ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಸುದ್ದಿಗಳು News

Posted by vidyamaana on 2024-07-08 20:09:58 |

Share: | | | | |


ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ : ದ. ಕ ಜಿಲ್ಲೆಯ ಎಲ್ಲ ಶಾಲೆಗಳಿಗೆ ನಾಳೆ (ಜು 9) ರಜೆ

ಮಂಗಳೂರು: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಯ ಶಾಲಾ, ಪಿಯು ಕಾಲೇಜಿಗೆ ಜುಲೈ 09ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ದ. ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 09/07/224 ರಂದು ರಜೆಯನ್ನು ಘೋಷಿಸಲಾಗಿದೆ.

 Share: | | | | |


ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು

Posted by Vidyamaana on 2024-01-01 17:15:10 |

Share: | | | | |


ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು

ಬೆಂಗಳೂರು : ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿರುವ ಮದ್ಯಪ್ರಿಯರು ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭರ್ಜರಿ ಕಿಕ್ ಕೊಟ್ಟಿದ್ದಾರೆ. 2023ರ ಕೊನೇ ದಿನ ಡಿ.31ರಂದು ರಾಜ್ಯಾದ್ಯಂತ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 193 ಕೋಟಿ ರೂಪಾಯಿ ಹರಿದು ಬಂದಿದೆ.ಮಾಮೂಲಿ ದಿನದಲ್ಲಿ ಒಂದು ದಿನಕ್ಕೆ ರಾಜ್ಯದ ಅಬಕಾರಿ ಇಲಾಖೆಗೆ ಸುಮಾರು 90 ಕೋಟಿ ಆದಾಯ ಬರುತ್ತಾ ಇತ್ತು. ಆದರೆ ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆಯಲ್ಲಿ ಒಂದೇ ದಿನದಲ್ಲಿ ಅಬಕಾರಿ ಇಲಾಖೆ ಆದಾಯ ದುಪ್ಪಟ್ಟು ಏರಿಕೆಯಾಗಿದೆ.


ಕಳೆದ ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೆ 1072 ಕೋಟಿ ರೂಪಾಯಿ ಆದಾಯ ರಾಜ್ಯ ಸರ್ಕಾರಕ್ಕೆ ಬಂದಿದೆ. ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೂ IML ಲಿಕ್ಕರ್‌ನಲ್ಲಿ ಒಟ್ಟು 22.2 ಲಕ್ಷದ ಬಾಕ್ಸ್ ಮಾರಾಟವಾಗಿದೆ. 22.2 ಲಕ್ಷ ಬಾಕ್ಸ್ ಸೆಲ್ ಆಗಿರುವುದರಿಂದ ಒಟ್ಟು 900 ಕೋಟಿ ರೂಪಾಯಿ ಆದಾಯ‌ ಬಂದಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಯರ್ 14.೦7 ಲಕ್ಷ ಬಾಕ್ಸ್ ಸೇಲ್ ಮಾಡಲಾಗಿದೆ. ಬಿಯರ್ ಮಾರಾಟದಿಂದಲೇ ಸುಮಾರು 170 ಕೋಟಿರೂಪಾಯಿ ಆದಾಯ ಸರ್ಕಾರದ ಬೊಕ್ಕಸಕ್ಕೆ ಬಂದಿದೆ.ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಬರೋಬ್ಬರಿ 2900 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಅಬಕಾರಿ ಇಲಾಖೆಗೆ ಬಂದಿದೆ. ಅಂದ್ರೆ ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ರೂಪಾಯಿ ಆದಾಯ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದ್ರೆ ಬಿಯರ್ ಮಾರಾಟದಲ್ಲಿ 15 ಪರ್ಸೆಂಟ್ ಏರಿಕೆ ಕಂಡಿದೆ.

ಪ್ರಜ್ವಲ್ ವೀಡಿಯೋ ಪ್ರಕರಣ:ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

Posted by Vidyamaana on 2024-04-29 07:18:07 |

Share: | | | | |


ಪ್ರಜ್ವಲ್ ವೀಡಿಯೋ ಪ್ರಕರಣ:ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

ಬೆಂಗಳೂರು ,ಏ.28: ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ.ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದೆ.

ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಅಂಬಿಕಾ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವೀಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ.

ಬೆಳ್ತಂಗಡಿ : ನೇಣು ಬಿಗಿದು ವಿದ್ಯಾ ಆತ್ಮಹತ್ಯೆ

Posted by Vidyamaana on 2024-06-25 20:13:22 |

Share: | | | | |


ಬೆಳ್ತಂಗಡಿ : ನೇಣು ಬಿಗಿದು ವಿದ್ಯಾ ಆತ್ಮಹತ್ಯೆ

ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪದ ಕೊಳಂಬೆ ಉಮೇಶ್ ಗೌಡ ರವರ ಪುತ್ರಿ ವಿದ್ಯಾ (22) ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಇಂದು ರಂಜಾನ್ ಹಬ್ಬ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

Posted by Vidyamaana on 2024-04-10 10:27:49 |

Share: | | | | |


ಇಂದು ರಂಜಾನ್ ಹಬ್ಬ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ಇಂದು ರಂಜಾನ್ ಹಬ್ಬ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಏ.11ರಂದು ಇದ್ದ ಸಾರ್ವತ್ರಿಕ ರಜೆಯನ್ನು ಏ.10ರಂದು ನೀಡಿ ದ.ಕ. ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಕರ್ನಾಟಕ ಸರಕಾರವು 2024ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ: 11-04-2024 ರಂದು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿತ್ತು

ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

Posted by Vidyamaana on 2023-05-12 12:00:38 |

Share: | | | | |


ಲೀಡ್ ಬಂದಕೂಡ್ಲೇ ಬೆಂಗಳೂರು ಬಸ್ ಹತ್ತಿ – ಕೈ ಅಭ್ಯರ್ಥಿಗಳಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮುಗಿದು ಇದೀಗ ಮತ ಎಣಿಕೆಗೆ ಕ್ಷಣಗಣನೆ ಪ್ರಾರಂಭಗೊಂಡಿದೆ. ಈ ನಡುವೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣಗೊಳ್ಳಬಹುದೆಂಬ ಸೂಚನೆ ಸಿಕ್ಕಿರುವುದರಿಂದ ರಾಜ್ಯದಲ್ಲಿ ಮೂರೂ ಪಕ್ಷಗಳೂ ‘ಹೈ ಅಲರ್ಟ್’ನಲ್ಲಿವೆ.

ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರುವ ಸಾಧ್ಯತೆಗಳು ಕಡಿಮೆಯಿದ್ದು ಕಾಂಗ್ರೆಸ್ ಪಕ್ಷ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಗಳನ್ನು ಬಹುತೇಕ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ನೀಡಿರುವುದು ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಇದೀಗ ಫಲಿತಾಂಶದ ಬಳಿಕ ‘ಅಪರೇಷನ್ ಕಮಲ’ ನಡೆಯುವ ಸಾಧ್ಯತೆ ದಟ್ಟವಾಗಿರುವ ಕಾರಣ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಹೊಸ ಪ್ಲ್ಯಾನ್ ಹೆಣೆದಿದ್ದು, ಮೇ13ರಂದು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಕಾಂಗ್ರೆಸ್ ಅಭ್ಯರ್ಥಿ ತನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಳ್ಳುತ್ತಿದ್ದಂತೆ ನೇರವಾಗಿ ಬೆಂಗಳೂರಿಗೆ ಬರುವಂತೆ ಪಕ್ಷದ ಹೈಕಮಾಂಡ್ ‘ಸ್ಟ್ರಿಕ್ಟ್ ಆದೇಶ’ ರವಾನಿಸಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳ ಜೊತೆ ವರ್ಚ್ಯವಲ್ ಮೀಟಿಂಗ್ ನಡೆಸಿದ್ದು ಈ ಸಂದರ್ಭದಲ್ಲಿ ಇಂತಹದ್ದೊಂದು ಸೂಚನೆಯನ್ನು ‘ಕೈ’ ಅಭ್ಯರ್ಥಿಗಳಿಗೆ ರವಾನಿಸಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಪ್ರಜ್ವಲ್ ವಿಡಿಯೋ ಪ್ರಕರಣ ; ರೇವಣ್ಣ ಇವತ್ತು ವಿಚಾರಣೆಗೆ ಬರದಿದ್ರೆ ಅರೆಸ್ಟ್ ಮಾಡ್ತೀವಿ: ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

Posted by Vidyamaana on 2024-05-02 15:23:46 |

Share: | | | | |


ಪ್ರಜ್ವಲ್ ವಿಡಿಯೋ ಪ್ರಕರಣ ; ರೇವಣ್ಣ ಇವತ್ತು ವಿಚಾರಣೆಗೆ ಬರದಿದ್ರೆ ಅರೆಸ್ಟ್ ಮಾಡ್ತೀವಿ: ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

ಕಲಬುರಗಿ, ಮೇ 2:  ಪ್ರಜ್ವಲ್ ರೇವಣ್ಣ ಕುರಿತ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಯಾರನ್ನೂ ರಕ್ಷಣೆ ಮಾಡೋದಕ್ಕೆ ಸಾಧ್ಯವೇ ಇಲ್ಲ.‌ 41(a) ಸೆಕ್ಷನ್ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದರಂತೆ, 24 ಗಂಟೆಯ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇಲ್ಲದೇ ಇದ್ದಲ್ಲಿ ರೇವಣ್ಣ ಅವರನ್ನು ಬಂಧಿಸಬೇಕಾಗುತ್ತೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. 

ರೇವಣ್ಣ ಇವತ್ತು ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಹಾಜರಾಗದೆ‌ ಇದ್ರೆ ರೇವಣ್ಣ ಅವರನ್ನ ಬಂಧಿಸಬೇಕಾಗುತ್ತೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೇರಳಿದ ಹಿನ್ನಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್ ಪರ ವಕೀಲರು ಸಮಯ ಕೇಳಿದ್ದಾರೆ. ಈ ಪ್ರಕರಣದಲ್ಲಿ ಸಮಯ ಕೋಡೊದಕ್ಕೆ ಸಾಧ್ಯ ಇಲ್ಲ. ಹಾಗಾಗಿ ಅವರನ್ನು ಅರೆಸ್ಟ್ ಮಾಡಲು ಎಸ್ಐಟಿ ಕ್ರಮ ಕೈಗೊಳ್ಳುತ್ತದೆ ಎಂದರು.‌



Leave a Comment: