ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

Posted by Vidyamaana on 2023-08-29 04:22:46 |

Share: | | | | |


ಆ 31 ರವರೆಗೆ ಕಾಂಗ್ರೆಸ್ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸೇವಾ ದಳ ಯಂಗ್ ಬ್ರಿಗೇಡ್ ವಿಭಾಗದ ಸದ ಸ್ಯತ್ವ ಅಭಿಯಾನವನ್ನು ರಾಜ್ಯ ವ್ಯಾಪ್ತಿ ಆರಂ ಭವಾಗಿದ್ದು, ಆಸ ಕರು ನೋಂದಣಿ ಮಾಡಿಕೊಳ್ಳಬ ಹುದು ಎಂದು ಬ್ರಿಗೇಡ್ ರಾಜ್ಯಾ ಧ್ಯಕ್ಷ ಝುನೈದ್ ಪಿ.ಕೆ.ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9611140233 ಅನ್ನು ಸಂಪರ್ಕಿಸಬ ಹುದು. ಪ್ರತಿ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಯೂ ಈ ಅಭಿಯಾನ ನಡೆಸಲಾ ಗುತ್ತಿ ದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷ ದೊಳಗಿನ ಯುವಕರು ಮಾತ್ರ ಸದಸ್ಯತ್ವವನ್ನು ದಾಗಿದೆ ಎಂದರು. ಪಡೆಯಬಹು


ಇದು ಸತತ ಒಂದು ತಿಂಗಳು ಕಾಲ ನಡೆ ಯಲಿದೆ. ಕಾಂಗ್ರೆಸ್‌ ಮತ್ತು ಜಾತ್ಯತೀತ ವಿಚಾರಧಾರೆ ಹೊಂದಿರುವ ಯುವ ಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದು ಕೊಳ್ಳಬಹುದಾಗಿದೆ.ಅಲ್ಲದೆ, ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನ ವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೇವಾ ಮನೋ ಭಾವದಿಂದ ಎಲ್ಲರೂ ಕೆಲಸ ಮಾಡಲು ಮುಂದಾಗಬೇಕು. ಸೇವಾದಳವು ನಿಸ್ವಾ ರ್ಥ ಸೇವಾ ಸಂಘಟನೆ ಆಗಿದೆ. ಜಾತಿ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರ ಮಗಳ ಮೂಲಕ ರಾಷ್ಟ್ರೀಯತೆಯನ್ನು ಮೂಡಿಸುವುದೇ ನಮ್ಮ ಗುರಿ ಎಂದು ಝುನೈದ್ ತಿಳಿಸಿದರು.

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

Posted by Vidyamaana on 2023-06-03 00:44:08 |

Share: | | | | |


ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ: ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.


ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.


ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.


ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರವೀಣ್ ಹೃದಯಾಘಾತದಿಂದ ಮೃತ್ಯು..!!!

Posted by Vidyamaana on 2023-05-05 11:57:17 |

Share: | | | | |


ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಪ್ರವೀಣ್ ಹೃದಯಾಘಾತದಿಂದ ಮೃತ್ಯು..!!!

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮೇ.5ರ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ.ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಯ ಹೊತ್ತಿಗೆ ಎದೆನೋವೆಂದು ಕುಸಿದು ಬಿದ್ದಿದ್ದರು. ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ ಅವರು ಸೌಮ್ಯ ವ್ಯಕ್ತಿತ್ವದಿಂದ ಜನಾನುರಾಗಿಯಾಗಿದ್ದರು.

ಕೊಯಮತ್ತೂರು ಕ್ಷೇತ್ರದಲ್ಲಿ ಜನ್ಮದಿನವೇ ಅಣ್ಣಾಮಲೈಗೆ ಸೋಲು; ಮತಗಟ್ಟೆಯೊಂದರಲ್ಲಿ ಒಂದೇ ಮತ ಪಡೆದ ಮಾಜಿ ಐಪಿಎಸ್ ಅಧಿಕಾರಿ

Posted by Vidyamaana on 2024-06-04 21:21:27 |

Share: | | | | |


ಕೊಯಮತ್ತೂರು ಕ್ಷೇತ್ರದಲ್ಲಿ ಜನ್ಮದಿನವೇ ಅಣ್ಣಾಮಲೈಗೆ ಸೋಲು; ಮತಗಟ್ಟೆಯೊಂದರಲ್ಲಿ ಒಂದೇ ಮತ ಪಡೆದ ಮಾಜಿ ಐಪಿಎಸ್ ಅಧಿಕಾರಿ

ಲೋಕಸಭಾ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ಕ್ಷೇತ್ರಗಳಲ್ಲಿ ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಕೊಯಮತ್ತೂರು ಕ್ಷೇತ್ರದಲ್ಲಿ 17 ಸಾವಿರಕ್ಕೂ ಅಧಿಕ ವೋಟುಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.

ಇಲ್ಲಿ ಅಣ್ಣಾಮಲೈ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದ ಸಮೀಕ್ಷೆಗಳು ಸುಳ್ಳಾಗಿವೆ. ಇದರೊಂದಿಗೆ ಅರಳುವ ಮುನ್ನವೇ ಕಮಲ ಮುದುಡಿದೆ.


ದ್ರಾವಿಡ್ ಮುನ್ನೇತರ ಕಜಗಂ (ಡಿಎಂಕೆ) ಪಕ್ಷದಿಂದ ಸ್ಪರ್ಧಿಸಿದ್ದ ಗಣಪತಿ ರಾಜ್​ಕುಮಾರ್ ಅವರ ವಿರುದ್ಧ ಅಣ್ಣಾಮಲೈ ಸೋತಿದ್ದಾರೆ. ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಎಐಡಿಎಂಕೆ ಪಕ್ಷದಿಂದ ಸಿಂಗೈ ಜಿ ರಾಮಚಂದ್ರನ್ ಅವರು ಸಹ ಸ್ಪರ್ಧೆ ಮಾಡಿದ್ದರು. ಆದರೆ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು.

ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆ

Posted by Vidyamaana on 2023-09-17 16:31:08 |

Share: | | | | |


ಬಪ್ಪಳಿಗೆ ಸಿಂಗಾಣಿಯಲ್ಲಿ ಶ್ರೀಕೃಷ್ಣ ವೇಷಧಾರಿ ಮಕ್ಕಳ ಶೋಭಾಯಾತ್ರೆ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಿಂಗಾಣಿ ಹಾಗೂ ಎಂಸಿಬಿ ಸ್ಪೋರ್ಟ್ಸ್ & ಆರ್ಟ್ಸ್‌ ಕ್ಲಬ್ ಬಪ್ಪಳಿಗೆ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ ಮತ್ತು ಕೃಷ್ಣ ವೇಷಧಾರಿಗಳ ಶೋಭಾಯಾತ್ರೆ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯಿತು. ಕೃಷ್ಣ ವೇಷಧಾರಿ ಮಕ್ಕಳ ಭವ್ಯ ಶೋಭಾಯತ್ರೆಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ ಚಾಲನೆ ನೀಡಿದರು. ಬಳಿಕ ರಾಗಿಕುಮೇರಿ ಶಾಲಾ ಬಳಿಯಿಂದ ಸಿಂಗಾಣಿವರೆಗೂ ಚೆಂಡೆ, ವಾದ್ಯ, ಬ್ಯಾಂಡ್ ಸೆಟ್ ಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಬಳಿಕ ಸಿಂಗಾಣಿಯ ಹಿಲ್ ಗ್ರೌಂಡ್ ನಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಧಾರ್ಮಿಕ‌ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ಕೃಷ್ಣನ ಪೂಜಿಸುವಂತ ಕಾರ್ಯಕ್ರಮ ಎಲ್ಲೆಡೆ ನಡೆಯಬೇಕು. ದೇವರ ಪೂಜಾ ಕೈಂಕರ್ಯಗಳನ್ನ ಹಿಂದೂ ಸಮಾಜ ಒಗ್ಗಟ್ಟಾಗಿ ಮಾಡಬೇಕು. ಹಿಂದೂ ಸಮಾಜ ಒಗ್ಗಟ್ಟಾಗಬೇಕಾದರೆ ಮೊದಲಿಗೆ ನಮ್ಮ ಧರ್ಮ ಉಳಿಸುವಂತ ಕೆಲಸವನ್ನ ಮಾಡಬೇಕಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ಧರ್ಮವನ್ನ ದೂಷಿಸುವಂತ ಕೆಲಸ ನಡೀತಾ ಇದೆ. ಹೀಗಿರುವಾಗ ಅದನ್ನ ಪ್ರಶ್ನಿಸುವಂತ ಜವಾಬ್ದಾರಿ ನಮ್ಮ ಹಿಂದೂ ಸಮಾಜಕ್ಕೆ ಇರಬೇಕು. ಸನಾತನ ಧರ್ಮ ಹಿಂದು ಧರ್ಮವಲ್ಲ ಅಂತ ಯಾರೋ ಒಬ್ಬ ತಮಿಳುನಾಡಿನಲ್ಲಿ ಹೇಳ್ತಾನೆ ಅಂದ್ರೆ, ಅದನ್ನ ಎದುರಿಸುವ ಶಕ್ತಿ ಹಿಂದೂ ಸಮಾಜಕ್ಕೆ ಇಲ್ವ. ಹಾಗಾಗಿ ಇಂತಹ ಅಪನಂಬಿಕೆಯ ವಾದವನ್ನ ಮಾಡೋವವರ ವಿರುದ್ಧ ಎದ್ದು ನಿಲ್ಲಬೇಕಿದೆ. ಈ ಮೂಲಕ ಹಿಂದೂ ಸಮಾಜ ಒಗ್ಗಟ್ಟಾಗಿ ಧರ್ಮವನ್ನ ಇನ್ನಷ್ಟು ಗಟ್ಟಿಗೊಳಿಸುವ ಕಾರ್ಯ ಆಗಬೇಕು ಎಂದು ಅವರು ತಿಳಿಸಿದರು. 


ಬಳಿಕ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಹಿಂದೂ ಸಮಾಜದ ಏಳಿಗೆಗೆ ನಾನೆಂದು ಸಿದ್ಧ. ಹಿಂದೂ ಸಮಾಜವನ್ನ ಭದ್ರವಾಗಿ ಕಾಪಾಡುವುದು ನಮ್ಮೆಲ್ಲರ ಹೊಣೆ. ಹಾಗಾಗಿ ಧರ್ಮವನ್ನ ಉಳಿಸುವ ಜೊತೆಗೆ ಬೆಳೆಸುವ ಕೆಲಸ ಆಗಬೇಕು ಎಂದವರು ಹೇಳಿದರು.


ಇನ್ನು ಕಾರ್ಯಕ್ರಮದಲ್ಲಿ ಚಿತ್ರನಟ, ಹಾಸ್ಯಕಲಾವಿದ ರವಿ ರಾಮಕುಂಜ, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಟೀಚರ್, ಮೋಕ್ಷಧಾಮ‌ ಮೇಲ್ವಿಚಾರಕ ಸತೀಶ್, ನಿವೃತ್ತ ಪೊಲೀಸ್ ಅಧಿಕಾರಿ ರಾಮ್ ನಾಯ್ಕ ಮತ್ತು ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ್ತಿ ವಿನುಶ್ರೀ ಗೌಡ ಅವರನ್ನ ಸನ್ಮಾನಿಸಲಾಯಿತು. ಇದೇ ವೇಳೆ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ನೀಡಲಾಯಿತು.


ಇನ್ನು ವಿಶೇಷವಾಗಿ ಪುಳಿಮುಂಚಿ ಚಿತ್ರತಂಡ ಆಗಮಿಸಿ ತನ್ನ ಚಿತ್ರದ ಪ್ರೊಮೋಷನ್ ಮಾಡಿದರು. ಚಿತ್ರದ ನಿರ್ದೇಶಕ ತ್ರಿಶೂಲ್ ಶೆಟ್ಟಿ, ಚಿತ್ರನಟಿ ಸಮತಾ ಅಮೀನ್, ಬಾಲ ನಟಿ ಅದ್ವಿಕಾ ಶೆಟ್ಟಿ, ನಟ ಕಾಂತಾರ ಖ್ಯಾತಿಯ ಪುಷ್ಪರಾಜ್, ಹಾಸ್ಯ ಕಲಾವಿದ ರವಿ ರಾಮಕುಂಜ, ನಟ ಅಶೋಕ್ ಬೇಕೂರು ಮೊದಲಾದವರು ಭಾಗವಹಿಸಿದ್ದರು. ಬಳಿಕ ನೆರೆದಿದ್ದ ಸಾವಿರಕ್ಕೂ ಅಧಿಕ ಜನರೊಂದಿಗೆ ಸೇರಿ ಪುಳಿಮುಂಚಿ ಚಿತ್ರದ ಹಾಡಿಗೆ ಕುಣಿದು ಕುಪ್ಪಳಿಸಿ ಮನರಂಜಿಸಿದರು. 


ಕಾರ್ಯಕ್ರಮದಲ್ಲಿ ವೈದ್ಯ ರವಿ ನಾರಾಯಣ ಭಟ್ ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 25

Posted by Vidyamaana on 2023-09-25 04:45:03 |

Share: | | | | |


ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ ಸೆ 25

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಸೆ 25 ರಂದು


ಬೆಳಗ್ಗೆ 7:30 ರಿಂದ ಮಧ್ಯಾಹ್ನ‌ 2 ಗಂಟೆ  ವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ


ಮಧ್ಯಾಹ್ನ 3 ಗಂಟೆಗೆ  ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ರಾಜ್ಯ ಮಟ್ಟದ ರಿಹ್ಯಾಬ್ ಮೇಳ 2023

ಸ್ಥಳ ; ಕಾನ್ವೆಂಷನ್ ಹಾಲ್  ಮೋತಿ ಮಹಲ್ ಮಂಗಳೂರ್*


*ಸಂಜೆ 6 ಗಂಟೆಗೆ ಕಾಸರಗೋಡು  ಕಾಟುಕುಕ್ಕೆ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ

 ಕಾರ್ಯಕ್ರಮ ದಲ್ಲಿ   ಭಾಗವಹಿಸಲಿದ್ದಾರೆ



Leave a Comment: