ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಸುದ್ದಿಗಳು News

Posted by vidyamaana on 2024-07-23 21:09:49 |

Share: | | | | |


ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪ:ಅಣ್ಣಪ್ಪ ಮಾಲಕತ್ವದ  ಮಾರುತಿ ಡ್ರೈವಿಂಗ್ ಸ್ಕೂಲ್‌ನ ಪರವಾನಗಿ ರದ್ದು

ಬೆಂಗಳೂರು : ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ಪರವಾನಗಿ ಹಾಗೂ ಅದೇ ಶಾಲೆಯ ತರಬೇತುದಾರನ ಚಾಲನಾ ಪರವಾನಗಿಯನ್ನು (ಡಿಎಲ್‌) ಸಾರಿಗೆ ಮತ್ತು ರಸ್ತೆ ಸುರಕ್ಷತಾ ಇಲಾಖೆ ರದ್ದುಗೊಳಿಸಿದೆ. 

ಯುವತಿಗೆ ಕಾರು ಚಾಲನೆಯ ತರಬೇತಿ ನೀಡುವ ವೇಳೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಅಡಿ ಕಾರು ತರಬೇತಿದಾರನ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಸೂಚನೆಯಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

ನಗರದ ಯಾವುದೇ ಡ್ರೈವಿಂಗ್ ಶಾಲೆಯಲ್ಲೂ ಈ ರೀತಿಯ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಾಲಕ್ಷ್ಮೀಪುರದ 18 ವರ್ಷದ ಯುವತಿ ನೀಡಿದ್ದ ದೂರು ಆಧರಿಸಿ, ಬಸವೇಶ್ವರನಗರದ ಮಾರುತಿ ಡ್ರೈವಿಂಗ್‌ ಸ್ಕೂಲ್‌ನ ತರಬೇತುದಾರ ಅಣ್ಣಪ್ಪ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಏನಿದು ಪ್ರಕರಣ?:‌

ದೂರು ನೀಡಿದ್ದ ಯುವತಿ ಕಾರು ಚಾಲನೆ ಕಲಿಯಲು ಮಾರುತಿ ಡ್ರೈವಿಂಗ್‌ ಸ್ಕೂಲ್‌ಗೆ ಸೇರಿದ್ದರು. ಅಣ್ಣಪ್ಪ ಎಂಬಾತ ಕಾರು ಚಾಲನೆ ಬಗ್ಗೆ ತರಬೇತಿ ನೀಡಿದ್ದರು. ಒಂದು ತಿಂಗಳ ಕೋರ್ಸ್‌ ಮುಕ್ತಾಯವಾದ ಮೇಲೆ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್‌ಗೆ ₹750 ಕೊಡಬೇಕು ಎಂದು ಯುವತಿಯನ್ನು ಕೇಳಿಕೊಂಡಿದ್ದರು. ಯುವತಿ 15 ದಿನಗಳ ವಿಶೇಷ ಕ್ಲಾಸ್‌ಗೆ ಅಣ್ಣಪ್ಪ ಅವರಿಗೆ ₹10,500 ಪಾವತಿಸಿದ್ದರು. ಅದರಂತೆ ಅಣ್ಣಪ್ಪ ವಿಶೇಷ ತರಬೇತಿ ಆರಂಭಿಸಿದ್ದರು ಎಂದು ಪೊಲೀಸರು ಹೇಳಿದರು.

ಪ್ರತಿದಿನ ಯುವತಿಯ ಮನೆ ಬಳಿ ಬಂದು ಆಕೆಯ ಕಾರಿನಲ್ಲೇ ಅಣ್ಣಪ್ಪ ಚಾಲನೆ ತರಬೇತಿ ನೀಡುತ್ತಿದ್ದರು. ಜುಲೈ 7ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಯುವತಿ ಮನೆ ಬಳಿ ಬಂದಿದ್ದ ಅಣ್ಣಪ್ಪ, ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಚಾಲನೆ ಬಗ್ಗೆ ಹೇಳಿಕೊಡಲು ಮುಂದಾಗಿದ್ದರು. ಬಸವೇಶ್ವರ ನಗರದ ನ್ಯಾಷನಲ್‌ ಶಾಲೆಯ ಮೇಲ್ಸೇತುವೆಯಲ್ಲಿ ತೆರಳುವಾಗ, ಯುವತಿ ಕಾರು ಚಾಲನೆ ಮಾಡುತ್ತಿದ್ದರು. ಆಗ ಅಣ್ಣಪ್ಪ ಅಸಭ್ಯವಾಗಿ ವರ್ತಿಸಿದ್ದರು ಎಂದು ಪೊಲೀಸರು ತಿಳಿಸಿದರು.

ತರಬೇತುದಾರನ ಅಸಭ್ಯ ವರ್ತನೆಯಿಂದ ಗಾಬರಿಗೊಂಡಿದ್ದ ಯುವತಿ ಕಾರನ್ನು ಮನೆಯತ್ತ ತಿರುಗಿಸಿದ್ದರು. ಅದಾದ ಮೇಲೆ ತರಬೇತುದಾರ ಸುಮ್ಮನಾಗಿದ್ದರು. ಅಣ್ಣಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

 Share: | | | | |


ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಪತ್ನಿಯಿಂದಲೇ ಬೆದರಿಕೆ, ಆಕೆಯ ಹಿಸ್ಟರಿ ಕಂಡು ದಂಗಾದ ಪೊಲೀಸರು..!

Posted by Vidyamaana on 2023-11-24 07:30:53 |

Share: | | | | |


ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಪತ್ನಿಯಿಂದಲೇ ಬೆದರಿಕೆ, ಆಕೆಯ ಹಿಸ್ಟರಿ ಕಂಡು ದಂಗಾದ ಪೊಲೀಸರು..!

ಉತ್ತರಪ್ರದೇಶ : ದಿನ ಸಮಾಜದಲ್ಲಿ ಆಗಾಗ ಹನಿಟ್ಯ್ರಾಪ್ ನಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನೋಡಿರುತ್ತೇವೆ. ಪ್ರೀತಿ ಪ್ರೇಮ ಎಂದು ನಂಬಿಸಿದ ಕೆಲ ಮಹಿಳೆಯರು ಹನಿಟ್ಯ್ರಾಪ್ ಹೆಸರಿನಲ್ಲಿ ಮೋಸಮಾಡಿ ಲಕ್ಷಾಂತರ ರೂಪಾಯಿ ದೋಚುತ್ತಿರುತ್ತಾರೆ. ಆದರೆ ಉತ್ತರ ಪ್ರದೇಶದಲ್ಲಿ ಪತ್ನಿಯೇ ಬೆಡ್ ರೂಂ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ.ಆಕೆಯ ಕಥೆಯನ್ನು ಕೇಳಿದ ಪೊಲೀಸರೇ ದಂಗಾಗಿದ್ದಾರೆ ಎನ್ನಲಾಗಿದೆ.


ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಸಂಗೀತಾ ದೇವಿ ಕೆಲವು ತಿಂಗಳುಗಳ ಹಿಂದೆಯಷ್ಟೆ ಶಿವಂ ಎಂಬ ಪೊಲೀಸ್ ಪೇದೆಯನ್ನು ಮದುವೆಯಾಗಿದ್ದರು. ಶಿವಂಗೆ ಆಕೆ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದಳು. ಪರಿಚಯ ಪ್ರೀತಿಗೆ ತಿರುಗಿ ಕಳೆದ ಜೂನ್ ಮಾಹೆಯಲ್ಲಿ ಇಬ್ಬರೂ ಮದುವೆಯಾಗಿದ್ದರು. ಕೆಲ ದಿನಗಳ ಬಳಿಕ ಆಕೆ ಬೆಡ್ ರೂಂ ನಲ್ಲಿನ ಖಾಸಗಿ ಕ್ಷಣಗಳನ್ನು ವಿಡಿಯೋ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ. ಆ ವಿಡಿಯೋಗಳನ್ನು ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ.ಆ ವಿಡಿಯೋಗಳನ್ನು ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಆರೋಪಿ ಸಂಗೀತಾ ಗೆ ಆಕೆಯ ಸಹೋದರ ಹಾಗೂ ಪೋಷಕರೂ ಸಹ ಸಾಥ್ ನೀಡಿದ್ದಾರೆ ಎನ್ನಲಾಗಿದೆ.


ಇನ್ನೂ ಮದುವೆಯಾದ ಬಳಿಕ ಶಿವಂ ಆರೋಪಿಯ ಪೋಷಕರು ಹಾಗೂ ಸಹೋದರನಿಂದ ಸಮಸ್ಯೆಗಳನ್ನು ಎದುರಿಸಿದ್ದಾರೆ. ಅವರಿಂದ ಪದೇ ಪದೇ ಹಣ ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಿದ್ದಾರೆ. ಜೊತೆಗೆ ಪತ್ನಿ ಸಹ ಬೆದರಿಕೆ ಶುರು ಮಾಡಿದ್ದಾಳೆ. 30 ಲಕ್ಷ ಕೊಡದೇ ಇದ್ದರೇ ಬೆಡ್ ರೂಂನ ಖಾಸಗಿ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಹಾಗೂ ಅತ್ಯಾಚಾರ ಪ್ರಕರಣ ದಾಖಲು ಮಾಡುವುದಾಗಿ ಬೆದರಿಕೆ ಹಾಕಿದ್ದಾಳಂತೆ. ಅದರಿಂದ ಬೇಸತ್ತ ಶಿವಂ ಆಕೆಯ ವಿರುದ್ದ ದೂರು ದಾಖಲಿಸಿದ್ದರು. ಪತ್ನಿ ಹಾಗೂ ಆಕೆಯ ಸಹೋದರ, ತಂದೆ ಯನ್ನು ಆರೋಪಿಗಳ ಪಟ್ಟಿಗೆ ಸೇರಿಸಿದ್ದರು.ಇನ್ನೂ ದೂರು ದಾಖಲಿಸಿಕೊಂಡ ಪೊಲೀಸರು ಸಂಗೀತಾಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಕೆಯ ಕಥೆ ಕೇಳಿದ ಪೊಲೀಸರೇ ದಂಗಾಗಿದ್ದಾರೆ. ಈ ಹಿಂದೆ ಸಂತ್ರಸ್ತೆ ಸಂಗೀತಾ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಮದುವೆಯಾಗಿ ಇದೇ ಮಾದರಿಯಲ್ಲಿ ಹಣ ವಸೂಲಿ ಮಾಡಿದ್ದಳಂತೆ. ಸೋಷಿಯಲ್ ಮಿಡಿಯಾ ಮೂಲಕ ಪರಿಚಯ ಮಾಡಿಕೊಂಡ ಈಕೆ ಮದುವೆಯಾಗಿ ಬಳಿಕ ಖಾಸಗಿ ವಿಡಿಯೋ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿ ಹಣ ಪೀಕುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬೆಡ್ ರೂಂ ವಿಡಿಯೋ ತೋರಿಸಿ ಬೆದರಿಕೆ ಹಾಕು‌ತ್ತಿದ್ದ ಐನಾತಿ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

Posted by Vidyamaana on 2023-10-14 18:59:44 |

Share: | | | | |


ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧ - ಹಮಾಸ್ ಬೆಂಬಲಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿಯ ಪೊಲೀಸ್ ವಶಕ್ಕೆ

ಮಂಗಳೂರು : ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವಿನ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್  ಬೆಂಬಲಿಸಿ ವೀಡಿಯೋ ಹರಿಬಿಟ್ಟಿದ್ದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಮಂಗಳೂರಿನ ಬಂದರು ನಿವಾಸಿ ಜಾಕಿರ್ ಯಾನೆ ಜಾಕಿ ಬಂಧಿತ ಆರೋಪಿ.


ಹಮಾಸ್ ಬೆಂಬಲಿಸಿ, ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿ ಜಾಕಿರ್ ವೀಡಿಯೋ ಹರಿಬಿಟ್ಟಿದ್ದ. ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.


ಈ ಕೃತ್ಯದ ಬಗ್ಗೆ ಸಮಾಜದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ವಿನಾಯಕ ತೋರಗಲ್ ಅವರು ಸ್ವಯಂ ದೂರು ದಾಖಲಿಸಿ ಆರೋಪಿ ಜಾಕಿರ್ ಯಾನ ಜಾಕಿ ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಇನ್ನು ಈ ಆರೋಪಿತನ ಮೇಲೆ ಈ ಹಿಂದ ಕೂಡ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ ಐವರು ಪೊಲೀಸರ ಸಾವು

Posted by Vidyamaana on 2023-11-20 15:27:41 |

Share: | | | | |


ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ; ಟ್ರಕ್ ಗೆ ಕಾರು ಡಿಕ್ಕಿ  ಐವರು ಪೊಲೀಸರ ಸಾವು

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್‌ ಅಧಿಕಾರಿಗಳು  ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.


ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.




ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್‌ ವೊಂದು ಓವರ್‌ ಟೇಕ್‌ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್‌ ಅಚಾನಕ್‌ ಆಗಿ ಬ್ರೇಕ್‌ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್‌ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. 


ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.

ಉತ್ತರಾಖಂಡ | ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯ

Posted by Vidyamaana on 2023-11-21 11:39:31 |

Share: | | | | |


ಉತ್ತರಾಖಂಡ | ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯ

ಉತ್ತರಕಾಶಿ: ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.

💥 ಕ್ಲಿಕ್ ಮಾಡಿ 👉  ಸುರಂಗ ದ ಒಳಗಡೆ ಸಿಲುಕಿರುವ ಕಾರ್ಮಿಕರ CCTV ಮೊದಲ ದೃಶ್ಯ

ಸುರಂಗದ ಮೇಲಿನಿಂದ ರಂಧ್ರ ಕೊರೆದು ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಈ ಮಧ್ಯೆ ಎಂಡೋಸ್ಕೋಪಿಕ್ ಫ್ಲೆಕ್ಸಿ ಕ್ಯಾಮರಾವನ್ನು ಸುರಂಗದೊಳಗೆ ಕಳುಹಿಸಲಾಗಿತ್ತು. ಇದೀಗ ಸುರಂಗದೊಳಗಿನ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.


ನಿನ್ನೆ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ.

ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

Posted by Vidyamaana on 2024-01-12 13:00:12 |

Share: | | | | |


ಆಟವಾಡುತ್ತಾ ನಿಂಬೆಹಣ್ಣು ನುಂಗಿದ 9 ತಿಂಗಳ ಮಗು ಮೃತ್ಯು

ಆಂಧ್ರ ಪ್ರದೇಶ: ಮನೆಯಲ್ಲಿ ಆಟವಾಡುತ್ತಾ ಮಗುವೊಂದು ನಿಂಬೆಹಣ್ಣು  ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆದಿದೆ.ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯದ ಸಾಕಿದೀಪ ಮತ್ತು ಗೋವಿಂದರಾಜ್​​​​ ದಂಪತಿಯ  ಜಸ್ವಿತಾ (9 ತಿಂಗಳು) ಮೃತ ಮಗು.ಎಂದಿನಂತೆ ಮನೆಯಲ್ಲಿ ಆಡುತ್ತಾ ಮನೆಯಲ್ಲಿತ್ತು. ತಾಯಿ ಮಗುವನ್ನು ನೋಡುತ್ತಾ , ಮತ್ತೊಂದು ಕಡೆ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಮಗು ಜಗಲಿಯಲ್ಲಿದ್ದ ನಿಂಬೆಹಣ್ಣನ್ನು ಹಿಡಿದು ನುಂಗಿದೆ. ಆ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಆಗಿದೆ. ಕೂಡಲೇ ತಾಯಿ ಗಂಟಲಿನಲ್ಲಿ ಸಿಲುಕಿದ್ದ ನಿಂಬೆಹಣ್ಣನ್ನು ತೆಗೆಯಲು ಯತ್ನಿಸಿ, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ವೈದ್ಯರು ಪರಿಕ್ಷೀಸಿದ ಬಳಿಕ ಆದಾಗಲೇ ಮಗು ಮೃತಪಟ್ಟಿದೆ ಎಂದಿದ್ದಾರೆ. ಸಾಕಿದೀಪ ಮತ್ತು ಗೋವಿಂದರಾಜ್ ದಂಪತಿಗೆ ಮದುವೆಯಾದ 7 ವರ್ಷದ ಬಳಿಕ ಮಗು ಜನಿಸಿತ್ತು. ಆದರೆ ಇಂತಹ ಆಕಸ್ಮಿಕ ದುರಂತದಲ್ಲಿ ಮಗು ಮೃತಪಟ್ಟಿರುವುದಕ್ಕೆ ಇಡೀ ಕುಟುಂಬವೇ ಶೋಕದಲ್ಲಿ ಮುಳುಗಿದೆ.

ಲಕ್ಷಾಂತರ ರೂಪಾಯಿಯ ಐ ಫೋನ್ ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಜಯಂತ್ ವಿಟ್ಲ

Posted by Vidyamaana on 2023-04-24 23:10:56 |

Share: | | | | |


ಲಕ್ಷಾಂತರ ರೂಪಾಯಿಯ ಐ ಫೋನ್  ಮೊಬೈಲ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ  ಜಯಂತ್ ವಿಟ್ಲ

ಪುತ್ತೂರು: ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ತೌಸೀಫ್ ರವರು ಕಳೆದುಕೊಂಡಿದ್ದ ಸುಮಾರು 1.35 ಲಕ್ಷ ರೂಪಾಯಿ ಬೆಲೆಬಾಳುವ ಮೊಬೈಲ್‌ ಹಿಂತಿರುಗಿಸುವ ಮೂಲಕ ಪತ್ರಿಕೆ ಸಾಗಾಟ ಮಾಡುವ ಜಯಂತ ವಿಟ್ಟ ರವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಕಾರಿನಲ್ಲಿ ಮಂಗಳೂರಿನಿಂದ ಸುಳ್ಯಕ್ಕೆ ದಿ, ಹಿಂದು ಇಂಗ್ಲಿಷ್ ಪತ್ರಿಕೆಯ ಸಾಗಾಟ ಮಾಡುತ್ತಿರುವ ಜಯಂತ ವಿಟ್ಲರವರಿಗೆ ಎ.23ರಂದು ರಾತ್ರಿ ಮಂಗಳೂರಿನ ಕಂಕನಾಡಿ ರಾಧಾ ಮೆಡಿಕಲ್‌ ಬಳಿ ರಸ್ತೆಯಲ್ಲಿ ಐಫೋನ್ ಮೊಬೈಲ್ ಬಿದ್ದು ಸಿಕ್ಕಿತು. ಇದರ ಕುರಿತು ಜಯಂತರವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಎ.24ರಂದು ಮೊಬೈಲ್ ನಲ್ಲಿದ್ದ ನಂಬರ್ ಮೂಲಕ ಸಂಪರ್ಕಿಸಿ ಮೊಬೈಲ್ ವಾರಿಸುದಾರರಾಗಿರುವ ಪುತ್ತೂರಿನ ವಳತ್ತಡ್ಕ ತೌಸೀಫ್ ರವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

Recent News


Leave a Comment: