ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

Posted by Vidyamaana on 2024-04-01 19:50:03 |

Share: | | | | |


ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ನಾರಾಯಣಗುರು ವಿಚಾರ ವೇದಿಕೆ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ.

ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

Posted by Vidyamaana on 2023-05-02 04:31:44 |

Share: | | | | |


ಕಾವು : ಪಕ್ಷೇತರ ಅಭ್ಯರ್ಥಿ ಪುತ್ತಿಲ ಪರ ಸಮಾವೇಶ : ಹಲವಾರು ಮಂದಿ ಭಾಗಿ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರ ಸಮಾವೇಶ ಕಾವು ಪಂಚವಟಿಯಲ್ಲಿ ನಡೆಯಿತುಸಮಾವೇಶದಲ್ಲಿ ಅರುಣ್ ಪುತ್ತಿಲ ರವರ ಪರ ಮತಯಾಚನೆ ಮಾಡಲಾಯಿತು. ವೇದಿಕೆ ಪಕ್ಷೇತರ ಅಭ್ಯರ್ಥಿ ಪುತ್ತಿಲ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.ನೂರಾರು ಮಂದಿ ಕಾರ್ಯಕರ್ತರು, ಮಹಿಳೆಯರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು!

Posted by Vidyamaana on 2024-05-02 20:17:25 |

Share: | | | | |


ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು!


ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.

ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು - ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.

ಇಂದು (ಆ 11)ದ.ಕ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

Posted by Vidyamaana on 2023-08-11 01:57:38 |

Share: | | | | |


ಇಂದು (ಆ 11)ದ.ಕ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ವಿಮಾನದ ಮೂಲಕ ಅವರು ಆ.11ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12.30ಕ್ಕೆ ಪುತ್ತೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವರು.


 ಮಧ್ಯಾಹ್ನ 2 ಗಂಟೆಗೆ ಪುತ್ತೂರು ನಿರೀಕ್ಷಣಾ ಮಂದಿರಲ್ಲಿ ವಾಸ್ತವ್ಯ ಮಾಡಿ, ಮಧ್ಯಾಹ್ನ 3 ಗಂಟೆಗೆ ಪುತ್ತೂರು ಸಾರ್ವಜನಿಕ ಆಸ್ಪತ್ರೆ ತಪಾಸಣೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.


ಸಂಜೆ 6 ಗಂಟೆಗೆ  ದರ್ಭೆಯಲ್ಲಿರುವ ಪುತ್ತೂರು ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ಮಾಡುವರು. ರಾತ್ರಿ 8.30ಕ್ಕೆ ಮಂಗಳೂರಿಗೆ ಆಗಮಿಸಿ, 9.50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

Posted by Vidyamaana on 2023-10-12 22:11:32 |

Share: | | | | |


ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


    ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಗುರುತಿಸಲಾಗಿದೆ.


    ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಬಿಟ್ಟು  ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ  ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ  ಡಸ್ಟರ್  ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


    ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ  ಎಂದು ಹೇಳಲಾಗಿದೆ.


     ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಕ್ತಿ ಯೋಜನೆಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-06-11 07:44:01 |

Share: | | | | |


ಶಕ್ತಿ ಯೋಜನೆಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಿದ್ದಾರೆ.

ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಇಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

Recent News


Leave a Comment: