ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

Posted by Vidyamaana on 2023-04-17 04:18:37 |

Share: | | | | |


ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್

ಬೆಂಗಳೂರು: ಬಿಜೆಪಿ ಟಿಕೆಟ್‌ ನಿರಾಕರಣೆಯಿಂದ ತೀವ್ರ ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.ಖರ್ಗೆ ಅವರು ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್‌, ಶೆಟ್ಟರ್‌ ಒಬ್ಬರ ಶ್ರೇಷ್ಠ, ಹಾಗೂ ಸರಳ, ಸಜ್ಜನಿಕೆಯ ರಾಜಕಾರಣಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ಸಿಎಂ ಆಗಿ, ಸ್ಪೀಕರ್‌ ಆಗಿ ಕೆಲಸ ಮಾಡಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಮಾತನಾಡಿ, ಜಗದೀಶ್‌ ಶೆಟ್ಟರ್‌ ಯೊಬ್ಬ ಉತ್ತಮ ನಾಯಕ. ಅವರು ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಶೆಟ್ಟರ್‌ ಕಾಂಗ್ರೆಸ್‌ ಸೇರುತ್ತಿದ್ದಾರೆ. ಶೆಟ್ಟರ್‌ ಪಕ್ಷ ಸೆರ್ಪಡೆಯಿಂದ ಉತ್ತರ ಕರ್ನಾಟಕದ ಭಾಗಕ್ಕೆ ಶಕ್ತಿ. ಶೆಟ್ಟರ್‌ ಅಭಯ್‌ ಸಿಂಗ್‌ ಪಾಟೀಲ್‌ ಸೇರಿ, ಹಲವು ನಾಯಕರು ಕಾಂಗ್ರೆಸ್‌ ಸೆರ್ಪಡೆಯಾಗುತ್ತಿದ್ದಾರೆ. ಶೆಟ್ಟರ್‌ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅದೇ ರೀತಿ ನಮ್ಮ ಪಕ್ಷದಲ್ಲೂ ಕೆಲಸ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ.  ಕರ್ನಾಟಕದಲ್ಲಿ ನಾವು 150 ಸ್ಥಾನವನ್ನು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ ಪಕ್ಷಕ್ಕೆ ಜಗದೀಶ್‌ ಶೆಟ್ಟರ್‌ ಅವರನ್ನು ಸ್ವಾಗತಿಸುತ್ತೇನೆ ಎಂದರು.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಜಗದೀಶ್‌ ಶೆಟ್ಟರ್‌,  ನಾನು ಬಿಜೆಪಿ ಬಿಟ್ಟು, ಕಾಂಗ್ರೆಸ್‌ ಸೇರಿರುವುದು ಬಹಳ ಜನಕ್ಕೆ ಅಚ್ಚರಿಯಾಗಿದೆ. ನಾನು ಬಿಜೆಪಿಯನ್ನು ಕಟ್ಟಿ ಬೆಳೆಸಿದ ವ್ಯಕ್ತಿ.  ಬಿಜೆಪಿ ನನಗೆ ಎಲ್ಲ ರೀತಿಯ ಗೌರವವನ್ನು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಾನು ನಿಭಾಯಿಸಿದ್ದೇನೆ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ನೋವಾಗಿದೆ. ಜನರ ಆರ್ಶೀವಾದದಿಂದ ನಿರಂತರವಾಗಿ ಗೆಲ್ಲುತ್ತಾ ಬಂದಿದ್ದೇನೆ. ಈ ಬಾರಿ ಟಿಕೆಟ್‌ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್‌ ಇಲ್ಲ ಎಂದಾಗ ತುಂಬಾ ಬೇಸರವಾಯಿತು. ಮೊದಲೇ ಟಿಕೆಟ್‌ ಇಲ್ಲ ಎಂದಿದ್ದರೆ, ಬೇಜಾರ್‌ ಆಗುತ್ತಿರಲಿಲ್ಲ. ಹಿರಿಯ ನಾಯಕನನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಬಿಜೆಪಿ ಪಕ್ಷ ಕಟ್ಟಿದ ನಾಯಕನಿಗೆ ಬೆಲೆ ಸಿಗಲಿಲ್ಲ. ಕಳೆದ 6 ತಿಂಗಳಿನಿಂದ ಪಕ್ಷ ನನ್ನನು ಕಡೆಗಣನೆ ಮಾಡಿದೆ. ಪಕ್ಷ ನನ್ನನು ಒತ್ತಾಯಪೂರ್ವಕವಾಗಿ ಹೊರ ಹಾಕಿದೆ. ಹಾಗಾಗಿ ನಾನು ಕಾಂಗ್ರೆಸ್‌ ನ ತತ್ವ ಸಿದ್ದಾಂತವನ್ನು ಒಪ್ಪಿ, ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇನೆ ಎಂದರು.

ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

Posted by Vidyamaana on 2023-11-17 20:00:56 |

Share: | | | | |


ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

ಪ್ರೀತಿಸುವ ಗಂಡ, ಮುದ್ದಾದ ಮಕ್ಕಳು, ಜೀವನವನ್ನು ಸಾಗಿಸಲು ಬೇಕಾದಷ್ಟು ಸಂಪಾದನೆ ಇನ್ನೇನು ಬೇಕು ಹೇಳಿ ಬದುಕಲ್ಲಿ. ಆದರೆ ಅಂತಹ ಸುಂದರ ಬದುಕಲ್ಲಿ ಕ್ಯಾನ್ಸರ್​ ಎನ್ನುವ ಬಿರುಗಾಳಿ ಬೀಸಿದಾಗ ಅದನ್ನು ತಡೆದುಕೊಳ್ಳುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ ಈ ಮಹಿಳೆ ತನ್ನ ಸಾವಿನ ಸುದ್ದಿಯನ್ನು ತಾನೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.


ಎಂದೂ ತನಗೆ ಇಂಥಾ ಪರಿಸ್ಥಿತಿ ಬಂದುಬಿಡ್ತಲ್ಲಾ ಎಂದು ದೇವರನ್ನು ಶಪಿಸಿಲ್ಲ, ಇರುವಷ್ಟು ದಿನ ಇದ್ದ ಜೀವನವನ್ನು ಖುಷಿಯಿಂದಲೇ ಕಳೆದಿದ್ದಾರೆ ಈ ಮಹಿಳೆ. ಈ ಮಹಿಳೆ ಹೆಸರು ಕೇಸಿ ಮ್ಯಾಕ್​ಇಂಟೈರ್​ ಆಕೆ ಅಂಡಾಶಯದ ಕ್ಯಾನ್ಸರ್​ನಿಂದ ಭಾನುವಾರ ನಿಧನರಾಗಿದ್ದಾರೆ. ಆಕೆ ಸಾಯುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಾವನ್ನು ಘೋಷಿಸಿ ಬಳಿಕ ಪ್ರೀತಿಪಾತ್ರರಿಗೆ ಕೊನೆಯ ವಿದಾಯವನ್ನು ಬರೆದಿದ್ದಳು.ನೀವು ಈ ಪೋಸ್ಟ್​ ಅನ್ನು ಓದುತ್ತಿದ್ದರು ನಾನು ಈ ಜಗತ್ತಿನಲ್ಲಿ ಇಲ್ಲ ಎಂದರ್ಥ, ನನಗೆ ಅಂಡಾಶಯ ಕ್ಯಾನ್ಸರ್​ ಇತ್ತು ಅದನ್ನು ನಾಲ್ಕನೇ ಹಂತವನ್ನು ತಲುಪಿತ್ತು. ಚಿಕಿತ್ಸೆ ಪಡೆದ ಬಳಿಕವೂ ಪುನರಾವರ್ತನೆಯಾಗಿದೆ.


ಈ ಐದು ತಿಂಗಳು ವರ್ಜೀನಿಯಾ, ರೋಡ್​ ಐಲೆಂಡ್​ ಹಾಗೂ ನ್ಯಾಯಾರ್ಕ್​ನಲ್ಲಿ ನನ್ನ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಜತೆ ಕಳೆಯಲು ಅವಕಾಶ ದೊರೆತಿರುವುದಕ್ಕೆ ನಾನು ಧನ್ಯ.


ಆಸ್ಪತ್ರೆಗೆ ತೆರಳಿ ಯಾರಿಗೂ ತಿಳಿಯದಂತೆ ಬೇರೆಯವರ ವೈದ್ಯಕೀಯ ಸಾಲವನ್ನು ತಾವು ಪಾವತಿಸಲು ಚಾರಿಟಿಯನ್ನು ತೆರೆಯುವುದು ಆಕೆಯ ಕನಸಾಗಿತ್ತು, ಆ ಕನಸನ್ನು ಸಾಕಾರಗೊಳಿಸುತ್ತೇನೆ ಎಂದು ಮಹಿಳೆಯ ಪತಿ ತಿಳಿಸಿದ್ದಾರೆ. ಶುಕ್ರವಾರದವರೆಗೆ 1.09 ಕೋಟಿ ರೂ. ಸಂಗ್ರಹವಾಗಿದೆ.

ಕೇಸಿ ಅವರು ಮಕ್ಕಳು ಹಾಗೂ ವಯಸ್ಕರಿಗೆ ಪುಸ್ತಕಗಳನ್ನು ಪ್ರಕಟಿಸುವ ಪೆಂಗ್ವಿನ್ ರಾಂಡಮ್​ ಹೌಸ್​ನಲ್ಲಿ ಪ್ರಕಾಶಕರಾಗಿದ್ದರು.ಕೇಸಿ ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ, ನಾವು ನಿಮ್ಮನ್ನು ಕಳೆದುಕೊಂಡುಬಿಟ್ಟೆವು, ನೀನೆಲ್ಲೇ ಇದ್ದರೂ ನಮ್ಮೊಂದಿಗೆ ಇದ್ದೀಯ ಎನ್ನುವ ಭಾವನೆ ನಮ್ಮದು ಎಂದು ಪತಿ ಬರೆದುಕೊಂಡಿದ್ದಾರೆ.

ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ

Posted by Vidyamaana on 2023-10-17 10:10:52 |

Share: | | | | |


ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ   ನಿಧನ

ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾದರು.



ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ರವರಿಗೆ ಇಂದು ಮುಂಜಾನೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.


ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ..

ಉಪ್ಪಿನಂಗಡಿ : ಇ-ಸಿಗರೇಟು ಮಾರಾಟ ಮೊಬೈಲ್ ಅಂಗಡಿಗೆ ಪೊಲೀಸ್ ದಾಳಿ .

Posted by Vidyamaana on 2023-02-26 03:09:22 |

Share: | | | | |


ಉಪ್ಪಿನಂಗಡಿ : ಇ-ಸಿಗರೇಟು ಮಾರಾಟ ಮೊಬೈಲ್ ಅಂಗಡಿಗೆ ಪೊಲೀಸ್ ದಾಳಿ .

ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮುಕ್ವೆ ಮಣಿಯ ನಿವಾಸಿ ಶೇಖ್ ಹಾರೂನ್ ರವರ ಮಗ ಶೇಖ್ ಶಾಹಿದ್ ನನ್ನು ವಶಕ್ಕೆ ಪಡೆದು ಜಾಮೀನಿನ ಮೂಲಕ ಬಿಡುಗಡೆ ಯಾದ ಘಟನೆ ಫೆ.25 ಶನಿವಾರ ರಾತ್ರಿ ನಡೆದಿದೆ.

ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್‌ನ ಹಿಂಬದಿಯ ಒಳಸಂದಿನಲ್ಲಿರುವ  4 U Best service ಮೊಬೈಲ್‌ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದ್ದ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್‌. ಹಾಗೂ ಉಪ್ಪಿನಂಗಡಿ ಪೊಲೀಸ್‌ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ, ಸ್ಟೋಕ್ ಮಾಡಲು ಬೇಕಾದ ಟ್ಯೂಬ್ ಗಳನ್ನು ವಶಕ್ಕೆ ತೆಗೆದುಕೊಂಡಿದೆ. ಯುವ ಜನತೆಯನ್ನು ಆಕರ್ಷಿಸುವ ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಇದು ರಾಜ್ಯದಲ್ಲೇ ಅಪರೂಪದ ಪ್ರಕರಣವಾಗಿದೆ. ಅಕ್ರಮವಾಗಿ ಮಾರಾಟ ಮಾಡಲು ಇರಿಸಿಕೊಂಡಿದ್ದ  ಸುಮಾರು 52  ನಿಷೇಧಿತ ಇ-ಸಿಗರೇಟ್‌ ಇದ್ದು, ಇವುಗಳ ಅಂದಾಜು ಮೌಲ್ಯ ಒಟ್ಟು 26,000/ ಅಂದಾಜಿಸಲಾಗಿದೆ.ನಿಷೇಧಿತ ಇ- ಸಿಗರೇಟ್ ಮಾರಾಟ ಮಾಡುತ್ತಿದ್ದವನ ಮೇಲೆ ಎಲೆಕ್ಟ್ರಾನಿಕ್ ಸಿಗರೇಟ್ ನಿಷೇಧ  ಕಾಯ್ದೆ 2019 ರಂತೆ ಕ್ರಮ ಕೈಗೊಳ್ಳಲಾಗಿದೆ.

ಸಾಲು ಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಸಿದ್ದರಾಮಯ್ಯ ಆದೇಶ

Posted by Vidyamaana on 2023-05-30 16:17:22 |

Share: | | | | |


ಸಾಲು ಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ : ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಮುಂದುವರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. 

ಅಲ್ಲದೇ, ಪರಿಸರ ರಾಯಭಾರಿಯಾಗಿ ಸಾಲುಮರದ ತಿಮ್ಮಕ್ಕ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಬೆಳ್ಳಾರೆ : ಅನ್ಯಮತೀಯ ಯುವಕನಿಂದ ಯುವತಿಗೆ ಕಿರುಕುಳ ಆರೋಪ : ಯುವಕ ಪೊಲೀಸ್ ವಶಕ್ಕೆ

Posted by Vidyamaana on 2023-11-08 21:31:21 |

Share: | | | | |


ಬೆಳ್ಳಾರೆ : ಅನ್ಯಮತೀಯ ಯುವಕನಿಂದ ಯುವತಿಗೆ ಕಿರುಕುಳ ಆರೋಪ : ಯುವಕ ಪೊಲೀಸ್ ವಶಕ್ಕೆ

ಬೆಳ್ಳಾರೆ :ನಿಂತಿಕಲ್ಲಿನಲ್ಲಿ  ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಇಂದು ರಾತ್ರಿ ನಡೆದಿದೆ.

ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ  ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ ಅನ್ಯಮತೀಯನಾಗಿರುವುದರಿಂದ  ಠಾಣೆಯ ಎದುರು ಹಿಂದು ಕಾರ್ಯಕರ್ತರು ಜಮಾಯಿಸಿರುವುದಾಗಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.



Leave a Comment: