ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Posted by Vidyamaana on 2023-08-19 12:39:01 |

Share: | | | | |


ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಆಗಸ್ಟ್ 20 ರಂದು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.

ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್‌ ಲೇಕ್‌ನತ್ತ ನಾವು ಸಾಗುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.


ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಸವಾರಿ ಮಾಡುತ್ತಿದ್ದು, ಇತರ ಸವಾರರು ಅವರನ್ನು ಅನುಸರಿಸುತ್ತಿದ್ದಾರೆ. ಸಂಪೂರ್ಣ ಬೈಕಿಂಗ್ ಗೇರ್ ನಲ್ಲಿ ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಸುಂದರವಾದ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ಆನಂದಿಸುತ್ತಾರೆ.

ರಾಹುಲ್ ಗಾಂಧಿ ಪ್ರಸ್ತುತ ಲಡಾಖ್ ಪ್ರವಾಸದಲ್ಲಿದ್ದು, ಇದು ಆಗಸ್ಟ್ 25 ರವರೆಗೆ ಅಲ್ಲಿ ಸಮಯ ಕಳೆಯಲಿದ್ದಾರೆ ಎಂದು ತಿಳಿದು ಬಂದಿದೆ

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

Posted by Vidyamaana on 2024-05-26 11:01:07 |

Share: | | | | |


ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ದಿಢೀರ್ ಬದಲಾವಣೆ

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಅವರನ್ನು ದಿಢೀರ್ ಎತ್ತಂಗಡಿ ಮಾಡಲಾಗಿದೆ.

ರಾಜೇಶ್ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸಂಸ್ಥೆ ಸಾಮರಸ್ಯದ ಹೊಣೆ ವಹಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಮೂಲದ ರಾಜೇಶ್  ಅವರು ಆರ್.ಎಸ್.ಎಸ್.ಪ್ರಚಾರಕರಾಗಿ ಅನೇಕ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

2022ರ ಜುಲೈನಲ್ಲಿ ಅವರನ್ನು ಬಿಜೆಪಿ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಮಹತ್ವದ ಹುದ್ದೆಗೆ ಬಂದವರ ಅವಧಿ ಸಾಮಾನ್ಯವಾಗಿ ಮೂರು ವರ್ಷ ಇರುತ್ತದೆ. ಆದರೆ ಅವಧಿಗೆ ಮೊದಲೇ ಅವರನ್ನು ಬದಲಾವಣೆ ಮಾಡಲಾಗಿದೆ.

ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್ ಮೃತ್ಯು

Posted by Vidyamaana on 2023-10-11 14:18:27 |

Share: | | | | |


ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್  ಮೃತ್ಯು

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.



ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್ ನಲ್ಲಿ ನಿವಾಸಿ ಅಝ್ವೀನ್ (21)ಎಂದು ಗುರುತಿಸಲಾಗಿದೆ.


ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ

ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಉರುಳಿದ ಟಿಪ್ಪರ್

Posted by Vidyamaana on 2024-01-13 12:07:06 |

Share: | | | | |


ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಉರುಳಿದ ಟಿಪ್ಪರ್

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.

ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

Posted by Vidyamaana on 2024-02-17 21:19:17 |

Share: | | | | |


ಮಹಿಳಾ ಪೊಲೀಸ್ ಪೇದೆ ಮಂಜುಶ್ರೀ ಆತ್ಮಹತ್ಯೆ , ಕಾರಣ ನಿಗೂಢ

ರಾಮನಗರ, ಫೆ 17: ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.


ದ್ಯಾವಸಂದ್ರ ಗ್ರಾಮದ ಮಂಜುಶ್ರೀ ( 29) ಆತ್ಮಹತ್ಯೆ ಮಾಡಿಕೊಂಡ ಕಾನ್ ಸ್ಟೇಬಲ್.


ಮಂಜುಶ್ರೀ ಅವರು ಬೆಂಗಳೂರಿನ ಮೈಕೋ ಲೆಔಟ್ ಪೋಲಿಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ನಿಯೋಜನೆಯಡಿ ಶಿವಾಜಿನಗರ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ


ಹಾರೋಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ನೇಣು ಬಿಗಿದುಕೊಂಡು ರೌಡಿ ಶೀಟರ್ ಅರುಣ್ ಆತ್ಮಹತ್ಯೆ

Posted by Vidyamaana on 2024-04-07 19:26:58 |

Share: | | | | |


ನೇಣು ಬಿಗಿದುಕೊಂಡು ರೌಡಿ ಶೀಟರ್ ಅರುಣ್ ಆತ್ಮಹತ್ಯೆ

ಬೆಂಗಳೂರು : ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಅರುಣ್ ಅಲಿಯಾಸ್ ಚಿನ್ನಿ(28) ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್ ಆಗಿದ್ದು, 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ ಪ್ರಕರಣದಲ್ಲಿ ಅರುಣ್‌ ಜೈಲುಪಾಲಾಗಿದ್ದ.ನಂತರ ಜಾಮೀನಿನ ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇತ್ತೀಚಿಗೆ ಅರುಣ್ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.



Leave a Comment: