ಪುತ್ತೂರು: ನೇಣು ಬಿಗಿದು ಅನ್ಸರ್ ಆತ್ಮಹತ್ಯೆ

ಸುದ್ದಿಗಳು News

Posted by vidyamaana on 2024-07-05 12:22:17 |

Share: | | | | |


ಪುತ್ತೂರು: ನೇಣು ಬಿಗಿದು  ಅನ್ಸರ್  ಆತ್ಮಹತ್ಯೆ

ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.

ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಡಕೆ ಗಾರ್ಬಲ್‌ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ಲಿಟ್ಲ್ ಫ್ಲವರ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ಗೆ ಆಯ್ಕೆ

Posted by Vidyamaana on 2024-03-14 13:35:59 |

Share: | | | | |


ಲಿಟ್ಲ್ ಫ್ಲವರ್ ಫ್ಲವರ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇನ್‌ಸ್ಪೈರ್‌ ಅವಾರ್ಡ್‌ಗೆ ಆಯ್ಕೆ

ಪುತ್ತೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಲ್ಲಿ ಹುದುಗಿರುವ ವಿಜ್ಞಾನ ಪ್ರತಿಭೆ ಹೊರ ತರುವ ಉದ್ದೇಶದಿಂದ ಕೇಂದ್ರ ಸರಕಾರ ಆರಂಭಿಸಿರುವ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಯಕ್ರಮದಡಿ 7 ನೇ ತರಗತಿಯ ಭಾರವಿ ಕೆ ಭಟ್ (ಡಾ. ರವಿಪ್ರಕಾಶ್ ಮತ್ತು ಡಾ ವಿಜಯ ಸರಸ್ವತಿ ದಂಪತಿಗಳ ಸುಪುತ್ರ ) ರವರು "ಹೈ ವೋಲ್ಟೇಜ್ ಡಿಟೆಕ್ಟರ್" ಎನ್ನುವ ಪರಿಕಲ್ಪನೆಯನ್ನು ಮಂಡಿಸಿ ಹಾಗೂ 7ನೇ ತರಗತಿಯ ಗಗನ್ ( ಚಂದ್ರಶೇಖರ ಬೆದ್ರಾಳ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ) ರವರು "ನೂಡಲ್ಸ್ ಮೇಕಿಂಗ್ ಮಷೀನ್ "ಎನ್ನುವ ಪರಿಕಲ್ಪನೆಯ ಸಲ್ಲಿಸಿ ಇನ್‌ಸ್ಪೈರ್‌ ಅವಾರ್ಡಿಗೆ ಆಯ್ಕೆಯಾಗಿದ್ದಾರೆ. ಎಂದು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Alert :ನಿಮ್ಮ ಮೇಲೆ ಗುಪ್ತಚರ ಕಣ್ಣು - ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ಓದಿ

Posted by Vidyamaana on 2024-06-23 13:15:57 |

Share: | | | | |


Alert :ನಿಮ್ಮ ಮೇಲೆ ಗುಪ್ತಚರ ಕಣ್ಣು - ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡುವವರು ತಪ್ಪದೇ ಇದನ್ನೊಮ್ಮೆ ಓದಿ

ಬೆಂಗಳೂರು : ನಮ್ಮ ದೇಶದಲ್ಲಿ ವಯಸ್ಕರ ಅಶ್ಲೀಲ ವಿಡಿಯೋಗಳನ್ನು ನೋಡುವುದು ನಿಷೇಧಿಸಲಾಗಿದೆ, ಆದರೆ ಇದರ ಹೊರತಾಗಿಯೂ, ಅಂತಹ ವಿಷಯವು ಅಂತರ್ಜಾಲದಲ್ಲಿ ಲಭ್ಯವಿದೆ ಮತ್ತು ಅನೇಕ ಜನರು ಅಂತಹ ವಿಷಯವನ್ನು ರಹಸ್ಯವಾಗಿ ನೋಡುತ್ತಾರೆ. ಅನೇಕ ಜನರು ವಯಸ್ಕರ ವಿಷಯವನ್ನು ಬ್ರೌಸರ್ನ ಖಾಸಗಿ ಮೋಡ್ನಲ್ಲಿ ನೋಡುತ್ತಾರೆ ಮತ್ತು ಅವರು ಇದನ್ನು ಮಾಡುವುದನ್ನು ಯಾರೂ ನೋಡುತ್ತಿಲ್ಲ ಎಂದು ಭಾವಿಸುತ್ತಾರೆ, ಆದರೆ ನೀವು ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿರುವಾಗ ಸಾವಿರಾರು ಎಐ ಬಾಟ್ ಗಳು ನಿಮ್ಮ ಮೇಲೆ ಕಣ್ಣಿಡುತ್ತವೆ.

ನಿಮ್ಮ ಮೇಲೆ ಗುಪ್ತಚರ ಕಣ್ಣು:

ನಿಮ್ಮ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೀವು ನೋಡಿದಾಗಲೆಲ್ಲಾ, ನಿಮ್ಮ ಮೊಬೈಲ್ ಸೇವಾ ಆಪರೇಟರ್ ಮೊದಲು ಅದರ ಬಗ್ಗೆ ಮಾಹಿತಿಯನ್ನು ಪಡೆಯುತ್ತಾರೆ. ಇದರೊಂದಿಗೆ, ನಿಮ್ಮ ಫೋನ್ನಲ್ಲಿರುವ ಅಪ್ಲಿಕೇಶನ್ಗಳು ಸಹ ನಿಮ್ಮ ಮೇಲೆ ಕಣ್ಣಿಟ್ಟಿವೆ. ಫೋನ್ ನಲ್ಲಿರುವ ಅಪ್ಲಿಕೇಶನ್ ಗಳು ಈ ರೀತಿಯ ವಿಷಯವನ್ನು ನೋಡುವಾಗ ಗುಪ್ತಚರ ಸಂಸ್ಥೆಯಂತೆ ನಿಮ್ಮ ಮೇಲೆ ಕಣ್ಣಿಡುತ್ತವೆ. ಅಂದರೆ, ನಿಮ್ಮ ಸಂಪೂರ್ಣ ಬ್ರೌಸಿಂಗ್ ಇತಿಹಾಸವನ್ನು ಆ ಸಮಯದಲ್ಲಿ ಟ್ರ್ಯಾಕ್ ಮಾಡಲಾಗುತ್ತದೆ.

ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳನ್ನು ಸಹ ಸ್ಕ್ಯಾನ್ ಮಾಡಲಾಗುತ್ತದೆ:

ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

Posted by Vidyamaana on 2023-10-19 21:09:46 |

Share: | | | | |


ಸುರತ್ಕಲ್ ಬೀಚ್ ಗೆ ತೆರಳಿದ ವಿಟ್ಲ ಮೂಲದ ವಿದ್ಯಾರ್ಥಿನಿ ನಿಶಾ ನೀರಿನಲ್ಲಿ ಮುಳುಗಿ ಮೃತ್ಯು..!!!

ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.


ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.


ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.

ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.

ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

Posted by Vidyamaana on 2024-03-15 19:56:14 |

Share: | | | | |


ಹಾವೇರಿ ಬಿಜೆಪಿ ಕಚೇರಿಗೆ ಬೊಮ್ಮಾಯಿ ಆಗಮಿಸುತ್ತಿದಂತೆ ಕೋಲಾಹಲ

ಹಾವೇರಿ: ಮಾಜಿ ಸಿಎಂ, ಶಾಸಕ, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದಂತೆ ಗದ್ದಲ ಗಲಾಟೆ ನಡೆದ ಘಟನೆ ಶುಕ್ರವಾರ ನಡೆದಿದೆ.


ಕಚೇರಿಗೆ ಬೊಮ್ಮಾಯಿ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರ ಹೈ ಡ್ರಾಮಾ ನಡೆಸಿದ್ದಾರೆ.ಹಾವೇರಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಅವರನ್ನು ಎಳೆದಾಡಿ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿ ಗ್ರಾಮೀಣ ಭಾಗದ ಅಧ್ಯಕ್ಷರನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ. ನಗರ ಕಾರ್ಯಕರ್ತರನ್ನ ಗ್ರಾಮೀಣ ಭಾಗದ ಅಧ್ಯಕ್ಷರಾಗಿ ಮಾಡಿದ್ದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಬೊಮ್ಮಾಯಿ ಅವರು ಎಲ್ಲ ಸರಿ ಮಾಡುತ್ತೇನೆ, ಕಾರ್ಯಕರ್ತರು ಒಗಟ್ಟು ಪ್ರದರ್ಶಿಸಿ. ಚುನಾವಣೆ ಹತ್ತಿರ ಇದೆ ಗಲಾಟೆ ಸರಿಯಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿ ಕಾರ್ಯಕ್ರಮ ಮೊಟಕುಗೊಳಿಸಿ ಕಚೇರಿಯಿಂದ ಹೊರನಡೆದಿದ್ದಾರೆ.

ಅಮೆರಿಕ ಅಧ್ಯಕ್ಷರ ಐಫೋನ್‌ ಬಗ್ಗೆ ನಿಮಗೆಷ್ಟು ತಿಳಿದಿದೆ? ಹಿಂಬದಿಯ ಸೀಲ್‌ನಲ್ಲಿದೆ ರೋಚಕ ರಹಸ್ಯ

Posted by Vidyamaana on 2023-09-08 11:12:06 |

Share: | | | | |


ಅಮೆರಿಕ ಅಧ್ಯಕ್ಷರ ಐಫೋನ್‌ ಬಗ್ಗೆ ನಿಮಗೆಷ್ಟು ತಿಳಿದಿದೆ? ಹಿಂಬದಿಯ ಸೀಲ್‌ನಲ್ಲಿದೆ ರೋಚಕ ರಹಸ್ಯ

  ಭಾರತದ ನವದೆಹಲಿಯಲ್ಲಿ ಸೆಪ್ಟೆಂಬರ್ 9-10 ರವರೆಗೆ G20 ಶೃಂಗಸಭೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕೆ ವಿಶ್ವ ನಾಯಕರೆಲ್ಲಾ ನವದೆಹಲಿಗೆ ಬರುತ್ತಿದ್ದಾರೆ. ಇದಕ್ಕೆ ಅಮೆರಿಕದ ಅಧ್ಯಕ್ಷ ಜೋ ಬಿಡನ್‌ ಕೂಡ ಬರಲಿದ್ದು, ಭಾರತದಲ್ಲಿ ಮೂರು ದಿನಗಳ ಕಾಲ ಪ್ರಮುಖ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.ಹೌದು, ಅಮೆರಿಕದ ಅಧ್ಯಕ್ಷ ಜೋ ಬಿಡನ್‌ G20 ಶೃಂಗ ಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬರುತ್ತಿದ್ದಾರೆ. ಇದೇ ಸಮಯದಲ್ಲಿ ಜೋ ಬಿಡನ್‌ ಅವರ ವಿಶೇಷ ಐಫೋನ್‌ ಬಗ್ಗೆ ಕುತೂಹಲಕರ ಮಾಹಿತಿ ಹೊರಬಿದ್ದಿದೆ.

ಅಮೆರಿಕ ಅಧ್ಯಕ್ಷರ ಐಫೋನ್‌ ಹೇಗಿದೆ? ಅದರ ವಿವರಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.


ಅಮೆರಿಕ ಅಧ್ಯಕ್ಷರ ವಿಶೇಷ ಐಫೋನ್ ವಿವರ ಇಲ್ಲಿದೆ


ಅಮೆರಿಕ ಅಧ್ಯಕ್ಷರ ಐಫೋನ್‌ ಸಾಕಷ್ಟು ವಿಶೇಷವಾಗಿದೆ. ಅಮರಿಕ ಅಧ್ಯಕ್ಷರ ಫೋನ್‌ ವಿಚಾರದಲ್ಲಿಯೂ ಕೂಡ ಸಾಕಷ್ಟು ಸುರಕ್ಷತೆಗೆ ಅಧ್ಯತೆಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ವಿಶ್ವ ನಾಯಕರೊಂದಿಗಿನ ಪ್ರಮುಖ ಕರೆಗಳನ್ನು ಸುರಕ್ಷಿತವಾಗಿ ಮಾಡಲಾಗುತ್ತದೆ. ಇದರಿಂದ ಕರೆಯ ಇನ್ನೊಂದು ತುದಿಯಲ್ಲಿ ಯಾರಿದ್ದಾರೆ ಎಂಬುದರ ಬಗ್ಗೆ ಯಾರಿಗೂ ಕೂಡ ಮಾಹಿತಿ ಇರುವುದಿಲ್ಲ. ಸದ್ಯ ಅಮೆರಿಕ ಅಧ್ಯಕ್ಷರ ಐಫೋನ್‌ ಹಿಂಭಾಗದಲ್ಲಿ ವಿಶೇಷ ಚಿನ್ನದ ಅಧ್ಯಕ್ಷೀಯ ಮುದ್ರೆಯಿದೆ. ಈ ಸೀಲ್‌ನಲ್ಲಿ ಸೀಲ್ ಆಫ್ ದಿ ಪ್ರೆಸಿಡೆಂಟ್ ಆಫ್ ಅಮೇರಿಕಾ ಎಂದು ಬರೆಯಲಾಗಿದೆ.


ಈ ಸೀಲ್‌ ಅನ್ನು ಕೇವಲ ಲುಕ್‌ಗಾಗಿ ಅಳವಡಿಸಿರಬಹುದು. ಆದರೆ ನಿರ್ದಿಷ್ಟ ಡಿವೈಸ್‌ POTUS ಬಳಸುವ ಅಗತ್ಯ ಭದ್ರತಾ ಮಾನದಂಡಗಳನ್ನು ಹೊಂದಿದೆ ಎಂದು ಹೇಳಲಾಗಿದೆ. ಏಕೆಂದರೆ ಡೌಗ್ ಎಂಹಾಫ್, ಉಪಾಧ್ಯಕ್ಷ (ವಿಪಿ) ಹ್ಯಾರಿಸ್ ಅವರ ಪತಿ ಭದ್ರತಾ ಕಾರಣಗಳಿಂದಾಗಿ ಅವನ ಹೆಂಡತಿಗೆ ಕೂಡ ಸಂದೇಶಗಳನ್ನು ಕಳುಹಿಸುವುದನ್ನು ತಡೆಯುತ್ತದೆ ಎಂದು ಹೇಳಲಾಗಿದೆ. ಅಂದರೆ ಸರ್ಕಾರವು ಸಂವಹನವನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು.

ಭಾರತಕ್ಕೆ ಬಂದಿಳಿದ ಅಮೆರಿಕ ಅಧ್ಯಕ್ಷರ ಕಾರು

ಭಾರತದಲ್ಲಿ ನಡೆಯುತ್ತಿರುವ G20 ಶೃಂಗಸಭೆಗೆ ಅಮೆರಿಕ ಅಧ್ಯಕ ಜೋ ಬಿಡೆನ್‌ ಶುಕ್ರವಾರ ಆಗಮಿಸುತ್ತಿದ್ದಾರೆ. ಆದರೆ ಅಮೆರಿಕ ಅಧ್ಯಕರು ಬಳಸುವ ಕಾರು ಬೀಸ್ಟ್ ಭಾರತಕ್ಕೆ ಎಂಟ್ರಿ ನೀಡಿದೆ. ಇದು ಯುಎಸ್ ಅಧ್ಯಕ್ಷರಅಧಿಕೃತ ಕಾರಾಗಿದ್ದು, US ನಿಂದ ಭಾರತಕ್ಕೆ ಬೋಯಿಂಗ್ C-17 Globemaster III ಎಂಬ ಮಿಲಿಟರಿ ಸಾರಿಗೆ ವಿಮಾನದಲ್ಲಿ ಬಂದಿದೆ.


ಇನ್ನು ಜೋ ಬಿಡೆನ್ ಅವರ ದೆಹಲಿ ಭೇಟಿಗೆ ಮೂರು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ. ಮೊದಲನೆಯದ್ದು ಹೊರಗೆ ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದರೆ, ಎರಡು ಭಾರತದ ವಿಶೇಷ ರಕ್ಷಣಾ ಗುಂಪಿನ ಕಮಾಂಡೋಗಳನ್ನು ಮತ್ತು ಮೂರು ಒಳಗೆ ರಹಸ್ಯ ಸೇವಾ ಏಜೆಂಟ್‌ಗಳ ಭದ್ರತೆಯನ್ನು ಹೊಂದಿರುತ್ತಾರೆ

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

Recent News


Leave a Comment: