಡೆಸಲಾಗುತ್ತಿದೆ. ಅವತ್ತು ಶುಕ್ರವಾರ. ಅಂದೇ ದ್ವಿತೀಯ ಪಿಯುಸಿ ಪರೀಕ್ಷೆಗಳು ಕೂಡ ಆರಂಭವಾಗಲಿವೆ. ಹಾಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಧ್ಯಾಹ್ನಕ್ಕೆ ಪುಶ್ ಮಾಡಲಾಗಿದೆ.


ಆದರೆ, ವಿಷಯ ತಿಳಿಯದೇ ನಮಾಜಿಗೋಸ್ಕರ ಪರೀಕ್ಷಾ ಸಮಯವನ್ನೇ ಬದಲಾಯಿಸಲಾಗಿದೆಯೇ ಅಂತ ಚಕ್ರವರ್ತಿ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ. ಈ ಟ್ವೀಟನ್ನು ಉಲ್ಲೇಖಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಅನ್ನು ಟೀಕಿಸಿದೆ.

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Posted by Vidyamaana on 2024-04-15 21:29:18 |

Share: | | | | |


ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನೋಟ ಮತ ಪತ್ರ ಬಿಡುಗಡೆಗೊಳಿಸಲಾಯಿತು.

ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮದ ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. ನಮಗೆ ಮೇಲಿನವರು ಯಾರು ಅರ್ಹರಲ್ಲ ಎಂಬ ಉದ್ದೇಶದಿಂದ ನೋಟಾ ಅಭಿಯಾನ ಮಾಡುತ್ತಿದ್ದೇವೆ. ೧೨ ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಹಲವು ಕೇಸು ಹಾಕಿದ್ದಾರೆ. ಇಲ್ಲಿ ಶಾಶಾಂಗ ಸತ್ತಿದೆ. ಹಾಗಾಗಿ ನಾವು ನೋಟಾ ಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆಯಿದೆ ಎಂದರು. 

ಬಬಿಯಾ ನಿರ್ಗಮನದ ಕೊರತೆ ತುಂಬಿದ ಹೊಸ ಮೊಸಳೆ!

Posted by Vidyamaana on 2023-11-11 21:27:11 |

Share: | | | | |


ಬಬಿಯಾ ನಿರ್ಗಮನದ ಕೊರತೆ ತುಂಬಿದ ಹೊಸ ಮೊಸಳೆ!

ಕಾಸರಗೋಡು:ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿದ ಬಳಿಕ ಭಕ್ತರಲ್ಲಿ ಬೇಸರದ ಛಾಯೆ ಮೂಡಿತ್ತು. ಎಲ್ಲರೂ ದೇವರಲ್ಲಿ ಇನ್ನೊಂದು ಬಬಿಯಾದ ಪ್ರತಿಬಿಂಬವನ್ನು ಕಾಣಲು ಕಾತುರದಿಂದ ಕಾಯುತ್ತಿದ್ದರು.


ಇದೀಗ ಭಕ್ತಾದಿಗಳ ಆಸೆಯಂತೆ ಅನಂತಪುರ ಕ್ಷೇತ್ರದಲ್ಲಿ ಮತ್ತೊಂದು ಮೊಸಳೆ ಕಾಣ ಸಿಕ್ಕಿದೆ. ಒಂದು ವಾರದ ಹಿಂದೆ ಭಕ್ತಾದಿಯೊಬ್ಬರು ಮೊಸಳೆ ಕಂಡಂತೆ ಆಯಿತು ಅಂದರೂ ಸಾಕ್ಷ್ಯಾಧಾರ ಇಲ್ಲದಿದ್ದರಿಂದ ನಂಬಲು ಅಸಾಧ್ಯವಾಗಿತ್ತು. ಇದೀಗ ಕ್ಷೇತ್ರದ ಆಡಳಿತ ಮಂಡಳಿ ಮೊಸಳೆ ಇರುವುದನ್ನು ಖಚಿತಪಡಿಸಿದೆ. ದೇವರ ಪ್ರತಿ ಬಿಂಬ ಎಂದೇ ಹೇಳಲ್ಪಡುತ್ತಿರುವ ಮೊಸಳೆ ಈಗ ಕಾಣಿಸುತ್ತಿರುವುದು ಭಕ್ತಾದಿಗಳಲ್ಲಿ ಖುಷಿ ತಂದಿದೆ. ದೇವರ ಪವಾಡವೋ, ಕಾರಣಿಕ ಶಕ್ತಿಯೋ ಎಂಬಂತೆ ಕ್ಷೇತ್ರದ ಕೆರೆಯಲ್ಲಿ ಮೊಸಳೆ ಪತ್ತೆಯಾಗಿದ್ದು ಕ್ಷೇತ್ರಕ್ಕೆ ಮತ್ತಷ್ಟು ಆಸ್ತಿಕರನ್ನು ಆಹ್ವಾನಿಸಲಿದೆ.

ಬೆಳ್ತಂಗಡಿ : ಏಕಾಏಕಿ ಏರಿದ ನದಿಗಳ ನೀರು ; ಭೂಕುಸಿತದ ಶಂಕೆ

Posted by Vidyamaana on 2024-08-20 07:50:38 |

Share: | | | | |


ಬೆಳ್ತಂಗಡಿ : ಏಕಾಏಕಿ ಏರಿದ ನದಿಗಳ ನೀರು ; ಭೂಕುಸಿತದ ಶಂಕೆ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಏಕಾಏಕಿ ನೀರು ಉಕ್ಕಿ ಹರಿದು ಸೋಮವಾರ ಸಂಜೆ ಪ್ರವಾಹದ ಪರಿಸ್ಥಿತಿ ಕಂಡು ಬಂತು.ತಾಲೂಕಿನಾದ್ಯಂತ ಹೆಚ್ಚಿನ ಮಳೆ ಇಲ್ಲದಿದ್ದರೂ ಈ ನದಿಗಳ ಉಗಮ ಸ್ಥಾನದಲ್ಲಿ ಭಾರಿ ಮಳೆಯಾಗಿರುವ ಸಾಧ್ಯತೆ ಇದ್ದು ನದಿಗಳಲ್ಲಿ ಪ್ರವಾಹದಂತೆ ನೀರು ಹರಿದಿದೆ.

ಜುಲೈ ತಿಂಗಳಲ್ಲಿ ಆಗಾಗ ಸಾಮಾನ್ಯ ಪ್ರವಾಹ ಸ್ಥಿತಿಯಲ್ಲಿ ಹರಿದ ಈ ನದಿಗಳು ಮತ್ತೆ ಸೋಮವಾರ ಪ್ರವಾಹದ ಭೀತಿ ಸೃಷ್ಟಿಸಿದವು ತಾಲೂಕಿನ ಹೆಚ್ಚಿನ ಕಡೆಗಳಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು.

ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಕಡೆ ನದಿ ನೀರು ದಡಮೀರಿ ಹರಿದಿದ್ದು ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿದೆ. ಕಡಿರುದ್ಯಾವರದಿಂದ 10 ಕಿಮಿ ದೂರದಲ್ಲಿರುವ ಬಂಡಾಜೆ ಜಲಪಾತ ತುಂಬಿ ಹರಿಯುವ ದೃಶ್ಯ ಕಡಿರುದ್ಯಾವರದಲ್ಲಿ ಗೋಚರಿಸುತ್ತಿತ್ತು.

ಸುಳ್ಯ | ವಿದ್ಯುತ್ ಲೈನ್‌ ದುರಸ್ತಿ ವೇಳೆ ಲೈನ್ ಆನ್ ಮಾಡಲು ಪ್ರಯತ್ನಿಸಿದ ಆರೋಪ: ಯುವಕ ಸೆರೆ

Posted by Vidyamaana on 2024-05-31 05:18:10 |

Share: | | | | |


ಸುಳ್ಯ | ವಿದ್ಯುತ್ ಲೈನ್‌ ದುರಸ್ತಿ ವೇಳೆ ಲೈನ್ ಆನ್ ಮಾಡಲು ಪ್ರಯತ್ನಿಸಿದ ಆರೋಪ: ಯುವಕ ಸೆರೆ

ಸುಳ್ಯ : ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಘಟನೆ ಪಂಜದ ಕರಿಕ್ಕಳದಲ್ಲಿ ನಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿ ಕರಿಕ್ಕಳ ಸಮೀಪ ವಿದ್ಯುತ್ ಲೈನ್‍ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Posted by Vidyamaana on 2024-05-28 14:38:01 |

Share: | | | | |


ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಪುತ್ತೂರು : ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ) ಹಾಗೂ ಕೇಶವ ಪಡೀಲ್ ಇವರ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲ ದಿನಗಳ ಹಿಂದೆ ಪುತ್ತೂರು‌ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿದ್ದು, ದೂರುದಾರರ ಪರ ಸರ್ಕಾರಿ ಅಭಿಯೋಜಕರಾದ ಜಯಂತಿ ವಾದಮಂಡಿಸಿದ್ದರು

Recent News


Leave a Comment: