ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಮಂಗಳೂರು ನಗರ ಪಾಲಿಕೆ ಚುನಾವಣೆ ಹಿನ್ನಲೆ - ಸಂಘಟನಾ ಉಸ್ತುವಾರಿಗಳಾಗಿ ಎಂ ಬಿ ವಿಶ್ವನಾಥ್ ರೈ - ಎಚ್. ಮಹಮ್ಮದ್ ಆಲಿ ನೇಮಕ

Posted by Vidyamaana on 2024-08-07 13:36:02 |

Share: | | | | |


ಮಂಗಳೂರು ನಗರ ಪಾಲಿಕೆ ಚುನಾವಣೆ ಹಿನ್ನಲೆ - ಸಂಘಟನಾ ಉಸ್ತುವಾರಿಗಳಾಗಿ ಎಂ ಬಿ ವಿಶ್ವನಾಥ್ ರೈ - ಎಚ್. ಮಹಮ್ಮದ್ ಆಲಿ ನೇಮಕ

ಮಂಗಳೂರು :ಮಂಗಳೂರು ನಗರ ಪಾಲಿಕೆ ಚುನಾವಣೆಯ ಸಂಘಟನಾ ಉಸ್ತುವಾರಿಯಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ್ ರೈ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ರಾದ ಎಚ್. ಮಹಮ್ಮದ್ ಆಲಿ.. ಇವರಿಬ್ಬರನ್ನು ನೇಮಕ ಗೊಳಿಸಿ ಅದೇಶಿಸಲಾಗಿದೆ.

ಎಂ ಬಿ ವಿಶ್ವನಾಥ್ ರೈ ಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕ್ರಿಯಾಶೀಲ ಅಧ್ಯಕ್ಷರಾಗಿ ಪರಿಣಾಮಕಾರಿ ರೀತಿ ಪಕ್ಷವನ್ನು ಸಂಘಟಿಸಿ ಪ್ರಖ್ಯಾತಿ ಪಡೆದವರಾಗಿರುತ್ತಾರೆ ಮತ್ತು ಎಚ್. ಮಹಮ್ಮದ್ ಆಲಿಯವರು ನಗರ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕರಾಗಿ ಪಕ್ಷ ಸಂಘಟನೆಯೊಂದಿಗೆ,

ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-10-31 17:32:07 |

Share: | | | | |


ಪುತ್ತೂರಿಗೆ ನಾಲ್ಕೇ ತಿಂಗಳಲ್ಲಿ 1010 ಕೋಟಿ ಅನುದಾನ ಕೊಯ್ಲು ಪಶು ವೈದ್ಯಕೀಯ ಕಾಲೇಜಿಗೆ ಧೂಳು ಹಿಡಿಸಿದ್ದು ಬಿಜೆಪಿ:ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು, ಅ.31: ಪುತ್ತೂರು ವಿಧಾನಸಭೆ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಒಂದು ಸಾವಿರದ ಹತ್ತು ಕೋಟಿ ಅನುದಾನ ಬಂದಿದೆ. ಅದರ ಟೆಂಡರ್ ಆಗಿದ್ದು, ಶೀಘ್ರದಲ್ಲೇ ಕಾಮಗಾರಿ ಶುರು ಮಾಡುತ್ತೇವೆ. ಕೊಯ್ಲದಲ್ಲಿ ಪಶು ವೈದ್ಯಕೀಯ ಕಾಲೇಜಿಗೆ 24 ಕೋಟಿ ಅನುದಾನ ಬಂದಿದ್ದು, ಮುಂದಿನ ವರ್ಷದಿಂದಲೇ ಕಾಲೇಜು ಆರಂಭಿಸುತ್ತೇವೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ. 


ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಳೆದು ಐದು ವರ್ಷಗಳಲ್ಲಿ ಬಿಜೆಪಿ ಸರಕಾರ ಇತ್ತು. ಪಶು ವೈದ್ಯಕೀಯ ಕಾಲೇಜಿಗೆ ಕಳೆದ ಸಿದ್ದರಾಮಯ್ಯ ಸರಕಾರ ಇದ್ದಾಗಲೇ ಅನುದಾನ ಬಿಡುಗಡೆಗೊಂಡು ಕಟ್ಟಡ ರೆಡಿಯಾಗಿತ್ತು. ಐದು ವರ್ಷ ಕಾಲ ಅದನ್ನು ಆರಂಭಿಸಲು ಆಗಿರಲಿಲ್ಲ. ಧೂಳು ತಿನ್ನುತ್ತಿದ್ದ ಕಟ್ಟಡದಲ್ಲಿ ನವೀಕರಣ ಕೈಗೊಂಡು ಮುಂದಿನ ವರ್ಷದಲ್ಲೇ ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು. 


ಸುಳ್ಯ, ಪುತ್ತೂರಿನಿಂದ ಹಾಲನ್ನು ಮಂಗಳೂರಿಗೆ ತಂದು ಸಂಸ್ಕರಣೆ ಮಾಡುವುದರ ಬದಲು ಕೆಎಂಎಫ್ ಸಂಸ್ಥೆಯ ಇನ್ನೊಂದು ಪ್ಲಾಂಟನ್ನು ಪುತ್ತೂರಿನಲ್ಲೇ ಸ್ಥಾಪಿಸಲು ಯೋಜನೆ ಹಾಕಿದ್ದೇವೆ. ಅದಕ್ಕಾಗಿ ಹತ್ತು ಎಕರೆ ಜಾಗ ನೋಡಿದ್ದು ಹಾಲು ಸಂಸ್ಕರಣಾ ಕೇಂದ್ರ ಮಾಡುತ್ತೇವೆ ಎಂದು ಅಶೋಕ್ ರೈ ಹೇಳಿದರು. ಇದಲ್ಲದೆ, ಬೆಂಗಳೂರಿನಲ್ಲಿ ತುಳು ಭವನ ನಿರ್ಮಿಸಲಾಗುವುದು. ಕರಾವಳಿ ಭಾಗದ ಬಹಳಷ್ಟು ಮಂದಿ ಬೆಂಗಳೂರಿನಲ್ಲಿದ್ದಾರೆ. ಇಲ್ಲಿನವರು ತತ್ಕಾಲಕ್ಕೆ ಉಳಿದುಕೊಳ್ಳಲು ತುಳು ಭವನ ಸ್ಥಾಪನೆ ಮಾಡಲಾಗುವುದು. ತುಳು ಭಾಷೆಯನ್ನು ದ್ವಿತೀಯ ರಾಜ್ಯಭಾಷೆಯನ್ನಾಗಿ ಮಾನ್ಯತೆ ಕೊಡಲು ಯಾವುದೇ ಅನುದಾನ ಬೇಕಿಲ್ಲ. ನಮ್ಮವರ ಇಚ್ಛಾಶಕ್ತಿ ತೋರದೆ ಇರುವುದೇ ಸಮಸ್ಯೆ ಆಗಿದ್ದು. ತುಳು ಭಾಷೆಯ ಬಗ್ಗೆ ಮುತುವರ್ಜಿ ವಹಿಸಿದ್ದು, ಇನ್ನು ನಾಲ್ಕು ಇಲಾಖೆಗಳ ಎನ್ಓಸಿ ಬರಬೇಕಿದೆ. ನಾಲ್ಕೈದು ತಿಂಗಳಲ್ಲಿ ತುಳುವನ್ನು ದ್ವಿತೀಯ ಭಾಷೆಯನ್ನಾಗಿ ಮಾಡಿಸುತ್ತೇನೆ ಎಂದು ಹೇಳಿದರು. 


ಬಿಜೆಪಿಯವರಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಏನೇನು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ರಸ್ತೆಯಿಂದ 15 ಕಿಮೀ ಆಸುಪಾಸಿನ ನಗರಗಳಿಗೆ ಆ ರಸ್ತೆ ವಿಸ್ತರಣೆ ಮಾಡಲು ಅವಕಾಶ ಇದೆ. ಮಾಣಿಯಿಂದ 18 ಕಿಮೀ ದೂರ ಇರುವ ಪುತ್ತೂರಿಗೆ ಚತುಷ್ಪಥ ರಸ್ತೆ ಮಾಡಬೇಕಿದೆ. ಅದಕ್ಕಾಗಿ ಕೇಂದ್ರ ಹೆದ್ದಾರಿ ಇಲಾಖೆಯ ಜೊತೆಗೆ ಪ್ರಸ್ತಾಪ ಕೊಟ್ಟಿದ್ದು, ಅದನ್ನು ಮಾಡಿಸುತ್ತೇನೆ ಎಂದರು. 


ಕಲ್ಲಡ್ಕ- ಉಪ್ಪಿನಂಗಡಿ ಹೆದ್ದಾರಿ ದುರವಸ್ಥೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಮಾಡೋದು. ರಾಜ್ಯ ಸರಕಾರಕ್ಕೆ ಯಾವುದೇ ಹಸ್ತಕ್ಷೇಪ ಮಾಡಲಾಗದು. ಆದರೂ ಹೆದ್ದಾರಿ ಕೆಲಸ ಶೀಘ್ರಗೊಳಿಸಲು ಅಧಿಕಾರಿಗಳಿಗೆ ಒತ್ತಡ ಹೇರಲಾಗಿದೆ. ಇದನ್ನೆಲ್ಲ ಆಯಾ ಭಾಗದ ಸಂಸದರು ಮಾಡಬೇಕು. ಕೇರಳದಲ್ಲಿ ಒಳ್ಳೆಯ ರಸ್ತೆ ಆಗ್ತಾ ಇದೆ, ಅದಕ್ಕಾಗಿ ಅಭಿನಂದಿಸಬೇಕು. ಇಲ್ಲಿನ ಸಂಸದರು ಮುತುವರ್ಜಿ ವಹಿಸಿದರೆ ಹೆದ್ದಾರಿ ದುರವಸ್ಥೆ ಆಗುತ್ತಿರಲಿಲ್ಲ ಎಂದರು

ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

Posted by Vidyamaana on 2024-09-04 05:21:56 |

Share: | | | | |


ಗ್ರಾಮೀಣ ಕೈಗಾರಿಕಾ ಇಲಾಖೆಯಿಂದ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಅವರು ದ ಕ ಜಿಲ್ಲಾ ಪಂಚಾಯತ್, ಗ್ರಾಮೀಣ ಕೈಗಾರಿಕಾ ಇಲಾಖೆಯ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೆತ್ರದ ವಿವಿಧ ಕುಶಲ ಕರ್ಮಿಗಳಿಗೆ ಸಲಕರಣೆಯನ್ನು ವಿತರಿಸಿ ಮಾತನಾಡಿದರು.

ಯಾವ ಇಲಾಖೆಯಲ್ಲಿ ಯಾವ ಸೌಲಭ್ಯಗಳು ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ಮಾಹಿತಿ ಕೊರತೆಯಿದೆ. ಕೆಲವರಿಗೆ ಆನ್ ಲೈನ್ ನಲ್ಲಿ ಅರ್ಜಿ ಹಾಕಬೇಕೆಂದು ಗೊತ್ತೇ ಇರುವುದಿಲ್ಲ ಮತ್ತು ಯಾವಾಗ ಅರ್ಜಿ ಹಾಕಬೇಕು ಎಂಬ ಮಾಹಿತಿಯೂ ಇರುವುದಿಲ್ಲ ಈ ಕಾರಣಕ್ಕೆ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಸರಕಾರದಿಂದ ಸಿಗುವ ಸೌಲಭ್ಯಗಳು ಕೆಲವರಿಗೇ ಮಾತ್ರ ಮೀಸಲು ಎಂಬಂತಾಗಬಾರದು ಎಂದು ಹೇಳಿದ ಶಾಸಕರು ಪ್ರತೀ ಇಲಾಖೆಯು ತಮ್ಮ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಧ್ಯಮ ಹಗೂ ಸಾಮಾಜಿಕ ಜಾಲತಾದಲ್ಲಿ ಪ್ರಕಟಿಸುವ ಮೂಲಕ ಪ್ರಚಾರ ನೀಡಬೇಕು ಎಂದು ಹೇಳಿದರು. ವಿಚಾರ ಗೊತ್ತಿಲ್ಲದೆ ಅನೇಕ ಮಂದಿ ಬಡವರು ನನ್ನ ಕಚೇರಿಗೆ ಬಂದು ಸೌಲಭ್ಯಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಈ ಬಗ್ಗೆ ಯಾವುದೇ ದೂರುಗಳು ಬರುವಂತಾಗಬಾರದು ಎಂದು ಹೇಳಿದರು.


ಖಾಸಗಿ ಬಸ್‌ ಆಕ್ಟಿವಾ ಗೆ ಡಿಕ್ಕಿ: ಆಕ್ಟಿವಾ ಸವಾರ ಪರಾರಿ ನಿವಾಸಿ ಧರನೇಂದ್ರ ಮೃತ್ಯು

Posted by Vidyamaana on 2024-02-04 19:35:22 |

Share: | | | | |


ಖಾಸಗಿ ಬಸ್‌ ಆಕ್ಟಿವಾ ಗೆ ಡಿಕ್ಕಿ: ಆಕ್ಟಿವಾ ಸವಾರ ಪರಾರಿ ನಿವಾಸಿ ಧರನೇಂದ್ರ  ಮೃತ್ಯು

ಬೆಳ್ತಂಗಡಿ: ಖಾಸಗಿ ಬಸ್ಸಿನ ವೇಗದ ಅವಂತಾರದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರು ಎಳೆದುಕೊಂಡ ಹೋದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಸಮೀಪ ಫೆ.4 ರಂದು(ಇಂದು) ಸಂಜೆ ನಡೆದಿದೆ. 



ಮೃತಪಟ್ಟ ಯುವಕ ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ವೇಗವಾಗಿ ಬರುತಿದ್ದ ಶ್ರೀ ದುರ್ಗಾ ಹೆಸರಿನ ಖಾಸಗಿ ಬಸ್ ಡಿಕ್ಕಿ ಹೊಡೆದು ನಂತರ ಸ್ವಲ್ಪ ದೂರ ಸ್ಕೂಟರ್ ಸಮೇತ ಬಸ್ ಎಳೆದುಕೊಂಡು ಹೋಗಿದೆ. 


ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರನ ತಲೆಗೆ ಗಂಭೀರ ಗಾಯಗೊಂಡಿದ್ದು.ತಕ್ಷಣ ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗ ರಾಗಿಗುಡ್ಡದಲ್ಲಿ ಹಿಂಸಾಚಾರ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನ್ಯಾಯಾಂಗ ತನಿಖೆಗೆ ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯ

Posted by Vidyamaana on 2023-10-07 04:49:46 |

Share: | | | | |


ಶಿವಮೊಗ್ಗ ರಾಗಿಗುಡ್ಡದಲ್ಲಿ ಹಿಂಸಾಚಾರ  ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನ್ಯಾಯಾಂಗ ತನಿಖೆಗೆ ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯ

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.


ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?

ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.

ದ.ಕ. ಲೋಕಸಭಾ ಚುನಾವಣಾ ಕಾಂಗ್ರೆಸ್‌ ಪ್ರಚಾರ ಸಮಿತಿಗೆ ಈಶ್ವರ ಭಟ್ ಪಂಜಿಗುಡ್ಡೆ,ಮುರಳಿಧರ ರೈ ಮಠಂತಬೆಟ್ಟು ಆಯ್ಕೆ

Posted by Vidyamaana on 2024-04-05 17:12:57 |

Share: | | | | |


ದ.ಕ. ಲೋಕಸಭಾ ಚುನಾವಣಾ ಕಾಂಗ್ರೆಸ್‌ ಪ್ರಚಾರ ಸಮಿತಿಗೆ ಈಶ್ವರ ಭಟ್ ಪಂಜಿಗುಡ್ಡೆ,ಮುರಳಿಧರ ರೈ ಮಠಂತಬೆಟ್ಟು ಆಯ್ಕೆ

ಪುತ್ತೂರು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿಯಾಗಿರುವ ಬಿ. ರಮಾನಾಥ ರೈ ಅವರ ನೇತೃತ್ವದ ಚುನಾವಣಾ ಪ್ರಚಾರ ಸಮಿತಿಗೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ

Recent News


Leave a Comment: