ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ ಎಷ್ಟು ಲಕ್ಷ ಗೊತ್ತಾ

Posted by Vidyamaana on 2024-05-24 07:49:24 |

Share: | | | | |


T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ ಎಷ್ಟು ಲಕ್ಷ ಗೊತ್ತಾ

ನವದೆಹಲಿ: ಐಪಿಎಲ್‌ ಮುಕ್ತಾಯದ ಹಂತಕ್ಕೆ ಬರುತ್ತಿರುವಾಗಲೇ ಟಿ20 ವಿಶ್ವಕಪ್‌ ಕಾವೇರುತ್ತಿದೆ. ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯವಂತೂ, ವಿಪರೀತ ಟಿಕೆಟ್‌ ಬೆಲೆಯ ಕಾರಣಕ್ಕೆ ವಿವಾದ ಸೃಷ್ಟಿಸಿದೆ. ಈ ಪಂದ್ಯದ ಟಿಕೆಟ್‌ಗಳಿಗೆ ಭಾರೀ ಬೇಡಿಕೆಯಿದ್ದು, ಡೈಮಂಡ್‌ ಕ್ಲಬ್‌ನ ಒಂದು ಟಿಕೆಟ್‌ ಬೆಲೆ 16.65 (20 ಸಾವಿರ ಡಾಲರ್‌) ಲಕ್ಷ ರೂ.ಗೇರಿದೆ ಎಂದು ಐಪಿಎಲ್‌ ಮಾಜಿ ಮುಖ್ಯಸ್ಥ ಲಲಿತ್‌ ಮೋದಿ ಆರೋಪಿಸಿದ್ದಾರೆ.

ಮಾತು ಉಳಿಸಿಕೊಂಡ ಕಾಂಗ್ರೆಸ್ ಸರ್ಕಾರ – ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ

Posted by Vidyamaana on 2023-06-02 10:38:16 |

Share: | | | | |


ಮಾತು ಉಳಿಸಿಕೊಂಡ ಕಾಂಗ್ರೆಸ್ ಸರ್ಕಾರ – ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ

ಬೆಂಗಳೂರು- ಐದು  ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್​​ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತವೇ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯವಾಕಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆದಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜರಾಕ್ಸ್​ ನೀಡಬೇಕು. ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ಧಾರೆ.

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಕೊಡ್ತೀವಿ. ಈ ಆರ್ಥಿಕ ವರ್ಷದಲ್ಲೇ ಕೊಡ್ತೀವಿ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ  ಮುಖ್ಯ ಮಂತ್ರಿಗಳು ವಿವರಣೆ ನೀಡಿದರು.


1. ಗೃಹಜ್ಯೋತಿ - 200 ಯುನಿಟ್ ವರೆಗೆ ಉಚಿತ ವಿದ್ಯುತ್.

ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ.10 ರಷ್ಟರವರೆಗಿನ ವಿದ್ಯುತ್ ಉಚಿತ. ಜು.1 ರಿಂದ ಆಗಸ್ಟ್ ಗರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ಕಟ್ಟಲ್ಲ.

2. ಗೃಹಲಕ್ಷ್ಮೀ -

ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್ವೇರ್ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮೆ. ಜೂ.15 ರಿಂದ ಜು.15 ರೊಳಗೆ ಆನ್ ಲೈನ್ ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಹಾಕಬಹುದು. 18 ವರ್ಷ ತುಂಬಿದವರು. ಜು.15 ರಿಂದ ಆ.15 ರವರೆಗೆ ಪ್ರಕ್ರಿಯೆ ನಡೆಸಿ, ಆ.15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಇಲ್ಲ.

3. ಅನ್ನಭಾಗ್ಯ-

ನಾವು 7 ಕೆ.ಜಿ. ಕೊಡುತ್ತಿದ್ದೆವು. ಈ 5 ಕೆ.ಜಿ.ಗೆ ಇಳಿಸಿದ್ದಾರೆ. 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ನಾವೀಗ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ದಾಸ್ತಾನು ಇಲ್ಲ. ಹೀಗಾಗಿ ಜು.1 ರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ. ನ್ಯಾಫೆಡ್, ಕೇಂದ್ರ, ಎನ್ ಸಿಸಿ ಎಫ್ ಎಲ್ಲಿಂದಲಾದರೂ ಸರಿ ತಂದು ಕೊಡುತ್ತೇವೆ.

4. ಶಕ್ತಿ

- ಸಮಾಜದಲ್ಲಿ ಶೇ.50 ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂ.11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್,  (ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು) ಉಚಿತ ಪ್ರಯಾಣ. ಕೆಎಸ್ಆರ್ಟಿಸಿಯಲ್ಲಿ ಶೇ.50 ರಷ್ಟು ಆಸನ ಮೀಸಲು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದು.

5. ಯುವನಿಧಿ -

2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಯುವಕ, ಯುವತಿ + ತೃತೀಯಲಿಂಗಿಗಳಿಗೂ ಅನ್ವಯ. ಇದಕ್ಕೆ ಅರ್ಜಿ ಹಾಕಬೇಕು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-22 21:47:50 |

Share: | | | | |


ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಬೆಂಗಳೂರು ಕಂಬಳದ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ನವೆಂಬರ್ 25ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಗೃಹಕಛೇರಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷರೂ ,ಪುತ್ತೂರು ಶಾಸಕರೂ ಆದ ಅಶೋಕ್ ರೈ ಯವರು ಆಮಂತ್ರಣ ಪತ್ರ ನೀಡಿ ಕಂಬಳಕ್ಕೆ ಆಹ್ವಾನ ನೀಡಿದರು. 25 ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮದಲ್ಲಿ ಡಿ ಕೆ ಶಿವಕುಮಾರ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕಂಬಳ ಸಮಿತಿ ಉಪಾಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ,ಸಂಗೀತ ನಿರ್ದೇಶಕರೂ  ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. .

ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

Posted by Vidyamaana on 2024-01-22 13:34:20 |

Share: | | | | |


ಅಯೋಧ್ಯೆಯ ಶ್ರೀರಾಮ ಪ್ರಾಣ ಪ್ರತಿಷ್ಠೆಯು ವಿಶ್ವ ಶಾಂತಿ ನೆಮ್ಮದಿಯನ್ನು ಎಲ್ಲೆಡೆ ಕರುಣಿಸಲಿ: ಶಾಸಕ ಅಶೋಕ್ ರೈಯವರಿಂದ ವಿಶೇಷ ಪ್ರಾರ್ಥನೆ

ಉಪ್ಪಿನಂಗಡಿ : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕೋಡಿಂಬಾಡಿ ಗ್ರಾಮಸ್ಥರ ಹಾಗೂ ಪುತ್ತೂರಿನ ಸಮಸ್ತ ನಾಗರಿಕರ ಪರವಾಗಿ ತನ್ನ ಸ್ವ ಗ್ರಾಮ ಕೋಡಿಂಬಾಡಿ ಮಠಂತಬೆಟ್ಟು‌ಶ್ರೀ ಮಹಿಷ‌ಮರ್ಧಿನಿ ದೇವಿಗೆ ಪುಷ್ಪ ವನ್ನು ಸಮರ್ಪಿಸುತ್ತಾ ರಾಜ್ಯ ,ದೇಶ ಮತ್ತು ವಿಶ್ವಕ್ಕೆ ಸನ್ಮಂಗಳವನ್ನು ಉಂಟು ಮಾಡಲಿ ಎಂದು ಪ್ರಾರ್ತಿಸಿದರು. ಈ ದೇಶದಲ್ಲಿ ಎಲ್ಲಾ ಧರ್ಮಿಯರು ಪರಸ್ಪರ ಸಹೋದರತೆಯಿಂದ ಬಾಳ್ವೆ ನಡೆಸುವ ಮೂಲಕ ದೇಶ ,ಜಗತ್ತಿನಲ್ಲಿ‌ ಶಾಂತಿ ನೆಲಸುವಂತಾಗಲಿ‌ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾದ ನಿರಂಜನ್ ರೈ ರೈ ಮಠಂತಬೆಟ್ಡು, ಮುರಳೀಧರ್ ರೈ ಮಠಂತಬೆಟ್ಟು, ಯೋಗೀಶ್ ಸಾಮಾನಿ, ನಿಹಾಲ್ ಶೆಟ್ಟಿ ಕಲ್ಲಾರೆ ,ದೇವಸ್ಥಾನದ ವ್ಯವಸ್ಥಾಪಕರಾದ ಸಂತೋಷ್ ರೈ ,ವಾರಿಸೇನ ಜೈನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಚಿಕ್ಕಮಗಳೂರು ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

Posted by Vidyamaana on 2023-11-11 14:10:00 |

Share: | | | | |


ಚಿಕ್ಕಮಗಳೂರು  ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕಡೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.



ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ, ವಿನಯ್ ಬಂಧಿತ ಆರೋಪಿಗಳು. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಈ ಆರೋಪಿಗಳು ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ನಿಜವಾದ ಸೇವಕ ಎಂದಿಗೂ ಅಹಂಕಾರಿಯಲ್ಲ. ಚುನಾವಣೆಗಳಲ್ಲಿ ಶಿಷ್ಟಾಚಾರವನ್ನು ಪಾಲಿಸಲಾಗಿಲ್ಲ: ಮೋಹನ್ ಭಾಗವತ್

Posted by Vidyamaana on 2024-06-11 10:17:17 |

Share: | | | | |


ನಿಜವಾದ ಸೇವಕ ಎಂದಿಗೂ ಅಹಂಕಾರಿಯಲ್ಲ. ಚುನಾವಣೆಗಳಲ್ಲಿ ಶಿಷ್ಟಾಚಾರವನ್ನು ಪಾಲಿಸಲಾಗಿಲ್ಲ: ಮೋಹನ್ ಭಾಗವತ್

ನವದೆಹಲಿ: ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆಯಾದ ಚುನಾವಣೆಯ ಫಲಿತಾಂಶದ ಬಗ್ಗೆ ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ನಿಜವಾದ ಸೇವಕ ಅಹಂಕಾರ  ಹೊಂದಿರುವುದಿಲ್ಲ ಮತ್ತು ಇತರರಿಗೆ ಯಾವುದೇ ಹಾನಿಯಾಗದಂತೆ ಕೆಲಸ ಮಾಡುತ್ತಾನೆ ಎಂದು ಹೇಳಿದರು.

ಕಹಿ ಚುನಾವಣಾ ಪ್ರಚಾರವನ್ನು ಉಲ್ಲೇಖಿಸಿದ ಅವರು, ಶಿಷ್ಟಾಚಾರವನ್ನು ಕಾಪಾಡಿಕೊಳ್ಳಲಾಗಿಲ್ಲ ಎಂದು ಹೇಳಿದರು.


ಹೊಸ ಬಿಜೆಪಿ ನೇತೃತ್ವದ ಮೈತ್ರಿಕೂಟವು ತನ್ನ ಮೊದಲ ಕ್ಯಾಬಿನೆಟ್ ಸಭೆಯನ್ನು ನಡೆಸಿದ ದಿನದಂದು ನಾಗ್ಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಆವರ್ತಕ ತರಬೇತಿ ಕಾರ್ಯಕ್ರಮವಾದ ಕಾರ್ಯಕರ್ತರ ವಿಕಾಸ್ ವರ್ಗ್ ಸಮಾರೋಪದ ನಂತರ ಆರ್‌ಎಸ್‌ಎಸ್ ನಾಯಕರು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಭಾಗವತ್, ಒಮ್ಮತವನ್ನು ನಿರ್ಮಿಸುವ ಮಹತ್ವವನ್ನು ಒತ್ತಿ ಹೇಳಿದರು.

Recent News


Leave a Comment: