ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

Posted by Vidyamaana on 2024-04-17 04:22:35 |

Share: | | | | |


ಕಿನ್ನಿಗೋಳಿ, ಮೂಡುಬಿದ್ರೆ ಪೇಟೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಭರ್ಜರಿ ಪ್ರಚಾರ

ಮಂಗಳೂರು, ಎ.16: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮೂಲ್ಕಿ- ಮೂಡುಬಿದ್ರೆ ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ ನಡೆಸಿದ್ದಾರೆ. ಅಭ್ಯರ್ಥಿಯಾದ ಬಳಿಕ ಚೌಟ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸಂಚಾರ ನಡೆಸಿದ್ದು, ಹಳೆಯಂಗಡಿ, ಕಿನ್ನಿಗೋಳಿ ಪೇಟೆ ಮತ್ತು ಮೂಡುಬಿದ್ರೆ ಪೇಟೆಯಲ್ಲಿ ಉದ್ದಕ್ಕೂ ಸಂಚರಿಸಿ ಅಂಗಡಿ, ಬೀದಿಗಳಲ್ಲಿ ಜನರ ಬಳಿ ಮತಯಾಚನೆ ಮಾಡಿದ್ದಾರೆ.


ಬೆಳಗ್ಗೆ ತೋಕೂರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ ಬ್ರಿಜೇಶ್ ಚೌಟ, ಬಿಜೆಪಿ ಕಾರ್ಯಕರ್ತರ ಜೊತೆಗೆ ದೇವರಲ್ಲಿ ಪ್ರಾರ್ಥಿಸಿ ಮತಯಾಚನೆಗೆ ತೊಡಗಿದ್ದಾರೆ. ಬಳಿಕ ಹಳೆಯಂಗಡಿ ಮತ್ತು ಕಿನ್ನಿಗೋಳಿ ಪೇಟೆಯಲ್ಲಿ ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಬಿಜೆಪಿ ಪ್ರಮುಖರ ಜೊತೆಗೆ ಸಂಚರಿಸಿದ ಚೌಟರಿಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ. ಮತದಾರರು ಕೈಕುಲುಕಿ ಬಿಜೆಪಿ ಮತ್ತು ಮೋದಿಗೆ ಜೈಕಾರ ಕೂಗಿದ್ದಾರೆ. ಇದರ ನಡುವೆ ಬಳ್ಕುಂಜೆ ವಿಠೋಧರ ಮಂದಿರ, ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿಯಿತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದ್ದಾರೆ.

ವಿಟ್ಲ : ಮಳೆಗೆ ಮರ ಬಿದ್ದು ಮನೆಗೆ ಹಾನಿ

Posted by Vidyamaana on 2023-05-12 11:28:43 |

Share: | | | | |


ವಿಟ್ಲ : ಮಳೆಗೆ ಮರ ಬಿದ್ದು ಮನೆಗೆ ಹಾನಿ

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ಭಾರೀ ಮಳೆಗಾಳಿಗೆ ಮನೆ ಮೇಲೆ ಮರ ಬಿದ್ದು ಹಾನಿಗೊಂಡ ಮನೆಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದರು. 

ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

Posted by Vidyamaana on 2024-03-18 20:29:07 |

Share: | | | | |


ಕಾಸರಗೋಡು ಖಾಸಗಿ ಬಸ್ ಪಲ್ಟಿ, ಚಾಲಕ ಚೇತನ್ ಕುಮಾರ್ ಮೃತ್ಯು ; 20 ಮಂದಿ ಪ್ರಯಾಣಿಕರಿಗೆ ಗಾಯ

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.  ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ವ್ಯಕ್ತಿ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ತಂದ ಕ್ರೇನ್ ಬಳಸಿ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಲಾಯಿತು. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕೊಣಾಜೆ: ಲಂಚ ಸ್ವೀಕರಿಸುತ್ತಿದ್ದ ಆರೋಪ; ಕೆಎಸ್‌ಆರ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ

Posted by Vidyamaana on 2024-07-11 06:35:21 |

Share: | | | | |


ಕೊಣಾಜೆ: ಲಂಚ ಸ್ವೀಕರಿಸುತ್ತಿದ್ದ ಆರೋಪ; ಕೆಎಸ್‌ಆರ್‌ಪಿ ಪೊಲೀಸ್ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ

ಬೆಂಗಳೂರು : ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ ಇನ್ಸ್‌ಪೆಕ್ಟರ್ ಒಬ್ಬರು ಪೊಲೀಸ್ ಕಾನ್ಸ್‌ಸ್ಟೇಬಲ್ ಕೈಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ.ಕೋಣಾಜೆಯಲ್ಲಿರುವ ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆಯ 7ನೇ ಬೆಟಾಲಿಯನ್‌ನ ನಿರೀಕ್ಷಕ ಮಹಮ್ಮದ್ ಹಾರಿಸ್ ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್ ಅನಿಲ್ ಕುಮಾರ್ ಅವರಿಂದ ಕರ್ತವ್ಯ ನಿಯೋಜನೆಗೆ ಸಂಬಂಧಿಸಿ 18 ಸಾವಿರ ರೂ.

ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ

Posted by Vidyamaana on 2023-07-20 02:06:10 |

Share: | | | | |


ಗೃಹಲಕ್ಷ್ಮೀ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾದ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಯಿತು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಿರಿಯ ಸಚಿವರು ಶಾಸಕರು, ಕಾಂಗ್ರೆಸ್ ನಾಯಕಿಯರು ಸೇರಿ ಹಲವರು ಉಪಸ್ಥಿತರಿದ್ದರು.


ಗೃಹಲಕ್ಷ್ಮೀ ಯೋಜನೆ ಸಂಬಂಧ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಎಲ್‌ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯಜಮಾನಿ ಅಥವಾ ಅವಳ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ ಎಂದು ಸರಕಾರ ಮಾರ್ಗಸೂಚಿ ಹೊರಡಿಸಿದೆ.


ಬೇಕಾದ ದಾಖಲೆಗಳು

ಪಡಿತರ ಚೀಟಿಯ ಸಂಖ್ಯೆ. ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಯ ಪಾಸ್‌ಬುಕ್‌/ಫ‌ಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್‌ ಖಾತೆಯ ವಿವರನೋಂದಣಿ ವಿಧಾನ

ಫ‌ಲಾನುಭವಿಗಳು ಗ್ರಾಮ ಒನ್‌, ಬೆಂಗಳೂರು ಒನ್‌, ಕರ್ನಾಟಕ ಒನ್‌ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತೀ ಫ‌ಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್‌ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು.

ಫೆ.21-22 : ಬನ್ನೂರು ಆನೆಮಜಲು ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Posted by Vidyamaana on 2024-02-21 04:36:15 |

Share: | | | | |


ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ,ತಿಳಿಸಿದ್ದಾರೆ.


ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30 ರಿಂದ ಗುಡ್ಡಪ್ಪ ಗೌಡ ಬಲ್ಯ ತಂಡದಿಂದ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.


ಫೆ.22 ಗುರುವಾರ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ನಾಗತಂಬಿಲ,  ಬ್ರಹ್ಮಕಲಶ ಪೂಜೆ, 11.33 ರ ವೃಷಭಲಗ್ನ ಸುಮುಹೂರ್ತದಲ್ಲಿ  ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆದು ಬಳಿಕ ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತ್ರಪಣೆ ಜರಗಲಿದೆ. ಸಾಂಸ್ಕೃತಿ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 8 ರಿಂದ ವಿವಿಧ ಭಜನಾ ತಂಡದಿಂದ ಭಜನೆ, ಮಧ್ಯಾಹ್ನ 2 ರಿಂದ ಹರಿದಾಸ ಮಂಡ್ಯ ಮಧುಸೂದನ್ ತಂಡದಿಂದ ಹರಿಕಥಾ ಕಾಲಕ್ಷೇಪ ‘ಗಿರಿಜಾ ಕಲ್ಯಾಣ’, ಸಂಜೆ 4 ರಿಂದ ಪುತ್ತೂರು ಜಗದೀಶ್ ಆಚಾರ್ಯ ತಂಡದಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ ಎಂದು ಅವರು ತಿಳಿಸಿದರು.

ಸಂಜೆ 6.30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ವಹಿಸಲಿದ್ದು, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಪೂಂಜಾ ಪಾಳ್ಗೊಳ್ಳುವರು. ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯಸವ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಮನೋಹರ್, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಅಧ್ಯಕ್ಷ ರಾಮಣ್ಣ ಗೌಡ ಹಲಂಗ, ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತಾ ಎನ್., ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.


ಪತ್ರಿಕಾಗೋಷ್ಠಿಯಲ್ಲಿ  ಪ್ರಧಾನ ಕಾರ್ಯದರ್ಶಿ ಮೌನೀಶ್ ಎನ್., ಬ್ರಹ್ಮಕಲಶೋತ್ಸವ ಸಮಿತಿ ಖಜಾಂಚಿ ರಮೇಶ್ ಗೌಡ ನೀರ್ಪಾಜೆ, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ ಉಪಸ್ಥಿತರಿದ್ದರು.

Recent News


Leave a Comment: