ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಮಂಗಳೂರು : ಮಹಿಳಾ ಸಿಬ್ಬಂದಿಗೆ ಹಲ್ಲೆ ಆರೋಪ- ಆಪತ್ ಬಾಂಧವ ಆಸಿಫ್ ಅರೆಸ್ಟ್

Posted by Vidyamaana on 2023-10-12 15:13:36 |

Share: | | | | |


ಮಂಗಳೂರು : ಮಹಿಳಾ ಸಿಬ್ಬಂದಿಗೆ ಹಲ್ಲೆ ಆರೋಪ- ಆಪತ್ ಬಾಂಧವ ಆಸಿಫ್ ಅರೆಸ್ಟ್

ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ ಆ್ಯಂಬುಲೆನ್ಸ್ ತೆರವು ಮಾಡದಿದ್ದಾಗ ಮಹಿಳಾ ಸಿಬ್ಬಂದಿ ಆಕ್ಷೇಪಿಸಿದರು. ಈ ಸಂದರ್ಭ ಆಸಿಫ್ ಮತ್ತು ಮಹಿಳಾ ಸಿಬ್ಬಂದಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ತನ್ನನ್ನು ದೂಡಿ ಹಾಕಿ ಆಸಿಫ್ ಹಲ್ಲೆ ಮಾಡಿದ್ದಾರೆ ಎಂದು ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಆಸಿಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು: ದರೋಡೆಗೊಳಗಾದ ಮನೆಗೆ ಅರುಣ್ ಪುತ್ತಿಲ ಭೇಟಿ

Posted by Vidyamaana on 2023-09-08 12:50:48 |

Share: | | | | |


ಬಡಗನ್ನೂರು: ದರೋಡೆಗೊಳಗಾದ ಮನೆಗೆ ಅರುಣ್ ಪುತ್ತಿಲ ಭೇಟಿ

ಪುತ್ತೂರು: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡ ಬಡಗನ್ನೂರು ಕುದ್ಕಾಡಿ ಗುರುಪ್ರಸಾದ್ ರೈ ಯವರ ಮನೆಗೆ ಸೆ.07ರ ಮುಂಜಾನೆ ನುಗ್ಗಿದ ಮುಸುಕುಧಾರಿ ದರೋಡೆಕೋರರ ಗುಂಪು ಮನೆಯಲ್ಲಿದ್ದವರನ್ನು ಕಟ್ಟಿಹಾಕಿ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಘಟನೆ ನಡೆದ ಮನೆಗೆ ನಿನ್ನೆ ರಾತ್ರಿ (ಸೆ.07) ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.

ಈ ಸಂದರ್ಭದಲ್ಲಿಗುರುಪ್ರಸಾದ್ ರೈ ಮತ್ತು ಅವರ ತಾಯಿಯೊಂದಿಗೆ ಮಾತನಾಡಿದ ಪುತ್ತಿಲ ಅವರು ಮನೆಮಂದಿಗೆ ಧೈರ್ಯ ತುಂಬಿದರು. 

ಪುತ್ತೂರಿನ ಗ್ರಾಮಾಂತರ ಭಾಗದ ಹಲವು ಕಡೆಗಳಲ್ಲಿ ರಾತ್ರಿ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರು ಗ್ರಾಮಾಂತರ ಭಾಗದಲ್ಲಿರಾತ್ರಿ ಬೀಟ್ ವ್ಯವಸ್ಥೆ ಮಾಡಿ ಜನಸಾಮಾನ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಮತ್ತು ಈ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಇದೇ ಸಂದರ್ಭದಲ್ಲಿ ಪುತ್ತಿಲ ಪರಿವಾರ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ.

ಬನ್ನೂರಿನಲ್ಲಿ “ನಮ್ಮ ಕ್ಲಿನಿಕ್” ಉದ್ಘಾಟನೆ – ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಲಿಯೆಂದು ಬಿಜೆಪಿ ಸರಕಾರ ಈ ಯೋಜನೆ ಜಾರಿಗೆ ತಂದಿದೆ : ಪುತ್ತೂರು ಶಾಸಕ ಸಂಜೀವ ಮಠಂದೂರು

Posted by Vidyamaana on 2023-02-18 15:54:38 |

Share: | | | | |


ಬನ್ನೂರಿನಲ್ಲಿ “ನಮ್ಮ ಕ್ಲಿನಿಕ್” ಉದ್ಘಾಟನೆ – ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಲಿಯೆಂದು ಬಿಜೆಪಿ ಸರಕಾರ ಈ ಯೋಜನೆ ಜಾರಿಗೆ ತಂದಿದೆ : ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು:ಫೆ 18 : ಜನರಿಗೆ ಉತ್ತಮ ಸೇವೆ ಲಭಿಸಬೇಕೆಂಬ ನಿಟ್ಟಿನಲ್ಲಿ ಸರ್ಕಾರ ನಮ್ಮ ಕ್ಲಿನಿಕ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಮೂಲಕ ಮನೆ ಬಾಗಿಲಿಗೆ ವೈದ್ಯರು, ಆಸ್ಪತ್ರೆಯ ವ್ಯವಸ್ಥೆ ಸಿಗಲಿದೆ. ದಿನದ 8 ಗಂಟೆ ನಮ್ಮ ಕ್ಲಿನಿಕ್ ಮೂಲಕ ಆರೋಗ್ಯ ತಪಾಸಣೆ ಕಾರ್ಯ ನಡೆಯಲಿದೆ. ಸಾರ್ವಜನಿಕರು ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಬೇಕಾಗಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಬನ್ನೂರಿನಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15 ನೇ ಹಣಕಾಸು ಯೋಜನೆಯಡಿ ನಿರ್ಮಾಣವಾದ ನಮ್ಮ ಕ್ಲಿನಿಕ್ ಉದ್ಘಾಟನೆ ನಡೆಸಿ ಮಾತನಡಿದರುಪುತ್ತೂರು ನಗರ ಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಸದಸ್ಯೆ ಗೌರಿ ಬನ್ನೂರು, ದ. ಕ. ಮಂಗಳೂರು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕಿಶೋರ್ ಕುಮಾರ್, ದ.ಕ. ಮಂಗಳೂರು ಜಿಲ್ಲಾ ಆರ್. ಇ. ಹೆಚ್. ಅಧಿಕಾರಿ ಡಾ. ರಾಜೇಶ್ ಬಿ ವಿ, ಪುತ್ತೂರು ತಾಲೂಕು ನೋಡೆಲ್ ಅಧಿಕಾರಿ ಡಾ. ಬದ್ರುದ್ದೀನ್ ಎಂ. ಎನ್, ಉಪ್ಪಿನಂಗಡಿ ಸರಕಾರಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ಕೃಷ್ಣನಂದ, ಪುತ್ತೂರು ತಾಲೂಕು ಅರೋಗ್ಯ ಅಧಿಕಾರಿ ಡಾ. ದೀಪಕ್ ರೈ ಉಪಸ್ಥಿತರಿದ್ದರು

ಕೋಡಿಂಬಾಡಿ ಗ್ರಾ.ಪಂ.ಮಾಜಿ ಸದಸ್ಯ ರಾಜೇಂದ್ರ ಆರಿಗ ನಿಧನ

Posted by Vidyamaana on 2024-05-17 08:31:28 |

Share: | | | | |


ಕೋಡಿಂಬಾಡಿ ಗ್ರಾ.ಪಂ.ಮಾಜಿ ಸದಸ್ಯ ರಾಜೇಂದ್ರ ಆರಿಗ ನಿಧನ

ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ(61ವ.)ರವರು ಮೇ 16ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

Posted by Vidyamaana on 2023-12-01 15:59:59 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.


ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಪುದುವೆಟ್ಟು ಪೈಪ್ ಲೈನ್ ನಲ್ಲಿ ಡಿಸೇಲ್ ಎಗರಿಸಿದ ಡಿಸೇಲ್ ಕಳ್ಳರು ಸಿಕ್ಕಿದ್ರು

Posted by Vidyamaana on 2024-04-04 18:54:47 |

Share: | | | | |


ಪುದುವೆಟ್ಟು ಪೈಪ್ ಲೈನ್ ನಲ್ಲಿ ಡಿಸೇಲ್ ಎಗರಿಸಿದ ಡಿಸೇಲ್ ಕಳ್ಳರು ಸಿಕ್ಕಿದ್ರು

ಬೆಳ್ತಂಗಡಿ: ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

*ಐದು ಜನ ಅರೋಪಿಗಳ ಬಂಧನ:*

Recent News


Leave a Comment: