ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಕಮಿಟಿಯ ಕೊಡುಗೆಯಾದ ದಾರಿದೀಪ ಉದ್ಘಾಟನೆ, ಸನ್ಮಾನ

Posted by Vidyamaana on 2024-08-16 04:18:47 |

Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಕಮಿಟಿಯ ಕೊಡುಗೆಯಾದ ದಾರಿದೀಪ ಉದ್ಘಾಟನೆ, ಸನ್ಮಾನ

ಪುತ್ತೂರು: ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಕಮಿಟಿ ಕೊಡುಗೆಯಾಗಿ ನೀಡಿದ ದಾರಿದೀಪದ ಉದ್ಘಾಟನೆಯನ್ನು ಅಜ್ಜಿಕಟ್ಟೆಯಲ್ಲಿ ಉದ್ಘಾಟಿಸಲಾಯಿತು.

ಅಜ್ಜಿಕಟ್ಟೆ ಮಸೀದಿಯ ಖತೀಬ್ ಉಸ್ತಾದ್ ಇಸಾಕ್ ದಾರಿಮಿ ದುವಾ ನೆರವೇರಿಸಿದರು. ಖಾಲಿದ್ ಮುಸ್ಲಿಯಾರ್ ಉಪಸ್ಥಿತಿಯಲ್ಲಿ ಮತ್ತು ಸಮಾಜ ಸೇವೆಯಲ್ಲಿ ತೊಡಗಿದ ಹಾಗೂ ದಾರಿ ದೀಪ ಮಾಡಲು ಸಹಕರಿಸಿದ ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಬಾಬು ಕಲ್ಲಗುಡ್ಡೆ ರವರಿಗೆ ಸನ್ಮಾನಿಸಲಾಯಿತು.



ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಜೂನ್ 30ರ ಗಡು

Posted by Vidyamaana on 2023-06-28 08:44:09 |

Share: | | | | |


ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಜೂನ್ 30ರ ಗಡು

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆಯನ್ನು ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಮಾಡುತ್ತಿದ್ದಾರೆ. 

ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.

ಬಿ.ಸಿ.ರೋಡ್-ಬಂಟ್ವಾಳ ಹಿಂದು ಸಂಘಟನೆಗಳ ಕಾರ್ಯಕರ್ತರ ಮಾರಾಮಾರಿ.! ಚೂರಿ ಇರಿತ..ಮೂವರು ಆಸ್ಪತ್ರೆಗೆ ದಾಖಲು

Posted by Vidyamaana on 2024-08-05 09:41:49 |

Share: | | | | |


ಬಿ.ಸಿ.ರೋಡ್-ಬಂಟ್ವಾಳ ಹಿಂದು ಸಂಘಟನೆಗಳ ಕಾರ್ಯಕರ್ತರ ಮಾರಾಮಾರಿ.! ಚೂರಿ ಇರಿತ..ಮೂವರು ಆಸ್ಪತ್ರೆಗೆ ದಾಖಲು

ಬಂಟ್ವಾಳ : ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವೈಯಕ್ತಿಕ ವಿಚಾರವಾಗಿ ನಡೆದ ಹೊಡೆದಾಟ ಚೂರಿ ಇರಿತದ ಮೂಲಕ ಕೊನೆಗೊಂಡಿದೆ.

ಬಿಸಿರೋಡಿನ ಹಿಂದೂ ಸಂಘಟನೆಯ ಯುವಕರ ತಂಡ ಹಾಗೂ ಬಂಟ್ವಾಳ ಹಿಂದೂ‌ ಸಂಘಟನೆಯ ಯುವಕರ ತಂಡದ ನಡುವೆ ನಡೆದ ಗಲಾಟೆ ಚೂರಿ ಇರಿತದಲ್ಲಿ ಅಂತ್ಯಗೊಂಡಿದೆನ್ನಲಾಗಿದೆ.

ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ-ತಮಿಳುನಾಡು ಮೂಲದ ಇಬ್ಬರು ಕಳ್ಳಿಯರ ಬಂಧನ

Posted by Vidyamaana on 2023-12-21 11:45:36 |

Share: | | | | |


ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ-ತಮಿಳುನಾಡು ಮೂಲದ ಇಬ್ಬರು ಕಳ್ಳಿಯರ ಬಂಧನ

ಬೆಳ್ತಂಗಡಿ: ಉದ್ಯೋಗಿಯೊಬ್ಬರು ಸರಕಾರಿ ಬಸ್‌ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತ ಆರೋಪಿಗಳು.


ಡಿ. 12ರಂದು ಸರಕಾರಿ ಉದ್ಯೋಗಿ ವಾರಿಜಾ ಅವರು ಧರಿಸಿದ್ದ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವು ಸರಕಾರಿ ಬಸ್‌ ಹತ್ತುವ ವೇಳೆ ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.


ವಾರಿಜಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ಅವರ್ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಡಿ. 20ರಂದು ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.


ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.


ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು ನಗರಸಭೆ:2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ- ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ

Posted by Vidyamaana on 2024-09-03 16:00:32 |

Share: | | | | |


ಪುತ್ತೂರು ನಗರಸಭೆ:2ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ- ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಬಾಲಚಂದ್ರ

ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಲೀಲಾವತಿ ಅಣ್ಣು ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಲು ಸೂಚನೆಯಂತೆ ಅವರು ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಕಾರ್ಗಿಲ್ ವಿಜಯೋತ್ಸವದ 25ನೇಯ ವರ್ಷಾಚರಣೆ : ಪರಮವೀರ ಚಕ್ರ ಪುರಸ್ಕೃತ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಹಾಗೂ ಸೇನಾಪದಕ ಪುರಸ್ಕೃತ ಕ್ಯಾಪ್ಟನ್ ನವೀನ್ ನಾಗಪ್ಪರಿಗೆ ಗೌರವಾರ್ಪಣೆ

Posted by Vidyamaana on 2024-07-20 06:41:05 |

Share: | | | | |


ಕಾರ್ಗಿಲ್ ವಿಜಯೋತ್ಸವದ 25ನೇಯ ವರ್ಷಾಚರಣೆ : ಪರಮವೀರ ಚಕ್ರ ಪುರಸ್ಕೃತ ಕ್ಯಾಪ್ಟನ್ ಯೋಗೀಂದ್ರ ಸಿಂಗ್ ಯಾದವ್ ಹಾಗೂ ಸೇನಾಪದಕ ಪುರಸ್ಕೃತ ಕ್ಯಾಪ್ಟನ್ ನವೀನ್ ನಾಗಪ್ಪರಿಗೆ ಗೌರವಾರ್ಪಣೆ

ಪುತ್ತೂರು: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ಅಮ‌ರ್ ಜವಾನ್‌ ಜ್ಯೋತಿ ಸಂರಕ್ಷಣಾ ಸಮಿತಿಗಳು ಅನ್ಯಾನ್ಯ ಸಂಘಟನೆಗಳ ಸಹಕಾರದೊಂದಿಗೆ ಜು.19ರ ಶುಕ್ರವಾರದಂದು ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು.

ಪಾಕಿಸ್ಥಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ ಕಾಲುಗಳು ಛಿದ್ರವಾದವು. ಆದರೂ ತುಟಿಪಿಟಕ್ಕೆನ್ನದೆ ಸಾವನ್ನು ಹತ್ತಿರದಿಂದ ಕಂಡು ಮನಸ್ಸು ಗಟ್ಟಿ ಮಾಡಿ ಕೈಯಲ್ಲಿದ್ದ ಗ್ರೆನೇಡ್ ಎಸೆದು ಪಾಕಿಸ್ಥಾನದ ಸೈನಿಕರನ್ನು ಸುಟ್ಟುಹಾಕಿದೆ. ಇದ್ದಕ್ಕಿದ್ದಂತೆ ದಾಳಿಯಾದದ್ದನ್ನು ಕಂಡ ಪಾಕಿಸ್ಥಾನಿ ಸೈನಿಕರು ಭಾರತದ ಮತ್ತೊಂದು ಸೇನಾ ತುಕಡಿ ತಮ್ಮನ್ನು ಆಕ್ರಮಿಸುತ್ತಿದೆ ಎಂದು ಭಾವಿಸಿ ಓಡತೊಡಗಿದರು.

ದೇಶಕ್ಕಾಗಿ ಈ ದೇಹ ಸಮರ್ಪಣೆಯಾಗಬೇಕೆಂಬ ಒಂದೇ ಕನಸಿನೊಂದಿಗೆ ಸೇನೆಗೆ ಸೇರಿ ಸೇವೆ ಸಲ್ಲಿಸುವುದಕ್ಕೆ ಸಾಧ್ಯವಾಯಿತು. ಅಕ್ಷರಶಃ ತೆವಳಿಕೊಂಡು ಕಡಿದಾದ ಬೆಟ್ಟವನ್ನೇರುತ್ತಾ ವಿರೋಧಿಗಳೊಂದಿಗೆ ಹೋರಾಡಬೇಕಿತ್ತು.

ಆದರೆ ರಾಷ್ಟ್ರ ಎಂಬ ಭಾವನೆ ಬಂದಾಗ ಎಲ್ಲವೂ ಸಾಧ್ಯವಾಗುತ್ತದೆ. ದೇಶದ ಒಳಗಿನ ವ್ಯವಸ್ಥೆ ಸದೃಢವಾಗಿ ಬೆಳೆಯಬೇಕಾದರೆ ಸೈನ್ಯ ಗಡಿ ಭಾಗದಲ್ಲಿ ಸದಾ ಸನ್ನದ್ಧವಾಗಿರಬೇಕು ಎಂದು ನುಡಿದರು. ಇಂದು ನಾವು ಸಿನೆಮಾ ನಟರನ್ನು, ಕ್ರಿಕೆಟಿಗರನ್ನು ಹೀರೋಗಳಾಗಿ ಕಾಣುತ್ತಿದ್ದೇವೆ. ಆದರೆ ನಮಗಾಗಿ ಪ್ರಾಣತೆತ್ತ ಯೋಧರನ್ನು ನಿರ್ಲಕ್ಷಿಸುತ್ತಿದ್ದೇವೆ. ನಮ್ಮನ್ನು ಕಾಪಾಡುವ ಹಾದಿಯಲ್ಲಿ ಜೀವ ಅರ್ಪಿಸಿದ ಯೋಧರನ್ನು ನಮ್ಮ ಆದರ್ಶವಾಗಿ ಸ್ವೀಕರಿಸಬೇಕು. ಸ್ಪಷ್ಟ ಗುರಿಯೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದರಲ್ಲದೆ ಜೀವನ ತುಚ್ಚವಾದದ್ದಲ್ಲ, ಅದು ಅಮೂಲ್ಯವಾದದ್ದು. ಈ ಬದುಕನ್ನು ರೀಲ್ಸ್ ಮಾಡುತ್ತಾ, ರಾತ್ರಿ ನಿದ್ದೆಗೆಡುತ್ತಾ ಹಾಳುಮಾಡಿಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಕರೆಯಿತ್ತರು.

Recent News


Leave a Comment: