ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

Posted by Vidyamaana on 2023-10-23 21:09:08 |

Share: | | | | |


ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್​ನಲ್ಲಿ ಮೃತಪಟ್ಟಿದ್ದಾರೆ.


ವಾಘ್ ಬಕ್ರೀ ಟೀ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್‌ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್‌ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.


ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್‌ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್‌ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್‌ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್‌ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್‌ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.

ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

Posted by Vidyamaana on 2024-07-21 06:51:40 |

Share: | | | | |


ಕಡಬ ತಿಮರಡ್ಡಿ ನಿವಾಸಿ ಅಝರ್ ಆತ್ಮಹತ್ಯೆ

ಕಡಬ, ಜು.21. ಜೀವನದಲ್ಲಿ ಜಿಗುಪ್ಪೆಗೊಂಡು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ.

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

Posted by Vidyamaana on 2024-04-03 16:49:20 |

Share: | | | | |


ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

Posted by Vidyamaana on 2024-03-02 07:21:16 |

Share: | | | | |


ಬೆಂಗಳೂರು :ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ : ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ.

ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಕ್ಯಾಪ್ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.ಬ್ಯಾಗ್ ಇಟ್ಟು ಒಂದು ಘಂಟೆಯ ನಂತರ ಬ್ಲಾಸ್ಟ್ ಆಗಿದ್ದು, ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿ ಯಾರೆಂದು ಆಲ್ ಮೋಸ್ಟ್ ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಸಿಸಿಬಿಯಿಂದ ಕಾರ್ಯಾಚರಣೆ ನಡೆಸಿದ್ದು, ಕೆಲವೇ ಘಂಟೆಗಳಲ್ಲಿ ಆರೋಪಿಯನ್ನ ಬಂಧನ ಮಾಡಲಾಗತ್ತದೆ ಎಂದು ಅವರು ಹೇಳಿದರು.

ಶಂಕಿತ 28-30 ವರ್ಷ ವಯಸ್ಸಿನವನಾಗಿದ್ದು, BMTC ಬಸ್‌ನಲ್ಲಿ ರಾಮೇಶ್ವರಂ ಕೆಫೆಗೆ ಬಂದು ಕೂಪನ್ ಖರೀದಿಸಿ, ರವಾ ಇಡ್ಲಿ ಆರ್ಡರ್ ಮಾಡಿ, ಬ್ಯಾಗ್ ಇಟ್ಟು ಹೊರಟುಹೋಗಿದ್ದಾನೆ. ಶೋಧ ಕಾರ್ಯಕ್ಕಾಗಿ 8 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆತನ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ.

ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

Posted by Vidyamaana on 2024-03-18 09:42:56 |

Share: | | | | |


ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.

ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.

ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಂಗಳೂರು : ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಪ್ರಕರಣ

Posted by Vidyamaana on 2023-09-05 21:16:18 |

Share: | | | | |


ಮಂಗಳೂರು : ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಪ್ರಕರಣ

ಮಂಗಳೂರು: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿಸೋಜ (34) ಬಂಧಿತ ಆರೋಪಿ.


ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು. 


ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್‌ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್‌ಐ ಶ್ರೀಮತಿ ಲತಾ, ಎಎಸ್‌ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು

Recent News


Leave a Comment: