ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

Posted by Vidyamaana on 2024-02-14 21:33:12 |

Share: | | | | |


ಒಮ್ಮೆಯೂ ಸಂಸತ್ ಚರ್ಚೆಯಲ್ಲಿ ಭಾಗವಹಿಸದ ಕರ್ನಾಟಕದ 4 ಸಂಸದರು..

ನವದೆಹಲಿ(ಫೆ.14): ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.ಶನಿವಾರವಷ್ಟೇ 17ನೇ ಲೋಕಸಭೆಯ ಕೊನೆಯ ಅಧಿವೇಶನ ಮುಗಿದಿದೆ. ಇದರ ಬೆನ್ನಲ್ಲೇ ಲೋಕಸಭೆಯ ಅಧಿಕೃತ ಅಂಕಿ-ಅಂಶ ಆಧರಿಸಿ ಪಿಆರ್‌ಎಸ್‌ ಲೆಜಿಸ್ಲೇಟಿವ್‌ ಸಂಸ್ಥೆ ಬಿಡುಗಡೆ ವರದಿಯೊಂದನ್ನು ಬಿಡುಗಡೆ ಮಾಡಿದೆ.ಅದರ ಪ್ರಕಾರ, ರಾಜ್ಯದ ಅನಂತಕುಮಾರ ಹೆಗಡೆ (ಉತ್ತರ ಕನ್ನಡ), ರಮೇಶ ಜಿಗಜಿಣಗಿ (ವಿಜಯಪುರ), ಬಿ.ಎನ್‌. ಬಚ್ಚೇಗೌಡ (ಚಿಕ್ಕಬಳ್ಳಾಪುರ) ಹಾಗೂ ವಿ. ಶ್ರೀನಿವಾಸ ಪ್ರಸಾದ್‌ (ಚಾಮರಾಜನಗರ) ಕಳೆದ 5 ವರ್ಷದಲ್ಲಿ ಸದನದಲ್ಲಿ ನಡೆದ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಮಾಹಿತಿ ಲಭಿಸಿದೆ.

ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

Posted by Vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ರಾಹುಲ್ ಗಾಂಧಿ ಬಂಧನ, ಸಂಸತ್ ಸದಸ್ಯತ್ವ ರದ್ದು ಖಂಡಿಸಿದ ಕರ್ನಾಟಕ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ ಜುನೈದ್ ಪಿ.ಕೆ

Posted by Vidyamaana on 2023-03-26 11:42:14 |

Share: | | | | |


ರಾಹುಲ್ ಗಾಂಧಿ ಬಂಧನ, ಸಂಸತ್ ಸದಸ್ಯತ್ವ ರದ್ದು ಖಂಡಿಸಿದ ಕರ್ನಾಟಕ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ ಜುನೈದ್ ಪಿ.ಕೆ

ಬೆಂಗಳೂರು: ಭಾರತ್ ಜೋಡೋದ ಯಶಸ್ಸನ್ನು ಸಹಿಸದೇ ಕವಟದಿಂದ, ದ್ವೇಷದಿಂದ ಕಾಂಗ್ರೆಸಿನ ಯುವ ನಾಯಕ, ಸಂಸದ ರಾಹುಲ್ ಗಾಂಧಿಯವರನ್ನು ಜೈಲಿಗೆ ಹಾಕುವ ಕೆಲಸವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಆದ್ದರಿಂದ ನರೇಂದ್ರ ಮೋದಿ ವಿರುದ್ಧ ಮೋದಿ ಹಟಾವೋ, ದೇಶ ಬಚಾವೋ ಎನ್ನುವ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಿದ್ದೇವೆ ಎಂದು ಕರ್ನಾಟಕ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್‌ ಪಿ.ಕೆ. ಘೋಷಿಸಿದ್ದಾರೆ.

ಮೋದಿ ಎಂಬ ಉಪನಾಮ ಹೊಂದಿರುವ ವ್ಯಕ್ತಿಗಳು, ಮಧ್ಯಮ ವರ್ಗದವರು ಕಟ್ಟಿರುವ ತೆರಿಗೆ ಹಣವನ್ನು ಲೂಟಿ ಮಾಡಿದ್ದು, ಅದಕ್ಕೆ ಪ್ರಧಾನಿ ಬೆಂಬಲ ನೀಡಿದ್ದಾರೆ. ಹೀಗಿರುವಾಗ ಇದನ್ನು ಕಾಂಗ್ರೆಸಿನ ಮುಂಚೂಣಿ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿರುವುದರಲ್ಲಿ ತಪ್ಪೇನು ಎಂದು ಜುನೈದ್ ಪ್ರಶ್ನಿಸಿದ್ದಾರೆ.

ಸಂಸದನಾಗಿ, ಕಾಂಗ್ರೆಸ್ ಮುಂಚೂಣಿ ನಾಯಕನಾಗಿ, ಜಾತ್ಯಾತೀತತೆ, ಬಾಂಧವ್ಯದ ತಳಹದಿಯೊಂದಿಗೆ ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಯುವ ನಾಯಕ ರಾಹುಲ್‌ ಗಾಂಧಿ, ಮೋದಿ, ಚೋಕ್ಸಿಯಂತಹವರು ಲೂಟಿ ಮಾಡಿರುವ ಕೋಟ್ಯಾಂತರ ರೂ.ವನ್ನು ರಾಹುಲ್ ಗಾಂಧಿ ಸರಿಯಾಗಿಯೇ ಪ್ರಶ್ನಿಸಿದ್ದಾರೆ. ಇದನ್ನು ಸಹಿಸದೇ ಅವರನ್ನು ಜೈಲಿಗೆ ಕಳುಹಿಸುವುದು, ಅವರ ಸಂಸದ ಸ್ಥಾನವನ್ನು ರದ್ದು ಮಾಡಿಸುವ ಪ್ರಧಾನಿ ಮೋದಿ ಕ್ರಮಕ್ಕೆ ಯಂಗ್ ಬ್ರಿಗೇಡ್ ಖಂಡನೆ ಸೂಚಿಸುತ್ತದೆ ಎಂದು ಜುನೈದ್ ತಿಳಿಸಿದ್ದಾರೆ.

  ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಅನುಸರಿಸುತ್ತಿರುವ ಮೋದಿ ಕ್ರಮವನ್ನು ಪ್ರತಿ ಮನೆಗೂ ತಲುಪಿಸಲಾಗುವುದು, ಪ್ರತಿ ಮಗುವಿಗೂ ತಲುಪಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

Posted by Vidyamaana on 2023-12-22 11:45:46 |

Share: | | | | |


ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ Addl Civil Judge & JMFC ಬೆಳ್ತಂಗಡಿ ನ್ಯಾಯಲಯದಲ್ಲಿ‌ ದಾಖಲಾದ ಸಿ.ಸಿ ನಂಬ್ರ 535/2016 ಮತ್ತು ಸಿ.ಸಿ ನಂಬ್ರ 871/2017 ರಲ್ಲಿ ಸುಮಾರು 6 ರಿಂದ 7 ವರ್ಷಗಳಿಂದ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯಾದ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ಪಂಜದ,ನೆಲ್ಲಿಕಟ್ಟೆ ನಿವಾಸಿ ದಿ.ಆದಂ ಮಗನಾದ ಶರೀಫ್ @ ಮಹಮ್ಮದ್  ಶರೀಫ್ (43) ಎಂಬಾತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನಿರ್ದೇಶನದಂತೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ಎಮ್ ನೇತೃತ್ವದ ಸಿಬ್ಬಂದಿ ಪ್ರವೀಣ್ ಎಂ ಮತ್ತು ಸಚಿನ್ ರವರು ಡಿ.21 ರಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಿಟ್ಲದ ಸಾರಡ್ಕ ಎಂಬಲ್ಲಿ ವಶಕ್ಕೆ ಪಡೆದುಕೊಂಡು ನಂತರ ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Posted by Vidyamaana on 2023-07-18 01:50:33 |

Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.


ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

ಲೋಕಸಭಾ ಕಣಕ್ಕೆ ಧುಮುಕಿದ ಅರುಣ್ ಕುಮಾರ್ ಪುತ್ತಿಲ ಸಂಸದ ನಳಿನ್ ಏನಂದ್ರು

Posted by Vidyamaana on 2024-02-29 16:48:05 |

Share: | | | | |


ಲೋಕಸಭಾ ಕಣಕ್ಕೆ ಧುಮುಕಿದ ಅರುಣ್ ಕುಮಾರ್ ಪುತ್ತಿಲ  ಸಂಸದ ನಳಿನ್ ಏನಂದ್ರು

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತವಾದ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ ಪರಿವಾರ ಎಂಬುದು ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ ಎಂದು ಕಟೀಲ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಕುಮಾರ್ ಪುತ್ತಿಲ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವು ಬಹಳ ವರ್ಷಗಳ ಹೋರಾಟದಿಂದ ಈ ಮಟ್ಟಕ್ಕೆ ಬೆಳೆದಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಪಕ್ಷಕ್ಕೆ ಎದುರಾಳಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಭುತವಾಗಿದೆ. ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ, ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ ಎಂದರು.

Recent News


Leave a Comment: