ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಇಸ್ರೇಲ್ ದೇಶಕ್ಕೆ ಯಾವುದೇ ಸಾಮಗ್ರಿ ನೀಡಬೇಡಿ ತೈಲ ಸೇರಿ ಎಲ್ಲವನ್ನೂ ಬಹಿಷ್ಕರಿಸಿ ; ಮುಸ್ಲಿಂ ರಾಷ್ಟ್ರಗಳಿಗೆ ಇರಾನ್‌ ಕರೆ

Posted by Vidyamaana on 2023-11-02 15:24:44 |

Share: | | | | |


ಇಸ್ರೇಲ್ ದೇಶಕ್ಕೆ ಯಾವುದೇ ಸಾಮಗ್ರಿ ನೀಡಬೇಡಿ  ತೈಲ ಸೇರಿ ಎಲ್ಲವನ್ನೂ ಬಹಿಷ್ಕರಿಸಿ ; ಮುಸ್ಲಿಂ ರಾಷ್ಟ್ರಗಳಿಗೆ ಇರಾನ್‌ ಕರೆ

ನವದೆಹಲಿ, ನ.2: ಇಸ್ರೇಲ್ ದೇಶಕ್ಕೆ ತೈಲ, ಆಹಾರ ಸೇರಿದಂತೆ ಯಾವುದೇ ಸಾಮಗ್ರಿಗಳನ್ನು ನೀಡಬೇಡಿ. ಆ ದೇಶಕ್ಕೆ ರಫ್ತು ಮಾಡುವುದನ್ನೇ ನಿಲ್ಲಿಸಿ ಎಂದು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್‌ ದೇಶದ ಮುಸ್ಲಿಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಅಲ್ಲದೆ, ಗಾಜಾ ಪಟ್ಟಿ ಮೇಲೆ ಇಸ್ರೇಲ್ ವಾಯುಪಡೆ ನಡೆಸುತ್ತಿರುವ ಬಾಂಬ್ ದಾಳಿ ನಿಲ್ಲಿಸಲು ಒತ್ತಾಯಿಸಬೇಕು ಎಂದಿದ್ದಾರೆ. 


ಇಸ್ರೇಲ್ ದೇಶವು ಪ್ಯಾಲೆಸ್ತೀನ್ ಭಾಗವಾಗಿರುವ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿದೆ. ಇದು ಈ ಕೂಡಲೇ ನಿಲ್ಲಬೇಕು. ಯಹೂದಿ ರಾಷ್ಟ್ರಕ್ಕೆ ಮುಸ್ಲಿಂ ದೇಶಗಳಿಂದ ರಫ್ತಾಗುತ್ತಿರುವ ತೈಲ ಉತ್ಪನ್ನಗಳು ಹಾಗೂ ಆಹಾರ ಉತ್ಪನ್ನಗಳ ಸರಬರಾಜು ನಿಲ್ಲಬೇಕು ಎಂದು ಅಯತೊಲ್ಲಾ ಅಲಿ ಖಮೇನಿ ಆಗ್ರಹಿಸಿದ್ದಾರೆ. ಇರಾನ್‌ನ ಸರ್ಕಾರಿ ಮಾಧ್ಯಮದಲ್ಲಿ ಖಮೇನಿ ಭಾಷಣ ಪ್ರಸಾರವಾಗಿದೆ. ಈ ಭಾಷಣದಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ವಿಶ್ವದೆಲ್ಲೆಡೆಯ ಇಸ್ಲಾಂ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ. 


 ಇರಾನ್ ಬೆಂಬಲಿತ ಹಮಾಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಸಾವಿರಾರು ಸಂಖ್ಯೆಯಲ್ಲಿ ಒಮ್ಮೆಲೇ ದಾಳಿ ನಡೆಸಿದ್ದರು. ಜಲ, ನೆಲ, ವಾಯು ಮಾರ್ಗದಲ್ಲಿ ಇಸ್ರೇಲ್‌ಗೆ ಲಗ್ಗೆ ಇಟ್ಟಿದ್ದ ಉಗ್ರರು, 1,400ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳನ್ನು ಕೊಂದು ಹಾಕಿದ್ದರು. ಅಷ್ಟೇ ಅಲ್ಲ, 200ಕ್ಕೂ ಹೆಚ್ಚು ಇಸ್ರೇಲ್ ಪ್ರಜೆಗಳು ಹಾಗೂ ವಿದೇಶೀಯರನ್ನು ಒತ್ತೆಯಾಳನ್ನಾಗಿಸಿ ಗಾಜಾ ಪಟ್ಟಿಗೆ ಕರೆದೊಯ್ದಿದ್ದು ಸುರಂಗದಲ್ಲಿ ಅಡಗಿಸಿಟ್ಟಿದ್ದಾರೆ. ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿಗೆ ಈವರೆಗೆ 8 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಕಡೆಯವರು ಹೇಳುತ್ತಿದ್ದಾರೆ

ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನ ತ್ಯಜಿಸಬೇಕು : ಸಂಸದ ಕ್ಯಾ. ಬ್ರಿಜೇಶ್ ಚೌಟ

Posted by Vidyamaana on 2024-08-18 13:55:00 |

Share: | | | | |


ಪ್ರಜಾಪ್ರಭುತ್ವದ ಮೇಲೆ ಜನತೆಗಿರುವ ನಂಬಿಕೆ ಉಳಿಸಲು, ಸಿದ್ದರಾಮಯ್ಯ  ಕೂಡಲೇ ಸಿಎಂ ಸ್ಥಾನ ತ್ಯಜಿಸಬೇಕು : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು, ಆಗಸ್ಟ್.17: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ. ಅವರಿಗೆ ಕರ್ನಾಟಕದ ಜನತೆ ಹಾಗೂ ಸಂವಿಧಾನದ ಬಗ್ಗೆ ಕಿಂಚಿತ್ ಕಾಳಜಿ ಇದ್ದರೆ, ಹುದ್ದೆಯ ಪಾವಿತ್ರ್ಯತೆಯನ್ನು ಗೌರವಿಸಿ ಅವರು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. 


ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಶನಿವಾರ ನೀಡಿದ ಅನುಮತಿಯಿಂದ ಜನ ವಿರೋಧಿ ಭ್ರಷ್ಟ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಸತ್ಯಕ್ಕೆ ಜಯ ಸಿಗಲೇಬೇಕು ಎನ್ನುವುದು ಅರ್ಥವಾಗುತ್ತದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಪ್ರಕರಣ ಕೇವಲ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಚಾರದ ಪ್ರಕರಣವಾಗಿರದೇ, ದುರ್ಬಲ, ಬಡ ವರ್ಗದ ಜನರಿಗೆ ಎಸಗಿರುವ ವಂಚನೆಯಾಗಿದೆ.

750 ರೂ. ಸಾಲ ತೀರಿಸಲಾಗದೆ ಪ್ರಾಣ ಕಳೆದುಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ ಶ್ರೀನಿವಾಸ್!!!

Posted by Vidyamaana on 2023-08-28 10:12:14 |

Share: | | | | |


750 ರೂ. ಸಾಲ ತೀರಿಸಲಾಗದೆ ಪ್ರಾಣ ಕಳೆದುಕೊಂಡ 9ನೇ ಕ್ಲಾಸ್ ವಿದ್ಯಾರ್ಥಿ ಶ್ರೀನಿವಾಸ್!!!

ಚಿಕ್ಕಮಗಳೂರು:ಇತ್ತೀಚಿಗೆ ಕೊಪ್ಪ ತಾಲೂಕಿನ ಖಾಸಗಿ ಶಾಲಾ ವಿದ್ಯಾರ್ಥಿ ಶ್ರೀನಿವಾಸ್ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ 9ನೇ ತರಗತಿ ವಿದ್ಯಾರ್ಥಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ವೇಳೆ ಕೇವಲ 750 ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದಿದ್ದುದಕ್ಕೆ ಕಠಿಣ ನಿರ್ಧಾರ ತಳೆದಿದ್ದಾನೆ ಎಂದು ಹೇಳಿದ್ದಾರೆ.


ಕಡೂರು ತಾಲೂಕಿನ ಹಿರೇ ಬಳ್ಳಕೆರೆ ಗ್ರಾಮದ ಶ್ರೀನಿವಾಸ್ ಕೊಪ್ಪ ತಾಲೂಕಿನ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ.ಆತ್ಮಹತ್ಯೆಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆ ಗೂ ಮುಂಚೆ ಬರೆದಿಟ್ಟಿದ್ದ ಡೆತ್ ನೋಟ್ ಪರಿಶೀಲಿಸಿದಾಗ, ವಿದ್ಯಾರ್ಥಿ ಸ್ನೇಹಿತರಿಂದ ಪಡೆದಿದ್ದ 750 ರೂ. ಸಾಲವನ್ನು ನೀಡಲು ಸಾಧ್ಯವಾಗದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಶ್ರೀನಿವಾಸ್ ಮಾಜಿ ಯೋಧನ ಮಗನಾಗಿದ್ದು, ಮಗನನ್ನು ಕಳೆದು ಕೊಂಡ ತಂದೆ ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದಾರೆ

ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

Posted by Vidyamaana on 2024-09-05 07:53:48 |

Share: | | | | |


ಮಂಗಳೂರು| ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಸೆರೆ

ಮಂಗಳೂರು, ಸೆ.5: ನಗರದ ಎಯ್ಯಾಡಿಯ ದಂಡಕೇರಿ ಎಂಬಲ್ಲಿನ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಎಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಬಳಿ ಕಾರು ಪಲ್ಟಿ

Posted by Vidyamaana on 2024-02-11 16:02:22 |

Share: | | | | |


ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಬಳಿ ಕಾರು ಪಲ್ಟಿ

ಪುತ್ತೂರು: ಪುತ್ತೂರು ದರ್ಬೆ ಸಚಿನ್ ಟ್ರೇಡರ್ಸ್‌ ಎದುರು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ 11ರಂದು ಮಧ್ಯಾಹ್ನ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ನಮ್ಮವರ ವಿರೋಧವೇ ನನಗೆ ಅನುಕೂಲ ಮಾಡಿದೆ; ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ

Posted by Vidyamaana on 2024-03-09 20:55:30 |

Share: | | | | |


ನಮ್ಮವರ ವಿರೋಧವೇ ನನಗೆ ಅನುಕೂಲ ಮಾಡಿದೆ; ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ

ಬೆಳಗಾವಿ: ಹಾಲಿ ಸಂಸದರಿಗೆ ಟಿಕೆಟ್ ಮಿಸ್ (Loksabha Election 2024) ಆಗುತ್ತೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Union Minister Shobha Karandlaje) ಬೆಳಗಾವಿಯಲ್ಲಿ ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ಕೇಂದ್ರ ಚುನಾವಣೆ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು? ಅದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.


ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾನೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದರು.ಗೋ ಕ್ಯಾಂಪೇನ್​ಗೆ ತಿರುಗೇಟು


ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ ಎಂದು ಗೋ ಬ್ಯಾಕ್ ಕ್ಯಾಂಪೇನ್​ಗೆ ತಿರುಗೇಟು ನೀಡಿದರು.


ಆಗಲೇ ಸತ್ಯ ಗೊತ್ತಾಗೋದು


ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ. ಪಕ್ಷ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳ್ತಾರೆ. ಶೋಭಾಗೆ ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು. ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನನ್ನು ಮಾಡಬಾರದು ಎಂಬುದು ಇಂಥ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ ಎಂದರು.


ಪ್ರಾಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ


ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ. ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ ಎಂದು ಹೇಳಿದರು.

ಮತ್ತೆ ಟಿಕೆಟ್ ಸಿಗುವ ವಿಶ್ವಾಸ

ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ . ನಮ್ಮ ಶ್ರಮ, ನಮ್ಮ ಕೆಲಸ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ‌ಆಗಲಿದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ,‌ ಅಭಿವೃದ್ಧಿ ಆಧಾರದ ಮೇಲೆ‌ ಮತ‌ ಕೇಳುತ್ತೇನೆ ಎಂದು ಹೇಳುವ ಮೂಲಕ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.

Recent News


Leave a Comment: