ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಮಲಪ್ಪುರಂ:ಬೋಟ್ ಪಲ್ಟಿಯಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಜನರು ಮೃತ್ಯು

Posted by Vidyamaana on 2023-05-07 18:02:36 |

Share: | | | | |


ಮಲಪ್ಪುರಂ:ಬೋಟ್ ಪಲ್ಟಿಯಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಜನರು ಮೃತ್ಯು

ಕೇರಳ: ಬೋಟ್ ಪಲ್ಟಿಯಾಗಿ ನಾಲ್ವರು ಮಕ್ಕಳು, ಮಹಿಳೆಯರು ಸೇರಿದಂತೆ 11 ಜನರು ಮೃತಪಟ್ಟ ದಾರುಣ ಘಟನೆ ಮಲಪ್ಪುರಂ ಜಿಲ್ಲೆಯ ತಿರೂರು ತಾಲೂಕಿನ ತಾನೂರ್​ ಬಳಿ ನಡೆದಿದೆ.

ಸುಮಾರು 30ರಿಂದ 40ಕ್ಕೂ ಹೆಚ್ಚು ಪ್ರವಾಸಿಗರಿದ್ದ ಬೋಟ್ ಇಂದು(ಭಾನುವಾರ) ಸಂಜೆ ಏಳು ಗಂಟೆಗೆ ಪಲ್ಟಿಯಾಗಿ ದುರಂತ ಸಂಭವಿಸಿದೆ.ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾತ್ರಿಯಾಗಿರುವುದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗುತ್ತಿದ್ದು, ಬೋಟ್ ಈಗಲೂ ನೀರಿನಡಿಯಲ್ಲೇ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಅಗ್ನಿಶಾಮಕ ದಳ, ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ

Posted by Vidyamaana on 2024-08-19 21:26:23 |

Share: | | | | |


ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು  : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಆಗಸ್ಟ್ 29ರ ವರೆಗೆ ವಿಚಾರಣೆಯನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸೂಚನೆ ಕೊಟ್ಟಿದ್ದಾರೆ.

ಹೌದು ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ್ ಮನುಸಿಂಗ್ವಿ ವಾದ ಮಂಡಿಸುತ್ತಿದ್ದು, ಇನ್ನೂ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ ತುಷಾರ ಮೆಹ್ತಾ ವಾದ ಮಂಡಿಸಿದರು.

ಲೋಕಸಭಾ ಚುನಾವಣೆ ಹಿನ್ನಲೆ : ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

Posted by Vidyamaana on 2024-03-23 16:48:08 |

Share: | | | | |


ಲೋಕಸಭಾ ಚುನಾವಣೆ ಹಿನ್ನಲೆ : ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ

ಪುತ್ತೂರು :ಲೋಕಸಭಾ ಚುನಾವಣೆ-2024ರ (Lok Sabha Election-2024) ಅಂಗವಾಗಿ ಮತದಾರರಲ್ಲಿ (Voters) ಯಾವುದೇ ಭಯಬೇಡ ನಿಮ್ಮ ಜತೆ ನಾವಿದ್ದೇವೆ, ಮುಕ್ತವಾಗಿ ಪ್ರಜಾಪ್ರಭುತ್ವದ ತಮ್ಮ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎನ್ನುವ ಮುಂಜಾಗ್ರತೆಗಾಗಿ ಪುತ್ತೂರು ನಗರ ಹಾಗೂ ಗ್ರಾಮಾಂತರ  ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ಪೊಲೀಸ್‌ ಇಲಾಖೆ ವತಿಯಿಂದ ಪಥಸಂಚಲನ  ನಡೆಸಲಾಯಿತು.


ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ಅರುಣ್ ನಾಗೇ ಗೌಡ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅರೆ ಸೇನಾ ಪಡೆ ಜತೆ ಪೊಲೀಸ್ ಸಿಬ್ಬಂದಿಗಳು ನಗರ ಸೇರಿದಂತೆ ತಾಲೂಕಿನ ನಗರದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.ದರ್ಬೆ ವೃತ ದಿಂದ ಪ್ರಾರಂಭವಾದ ಪಥಸಂಚಲನವು ನಗರದ ವಿವಿಧ ಕಡೆ ಸಂಚರಿಸಿ, ಲೋಕಸಭಾ ಚುನಾವಣೆ ಅಂಗವಾಗಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸುವ ಕುರಿತು ಜಾಗೃತಿ ಮೂಡಿಸಲಾಯಿತು,

ಕೆಲಸಕ್ಕೆ ಸೇರಲು ಬಂದಿದ್ದ ಯುವತಿ ಪ್ರೇಮಾ ನಾಪತ್ತೆ

Posted by Vidyamaana on 2024-04-21 12:58:19 |

Share: | | | | |


ಕೆಲಸಕ್ಕೆ ಸೇರಲು ಬಂದಿದ್ದ ಯುವತಿ ಪ್ರೇಮಾ ನಾಪತ್ತೆ

ಉಡುಪಿ ಏಪ್ರಿಲ್ 20 : ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

‘ನೆಲ್ಯಾಡಿ ಧೂಳುಮಯ’ ಹೆದ್ದಾರಿ ಕಾಮಗಾರಿ ಅವಾಂತರ; ಜನರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

Posted by Vidyamaana on 2023-01-12 12:34:12 |

Share: | | | | |


‘ನೆಲ್ಯಾಡಿ ಧೂಳುಮಯ’ ಹೆದ್ದಾರಿ ಕಾಮಗಾರಿ ಅವಾಂತರ; ಜನರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

ನೆಲ್ಯಾಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದಾಗಿ ನೆಲ್ಯಾಡಿ ಪೇಟೆ ಸಂಪೂರ್ಣ ಧೂಳುಮಯಗೊಂಡಿದೆ. ದೂಳುತಿಂದು ಜನರಲ್ಲಿ ಆರೋಗ್ಯ ಸಮಸ್ಯೆ ಕಾಡಲಾರಂಭಿಸಿದ್ದು ಕೆಮ್ಮು, ಜ್ವರ, ಅಲರ್ಜಿಯಿಂದ ಶಾಲಾ ಮಕ್ಕಳು, ವರ್ತಕರು, ಗ್ರಾಮಸ್ಥರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗ ದಿನದಲ್ಲಿ ಒಂದೆರಡು ಸಲ ನೀರು ಹಾಯಿಸಲಾಗುತ್ತಿದ್ದರೂ ದೂಳಿನ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಕನಿಷ್ಠ ನಾಲ್ಕೈದು ಸಲವಾದರೂ ಹೆದ್ದಾರಿಯುದ್ದಕ್ಕೂ ನೀರು ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

Posted by Vidyamaana on 2023-05-06 10:27:51 |

Share: | | | | |


ಪುತ್ತೂರಿನಲ್ಲಿ ಬಿಜೆಪಿ ಗೆಲುವಿನ ಆಶೆಗೆ ಬಲ ತುಂಬಿದ ಯೋಗಿ ಭೇಟಿ

ಪುತ್ತೂರು : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ. ದೇವಸ್ಥಾನದ ಬಳಿಯಿಂದ ರೋಡ್‌ ಶೋ ಆರಂಭಗೊಳಿಸಿದರು.ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್‌ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಯೋಗಿ ನೋಡಲು ಜನ ಸಲು ಗಟ್ಟಿ ನಿಂತಿದ್ದು, ಯೋಗಿ ಜನತೆಯತ್ತ ಕೈ ಬೀಸಿ ಸಂಭ್ರಮಿಸಿದ್ದಾರೆ

New Categories
Recent News
Popular News


Leave a Comment: