ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Posted by Vidyamaana on 2023-11-03 04:24:27 |

Share: | | | | |


ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. 


ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ ನಡೆದಿತ್ತು. ಎಂಟು  ಆರೋಪಿಗಳ ಪೈಕಿ ಅಭಿಲಾಷ್ ಮತ್ತು ಸುನಿಲ್ ಇವರಿಗೆ ಈಗ ಜಾಮೀನು ಲಭಿಸಿದೆ. ಆರು ಮಂದಿಗೆ ಈ ಮೊದಲೇ ಜಾಮೀನು ಸಿಕ್ಕಿತ್ತು. 


ಜಾಮೀನು ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ, ಒಂದು ವರ್ಷದ ಮೇಲೆ ಆರೋಪಿಯಾಗಿ ಜೈಲಿನಲ್ಲಿದ್ದಾರೆಂಬ ವಾದಕ್ಕೆ ಪುರಸ್ಕರಿಸಿದ್ದಾರೆ. ಆರೋಪಿಗಳ ಪರವಾಗಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿದ್ದರು. 


ಮಸೂದ್ ಕೊಲೆಗೆ ಪ್ರತೀಕಾರ ಎನ್ನುವಂತೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಈ ಎರಡೂ ಕೃತ್ಯಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ದ್ವೇಷಕ್ಕೆ ಕಾರಣವಾಗಿತ್ತು.

ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

Posted by Vidyamaana on 2024-06-12 16:27:10 |

Share: | | | | |


ಬೆಳಗಾವಿ ಕೋರ್ಟ್ ಹಾಲ್ ನಲ್ಲೇ ಪಾಕ್ ಪರ ಘೋಷಣೆ ಕೂಗಿದ ಜೈಲು ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ

ಬೆಳಗಾವಿ, ಜೂನ್ 12: ಮಂಗಳೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಜಯೇಶ್ ಪೂಜಾರಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದು ಇಂದು ಕೋರ್ಟಿಗೆ ಹಾಜರುಪಡಿಸಲು ಕರೆತಂದಿದ್ದಾಗ ಕೃತ್ಯ ನಡೆದಿದೆ. ಕೋರ್ಟ್ ಒಳ ಭಾಗದಲ್ಲೇ ವಕೀಲರು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿದ್ದಾರೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿದ್ದಾರೆ.

ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಂಭ್ರಮದ ಚಾಲನೆ:ಭವ್ಯ ಮೆರವಣಿಗೆಯಲ್ಲಿ ವೈಭವದ ಹಸಿರು ಹೊರೆ ಕಾಣಿಕೆ ಸಮರ್ಪಣೆ

Posted by Vidyamaana on 2023-01-12 12:21:23 |

Share: | | | | |


ಅಗಳಿ ಶ್ರೀ ಸದಾಶಿವ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಂಭ್ರಮದ ಚಾಲನೆ:ಭವ್ಯ ಮೆರವಣಿಗೆಯಲ್ಲಿ ವೈಭವದ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಿಗೆ ಜ 11ರಂದು ಸಂಭ್ರಮದ ಚಾಲನೆ ನೀಡಲಾಯಿತು.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

Posted by Vidyamaana on 2023-10-23 10:49:15 |

Share: | | | | |


ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ.


ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ.


ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ.

ವಿಸಿಟರ್​ ಪಾಸ್ ಅವಾಂತರ​: ಸ್ಪೀಕರ್ ಎದುರು ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್​ ಸಿಂಹ

Posted by Vidyamaana on 2023-12-13 21:29:16 |

Share: | | | | |


ವಿಸಿಟರ್​ ಪಾಸ್ ಅವಾಂತರ​: ಸ್ಪೀಕರ್ ಎದುರು ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್​ ಸಿಂಹ

ನವದೆಹಲಿ: ಇಂದು ಲೋಕಸಭಾ ಕಲಾಪದ ವೇಳೆ ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್​ ಕುರ್ಚಿಯತ್ತ ನುಗ್ಗಿದ ಇಬ್ಬರು ಕಿಡಿಗೇಡಿಗಳಲ್ಲಿ ಓರ್ವ ಸಂಸದ ಪ್ರತಾಪ್​ ಸಿಂಹ ಹೆಸರಲ್ಲಿ ವಿಸಿಟರ್​ ಪಾಸ್​ ಪಡೆದಿದ್ದು, ಈ ವಿಚಾರವಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರನ್ನು ಭೇಟಿ ಮಾಡಿರುವ ಪ್ರತಾಪ್​ ಸಿಂಹ ವಿವರಣೆ ನೀಡಿದ್ದಾರೆ.ಘಟನೆಯ ಬೆನ್ನಲ್ಲೇ ಇಂದು ಸಂಜೆ ಸ್ಪೀಕರ್​ ಕಚೇರಿಗೆ ತೆರಳಿದ ಪ್ರತಾಪ್​ ಸಿಂಹ, ಆರೋಪಿ ಸಾಗರ್​ ಶರ್ಮಾ ಅವರ ತಂದೆ ಶಂಕರ್​ ಲಾಲ್​ ಶರ್ಮಾ ನಮ್ಮ ಕ್ಷೇತ್ರ ಮೈಸೂರಿನಲ್ಲಿ ನೆಲೆಸಿದ್ದಾರೆ. ಹೊಸ ಸಂಸತ್​ ಭವನವನ್ನು ನೋಡಬೇಕೆಂದು ಅನೇಕ ಬಾರಿ ವಿಸಿಟರ್​ ಪಾಸ್​ಗಾಗಿ ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.


ಸಾಗರ್ ಶರ್ಮಾ, ಸಂಸತ್ತಿಗೆ ಭೇಟಿ ನೀಡಲು ತಮ್ಮ ಆಪ್ತ ಸಹಾಯಕ ಮತ್ತು ತಮ್ಮ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದರು. ಇದನ್ನು ಹೊರತುಪಡಿಸಿ ಹೆಚ್ಚುವರಿ ಮಾಹಿತಿ ಇಲ್ಲ ಎಂದು ಸ್ಪೀಕರ್​ ಮುಂದೆ ಹೇಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.


ಇಂದು ಸದನದ ಒಳಗೆ ಕಲರ್​ ಗ್ಯಾಸ್​ ಕ್ಯಾನಿಸ್ಟರ್​ನಿಂದ ಗದ್ದಲ ಎಬ್ಬಿಸಿದ ಇಬ್ಬರು ಕಿಡಿಗೇಡಿಗಳನ್ನು ಸಾಗರ್​ ಶರ್ಮ ಮತ್ತು ಮನೋರಂಜನ್​ ಡಿ ಎಂದು ಗುರುತಿಸಲಾಗಿದೆ. ಇದರಲ್ಲಿ ಸಾಗರ್​ ಶರ್ಮಾ ಬಳಿ

ಪ್ರತಾಪ್​ ಸಿಂಹ ವಿಸಿಟರ್​ ಪಾಸ್​ ಪತ್ತೆಯಾಗಿದ್ದು, ಈ ವಿಚಾರವನ್ನು ಉಚ್ಛಾಟಿತ ಬಿಎಸ್​ಪಿ ಸಂಸದ ಡ್ಯಾನಿಶ್​ ಅಲಿ ಮಾಧ್ಯಮಗಳ ಮೂಲಕ ಬೆಳಕಿಗೆ ತಂದರು. ಬಳಿಕ ಪ್ರತಿಪಕ್ಷಗಳು ಪ್ರತಾಪ್​ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್​ ಸಿಂಹ ಅವರ ಕಚೇರಿಗೆ ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಸಹ ಹಾಕಿದ್ದಾರೆ. ಮುತ್ತಿಗೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದ್ದಾರೆ. ಸಂಸದರ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಸದನದ ಒಳಗೆ ಗದ್ದಲ ಏರ್ಪಟ್ಟ ಸಂದರ್ಭದಲ್ಲೇ ಸಂಸತ್ತಿನ ಹೊರಭಾಗದಲ್ಲಿ ಓರ್ವ ಮಹಿಳೆ ಮತ್ತು ಯುವಕ ಕಲರ್ ಗ್ಯಾಸ್​ ಸಿಂಪಡಿಸಿ, ಘೋಷಣೆ ಕೂಗಿ

ಪ್ರತಿಭಟನೆ ನಡೆಸಿದರು. ಇವರನ್ನು ಅನ್ಮೋಲ್​ ಶಿಂಧೆ ಮತ್ತು ನೀಲಂ ಎಂದು ಗುರುತಿಸಲಾಗಿದೆ. ನಾಲ್ವರು ಸಹ ಒಬ್ಬರಿಗೊಬ್ಬರು ಪರಿಚಿತರು ಎಂಬುದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕದಲ್ಲಿದ್ದ ನಾಲ್ವರು ಸಂಚು ರೂಪಿಸಿದ್ದರು. ಈ ಸಂಚಿನಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದಾರೆ. ಇಬ್ಬರು ಸದನದ ಒಳಗೆ, ಮತ್ತಿಬ್ಬರು ಸಂಸತ್ತಿನ ಹೊರಗೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದರೆ, ಇನ್ನಿಬ್ಬರು ಶಂಕಿತರು ಪರಾರಿಯಾಗಿದ್ದಾರೆ. ಅವರಿಗಾಗಿ ತನಿಖಾ ಏಜೆನ್ಸಿಗಳು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ.


ಐವರು ವ್ಯಕ್ತಿಗಳು ಗುರುಗ್ರಾಮ್‌ನಲ್ಲಿ ಲಲಿತ್ ಝಾ ಎಂದು ಗುರುತಿಸಲಾದ ವ್ಯಕ್ತಿಯ ನಿವಾಸದಲ್ಲಿ ಒಟ್ಟಿಗೆ ತಂಗಿದ್ದರು ಎಂದು ಮೂಲಗಳು ತಿಳಿಸಿವೆ. ಸದ್ಯ ಐವರ ಗುರುತು ದೃಢಪಟ್ಟಿದ್ದು, ಆರನೇ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.ಶಂಕರ್​ ಲಾಲ್​ ಶರ್ಮರ ಪುತ್ರ ಸಾಗರ್​ ಶರ್ಮ ಎಂಬಾತ ಮೈಸೂರು ಲೋಕಸಭಾ ಸಂಸದ ಪ್ರತಾಪ್​ ಸಿಂಹ ಹೆಸರಿನಲ್ಲಿ ಪಾಸ್​ ಪಡೆದು ಪ್ರೇಕ್ಷಕರ ಗ್ಯಾಲರಿಗೆ ಆಗಮಿಸಿದ್ದ. ಮತ್ತೊಬ್ಬ ಆರೋಪಿ ಮನೋರಂಜನ್​ ಡಿ ಮೈಸೂರಿನ ನಿವಾಸಿ. ಬೆಂಗಳೂರಿನ ವಿವೇಕಾನಂದ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಇ ವ್ಯಾಸಾಂಗ ಮಾಡಿದ್ದಾನೆ. ಇವರಿಬ್ಬರು ಪ್ರೇಕ್ಷಕರ ಗ್ಯಾಲರಿಯ ಚೇಂಬರ್​ನಿಂದ ಜಿಗಿದು ಸ್ಪೀಕರ್​ ಕುರ್ಚಿಯತ್ತ ನುಗ್ಗಿದರು. ತಕ್ಷಣ ಅವರನ್ನು ಅಲ್ಲಿಯೇ ಇದ್ದ ಕೆಲವು ಸಂಸದರು ಹಿಡಿದುಕೊಂಡರು.


ಸಂಸತ್ತಿನ ಹೊರಗಡೆ ಕಲರ್​ ಗ್ಯಾಸ್​ ಸಿಂಪಡಿಸಿ ಸರ್ಕಾರಿ ವಿರೋಧಿ ಘೋಷಣೆ ಕೂಗುತ್ತಿದ್ದ ನೀಲಂ ಎಂಬಾಕೆ, ಹರಿಯಾಣದ ಹಿಸರ್​ನಲ್ಲಿ ಪಿಜಿಯಲ್ಲಿ ವಾಸವಿದ್ದಳು. ಹರಿಯಾಣದ ನಾಗರಿಕ ಸೇವಾ ಪರೀಕ್ಷೆಗೆ ತಯಾರಾಗುತ್ತಿದ್ದಳು. ಇನ್ನೊಬ್ಬ ಆರೋಪಿ ಅನ್ಮೋಲ್​ ಶಿಂಧೆ ಮಹಾರಾಷ್ಟ್ರ ಲಾತೂರ್ ಜಿಲ್ಲೆಯವನು. ನೀಲಂ ಅಥವಾ ಅನ್ಮೋಲ್ ಮೊಬೈಲ್ ಫೋನ್ ತಂದಿರಲಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರ ಬಳಿ ಯಾವುದೇ ಬ್ಯಾಗ್ ಅಥವಾ ಗುರುತಿನ ಪುರಾವೆಯೂ ಇರಲಿಲ್ಲ. ಅವರು ತಾವಾಗಿಯೇ ಸಂಸತ್ತನ್ನು ತಲುಪಿದರು ಮತ್ತು ಯಾವುದೇ ಸಂಘಟನೆಯೊಂದಿಗೆ ತಮ್ಮ ಸಂಪರ್ಕವನ್ನು ನಿರಾಕರಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ಮುಂದುವರಿದಿದೆ.


ಲೋಕಸಭೆ ಸ್ಪೀಕರ್​ ಹೇಳಿದ್ದೇನು?

ಘಟನೆಯ ಬಗ್ಗೆ ಮಾತನಾಡಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಶೂನ್ಯ ಸಮಯದಲ್ಲಿ ನಡೆದ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ಸಹ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇದು ಕೇವಲ ಹೊಗೆ ಎಂದು ಕಂಡುಬಂದಿದೆ. ಹೊಗೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದರು ಹೇಳಿದರು. ಸದ್ಯ ಇಬ್ಬರನ್ನೂ ಬಂಧಿಸಲಾಗಿದ್ದು, ಅವರಲ್ಲಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಸತ್ತಿನ ಹೊರಗಿದ್ದ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು

ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಇನ್ನಿಲ್ಲ

Posted by Vidyamaana on 2024-01-09 17:53:32 |

Share: | | | | |


ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್  ಖಾನ್ ಇನ್ನಿಲ್ಲ

ಕೊಲ್ಕತ್ತಾ ಮೂಲದ ಆಸ್ಪತ್ರೆಯಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ( Renowned music maestro Ust

non

Rashid Khan ) ಇನ್ನಿಲ್ಲ. 55 ವರ್ಷದ ಕಲಾವಿದ ವಾತಾಯನ ಮತ್ತು ಆಮ್ಲಜನಕದ ಬೆಂಬಲವನ್ನು ಪಡೆಯುತ್ತಿದ್ದರು. ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ಅನುಭವಿಸಿದ ನಂತರ ಸಂಗೀತಗಾರನ ಆರೋಗ್ಯವು ಕುಸಿಯಿತು. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಅವರು ಆರಂಭದಲ್ಲಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದಾಗ್ಯೂ, ನಂತರದ ಹಂತದಲ್ಲಿ, ಅವರು ಕೋಲ್ಕತ್ತಾದಲ್ಲಿ ಪ್ರತ್ಯೇಕವಾಗಿ ತಮ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದರು.


ಅವರ ಆಪ್ತ ಮೂಲಗಳ ಪ್ರಕಾರ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗೆ ದಾಖಲಾದಾಗಿನಿಂದ, ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಜರಾದ ವೈದ್ಯರ ತಂಡವು ಅವರ ವೈದ್ಯಕೀಯ ಸ್ಥಿತಿಯ ಸುಧಾರಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ.


ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಇನ್ನಿಲ್ಲವಾಗಿದ್ದಾರೆ.



Leave a Comment: