ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಸುಳ್ಯ | ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

Posted by Vidyamaana on 2023-08-30 07:43:57 |

Share: | | | | |


ಸುಳ್ಯ | ಚಿರತೆ ಸಾವು ಪ್ರಕರಣ: ಇಬ್ಬರ ಬಂಧನ

ಸುಳ್ಯ: ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ.

ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

Posted by Vidyamaana on 2023-12-30 12:08:01 |

Share: | | | | |


ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.‌‌ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

Posted by Vidyamaana on 2024-07-24 08:25:31 |

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

Posted by Vidyamaana on 2024-06-20 22:16:01 |

Share: | | | | |


ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ನೀಡಿದೆ.

ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.

ಪಕ್ಷ ವಿರೋಧಿ ಚಟುವಟಿಕೆ ಪುತ್ತೂರು ಬಿಜೆಪಿ ಕಾರ್ಯಕರ್ತ ಮನೀಶ್ ಕುಲಾಲ್ ಪಕ್ಷದಿಂದ ವಜಾ

Posted by Vidyamaana on 2023-02-26 08:05:56 |

Share: | | | | |


ಪಕ್ಷ ವಿರೋಧಿ ಚಟುವಟಿಕೆ ಪುತ್ತೂರು ಬಿಜೆಪಿ ಕಾರ್ಯಕರ್ತ ಮನೀಶ್ ಕುಲಾಲ್ ಪಕ್ಷದಿಂದ  ವಜಾ

ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ ಬನ್ನೂರು ನಿವಾಸಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಮನೀಶ್ ಕುಲಾಲ್ ರನ್ನು ವಜಾಗೊಳಿಸಿರುವುದಾಗಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಮನೀಶ್ ಕುಲಾಲ್ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿರುವುದನ್ನು ಗಮನಿಸಿ ಪಕ್ಷದ ತೀರ್ಮಾನದಂತೆ ಶಿಸ್ತು ಕ್ರಮದ ಅನುಸಾರವಾಗಿ ತಕ್ಷಣಕ್ಕೆ ಜ್ಯಾರಿಗೆ ಬರುವಂತೆ ಬೂತ್ 55 ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂದು ಪಿ.ಜಿ.ಜಗನ್ನಿವಾಸ ರಾವ್ ತಿಳಿಸಿದ್ದಾರೆ.ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪುತ್ತಿಲ ಫಾರ್ ಪುತ್ತೂರು  ಅಭಿಯಾನದ ಮುಂಚೂಣಿಯಲ್ಲಿ ಮನೀಶ್ ಕುಲಾಲ್ ಗುರುತಿಸಿಕೊಂಡಿದ್ದರು. ವಾಟ್ಸಾಪ್ ಗ್ರೂಪುಗಳಲ್ಲಿ, ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಪುತ್ತಿಲ ಪರವಾಗಿ ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಅಭಿಯಾನ ನಡೆಸಲಾಗುತ್ತಿದೆ.

ತಿಂಗಳ ಹಿಂದೆ ಟ್ವಿಟರ್ ನಲ್ಲಿ ಪುತ್ತಿಲ ಫಾರ್ ಪುತ್ತೂರು ಅಭಿಯಾನ ನಡೆಸಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಗಮನ ಸೆಳೆಯುವ ಪ್ರಯತ್ನ ನಡೆಸಲಾಗಿತ್ತು. ಇದಕ್ಕೆ ಪುತ್ತೂರಿನ ಯುವಕರಿಂದ ಬೆಂಬಲ ಕೂಡ ವ್ಯಕ್ತವಾಗಿತ್ತು. ಈ ಅಭಿಯಾನ ಮಾಧ್ಯಮಗಳ ಗಮನ ಸೆಳೆಯುವಲ್ಲಿಯೂ ಸಫಲವಾಗಿತ್ತು. ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಅಗ್ರಗಣ್ಯ ನಾಯಕ ಅಮಿತ್ ಶಾ ಅವರನ್ನು ಪುತ್ತೂರಿಗೆ ಸ್ವಾಗತಿಸಿ ನಗರದಲ್ಲಿ ಅರುಣ್ ಕುಮಾರ್ ಪುತ್ತಿಲರ ಹೆಸರಿನಲ್ಲಿ ಹಲವು ಪ್ಲೆಕ್ಷ್ ಹಾಗೂ ಬ್ಯಾನರ್ ಗಳನ್ನು ಹಾಕಲಾಗಿತ್ತು. ಇದು ಕೂಡ ಅಭಿಯಾನದ ಭಾಗ ಎಂದೇ ರಾಜಕೀಯ ಪಂಡಿತರು ವಿಶ್ಲೇಷಿಸಿದ್ದರು.ಈ ಪ್ಲೆಕ್ಸ್ ಅಳವಡಿಕೆಯ ಕುರಿತು ಪತ್ರಕರ್ತರು ಪುತ್ತೂರು ಶಾಸಕರನ್ನು ಪ್ರಶ್ನಿಸಿದ್ದು ಆಗ ಅವರು ನೀಡಿದ ಉತ್ತರದಲ್ಲಿ ಉಲ್ಲೇಖಿಸಲಾದ ಅಣಬೆ ಶಬ್ದ ವಿವಾದಕ್ಕೆ ಕಾರಣವಾಗಿತ್ತು. ಅದರ ಮರುದಿನ ಪುತ್ತೂರಿನ ದರ್ಭೆಯಿಂದ ಬೊಳ್ವಾರುವರೆಗೆ ಅಮಿತ್ ಶಾ ಕಾರ್ಯಕ್ರಮದ ಪ್ರಚಾರರ್ಥ ನಡೆಸಿದ ಪಾದಯಾತ್ರೆ ನಡೆದಿದ್ದು, ಜಾಥ ಬೊಳ್ವಾರು ತಲುಪಿದ ವೇಳೆ ವೇಳೆ ಅಣಬೆ ಶಬ್ದ ಪ್ರಯೋಗವನ್ನು ಪ್ರಶ್ನಿಸಿ ಮನೀಶ್ ಕುಲಾಲ್ ನೇತ್ರತ್ವದಲ್ಲಿ ಪುತ್ತಿಲ ಅಭಿಮಾನಿಗಳ ತಂಡ ಶಾಸಕ ಮಠಂದೂರು ಅವರನ್ನು ಸಾರ್ವಜನಿಕವಾಗಿ ಪ್ರಶ್ನಿಸಿತ್ತು.ಇದಾದ ಬಳಿಕ ಪ್ರಕರಣ ಒಂದಷ್ಟು ತಣ್ಣಗಾದಂತೆ ಕಂಡು ಬಂದಿತಾದರೂ, ಇಂದು ಮತ್ತೆ ಟ್ವಿಟರ್ ನಲ್ಲಿ ಪುತ್ತಿಲ ಫಾರ್ ಪುತ್ತೂರು ಅಭಿಯಾನ ನಡೆಯುತ್ತಿದೆ. ಇದರ ಬೆನ್ನಲೆ ಮನೀಷ್ ಕುಲಾಲ್ ರನ್ನು ಪಕ್ಷದ ಜವಬ್ದಾರಿಯಿಂದ ವಜಾಗೊಳಿಸಿ ಬಿಜೆಪಿ ಅದೇಶಿಸಿದೆ.

.

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಹೃದಯಾಘಾತದಿಂದ ನಿಧನ

Posted by Vidyamaana on 2023-05-31 04:25:17 |

Share: | | | | |


ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯಾತ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ತಾಲೂಕಿನ ಪ್ರತಿಭೆ ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ

ಪಡಂಗಡಿ ಪೊಯ್ಕೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ

ಕ್ರೀಡಾ ಪ್ರತಿಭೆ

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿದ್ದ ಸಾಲಿಯತ್, ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿಯನ್ನು ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು.ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಹಿರಿಮೆಯನ್ನು ಹೆಚ್ಚಿಸಿದೆ.

ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.


Recent News


Leave a Comment: