ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಯುವತಿ ನಾಪತ್ತೆ

Posted by Vidyamaana on 2024-02-29 04:29:14 |

Share: | | | | |


ಯುವತಿ ನಾಪತ್ತೆ

ಕಾರ್ಕಳ; ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದಲ್ಲಿ ನಡೆದಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ, ಕನ್ನಡ, ತುಳು, ಇಂಗ್ಲೀಷ್ ಹಾಗೂ ಕುಡುಬಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ A.: 08253-271100, ಸಂಖ್ಯೆ 9480805470, 9480805471, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕರು A.: 08258-231083, .: 9480805435, ಜಿಲ್ಲಾ ಪೊಲೀಸ್‌ ಕಚೇರಿ ದೂ.ಸಂಖ್ಯೆ: 0820-2534777 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಜೆಕಾರು ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

Posted by Vidyamaana on 2024-06-24 14:11:13 |

Share: | | | | |


ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!

ಬೆಂಗಳೂರು : ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಪ್ರಮಾಣ ವಚನ (MLC Oath Ceremony) ಬೋಧಿಸಿದರು

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.

ಕಲಬುರಗಿ: ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ

Posted by Vidyamaana on 2024-03-25 11:54:53 |

Share: | | | | |


ಕಲಬುರಗಿ: ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್.ಅಶೋಕ

ಕಲಬುರಗಿ, ಮಾ.24: ವಿಪಕ್ಷ ನಾಯಕ ಆರ್.ಅಶೋಕ(R Ashoka) ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ?


ಈ ಹಿಂದೆ ಸದನದಲ್ಲಿ ತಮ್ಮನ್ನು ಹೊಗಳುವ ಭರದಲ್ಲಿ ಬಿಜೆಪಿಯನ್ನು ಬೆಂಬಲಿಸುವ ಬಜರಂಗದಳದ ಕಾರ್ಯಕರ್ತರ ವಿರುದ್ಧ “ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಗೂಂಡಾ ಕಾಯ್ದೆ ಹಾಕಿದ್ದೆ”ಎಂದು ಹೇಳಿದ್ದರು. ಆ ಮೂಲಕ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತಿದ್ದ ಅವರು ಬಜರಂಗದಳ ಕಾರ್ಯಕರ್ತರ ಕ್ಷಮೆ ಕೇಳಿದ್ದರು. ಇದೀಗ ಕುಂಕುಮ ಹಣೆಗೆ ಇಡಲು ನಿರಾಕರಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ. ಬಳಿಕ ವಿಶ್ವನಾಥ್ ಶಾಲು ಹಾಕಿ ಸನ್ಮಾನಿಸಿದರು.

ಜೂ.11: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ

Posted by Vidyamaana on 2023-06-09 16:47:53 |

Share: | | | | |


ಜೂ.11: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಮಂಗಳೂರಿಗೆ

ಮಂಗಳೂರು: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂ.11ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಅವರು ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ದಿನ ರಾತ್ರಿ ಬೆಂಗಳೂರಿಗೆ ಮರಳಲಿದ್ದಾರೆ.

ಜೂ.11ರಂದು ಬೆಳಗ್ಗೆ 8:35ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 12:30ಕ್ಕೆ ಬಿಜೈಯಲ್ಲಿರುವ ಸರಕಾರಿ ಬಸ್ ನಿಲ್ದಾಣದಲ್ಲಿ ‘ಶಕ್ತಿ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅಪರಾಹ್ನ 3ಕ್ಕೆ ದ.ಕ.ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿಪರಿಶೀಲನೆ ಮಾಡುವರು. ರಾತ್ರಿ 9:50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ

ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

Posted by Vidyamaana on 2024-03-31 11:00:28 |

Share: | | | | |


ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು :ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ಮಾ 31ರಂದು ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಚಾಲನೆ ನೀಡಲಾಯಿತು , ಈ ಸಂಧರ್ಭದಲ್ಲಿ ಎಪ್ರಿಲ್ 2ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಮಾಹಿತಿ ನೀಡಲಾಯಿತು .

ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

Posted by Vidyamaana on 2023-10-12 22:11:32 |

Share: | | | | |


ಹೈವೇ ಬದಿಯಲ್ಲಿ ನಡೆದುಕೊಂಡು ಹೋಗ್ತಿದ್ದ ಯುವತಿಗೆ ಕಾರು ಡಿಕ್ಕಿ

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.


    ಮೃತಪಟ್ಟ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಎಂದು ಗುರುತಿಸಲಾಗಿದೆ.


    ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲಸ ಬಿಟ್ಟು  ಬಸ್ ಮೂಲಕ ಬಂದು ದಾಸಕೋಡಿ ಎಂಬಲ್ಲಿ  ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ  ಡಸ್ಟರ್  ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


    ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ತುಸು ದೂರದ ತನಕ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಕಾರು ಕೂಡ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ  ಎಂದು ಹೇಳಲಾಗಿದೆ.


     ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Recent News


Leave a Comment: