ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಕಾಂಗ್ರೆಸ್ ವಿಜಯೋತ್ಸವದಲ್ಲಿ ಪುತ್ತಿಲ ಅಭಿಮಾನಿಗಳು

Posted by Vidyamaana on 2023-05-14 15:17:41 |

Share: | | | | |


ಕಾಂಗ್ರೆಸ್ ವಿಜಯೋತ್ಸವದಲ್ಲಿ ಪುತ್ತಿಲ ಅಭಿಮಾನಿಗಳು

ಪುತ್ತೂರು: ಶನಿವಾರ ಸಂಜೆ ಕಾಂಗ್ರೆಸ್ ಗೆಲುವಿನ ಶೋಭಾಯಾತ್ರೆ ನಡೆಯುತ್ತಿತ್ತು. ಅಷ್ಟರಲ್ಲಿ ಎದುರಿನಿಂದ ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಕಾರು ಆಗಮಿಸಿತು. ಹಿಂದುತ್ವ – ಕಾಂಗ್ರೆಸ್ ಕಾರ್ಯಕರ್ತರು ಎದುರು – ಬದುರಾದರೆ ಹೇಗೆ? ಆತಂಕ ಬೇಡ. ಅರುಣ್ ಕುಮಾರ್ ಪುತ್ತಿಲ ಅವರು ಜನನಾಯಕ ಎನ್ನುವುದು ಮತ್ತೊಮ್ಮೆ ಸಾಬೀತಾಗುವ ಪ್ರಸಂಗಕ್ಕೆ ಈ ಘಟನೆ ಸಾಕ್ಷಿಯಾಯಿತು.

ಕಾಂಗ್ರೆಸ್ ಕಾರ್ಯಕರ್ತರು, ಪುತ್ತಿಲ ಅವರಿಗೆ ಕೈ ಬೀಸಿ ತಮ್ಮ ಪ್ರೀತಿ ತೋರಿದರು. ಅರುಣ್ ಕುಮಾರ್ ಪುತ್ತಿಲ ಅವರು ಕೈಮುಗಿದು, ಅವರ ಪ್ರೀತಿಗೆ ತಲೆಬಾಗಿದರು. ಇನ್ನೂ ಕೆಲವರು ಪುತ್ತಿಲ ಅವರಿಗೆ ಕೈ ಕುಲುಕಿ ತಮ್ಮ ಪ್ರೀತಿಯನ್ನು ತೋರಿದರು.

ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Posted by Vidyamaana on 2023-05-30 11:49:38 |

Share: | | | | |


ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಿಗುವುದು ಸೊಸೆಗಲ್ಲ ಅತ್ತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು :  ಕಾಂಗ್ರೇಸ್  ನೀಡಿದ್ದ  ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಬೆಳಗಾವಿ: ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ.ಇದೀಗ ಮನೆಯೊಡತಿ ಯಾರು ಎನ್ನುವುದನ್ನು ಗುರುತಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದಕ್ಕೆ ಕಾರಣ ಅವಿಭಕ್ತ ಕುಟುಂಬಗಳು. ಹೌದು ಅವಿಭಕ್ತ ಕುಟುಂಬಗಳಲ್ಲಿ 2000 ಸಾವಿರ ರೂಪಾಯಿಯನ್ನು ಅತ್ತೆಗೆ ಕೊಡಬೇಕಾ ಅಥವಾ ಸೊಸೆಗೆ ಕೊಡಬೇಕಾ ಎನ್ನುವುದು ಗೊಂದಲ ಸೃಷ್ಟಿಸಿತ್ತು.ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ನಮ್ಮ ಸಂಪ್ರದಾಯದ ಪ್ರಕಾರ ಮನೆಯ ಒಡತಿ ಅತ್ತೆ ಆಗುತ್ತಾರೆ.ಹೀಗಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅತ್ತೆಗೆ ನೀಡುತ್ತೇವೆ ಎಂದರು. ಇನ್ನು ನಾಳೆ ಈ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಅನುಷ್ಠಾನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದರು. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷವಾಗಿ ಗೃಹಲಕ್ಷ್ಮೀ ಯೋಜನೆ ಸೊಸೆಗೆ ಸಿಗುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ.

ಬಳ್ಪದಲ್ಲಿ ನಡೆದ ಮನಕಲಕುವ ಘಟನೆ

Posted by Vidyamaana on 2023-05-08 15:58:55 |

Share: | | | | |


ಬಳ್ಪದಲ್ಲಿ ನಡೆದ ಮನಕಲಕುವ ಘಟನೆ


ಬಳ್ಪ :ಸಮೀಪದ  ಕೇನ್ಯ ಕಣ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ಸಹೋದರಿಯರಿಬ್ಬರು  ನೀರು ಪಾಲಾಗಿದ್ದು ಇಬ್ಬರ ಮೃತದೇಹವೂ ಪತ್ತೆಯಾಗಿದೆ.

ಇಂದು ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೂಲತಃ ಕಣ್ಕಲ್ ನವರಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ ( 15 ) ಮತ್ತು ಅವಂತಿಕಾ ( 11 ) ಎಂಬ ಸಹೋದರಿಯರು ನೀರು ಪಾಲಾದರು.

ಸಹೋದರಿಯರು ನೀರುಪಾಲಾದ ಸುದ್ದಿ ತಿಳಿದು ಆಗಮಿಸಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದು, ರಾತ್ರಿ ವೇಳೆಗೆ ಇಬ್ಬರ ಮೃತದೇಹವೂ ಪತ್ತೆಯಾಯಿತು. ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದರು.

ಸಂಪ್ಯದಲ್ಲಿ ವಿಜೃಂಭಿಸಿದ ನವಚೇತನಾ ಯುವಕ ಮಂಡಲದ 41ನೇ ವರ್ಷದ ಗಣೇಶೋತ್ಸವ

Posted by Vidyamaana on 2023-09-21 11:30:57 |

Share: | | | | |


ಸಂಪ್ಯದಲ್ಲಿ ವಿಜೃಂಭಿಸಿದ ನವಚೇತನಾ ಯುವಕ ಮಂಡಲದ 41ನೇ ವರ್ಷದ ಗಣೇಶೋತ್ಸವ

ಪುತ್ತೂರು: ಸಂಪ್ಯ ನವಚೇತನಾ ಯುವಕ ಮಂಡಲದ ವತಿಯಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳ ಕಾಲ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದಿಂದ ನಡೆಯಿತು.

ವೇ.ಮೂ ಸಂದೀಪ್ ಕಾರಂತರವರ ನೇತೃತ್ವದಲ್ಲಿ ನಡೆದ ಗಣೇಶೋತ್ಸವದಲ್ಲಿ ಬೆಳಿಗ್ಗೆ ಶ್ರೀಗಣೇಶನ ವಿಗ್ರಹದ ಆಗಮನದ ಬಳಿಕ ಗಣೇಶ ವಿಗ್ರಹ ಪ್ರತಿಷ್ಠೆ, ಗಣಹೋಮ ನಡೆದ ಬಳಿಕ ವಿವಿಧ ಭಜನಾ ಮಂಡಳಿಯವರಿಂದ ಭಜನೆ ನಡೆದ ಬಳಿಕ ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಸ್ಪರ್ಧೆಗಳು ನೆರವೇರಿತು.

ಮಧ್ಯಾಹ್ನ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ದೈವ ನರ್ತಕ ಡಾ. ರವೀಶ್ ಪಡುಮಲೆ ಮಾತನಾಡಿ, ಸನಾತನ ಧರ್ಮವಾಗಿರುವ ಹಿಂದು ಧರ್ಮವನ್ನು ಸರ್ವ ನಾಶ ಮಾಡಬೇಕು ಎಂದು ಹೇಳಿಕೆ ನೀಡಿರುವುದನ್ನು ನಾವೆಲ್ಲ ಖಂಡಿಸಬೇಕು. ತಮಿಳುನಾಡಿನಲ್ಲಿ ಉದಯನಿಧಿ ನೀಡಿರುವ ಹೇಳಿಕೆಯನ್ನು ಉತ್ತರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ವಿರೋಧಿಸಿದ್ದು, ಹಿಂದು ಸಮಾಜದ ಶಕ್ತಿಯನ್ನು  ತೋರಿಸುತ್ತದೆ. ಹಿಂದು ಸಮಾಜಕ್ಕೆ ಮುಸ್ಲಿಂರಿಂದ ಹೊಡೆತವಲ್ಲ. ಸಮಾಜದ ಒಳಗಿನವರಿಂದಲೇ ತೊಂದರೆಯಾಗಿದೆ ಎಂದ ಅವರು, ನವಚೇತನ ಯುವಕ ಮಂಡಲವು ಸಂಘಟನೆ ಮಾತ್ರವಲ್ಲ. ಹಿಂದು ಸಮಾಜ ಒಗ್ಗೂಡಿಸುವ ಪ್ರಯತ್ನ ನಡೆಯುತ್ತದೆ. ನಮ್ಮ ಸಂಸ್ಕೃತಿ ಉಳಿಸಲು ಸಮಾಜ ಒಂದಾಗಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸಹಾಯಕ ಗವರ್ನರ್ ಪುರಂದರ ರೈ ಮಿತ್ರಂಪಾಡಿ ಮಾತನಾಡಿ, ಯುವಕ ಮಂಡಲ ನಮ್ಮ ಊರಿನ ಸ್ವತ್ತು. ಯುವಕರ ಉತ್ತಮ ಕೆಲಸಗಳಿಗೆ ಪ್ರೋತ್ಸಾಹ ನೀಡಿ, ಅವರು ದಾರಿ ತಪ್ಪಿದಾದ ಸರಿದಾರಿಗೆ ತರುವ ಕೆಲಸ ಹಿರಿಯರಿಂದ ಆಗಬೇಕು ಎಂದರು.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಆದಿಪೂಜಿತ ಎಂದು ಹೆಸರಿರುವ ಗಣಪತಿ ವಿಶ್ವವ್ಯಾಪಿಯಾಗಿದೆ. ಗಣಪತಿ ಸ್ನೇಹ, ಒಗ್ಗಟ್ಟು, ಪ್ರೀತಿಯ ಸಂಕೇತ. ಭಕ್ತಿಯಿಂದ ಆಚರಿಸಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಎಂದರು. 

ಸನ್ಮಾನ ಸ್ವೀಕರಿಸಿದ ವಿದ್ಯಾಮಾತ ಅಕಾಡೆಮಿಯ ಭಾಗ್ಯೇಶ್ ರೈ ಮಾತನಾಡಿ, ಮಕ್ಕಳಿಗೆ ಸಂಸ್ಕಾರ ನೀಡುವುದು ಶಿಕ್ಷಣ ಸಂಸ್ಥೆಗಳಲ್ಲ. ಸಂಸ್ಕಾರ ನೀಡುವುದು ಪೋಷಕರ ಜವಾಬ್ದಾರಿಯಾಗಿದೆ. ನವಚೇತನಾ ಯುವಕ ಮಂಡಲದಿಂದ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾಮಾತಾ ಅಕಾಡೆಮಿಯಿಂದಲೂ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಪ್ರಾರಂಭಗೊಂಡಿರುವ ಗಣೇಶೋತ್ಸವವು ಹಿಂದು ಸಮಾಜವನ್ನು ಒಟ್ಟುಗೂಡಿಸಿ, ಸಂಘಟಿಸುವ ನಿಟ್ಟಿನಲ್ಲಿ ಇಂದಿಗೂ ಪ್ರಸ್ತುತವಾಗಿದೆ. ಎಲ್ಲರ ಭಾಗವಹಿಸುವವಿಕೆಯೊಂದಿಗೆ ಮಾದರಿಯಾಗಿ ನಡೆಯುತ್ತಿದೆ. ಯುವಕ ಮಂಡಲವು ಗಣೇಶೋತ್ಸವಕ್ಕೆ ಸೀಮಿತವಾಗಿರದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಬೆನ್ನೆಲುಬಾಗಿ ಸಹಕರಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮವನ್ನು ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಗೀತಾ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ಡಾ.ವೇಣುಗೋಪಾಲ, ಪ್ರಗತಿಪರ ಕೃಷಿ ದಯಾನಂದ ಗೌಡ ಕುಂಟ್ಯಾನ ಬಾರಿಕೆ ಹಾಗೂ ಆರ್ಯಾಪು ನೇರಳಕಟ್ಟೆ ಶ್ರೀ ಅಮ್ಮನವರ ದೇವಸ್ಥಾನದ ಸುರೇಶ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಾಂಛನ ಬಿಡುಗಡೆ:

ಸುಮಾರು 41 ವರ್ಷಗಳ ಇತಿಹಾಸವಿರುವ ನವಚೇತನಾ ಯುವಕ ಮಂಡಲದ ನೂತನ ಲಾಂಛನವನ್ನು ಕಾರ್ಯಕ್ರಮದಲ್ಲಿ ದೇವಸ್ಥಾನದ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬಿಡುಗಡೆಗೊಳಿಸಿದರು.

ಸನ್ಮಾನ:

ಈ ಸಾಲಿನ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪುರಸ್ಕöÈತರಾದ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುವ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲಾ ಶಿಕ್ಷಕ ಉದಯ ಕುಮಾರ್ ರೈ ಸಂಪ್ಯ, ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪುರಸ್ಕöÈತರಾದ ವಿದ್ಯಾಮಾತ ಅಕಾಡೆಮಿಯ ನಿರ್ದೇಶಕ ಭಾಗ್ಯೇಶ್ ರೈಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಸೀತಾರಾಮ ಪ್ರತಿಭಾ ಪುರಸ್ಕಾರ;

ಕ್ರೀಡೆ, ಶೈಕ್ಷಣಿಕ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳಿಗೆ ಯುವಕ ಮಂಡಲದಿಂದ ಪ್ರತಿ ವರ್ಷ ನೀಡುವ ಪ್ರತಿಭಾ ಪುರಸ್ಕಾರವನ್ನು ಈ ವರ್ಷದಿಂದ `ಸೀತಾರಾಮ ಪ್ರತಿಭಾ ಪುರಸ್ಕಾರ ಎಂದು ನಾಮಕರಣ ಮಾಡಿಕೊಂಡು ಯುವಕ ಮಂಡಲ ವ್ಯಾಪ್ತಿಯ ವಿದ್ಯಾರ್ಥಿಗಳಾದ ಶುಭಲಕ್ಷ್ಮೀ, ಅಂಕಿತ್ ಪಿ., ಗಗನ್ ಗೌಡ ಬೈಲಾಡಿ, ಮೇಘಾ ಎಸ್.ಎನ್., ಸುದರ್ಶನ್ ಹೆಬ್ಬಾರ್,  ರೇಷ್ಮಾ, ರವರಿಗೆ ನೀಡಿ ಗೌರವಿಸಲಾಯಿತು. ಗಣೇಶೋತ್ಸವದ ಅನ್ನದಾನ ಪ್ರಾಯೋಜಕರಾದ ಐತ್ತಪ್ಪ ರೈ, ಆದರ್ಶ ನಾಯ್ಕ್ ಸಂಪ್ಯ , ಪಾಂಡುರಂಗ ಭಟ್ ಕಲ್ಲರ್ಪೆಯವರನ್ನು ಗೌರವಿಸಲಾಯಿತು.

ಮೈಥಿಲಿ ಹಾಗೂ ಶಾಲ್ಮಿಲಿ ಪ್ರಾರ್ಥಿಸಿದರು. ನವಚೇತನಾ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಎಸ್.ಕೆ ವರದಿ ವಾಚಿಸಿ, ವಂದಿಸಿದರು. ಯುವಕ ಮಂಡಲದ ನಾಗೇಶ್ ಸಂಪ್ಯ, ಲಕ್ಷ್ಮಿರಮಣ ಬೈಲಾಡಿ, ರವಿನಾಥ ಗೌಡ ಬೈಲಾಡಿ, ರವಿ ಗೌಡ, ಸುರೇಶ್ ಉದಯಗಿರಿ, ಕುಂಞಣ್ಣ, ಸುರೇಶ್ ಪೂಜಾರಿ, ಸುರೇಶ್ ಬೈಲಾಡಿ, ಜಯಂತ ಶೆಟ್ಟಿ ಕಂಬಳತ್ತಡ್ಡ, ಶೀನಪ್ಪ, ದಿನೇಶ್ ಅತಿಥಿಗಳನ್ನು ಶಾಲು, ಸ್ಮರಣಿಕೆ ನೀಡಿ ಸ್ವಾಗತಿಸಿದರು. ತೇಜಸ್ ಗೌಡ ಪ್ರತಿಭಾ ಪುರಸ್ಕಾರದ ಪಟ್ಟಿ ವಾಚಿಸಿದರು. ಉದಯ ಕುಮಾರ್ ರೈ ಹಾಗೂ ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ನಂತರ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ `ಅಲೇ ಬುಡಿಯೆರ್ಗೆ ತುಳು ಹಾಸ್ಯಮಯ ನಾಟಕ ನಡೆದ ಬಳಿಕ ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಲೇಖಕಿ ಕೈಹಿಡಿದ ಪತ್ರಕರ್ತ ಗಣೇಶ್ ಕಲ್ಲರ್ಪೆ

Posted by Vidyamaana on 2023-11-01 16:44:34 |

Share: | | | | |


ಲೇಖಕಿ ಕೈಹಿಡಿದ ಪತ್ರಕರ್ತ ಗಣೇಶ್ ಕಲ್ಲರ್ಪೆ

ಪುತ್ತೂರು: ಪತ್ರಕರ್ತ  ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.


ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ನ 01 ಬುಧವಾರ ದಂದು ನೆರವೇರಿತು.ಗಣೇಶ್ ರವರ

 ವೈವಾಹಿಕ ಜೀವನಕ್ಕೆ ವಿದ್ಯಮಾನ ಬಳಗ ಶುಭವನ್ನು ಹಾರೈಸುತ್ತಿದೆ.


ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ಸೌಜನ್ಯಾ ಪ್ರಕರಣ ; ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸುವ ತಂತ್ರ - ವೀರೇಂದ್ರ ಹೆಗ್ಗಡೆ

Posted by Vidyamaana on 2023-07-20 02:00:53 |

Share: | | | | |


ಸೌಜನ್ಯಾ ಪ್ರಕರಣ ; ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸುವ ತಂತ್ರ - ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿರುವುದು, ಧರ್ಮಸ್ಥಳದ ಹೆಸರನ್ನು ಎಳೆದು ತಂದು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ತಮ್ಮ ವ್ಯಾಪ್ತಿಯ ವಿವಿಧ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿದ್ದಾರೆ.‌ ಸಭೆಯಲ್ಲಿ ಪ್ರಸ್ತುತ ವಿದ್ಯಮಾನಗಳು, ಸೌಜನ್ಯಾ ಕೊಲೆ ಪ್ರಕರಣದ ಹೆಸರಲ್ಲಿ ಕ್ಷೇತ್ರದ ಹೆಸರು ಕೆಡಿಸುತ್ತಿರುವ ವಿಚಾರದ ಬಗ್ಗೆ ಹೆಗ್ಗಡೆ ಮಾತನ್ನಾಡಿದ್ದಾರೆ.‌ 


ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆಗಳಾಗಿವೆ. ಹಲವು ಸೇವೆಗಳನ್ನು ಮಾಡಿಕೊಂಡು ಬಂದಿದ್ದೇವೆ.‌ ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ.‌


ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ ದ್ವೇಷ ಬೆಳೆಸಿಕೊಂಡಿದ್ದಾರೆ.‌ ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಈಗ ಬೇಕಿದ್ದರೆ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ, ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ. 


ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆ.‌ ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತ್ರುತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ನಮ್ಮ ಸಿಬ್ಬಂದಿಗಳಿಗೆ ಇದರ ಹಿಂದಿನ ಸತ್ಯ ಗೊತ್ತಿರಬಹುದು, ಆದರೂ ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು. ನಾವು ಸುಮ್ಮನಿರೋದು ಈ ಕುರಿತು ಪರ- ವಿರೋಧ ಸಂಭಾಷಣೆ ಆರಂಭವಾಗಬಾರದು ಅಂತಷ್ಟೇ. ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಜನರಿಗೆ ಗೊತ್ತಾಗ್ತಿದೆ. 


ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಬೇಕಾಗಿದೆ.‌ ಧರ್ಮಸ್ಥಳದ ಸಿಬ್ಬಂದಿಯ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ಸುಸ್ಥಿತಿಯಲ್ಲಿದೆ. ನಮ್ಮ ಒಳ್ಳೆಯ ಕಾರ್ಯಗಳು‌ ಯಾವತ್ತೂ ನಡೆದುಕೊಂಡು ಹೋಗುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ. ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ. 


ವೈಯಕ್ತಿಕ ಅವಮಾನ ಮತ್ತು ವೈಯಕ್ತಿಕ ಆರೋಪ ಸರಿಯಲ್ಲ, ಅದನ್ನು ನಿಲ್ಲಿಸಬೇಕು. ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ.‌ ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ವಿವರವಾಗಿ ಮಾತನಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಧರ್ಮಸ್ಥಳದ ಹೆಸರೆತ್ತಿ ಆರೋಪ ಮಾಡಿರುವುದು ತೀವ್ರ ಸಂಚಲನ ಮೂಡಿಸಿದೆ.‌ ಈಗ ಧರ್ಮಾಧಿಕಾರಿ ಹೆಗ್ಗಡೆಯವರೇ ಸ್ಪಷ್ಟನೆಯ ಮೂಲಕ ಸಿಬಂದಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.

New Categories
Recent News
Popular News


Leave a Comment: