ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಸುದ್ದಿಗಳು News

Posted by vidyamaana on 2024-07-05 12:01:03 |

Share: | | | | |


ಯು ಕೆ ಎಲೆಕ್ಷನ್ ನಲ್ಲಿ ಹೀನಾಯ ಸೋಲು; ರಿಶಿ ಸುನಕ್ ಫಸ್ಟ್ ರಿಯಾಕ್ಷನ್

ಲಂಡನ್ : ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ.

ಹಾಲಿ ಪ್ರಧಾನಿ ರಿಷಿ ಸುನಕ್‌(Rishi Sunak) ಅವರ ಪಕ್ಷ ಕನ್ಸರ್ವೇಟಿವ್‌ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು


ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್‌ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್‌ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ಪಕ್ಷಗಳ ಬಲಾಬಲ ಹೇಗಿದೆ?

ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,

ಕನ್ಸರ್ವೇಟಿವ್‌ ಪಕ್ಷ ಕೇವಲ – 81

ಲೇಬರ್ ಪಾರ್ಟಿ - 360

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) - 3

ಲಿಬರಲ್ ಡೆಮೋಕ್ರಾಟ್‌ಗಳು - 49

ರಿಫಾರ್ಮ್‌ ಯುಕೆ - 3

ಇತರೆ - 1

ಎಕ್ಸಿಟ್‌ ಪೋಲ್‌ ಭವಿಷ್ಯ ಏನು?


ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್‌ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್‌ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್‌ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್‌ ಪೋಲ್‌ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.


ಕನ್ಸರ್ವೇಟಿವ್‌: 131

ಲೇಬರ್ ಪಕ್ಷ: 410

ಲಿಬರಲ್ ಡೆಮೋಕ್ರಾಟ್‌ಗಳು: 61

ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10

ರಿಫಾರ್ಮ್ ಯುಕೆ: 13

ಪ್ಲೈಡ್ ಸಿಮ್ರು: 4

ಗ್ರೀನ್ಸ್: 2

ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ

44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.

 Share: | | | | |


ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

Posted by Vidyamaana on 2024-01-23 13:57:19 |

Share: | | | | |


ಅಯೋಧ್ಯಾ ಕರಸೇವಕ ನಟ್ಟೋಜ ಶಿವಾನಂದ ರಾವ್ ಅವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರು: ಪುತ್ತೂರಿನ  ಹಿರಿಯ ಅಯೋಧ್ಯಾ ಕರಸೇವಕರಾದ ನಟ್ಟೋಜ ಶಿವಾನಂದ ರಾವ್‌ ಅವರನ್ನು ಪುತ್ತಿಲ ಪರಿವಾರದಿಂದ ಸನ್ಮಾನಿಸಲಾಯಿತು.


ನಟ್ಟೋಜ ಶಿವಾನಂದ ರಾವ್ ಅವರು ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿರುವುದರ ಜತೆಗೆ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು, ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರೂ ಆಗಿದ್ದರು. ಅಯೋಧ್ಯೆ ಈ ಸಂದರ್ಭ ಅವರ ಪುತ್ರ, ಪುತ್ತೂರು ಅಂಬಿಕಾ ವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಡಿ ಕೆ ಶಿವಕುಮಾರ್

Posted by Vidyamaana on 2024-03-26 17:06:54 |

Share: | | | | |


ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಡಿ ಕೆ ಶಿವಕುಮಾರ್

ಬೆಳ್ತಂಗಡಿ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ದೇಶಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಸೀಟ್ ಹಂಚಿಕೆ ಕಾರ್ಯದಲ್ಲಿ ಪಕ್ಷದ ಮುಖಂಡರು ಬ್ಯುಸಿಯಾ ಗಿದ್ದರೇ, ಮತ್ತೊಂದೆಡೆ ಪ್ರಚಾರ ಆರಂಭಕ್ಕೆ ಮುನ್ನಾ ಟೆಂಪಲ್ ರನ್ ನಡೆಸುತ್ತಿದ್ದಾರೆ.ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಂದರ್ಭದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಲೋಕಸಭಾ ಎಲೆಕ್ಷನ್ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ

Posted by Vidyamaana on 2024-02-08 17:52:07 |

Share: | | | | |


ಲೋಕಸಭಾ ಎಲೆಕ್ಷನ್ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ

ಪುತ್ತೂರು: ಸತ್ಯಜಿತ್ ಸುರತ್ಕಲ್ ರವರಿಗೆ ಲೋಕಸಭಾ ಚುನಾವಣೆಗೆ ಭಾಜಪದಿಂದ ದ.ಕ ಜಿಲ್ಲೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಫೆ.25ರಂದು ಜಿಲ್ಲಾ ಮಟ್ಟದ ಆಗ್ರಹ ಸಭೆಯ ಪ್ರಯುಕ್ತ ಫೆ.9ರಂದು ಪುತ್ತೂರು ರೋಟರಿ ಕ್ಲಬ್ ಮನಿಶಾ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯು 5.30ಕ್ಕೆ ನಡೆಯಲಿದೆ ಎಂದು ಪುತ್ತೂರು ತಾಲೂಕು ಸತ್ಯಜಿತ್‌ ಸುರತ್ಕಲ್ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

Posted by Vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

Posted by Vidyamaana on 2024-03-08 07:22:23 |

Share: | | | | |


ಚಾಕೋಲೇಟ್‌ ಎಂದು ಭಾವಿಸಿ ಮಾತ್ರೆ ತಿಂದಿದ್ದ 4 ವರ್ಷದ ಮಗು ಸಾವು

ಪೋಷಕರೇ ಎಚ್ಚರ: ಮಕ್ಕಳ ಎದುರು ಮಾತ್ರೆಗಳನ್ನ ಇಟ್ಟು ಎಲ್ಲೂ ಹೋಗ್ಬೇಡಿ, ಅಪಾಯ ಕಟ್ಟಿಟ್ಟ ಬುತ್ತಿ


ಚಿತ್ರದುರ್ಗ: ಚಾಕೋಲೇಟ್‌ ಎಂದುಕೊಂಡು ಮನೆಯಲ್ಲಿದ್ದ ಮಾತ್ರೆ ಸೇವಿಸಿದ್ದ 4 ವರ್ಷದ ಗಂಡು ಮಗು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.ಚಿತ್ರದುರ್ಗ ತಾಲೂಕು ಕಡಬನಕಟ್ಟೆ ನಿವಾಸಿ ವಸಂತಕುಮಾರ್‌ ಹಾಗೂ ಪವಿತ್ರಾ ದಂಪತಿ ಪುತ್ರ ಹೃತ್ವಿಕ್‌ ಮೃತಪಟ್ಟ ಮಗು.ಮಾ.2ರಂದು ಮಧ್ಯಾಹ್ನ 12:30ರ ಸುಮಾರಿಗೆ ಮನೆಯಲ್ಲಿ ಯಾರೂ ಯಾರೂ ಇಲ್ಲದ ವೇಳೆ ಕಪಾಟಿನಲ್ಲಿದ್ದ ಮಾತ್ರೆಗಳನ್ನು ಮಗು ತಿಂದಿದೆ. ನಂತರ ಸುಸ್ತಾಗಿದ್ದು, ತಾಯಿಗೆ ಸನ್ನೆಯ ಮೂಲಕ ಮಾತ್ರೆ ತಿಂದಿರುವುದನ್ನು ತಿಳಿಸಿದೆ.


ತಕ್ಷಣ ಮಗುವನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಾ.3ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.6ರಂದು ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಈ ಕುರಿತು ಮೃತ ಮಗುವಿನ ತಂದೆ ವಸಂತಕುಮಾರ್‌ ತುರುವನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Posted by Vidyamaana on 2023-04-28 05:49:18 |

Share: | | | | |


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಿದ ಪುತ್ತಿಲ ರವರು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.



Leave a Comment: