KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

Posted by Vidyamaana on 2024-05-24 11:06:49 |

Share: | | | | |


ಸಾವಿನ ಬಗ್ಗೆ ಅನುಮಾನ : ದಫನ ಮಾಡಿದ 18 ದಿನಗಳ ಬಳಿಕ ಮರಣೋತ್ತರ ಪರೀಕ್ಷೆ

ಕನ್ಯಾನ : ಸಂಶಯಾಸ್ಪದವಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಶವ ದಫನ ಮಾಡಿದ ಬಳಿಕ, ಸಾವಿನಲ್ಲಿ ಸಂಶಯವಿದೆ ಎಂದು ಮೃತ ವ್ಯಕ್ತಿಯ ಸಹೋದರ ಮಂಜೇಶ್ವರ ಠಾಣೆಗೆ ದೂರು ನೀಡಿದ್ದು, ನ್ಯಾಯಾಲಯದ ಆದೇಶದಂತೆ ಕನ್ಯಾನ ಬಂಡಿತ್ತಡ್ಕ ಮಸೀದಿ ಆವರಣದಲ್ಲಿ ದಫನ ಮಾಡಿದ್ದ ಶವವನ್ನು 18 ದಿನಗಳ ಬಳಿಕ ಮೇಲೆತ್ತಿ ಮರಣೋತ್ತರ ಪರೀಕ್ಷೆಯನ್ನು ಗುರುವಾರ ನಡೆಸಲಾಯಿತು.

ಕೇರಳದ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಅವರ ದೇಹವನ್ನು ಕನ್ಯಾನದ ಬಂಡಿತ್ತಡ್ಕದಲ್ಲಿರುವ ರಹ್ಮಾನಿಯಾ ಜುಮಾ ಮಸೀದಿ ಆವರಣದಲ್ಲಿ ದಫನ ಮಾಡಲಾಗಿತ್ತು. ಆ ಶವವನ್ನು ಬಂಟ್ವಾಳ ತಹಶೀಲ್ದಾರ್ ಡಿ.ಅರ್ಚನಾ ಭಟ್, ಮಂಜೇಶ್ವರ ಸಿಪಿಐ ರಾಜೀವ್ ಕುಮಾರ್ ಕೆ., ಕೇರಳ ಆರೋಗ್ಯ ಇಲಾಖೆಯ ಡಾ.ಹರಿಕೃಷ್ಣ ಕಾಸರಗೋಡು, ಯೆನೆಪೋಯ ವಿಧಿವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಕಿಶೋರ್ ಕುಮಾರ್ ಬಿ., ವಿಟ್ಲ ಪೊಲೀಸರ ಸಮ್ಮುಖದಲ್ಲಿ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ದೇಹದ ಅಂಗಾಗಳ ಮಾದರಿಯನ್ನು ವಿಧಿವಿಜ್ಞಾನ ತಂಡ ಪಡೆದುಕೊಂಡಿದ್ದು, ತನಿಖೆಗಾಗಿ ಯೆನೆಪೋಯ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳ ಸೂಚನೆಯಂತೆ ಬಂದಿದ್ದು, ವರದಿಯನ್ನು ಕೇರಳದ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

Posted by Vidyamaana on 2023-12-01 12:44:28 |

Share: | | | | |


ಶಾಲೆಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಡಿ.ಕೆ ಶಿವಕುಮಾರ್

ಬೆಂಗಳೂರು: ತಮ್ಮ ನಿವಾಸದ ಎದುರು ರಸ್ತೆಯಿಂದಾಚೆಯಿರುವ ಬೇಬಿ ಸಿಟ್ಟಿಂಗ್ ಗೆ ಬಾಂಬ್ ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನೀವ್ ಬೇಬಿ ಸಿಟ್ಟಿಂಗ್ಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸೂಕ್ತ ತನಿಖೆ ನಡೆಸಲು ಸೂಚಿಸಿದ್ದಾರೆ.


ಬಳಿಕ ಪ್ರತಿಕ್ರಿಯಿಸಿ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ, ಟಿವಿಯಲ್ಲಿ ವಿಷಯ ತಿಳಿದು ಗಾಬರಿ ಆದೆ. ಇದೊಂದು ಹುಸಿ ಕರೆ ಅಂತ ಮೇಲ್ನೋಟಕ್ಕೆ ಗೊತ್ತಾಗ್ತಿದೆ. 8-10 ಬಾರಿ ಹೀಗೆ ಹುಸಿ ಕರೆ ಮಾಡ್ತಾರೆ ಯಾವಗಲಾದರೂ ನಿಜವಾಗಿಯೂ ಬಾಂಬ್ ಇಡಬಹುದು ಯಾವುದನ್ನೂ ಕಡೆಗಣಿಸೋಕೆ ಆಗಲ್ಲ ಎಂದು ಹೇಳಿದ್ದಾರೆ.

ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

Posted by Vidyamaana on 2023-12-14 20:18:19 |

Share: | | | | |


ನಿತ್ಯ ದುಡಿ ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ

ಬೆಳಗಾವಿ: ಬೆಳಗಾವಿ ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣಸೌಧದ (Suvarna soudha) ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಮದ್ಯ ಪ್ರಿಯರು ಕೂಡ ಪ್ರತಿಭಟನೆ ನಡೆಸಿದ್ದು, ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ (Santosh l

non

) ಸುಸ್ತಾಗಿದ್ದಾರೆ.


ಸುವರ್ಣಗಾರ್ಡನ್ ಟೆಂಟ್ ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, "ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ" ಎಂಬ ಘೋಷವಾಕ್ಯದಡಿ ಹೋರಾಟ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತರ ಸಮಸ್ಯೆ ಆಲಿಸಿದರು. ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ವರಿಗೊಳಗಾಗಿದ್ದಾರೆ.


ಮದ್ಯಪ್ರಿಯರ ಬೇಡಿಕೆಗಳೇನು?


• ಕುಡುಕ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು


• ಮದ್ಯ ಮಾರಾಟದಿಂದ ಬರುವ ಆದಾಯದ ಶೇ. 10 ರಷ್ಟು ಮೀಸಲಿಡಬೇಕು


• ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು


• ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು


• ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು


• ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು


• ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು


• ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು


• ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು


• ಬಾರ್‌ಗಳ ಬಳಿ ಆಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು


• ಮದ್ಯಪ್ರಿಯರ ಭವನ ಸ್ಥಾಪಿಸಬೇಕು


ಹೀಗೆ ವಿವಿಧ ಬೇಡಿಕೆಗಳನ್ನು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

ಬೋಳಿಯಾ‌ರ್: ಇಬ್ಬರಿಗೆ ಚೂರಿ ಇರಿತ

Posted by Vidyamaana on 2024-06-10 05:17:29 |

Share: | | | | |


ಬೋಳಿಯಾ‌ರ್: ಇಬ್ಬರಿಗೆ ಚೂರಿ ಇರಿತ

ಕೊಣಾಜೆ : ಮುಡಿಪು ಸಮೀಪದ ಬೋಳಿಯಾರು ಬಳಿ ತಂಡವೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದ್ದು, ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಪರಿಷತ್​ ಚುನಾವಣೆ: ಜೆಡಿಎಸ್​ಗೆ ಶಾಕ್​ ನೀಡಿದ ಬಿಜೆಪಿ, ತುರ್ತು ಸಭೆ ಕರೆದ HDK

Posted by Vidyamaana on 2024-05-12 12:11:43 |

Share: | | | | |


ವಿಧಾನಪರಿಷತ್​ ಚುನಾವಣೆ: ಜೆಡಿಎಸ್​ಗೆ ಶಾಕ್​ ನೀಡಿದ ಬಿಜೆಪಿ, ತುರ್ತು ಸಭೆ ಕರೆದ HDK

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಪರಿಷತ್​ ಚುನಾವಣೆಯ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಮೈತ್ರಿ ಪಕ್ಷ ಜೆಡಿಎಸ್​ಗೆ ಒಂದು ಸ್ಥಾನವನ್ನಷ್ಟೆ ನೀಡಿರುವುದು ಜೆಡಿಎಸ್ ಪಕ್ಷದಲ್ಲಿ ಬಿರುಗಾಳಿಯನ್ನು ಬೀಸಿದೆ. ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಜೆಡಿಎಸ್​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಮಂಡ್ಯ ನಾಯಕರ ಸಭೆಯನ್ನು ಕರೆದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ವಿಧಾನ ಪರಿಷತ್​ ಚುನಾವಣೆಯಲ್ಲೂ ಮೈತ್ರಿ ಮುಂದಿವರೆಸಿರುವ ಜೆಡಿಎಸ್​ ಮತ್ತು ಬಿಜೆಪಿ, ಒಟ್ಟು 6 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಮಾಡಿಕೊಂಡಿದ್ದು ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ.

ಕಾರು ತಡೆದು ಹಲ್ಲೆ ನಡೆಸಿ ಹಣ ಚಿನ್ನ ಕಿತ್ತುಕೊಂಡ ಪ್ರಕರಣ

Posted by Vidyamaana on 2023-08-25 05:47:40 |

Share: | | | | |


ಕಾರು ತಡೆದು ಹಲ್ಲೆ ನಡೆಸಿ ಹಣ ಚಿನ್ನ ಕಿತ್ತುಕೊಂಡ ಪ್ರಕರಣ

ಪುತ್ತೂರು : ಕೆಲವು ದಿನಗಳ ಹಿಂದೆ ಉದ್ಯಮಿಯೋರ್ವರಿಗೆ ಹಲ್ಲೆ ನಡೆಸಿ ಹಣ ಮತ್ತು ಉಂಗುರವನ್ನು ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರಿಗೆ ಜಿಲ್ಲಾ ನ್ಯಾಯಾಲಯ ನೀರಿಕ್ಷಣಾ ಜಾಮೀನು ಮಂಜೂರು ಮಾಡಿದೆ.

 ಬೆಂಗಳೂರಿನಲ್ಲಿ ಪಿ ಆರ್ ಸಿಕ್ಸ್ ಗ್ರೂಪ್ನಲ್ಲಿ ರಿಯಲ್ಎಸ್ಟೇಟ್ ಉದ್ಯಮ  ಮಾಡಿಕೊಂಡಿದ್ದು, ಊರಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಪ್ರದೀಪ್

ಪಾಂಬಾರು ಎಂಬವರು ನೀಡಿದ್ದ ದೂರನ ಮೇರೆಗೆ ಮನೋಜ್ ಭಂಡಾರಿ ಮತ್ತು  ಜಿತನ್ ರೈ  ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಜುಲೈ 18ರಂದು ತಾನು ಮತ್ತು ಸ್ನೇಹಿತ ದೇವರಾಜ್ ರವರು ಕಾರಿನಲ್ಲಿ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಾಗಿರುವ  ಭಾವನನ್ನು ನೋಡಲು ಬಂದು ಊಟ ಮತ್ತು ನೀರನ್ನು ತರಲು ಆಸ್ಪತ್ರೆ ಸಮೀಪದ ಮೆಟ್ರೋಡೆನ್ ಹೋಟೆಲ್ ಗೆ ಬಂದು ಕಾರನ್ನು ತಿರುಗಿಸಿ ತೆರಳುತ್ತಿರುವ ಸಮಯ ರಾತ್ರಿ 10:45ರ ಸುಮಾರಿಗೆ ಹಿಂಬದಿ ಯಿಂದ ಡಸ್ಟರ್ ಕಾರು ಬಂದಿದ್ದು ಅವರು ಕಾರನ್ನು ಅಡ್ಡವಾಗಿ ನಿಲ್ಲಿಸಿ ಅದರಲ್ಲಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದು ಹೋಗಿದ್ದರು. ತಾನು ಮತ್ತು ದೇವರಾಜ್ ರವರು ಆಸ್ಪತ್ರೆಗೆ ಹೋಗಿ ಮನೆ ಕಡೆ ಹೋಗಲೆಂದು ಕಾರಿನಲ್ಲಿ ಲಿನೆಟ್  ಜಂಕ್ಷನ್ ತಲುಪಿದಾಗ ಅದೇ ಕಾರು ಪೆಟ್ರೋಲ್ ಪಂಪ್ ನಿಂದ

ಏಕಾಏಕಿಯಾಗಿ  ರಸ್ತೆಗೆ ಬಂದು ನಮ್ಮ ಕಾರಿಗೆ ಅಡ್ಡ ನಿಲ್ಲಿಸಿದ್ದರು. ನಾನು ಕಾರಿನಿಂದ ಇಳಿದ ಸಂದರ್ಭ ಡಸ್ಟರ್ ಕಾರಿನಲ್ಲಿದ್ದ ಇಬ್ಬರೂ ನನ್ನ ಕಾರಿನ ಡೋರ್ ಎಳೆದು ನನಗೆ ಹಲ್ಲೆ ನಡೆಸಿ ಪ್ಯಾಂಟಿನ ಕಿಸೆಯಲ್ಲಿದ್ದ ಪರ್ಸ್ ತೆಗೆದು ಅದರಲ್ಲಿದ್ದ ಸುಮಾರು 9000 ರೂ.ನಗದು ಮತ್ತು ಬಲ ಕೈ ಬೆರಳಲ್ಲಿದ್ದ ಐದು ಗ್ರಾಂ ತೂಕದ ಚಿನ್ನದ ಉಂಗುರವನ್ನು ಕಿತ್ತುಕೊಂಡು ಹೋಗಿದ್ದರು. ಎಂದು ಆರೋಪಿಸಿ ಪ್ರದೀಪ್  ಪಾಂಬರು ಅವರು ದೂರು ನೀಡಿದ್ದರು. ಈ ಪ್ರಕರಣದ ಆರೋಪಿಗಳಾಗಿರುವ ಮನೋಜ್ ಭಂಡಾರಿ ಮತ್ತು ಜಿತನ್ ರೈಯವರಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಖ್ಯಾತ ವಕೀಲ ಮಹೇಶ್ ಕಜೆ ವಾದಿಸಿದ್ದರು.

Recent News


Leave a Comment: