ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುದ್ದಿಗಳು News

Posted by vidyamaana on 2024-07-25 12:27:06 |

Share: | | | | |


ಜೋಕಟ್ಟೆ: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಪಣಂಬೂರು: ಇಲ್ಲಿನ ಜೋಕಟ್ಟೆ ಗ್ರಾಮ ಪಂಚಾಯತ್ ಗುಡ್ಡೆ ಎಂಬಲ್ಲಿ ಮನೆಯ ಮೇಲೆ� ತಡೆಗೋಡೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ‌.ಮುಲ್ಕಿ ಕೊಲ್ನಾಡು ನಿವಾಸಿ ಶಂಕರ ಎಂಬವರ ಪುತ್ರ ಶೈಲೇಶ್ (17) ಮೃತ ಯುವಕ. ಜೋಕಟ್ಟೆಯಲ್ಲಿರುವ ತನ್ನ ದೊಡಮ್ಮನ ಮಗಳ ಮನೆಗೆ ಬಂದಿದ್ದ ಶೈಲೇಶ್, ಇಲ್ಲಿಯೇ ಉಳಿದುಕೊಂಡಿದ್ದ.

ಮನೆಯಲ್ಲಿ ಶೈಲೇಶ್ ರವರ ದೊಡ್ಡಮನ ಮಗಳು ಸವಿತಾ, ಆಕೆಯ ಗಂಡ ಸುರೇಶ್ ಮತ್ತು ಮಗು ಸಾಕ್ಷಿ ಮನೆಯ ಒಂದು ಕೋಣೆಯಲ್ಲಿ ಮಲಗಿದ್ದು, ಶೈಲೇಶ್ ಇನ್ನೊಂದು ಕಡೆ ಮಲಗಿದ್ದ. ತಡೆಗೋಡೆ ಕುಸಿದು ಹಂಚಿನ ಮನೆಯ ಮೇಲೆ ಬಿದ್ದಿದ್ದರಿಂದ ಅಲ್ಲಿ ಮಲಗಿದ್ದ ಶೈಲೇಶ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಇತರ ಮೂರು ಜನರಲ್ಲಿ ಸವಿತಾ ಅವರಿಗೆ ಸಣ್ಣ ಗಾಯವಾಗಿದ್ದು‌, ಚಿಕಿತ್ಸೆ ಪಡೆದಿದ್ದಾರೆ‌ ಎಂದು ತಿಳಿದು ಬಂದಿದೆ.

ಶೈಲೇಶ್ ಅವರ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು, ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

 Share: | | | | |


ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

Posted by Vidyamaana on 2024-03-09 14:40:53 |

Share: | | | | |


ಅಡಕೆ ಬೆಳೆಗಾರರಿಗೆ ಶಾಕ್ : ಶ್ರೀಲಂಕಾದಿಂದ 5 ಲಕ್ಷ ಟನ್‌ ಆಮದಿಗೆ ಕಂಪನಿ ಒಪ್ಪಂದ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್‌ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ. ಇದರಿಂದಾಗಿ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ.ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್‌ ಸ್ಟಾರ್ ಪ್ರೈವೇಟ್‌ ಲಿಮಿಟೆಡ್‌ ಜತೆ ಅಡಕೆ ಆಮದು ಒಪ್ಪಂದ ಮಾಡಿಕೊಂಡಿರುವುದಾಗಿ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಶುಕ್ರವಾರ ತಿಳಿಸಿದೆ.


2022ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ ಏಪ್ರಿಲ್‌-ಡಿಸೆಂಬರ್‌ ಅವಧಿಯಲ್ಲಿ ಇದು 4.04 ಕೋಟಿ ರು.ಗೆ ಕುಸಿದಿತ್ತು. ಇದೀಗ ಲಂಕಾದಿಂದ ಭಾರಿ ಪ್ರಮಾಣದಲ್ಲಿ ಆಮದಿಗೆ ಬ್ರಿಟನ್‌ ಕಂಪನಿ ಮುಂದಾಗಿರುವುದರಿಂದ ಸಹಜವಾಗಿಯೇ ಅಡಕೆ ಬೆಳೆಗಾರರುಕಂಗಾಲಾಗುವಂತಾಗಿದೆ. ದೇಶದಲ್ಲಿ ಅಡಕೆ ಸಾಂಸ್ಕೃತಿಕ ಮಹತ್ವ ಹೊಂದಿದ್ದು, ದೇಶದ ಹಲವು ಸಂಪ್ರದಾಯ ಹಾಗೂ ಸಮಾರಂಭಗಳಲ್ಲಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ..ಇಂಡೋನೇಷ್ಯಾ, ಬಾಂಗ್ಲಾದೇಶ ಹಾಗೂ ಶ್ರೀಲಂಕಾದಿಂದ ಭಾರತ ಅಡಕೆ ಆಮದು ಮಾಡಿಕೊಳ್ಳುತ್ತದೆ. ಗುಣಮಟ್ಟ ಕಾಯ್ದುಕೊಳ್ಳುವ ಸಲುವಾಗಿ ಕೇಜಿಗೆ 351 ರು.ಗಿಂತ ಕಡಿಮೆ ಇಲ್ಲದ ಅಡಕೆ (ಸುಪಾರಿ) ಆಮದಿಗೆ ಮಾತ್ರವೇ ಅವಕಾಶವಿದೆ ಎಂದುದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ತಿಳಿಸಿದೆ.

ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

Posted by Vidyamaana on 2023-05-30 06:38:17 |

Share: | | | | |


ಇಂದು ಸಂಜೆ ವಿಟ್ಲದಲ್ಲಿ ನೂತನ ಶಾಸಕರು- ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ,

ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ.

ಆದರಿಂದ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಪದಾದಿಕಾರಿಗಳು,ವಲಯ , ಬೂತ್ ಮಟ್ಟದ ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹೆಚ್ಚಿನ  ಸಂಖ್ಯೆಯಲ್ಲಿ ಆಗಮಿಸಿ  ಕಾರ್ಯಕ್ರಮ ಯಶಸಿಗೊಳಿಸಬೇಕಾಗಿ  ಪ್ರಕಟಣೆ ತಿಳಿಸಿದೆ.

ಮರಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳ ಆತ್ಮಹತ್ಯೆ

Posted by Vidyamaana on 2024-08-09 14:34:50 |

Share: | | | | |


ಮರಕ್ಕೆ ನೇಣು ಹಾಕಿಕೊಂಡು ಪ್ರೇಮಿಗಳ ಆತ್ಮಹತ್ಯೆ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಂದಗಾವ ಗ್ರಾಮದ ಹೋರ ವಲದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದೆ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಚಿನ ತಂದೆ ಬೀರಪ್ಪ ದಳವಾಯಿ ವಯಸ್ಸು ( 22) ಪ್ರಿಯಾ ತಂದೆ ಮಲ್ಲಪ್ಪ ಮಡಿವಾಳ ವಯಸ್ಸು( 19)

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

Posted by Vidyamaana on 2023-12-07 13:41:00 |

Share: | | | | |


ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಹೈದರಾಬಾದ್‌: ಹೈದರಾಬಾದಿನ ಎಲ್‌ಬಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅದ್ದೂರಿ ಕಾರ್ಯಕ್ರಮದಲ್ಲಿ ರೇವಂತ್ ರೆಡ್ಡಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಹಾಗೂ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಉಪಸ್ಥಿತರಿದ್ದರು.


ಸುಮಾರು ಒಂದು ಲಕ್ಷ ಮಂದಿ ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇನ್ಸ್ಟಾಗ್ರಾಮ್ ಮೂಲಕ ಪರಿಚಯ

Posted by Vidyamaana on 2023-06-29 11:23:59 |

Share: | | | | |


ಇನ್ಸ್ಟಾಗ್ರಾಮ್ ಮೂಲಕ ಪರಿಚಯ

ಮಂಗಳೂರು : ಇನ್​ಸ್ಟಾಗ್ರಾಂನಲ್ಲಿ ಯುವತಿಯನ್ನು ಪರಿಚಯಮಾಡಿಕೊಂಡು ಬಳಿಕ ಪ್ರೀತಿ ಪ್ರೇಮದ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಡಬ ಮೂಲದ ವ್ಯಕ್ತಿ ಅನೀಶ್​ ರೆಹಮಾನ್​ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಅನೀಶ್​ ಇನ್​ಸ್ಟಾಗ್ರಾಂ ಮೂಲಕ ಯುವತಿಯ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಈ ಸ್ನೇಹ ಪ್ರೇಮಕ್ಕೂ ತಿರುಗಿತ್ತು. ಆಕೆಯನ್ನು ಭೇಟಿ ಕೂಡ ಮಾಡಿದ್ದ ಅನೀಶ್​ ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾರೆ. ಹೋಟೆಲ್​​​ನಲ್ಲಿ ಯುವತಿಯೊಂದಿಗೆ ರೂಮ್​ ಮಾಡಿದ್ದ ಈ ಪಾಪಿ ನಿರಂತರ 20 ದಿನಗಳ ಕಾಲ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.ಆದರೆ ಅನೀಶ್​ ತನಗೆ ಮೋಸ ಮಾಡಿದ್ದಾನೆ ಎಂದು ತಿಳಿಯುತ್ತಿದ್ದಂತೆಯೇ ಯುವತಿಯು ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾಳೆ. ಬಂಧಿತ ಅನೀಶ್​ ವಿರುದ್ಧ ಐಪಿಸಿ ಸೆಕ್ಷನ್​ 506, 417 ಹಾಗೂ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೆ ಬಂಧಿತ ಅನೀಶ್​ ರೆಹಮಾನ್​ ಈ ಹಿಂದೆ ಕಾವೂರು ಪೊಲೀಸ್​ ಠಾಣೆಯಲ್ಲಿ ಗಾಂಜಾ ಸೇವನೆ ಪ್ರಕರಣ ಅಡಿಯಲ್ಲಿ ಅರೆಸ್ಟ್​ ಆಗಿದ್ದ ಅನ್ನೋದು ತನಿಖೆ ವೇಳೆ ತಿಳಿದು ಬಂದಿದೆ.

ಪ್ರವಾಸಿ ವೀಸಾದಲ್ಲಿ ದುಬೈ ತೆರಳಬೇಕಿದ್ದರೆ ಹೊಸ ನಿಯಮ

Posted by Vidyamaana on 2024-06-01 05:32:20 |

Share: | | | | |


ಪ್ರವಾಸಿ ವೀಸಾದಲ್ಲಿ ದುಬೈ ತೆರಳಬೇಕಿದ್ದರೆ ಹೊಸ ನಿಯಮ

ನವದೆಹಲಿ: ದುಬೈಗೆ ತೆರಳುವ ಪ್ರವಾಸಿಗರಿಗೆ ವೀಸಾ ನಿಯಮದಲ್ಲಿ ಕೆಲವು ಬದಲಾವಣೆಗಳನ್ನು ತರಲಾಗಿದೆ. ದುಬೈಗೆ ಪ್ರವಾಸಿ ವೀಸಾದಲ್ಲಿ ತೆರಳುವ ಮಂದಿ ಕನಿಷ್ಠ ಆರು ತಿಂಗಳ ವ್ಯಾಲಿಡಿಟಿ ಇರುವ ಪಾಸ್ ಪೋರ್ಟ್ ಹೊಂದಿರಬೇಕು. ಹಿಂತಿರುಗಿ ಬರುವ ದಿನಾಂಕದ ವಿಮಾನ ಟಿಕೆಟ್ ಮೊದಲೇ ಬುಕ್ ಮಾಡಿರಬೇಕು ಸೇರಿದಂತೆ ಹೊಸ ನಿಯಮಗಳನ್ನು ಹೇರಲಾಗಿದೆ ಎನ್ನುವ ಮಾಹಿತಿ ಟ್ರಾವೆಲ್ ಏಜನ್ಸಿಗಳಿಂದ ತಿಳಿದುಬಂದಿದೆ.

ದುಬೈನ ತಾಹಿರಾ ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಸ್ಥೆಯ ಸಿಇಓ ಮತ್ತು ಸ್ಥಾಪಕ ಫಿರೋಜ್ ಮಲಿಯಾಕ್ಕಲ್ ಹೇಳಿಕೆಯನ್ನು ಉಲ್ಲೇಖಿಸಿ ದುಬೈ ಮಾಧ್ಯಮ ಖಲೀಜ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದೆ. ದುಬೈ ತೆರಳುವ ಪ್ರವಾಸಿಗರು ಕನಿಷ್ಠ 3 ಸಾವಿರ ದಿರ್ಹಮ್ ನಗದು ಅಥವಾ ಅಷ್ಟೇ ಮೌಲ್ಯದ ಇನ್ನಾವುದೇ ಕರೆನ್ಸಿ ಹೊಂದಿರಬೇಕು, ದುಬೈನಲ್ಲಿ ಉಳಿದುಕೊಳ್ಳುವುದಕ್ಕೆ ಹೊಟೇಲ್ ಬುಕ್ ಅಥವಾ ಇನ್ನಾವುದೇ ವಿಳಾಸವನ್ನು ಮೊದಲೇ ಗೊತ್ತು ಮಾಡಿರಬೇಕು, ಕನಿಷ್ಠ ಆರು ತಿಂಗಳ ಅವಧಿ ಇರುವ ಪಾಸ್ ಪೋರ್ಟ್ ಮತ್ತು ವ್ಯಾಲಿಡ್ ವೀಸಾ ಹೊಂದಿರಬೇಕು. ಹಿಂತಿರುಗಿ ಬರುವುದಕ್ಕೆ ಮಾಡಿರುವ ವಿಮಾನ ಟಿಕೆಟನ್ನೂ ಹೊಂದಿರಬೇಕು. ಇವನ್ನೆಲ್ಲ ದುಬೈಗೆ ತೆರಳುವಾಗಲೇ ವಿಮಾನ ನಿಲ್ದಾಣದಲ್ಲಿ ಚೆಕ್ ಮಾಡಲಾಗುತ್ತದೆ ಎಂದು ಫಿರೋಜ್ ಮಲಿಯಾಕ್ಕಲ್ ತಿಳಿಸಿದ್ದಾಗಿ ಖಲೀಜ್ ಟೈಮ್ಸ್ ವರದಿ ಮಾಡಿದೆ.

Recent News


Leave a Comment: