ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಕಡಬ: ರೈಲು ನಿಲ್ದಾಣದಲ್ಲಿ ಅನಿಲ ಸೋರಿಕೆ ಗುಮಾನಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್.

Posted by Vidyamaana on 2023-02-09 04:32:46 |

Share: | | | | |


ಕಡಬ: ರೈಲು ನಿಲ್ದಾಣದಲ್ಲಿ  ಅನಿಲ ಸೋರಿಕೆ ಗುಮಾನಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್.

ಕಡಬ : ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ | ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ತಣ್ಣೀರ್ ಪಂತ :ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಬಾರ್ಯ ನಿವಾಸಿ ಶಿವಾನಂದ ಮೃತ್ಯು

Posted by Vidyamaana on 2024-07-21 09:56:44 |

Share: | | | | |


ತಣ್ಣೀರ್ ಪಂತ :ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ :ಬಾರ್ಯ ನಿವಾಸಿ ಶಿವಾನಂದ ಮೃತ್ಯು

ತಣ್ಣೀರುಪoತ : ತಣ್ಣೀರುಪoತ ಗ್ರಾಮದ ತುರ್ಕಳಿಕೆ ಎಂಬಲ್ಲಿ ಜುಲೈ 20 ರಂದು ರಾತ್ರಿ ಬೈಕ್ ಗಳೆರಡು ಡಿಕ್ಕಿ ಸಂಭವಿಸಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ, ನಾಲ್ವರಿಗೆ ಗಾಯಗಳಾಗಿವೆ ಎಂಬ ವರದಿಯಾಗಿದೆ.

ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Posted by Vidyamaana on 2023-12-05 09:00:22 |

Share: | | | | |


ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ

30ರ ತನಕ ಜಾರಿಯಲ್ಲಿರಲಿದೆ.



ಡಿ.8 ಅಧಿಸೂಚನೆ ಪ್ರಕಟ


ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ


ಡಿ.16 ನಾಮಪತ್ರ ಪರಿಶೀಲನೆ


ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ


ಡಿ.27 ಮತದಾನ

 ಡಿ.30 ಮತ ಎಣಿಕೆ

ಏ.9 -ಜೈನ ಭವನದಲ್ಲಿ ಬಿಜೆಪಿ ಮಹಿಳಾ ಸಮಾವೇಶ

Posted by Vidyamaana on 2024-04-07 18:00:09 |

Share: | | | | |


ಏ.9 -ಜೈನ ಭವನದಲ್ಲಿ ಬಿಜೆಪಿ ಮಹಿಳಾ ಸಮಾವೇಶ

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ.


ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ, ಮಹಿಳಾ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ, ಉಜ್ವಲ ಯೋಜನೆ, ಮನೆ ನಿರ್ಮಾಣ ಮುಂತಾದ ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಕಾನೂನಾತ್ಮಕವಾಗಿ ಒತ್ತು ನೀಡಿದ್ದಾರೆ ಎಂದು ತಿಳಿಸಿದರು. 

ಆ.16 :ಪುತ್ತೂರು - ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ವರಮಹಾಲಕ್ಷ್ಮೀ ಪೂಜಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ

Posted by Vidyamaana on 2024-08-13 16:36:11 |

Share: | | | | |


ಆ.16 :ಪುತ್ತೂರು - ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ವರಮಹಾಲಕ್ಷ್ಮೀ ಪೂಜಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ

ಪುತ್ತೂರು : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಮತ್ತು ವರಮಹಾಲಕ್ಷ್ಮೀ ಪೂಜಾ ಸಮಿತಿ, ಪುತ್ತೂರು ಇವರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತಪೂಜೆ ಆ.16 ರಂದು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

Posted by Vidyamaana on 2023-04-26 03:18:31 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

ಬೆಳಿಗ್ಗೆ 9.30ಕ್ಕೆ ಅರಿಯಡ್ಕ, 10.30ಕ್ಕೆ ಮಾಡ್ನೂರು, 11.30ಕ್ಕೆ ಕೊಳ್ತಿಗೆ, ಮಧ್ಯಾಹ್ನ 2.30ಕ್ಕೆ ನೆಟ್ಟಣಿಗೆ ಮುಡ್ನೂರು, 3.30ಕ್ಕೆ ಪಡುವನ್ನೂರು, 4.30ಕ್ಕೆ ಬಡಗನ್ನೂರು, ಸಂಜೆ 6ಕ್ಕೆ ಬೆಟ್ಟಂಪಾಡಿ, 7 ಗಂಟೆಗೆ ನಗರದಲ್ಲಿ ಪ್ರಚಾರ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.

Recent News


Leave a Comment: