ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

Posted by Vidyamaana on 2023-09-12 11:08:54 |

Share: | | | | |


ಕಬಕ ಸರಕಾರಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪ್ರೌಢಶಾಲಾ ಮಟ್ಟದ ಫುಟ್ಬಾಲ್ ಪಂದ್ಯ

ಪುತ್ತೂರು: ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟ ಸೆ. 9ರಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ ಅವರ ನೇತೃತ್ವದಲ್ಲಿ ನಡೆಯಿತು. 

ಕಬಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಪಿ. ಅಬ್ಬಾಸ್ ಅಧ್ಯಕ್ಷತೆ ವಹಿಸಿದ್ದರು. 

ಕಬಕ ಗ್ರಾಮ  ಪಂಚಾಯತ್ ಉಪಾಧ್ಯಕ್ಷ, ಸದಸ್ಯರು, ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ., ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಾಹಂ ಹಾಗೂ ಗಣ್ಯರು  ಉಪಸ್ಥಿತರಿದ್ದರು. 

ಶಾಲಾ ಮುಖ್ಯಗುರು ಸುರೇಖಾ ಸ್ವಾಗತಿಸಿ, ಸುಮಿತ್ರಾ ವಂದಿಸಿದರು. ಶಿಕ್ಷಕಿ ಶಾಂತ ಕಾರ್ಯಕ್ರಮ ನಿರೂಪಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.

ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ ಮೃತ್ಯು

Posted by Vidyamaana on 2023-07-16 15:26:15 |

Share: | | | | |


ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುವಾಗ ಕುತ್ತಿಗೆ ಸಿಲುಕಿ ವಿದ್ಯಾರ್ಥಿ ಶ್ರೀಷಾ  ಮೃತ್ಯು

ಬೆಳ್ತಂಗಡಿ : ರಜೆ ಇದ್ದ ಕಾರಣ ಮನೆಯಲ್ಲಿ ಸಾರಿಯಲ್ಲಿ ಮಾಡಿದ್ದ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14)  ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.

ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಎಸ್.ಬಿ.ದಾರಿಮಿ ನೇತೃತ್ವದಲ್ಲಿ ಮುಸ್ಲಿಮ್ ಬಾಂಧವ್ಯ ವೇದಿಕೆಯಿಂದ ಸಿದ್ಧಗಂಗಾ ಮಠ ಭೇಟಿ

Posted by Vidyamaana on 2024-07-08 07:30:36 |

Share: | | | | |


ಎಸ್.ಬಿ.ದಾರಿಮಿ ನೇತೃತ್ವದಲ್ಲಿ ಮುಸ್ಲಿಮ್ ಬಾಂಧವ್ಯ ವೇದಿಕೆಯಿಂದ ಸಿದ್ಧಗಂಗಾ ಮಠ ಭೇಟಿ

ತುಮಕೂರು, ಜು.7: ಇಲ್ಲಿನ ಕನ್ನಡ ಭವನದಲ್ಲಿ ನಡೆದ ಮುಸ್ಲಿಮ್ ಬಾಂಧವ್ಯ ವೇದಿಕೆಯ ವಾರ್ಷಿಕ ಪದಗ್ರಹಣ ಸಮಾರಂಭಕ್ಕಿಂತ ಮುಂಚೆ ವೇದಿಕೆಯ ಸದಸ್ಯರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯೊಂದಿಗೆ ಪ್ರಸಕ್ತ ರಾಜಕೀಯ, ಸಾಮಾಜಿಕ ವಿಚಾರಗಳ ಬಗ್ಗೆ ಚರ್ಚಿಸಿದರು.

ತಂಡದ ನೇತೃತ್ವ ವಹಿಸಿದ್ದ ವೇದಿಕೆಯ ಗೌರವಾಧ್ಯಕ್ಷ ಎಸ್.ಬಿ.ದಾರಿಮಿ, ರಾಜ್ಯದಲ್ಲಿ ಕೋಮು ಸೌಹಾರ್ದ ಹದೆಗಡುತ್ತಿರುವ ದಿನಗಳಲ್ಲಿ ಮಠಾಧಿಪತಿಗಳು ಮಧ್ಯ ಪ್ರವೇಶಿಸಿ ದುಷ್ಟಶಕ್ತಿಗಳ ಮೇಲೆ ನಿಯಂತ್ರಣ ಸಾಧಿಸಬೇಕು. ಕೆಲವೊಮ್ಮೆ ಜವಾಬ್ದಾರಿಯುತ ಸ್ಥಾನದಲ್ಲಿರುವವರ ಮೌನವನ್ನು ಸಮಾಜಘಾತುಕ ಶಕ್ತಿಗಳು ವರದಾನವಾಗಿ ಬಳಸಿಕೊಳ್ಳುವ ಅಪಾಯ ಇದೆ. ಹಾಗಾಗಬಾರದು, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಶಾಂತಿಯ ಮರುಸ್ಥಾಪನೆಯ ಅಗತ್ಯವಿದೆ. ಮಠಾಧೀಶರು ಸೇರಿದಂತೆ ಸಮಾಜದ ಎಲ್ಲರೂ ಇದಕ್ಕೆ ಕೈಜೋಡಿಸಬೇಕು. ರಾಜ್ಯದ ಪ್ರಮುಖ ಮಠವೆಂಬ ನೆಲೆಯಲ್ಲಿ ಪೀಠಾಧಿಪತಿಯಾದ ತಾವು ಕೋಮು ಸೌಹಾರ್ದ ಗಟ್ಟಿಗೊಳ್ಳಲು ನಿರ್ಣಾಯಕ ಭೂಮಿಕೆ ನಿಭಾಯಿಸಬೇಕು ಎಂದು ಸಿದ್ಧಲಿಂಗ ಸ್ವಾಮಿಗೆ ಮನವಿ ಮಾಡಿದರು.

ನದಿಗೆ ಸ್ನಾನಕ್ಕೆಂದು ಇಳಿದಿದ್ದ ಯುವತಿಯರಿಬ್ಬರು ನೀರುಪಾಲು

Posted by Vidyamaana on 2024-04-14 17:39:07 |

Share: | | | | |


ನದಿಗೆ ಸ್ನಾನಕ್ಕೆಂದು ಇಳಿದಿದ್ದ ಯುವತಿಯರಿಬ್ಬರು ನೀರುಪಾಲು

ಕೇರಳ: ನದಿಗೆ ಸ್ನಾನ ಮಾಡಲು ಹೋಗಿದ್ದ ಇಬ್ಬರು ಯುವತಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕೇರಳದ ಕರಿಂಪುಳದ ಚೆರುಪುಳದಲ್ಲಿ ನಡೆದಿದೆ.ಚೆರ್ಪುಲಸ್ಸೆರಿ ಕುಟ್ಟಿಕೋಡ್ ಪರಕ್ಕಲ್ ಹೌಸ್ ನಿವಾಸಿ ಮುಸ್ತಫಾ ಅವರ ಪುತ್ರಿ ರಿಜ್ವಾನಾ (19) ಮತ್ತು ಮನ್ನಾರ್ಕಾಡ್ ನಿವಾಸಿ ಕರುವರಕುಂಡು ಚೆರುಮಾಲಾ ಹೌಸ್ ನಿವಾಸಿ ಅಬೂಬಕ್ಕರ್ ಅವರ ಪುತ್ರಿ ದೀಮಾ ಮೆಹಬಾ (20) ಮೃತ ಯುವತಿಯರಾಗಿದ್ದಾರೆ. ರಿಜ್ವಾನಾ ಸ್ಥಳದಲ್ಲೇ ಮೃತಪಟ್ಟರೆ, ದೀಮಾ ಮೆಹಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರೊಂದಿಗೆ ಇದ್ದ ಕೊಟ್ಟೋಪದಂನ ಪುತನಿಕ್ಕಾಡ್ ಪುಥೆನ್ವೀಟಿಲ್ ನಿವಾಸಿ ಶಂಸುದ್ದೀನ್ ಅವರ ಪುತ್ರ ಬಾದುಷಾ (20) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಸಂಜೆ 5.30 ರ ಸುಮಾರಿಗೆ ಈ ಘಟನೆ ನಡೆದಿದೆ

ಭಾರತ್ -ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಟಾರ್ಗೆಟ್ 2 ಸಕ್ಸಸ್ ಟ್ರೇಡಿಂಗ್ ವ್ಯವಹಾರ ಸಂಸ್ಥೆಯಿಂದ ವಂಚನೆ ಆರೋಪ - ದೂರು.

Posted by Vidyamaana on 2023-08-05 02:19:07 |

Share: | | | | |


ಭಾರತ್ -ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಟಾರ್ಗೆಟ್ 2 ಸಕ್ಸಸ್ ಟ್ರೇಡಿಂಗ್ ವ್ಯವಹಾರ ಸಂಸ್ಥೆಯಿಂದ ವಂಚನೆ ಆರೋಪ - ದೂರು.

ಪುತ್ತೂರು:ಸುಮಾರು ಒಂದೂವರೆ ವರ್ಷದಿಂದ ಪುತ್ತೂರು ಎಪಿಎಂಸಿ ರಸ್ತೆಯ ಅಕ್ಷಯ ಕಾಂಪ್ಲೆಕ್ಸ್‌ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ -ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಸಂಸ್ಥೆಯ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸಸ್   ಎಂಬ ಟ್ರೇಡಿಂಗ್ ವ್ಯವಹಾರ ಸಂಸ್ಥೆಗಳು ಮೆಚೂರ್ ಆಗಿರುವ ಠೇವಣಿಗಳಿಗೆ ಸ೦ಬ೦ಧಿಸಿ ಹಣ ಹಿ೦ದಿರುಗಿಸದೆ ಗ್ರಾಹಕರಿಗೆ ಮತ್ತು ಸಿಬ್ಬಂದಿಗಳಿಗೆ ವಂಚನೆ ಮಾಡಿರುವುದಾಗಿ ಆರೋಪಿಸಿ ಗ್ರಾಹಕರು ಮತ್ತು ಸಿಬ್ಬಂದಿಗಳು ಸೇರಿ ಸಂಸ್ಥೆಯ ಅಧ್ಯಕ್ಷರನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಆ.4ರಂದು ನಡೆದಿದೆ. ವಂಚನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾರತ್ ಓನ್  ಸೌಹಾರ್ದ ಸಹಕಾರಿ ಸಂಘವು ಗ್ರಾಹಕರಿಗೆ ಮತ್ತು ಅಲ್ಲಿನ ಸಿಬ್ಬಂದಿಗಳಿಗೆ ವಂಚನೆ ಮಾಡಿರುವುದಾಗಿ ಆರೋಪಿಸಿ ಒಳಮೊಗ್ರು ಗ್ರಾಮದ ನಿವಾಸಿಯಾದ ನಾರಾಯಣ ನಾಯ್ಕ ಎಂಬವರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.ಸಂಸ್ಥೆಯ ಅಧ್ಯಕ್ಷ ಗಿರೀಶ್‌ ರೈ ಎಂಬವರು ಗ್ರಾಹಕರಿಂದ     ಡೆಪೋಸಿಟ್    ಪಡೆದು ಅದನ್ನು ಹಿಂದಿರುಗಿಸದ ವಂಚನೆ ಮಾಡಿದ್ದಾರೆ ಇದರ ಜೊತೆಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಷರತ್ತು ವಿಧಿಸಿ ಅವರಿಂದಲೂ ಅತ್ಯಧಿಕ ಮೊತ್ತದ ಡೆಪೋಸಿಟ್ ಪಡೆದುಕೊಂಡಿದ್ದಾರೆ ಆದರೆ ಸಿಬ್ಬಂದಿಗಳಿಗೆ ಸರಿಯಾದ ವೇತನ ನೀಡದೆ ಸಂಸ್ಥೆಯಲ್ಲಿ ಇಟ್ಟಿರುವ ಡೆಪೋಸಿಟ್ ಹಣವನ್ನು ಹಿಂತಿರುಗಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ತಲೆಮರೆಸಿಕೊಂಡಿದ್ದ ಅಧ್ಯಕ್ಷ:

ಭಾರತ್‌ ಓನ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಿರೀಶ್ ರೈ ಎಂಬವರು ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದರು ಎಂದು ಗ್ರಾಹಕರು ಮತ್ತು ಸಿಬ್ಬಂದಿಗಳು ಅವರ ಪತ್ತೆಗಾಗಿ ಕಾಯುತ್ತಿದ್ದರು.ಆ 04ರಂದು ಅವರು ಪುತ್ತೂರು ಐಸಿಐಸಿಐ ಬ್ಯಾಂಕ್‌ಗೆ ಬಂದಿದ್ದಾರೆಂಬ ಮಾಹಿತಿ ಪಡೆದು ಅಲ್ಲಿಗೆ ಆಗಮಿಸಿದ ಹಲವು ಗ್ರಾಹಕರು ಮತ್ತು ಸಿಬ್ಬಂದಿಗಳು ಸುತ್ತುವರಿದು ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.


ಠಾಣೆ,ಮುಂದೆ ಜಮಾಯಿಸಿದ ಜನರು: ಬ್ಯಾಂಕ್‌ನ ಅಧ್ಯಕ್ಷ ಗಿರೀಶ್‌ ರೈ ಅವರನ್ನು ಠಾಣೆಗೆ ಕರೆದೊಯ್ದ ಮಾಹಿತಿ ತಿಳಿಯುತ್ತಲೇ, ಹಣ ಕಳೆದುಕೊಂಡಿದ್ದ ಹಲವು ಗ್ರಾಹಕರು ಮತ್ತು ಸಿಬ್ಬಂದಿಗಳು ಠಾಣೆಯ ಮುಂದೆ ಜಮಾಯಿಸಿ ತಾವು ಮೋಸ ಹೋಗಿರುವ ಕುರಿತು ಪೊಲೀಸರಿಗೆ ಮಾಹಿತಿ ನೀಡಿದರು

ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಿಬ್ಬಂದಿಗಳು ಗ್ರಾಹಕರು:

ಕ್ಯಾಶಿಯರ್ ಆಗಿ ಅಪಾಯಿಂಟ್‌ಮೆಂಟ್ ಮಾಡಬೇಕಾದರೆ ರೂ.5 ಲಕ್ಷ ಪೋಸಿಟ್ ಇಡಬೇಕೆಂಬ ಷರತ್ತು ವಿಧಿಸಿದಂತೆ ಕವಿತಾ ಎಂಬವರು ಪರಿಚಯಸ್ಥರ ಮೂಲಕ ರೂ.5 ಲಕ್ಷ ಮತ್ತು ತನ್ನ ಸ್ವಂತದ್ದೆಂದು ರೂ.50 ಸಾವಿರವನ್ನು ಡೆಪೋಸಿಟ್ ಇಟ್ಟಿದ್ದರು.ಹರ್ಷಿತಾ ಎಂಬವರು ಕ್ಲರ್ಕ್ ಹುದ್ದೆಗೆ ರೂ.1 ಲಕ್ಷ, ಗೋಪಾಲಕೃಷ್ಣ ಪಂಜ ಎಂಬವರು ರೂ.1 ಲಕ್ಷ, ಹರೀಶ್ ಎಂಬವರು ಅವರ ತಂಗಿಯ ಹೆಸರಿನಲ್ಲಿ ರೂ.1 ಲಕ್ಷ, ದೀಕ್ಷನ್‌ ಎಂಬವರು ರೂ.1 ಲಕ್ಷ, ನಾರಾಯಣ ಎಂಬವರು ಲಕ್ಷಾಂತರ ರೂಪಾಯಿ ಹೀಗೆ ಹಲವಾರು ಮಂದಿ ತಾವು ಡೆಪೋಸಿಟ್ ಇಟ್ಟು ಮೋಸಹೋಗಿರುವುದಾಗಿ ಪೊಲೀಸ್ ಠಾಣೆಯಲ್ಲಿ ಮಾಧ್ಯಮದ ಮುಂದೆ ಅವಲತ್ತುಕೊಂಡರು.


ಅಕ್ಷಯ ಕಾಲೇಜಿನಲ್ಲಿ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ-ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Posted by Vidyamaana on 2023-08-29 02:30:08 |

Share: | | | | |


ಅಕ್ಷಯ ಕಾಲೇಜಿನಲ್ಲಿ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ-ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಅವರ ಹೆತ್ತವರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.


ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ನಡುಬೈಲು ದೀಪ ಪ್ರಜ್ವಲಿಸಿ ಕಾಲೇಜನ್ನು ಆಯ್ಕೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿ, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ  ಪ್ರಾಸ್ತಾವಿಕ ನುಡಿಯನ್ನಾಡುತ್ತಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಮಿಫ್ಟ್ ಕಾಲೇಜು ನ ಸ್ಥಾಪಕಾಧ್ಯಕ್ಷ ಎಂ.ಜಿ ಹೆಗ್ಡೆ  ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಸಾಧನೆಯನ್ನು ಮಾಡಲು ಏಕಾಗ್ರತೆ ಮುಖ್ಯವಾಗಿದ್ದು, ಛಲದಿಂದ ವಿದ್ಯಾಭ್ಯಾಸ ಮಾಡಿ ಕಾಲೇಜು ಹಾಗೂ ಪೋಷಕರಿಗೆ ಕೀರ್ತಿ ತಂದು ಕೊಡುವ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುತ್ತೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಕಾಲೇಜಿನ ನಿಯಮಾವಳಿಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮವನ್ನು ಉಪನ್ಯಾಸಕರಾದ ರಶ್ಮಿ ಕೆ ಸ್ವಾಗತಿಸಿ, ರಕ್ಷಣ್ ಟಿ ಆರ್ ವಂದಿಸಿದರು. ಉಪನ್ಯಾಸಕಿ ಆಶಿಕಾ ಫರ್ಝಾನ ಕಾರ್ಯಕ್ರಮ ನಿರೂಪಿಸಿದರು.

Recent News


Leave a Comment: