ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಸುದ್ದಿಗಳು News

Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58

Share: | | | | |


ನೇರಳಕಟ್ಟೆ : ಪಂತಡ್ಕ ನಿವಾಸಿ ಬಾತಿಷಾ ನಿಧನ

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ. 

 ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ

ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.

 Share: | | | | |


ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

Posted by Vidyamaana on 2024-04-01 04:49:58 |

Share: | | | | |


ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

ರಾಂಚಿ: ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಶಾಂತ್ ಕುಮಾರ್ ಸಿನ್ಹಾರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮಾಜಿ ಗೆಳತಿ ಕಾಜಲ್ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್ ಕುಮಾರ್ ಸಿನ್ಹಾ ಹತ್ಯೆ ಮಾಡಿ ಬಳಿಕ ಶವವನ್ನು ಜಾರ್ಖಂಡ್‌ನ ಹಜಾರಿಬಾಗ್‌ನ ಛದ್ವಾ ಸೇತುವೆಯ ಕೆಳಗೆ ಎಸೆಯಲಾಗಿತ್ತು.



ಕೆಲಸಕ್ಕೆಂದು ತೆರಳಿದ್ದ ಶ್ರೀದೇವಿ ನಾಪತ್ತೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Posted by Vidyamaana on 2023-06-11 12:59:53 |

Share: | | | | |


ಕೆಲಸಕ್ಕೆಂದು ತೆರಳಿದ್ದ ಶ್ರೀದೇವಿ ನಾಪತ್ತೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು.ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಜೂ.9 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ವೇಳೆ ಶ್ರೀದೇವಿಯವರ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಆಕೆಯ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತಾದರೂ ಆಕೆ ಪತ್ತೆಯಾಗಿಲ್ಲ ಎಂದು ಶ್ರೀದೇವಿ ರವರ ತಂದೆ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ‌ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಗೆಲುವು

Posted by Vidyamaana on 2024-06-10 05:27:57 |

Share: | | | | |


ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 6 ರನ್ ಗಳ ರೋಚಕ ಗೆಲುವು

ನ್ಯೂಯಾರ್ಕ್‌: ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಇಂದು ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ, 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸಾಧರಣ ಮೊತ್ತ ಕಲೆ ಹಾಕಿತು.

ಭಾರತ ತಂಡದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕ ಎಲ್ಲವೂ ವಿಫಲವಾಯಿತು. ಹೀಗಾಗಿ ತಂಡ 119 ರನ್‌ಗಳಿಗೆ ಆಲೌಟ್ ಆಯಿತು.

ಬೆಂಗಳೂರಲ್ಲಿ ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ ಗುರುತು ಪತ್ತೆ

Posted by Vidyamaana on 2024-08-04 07:11:12 |

Share: | | | | |


ಬೆಂಗಳೂರಲ್ಲಿ ಮೆಟ್ರೋ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ ಗುರುತು ಪತ್ತೆ

ಬೆಂಗಳೂರು : ಇಂದು ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲು ನಿಲ್ದಾಣದಲ್ಲಿ ರೈಲು ಸಮೀಪ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದನು. ಹೀಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಿದೆ.ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯನ್ನು ನವೀನ್ ಕುಮಾರ್ ಅರೋರ(57) ಎಂಬುದಾಗಿ ಗುರುತಿಸಲಾಗಿದೆ.

ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

Posted by Vidyamaana on 2023-09-07 12:33:10 |

Share: | | | | |


ಅಧಿಕಾರಿಗಳು ಉದ್ಯಮಿಗಳಲ್ಲಿ ಹಣದ ಬೇಡಿಕೆ ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ ಅವಶ್ಯಕತೆಯಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ತಿಳಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಈ ರೀತಿಯ ವಿಚಾರಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ಅಧಿಕಾರಿಗಳ ಬಳಿಯಾಗಲಿ, ಉದ್ಯಮಿಗಳ ಬಳಿಯಾಗಲಿ ಚುನಾವಣೆಗೆ ಮುನ್ನವೂ ಹಣ ಕೇಳಿಲ್ಲ ಆ ಬಳಿಕವೂ ಕೇಳಿಲ್ಲ ಇನ್ನು ಕೇಳುವುದೂ ಇಲ್ಲ ಅದರ ಅಗತ್ಯತೆ ನನಗಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳ ಬಳಿ , ಉದ್ಯಮಿಗಳ ಬಳಿ ಹಣ ಕೇಳಿದರೆ ಅವರು ಕೊಡಬೇಕಾದ ಅಗತ್ಯವಿಲ್ಲ. ಶಾಸಕರು ಹೇಳಿರಬಹುದೇ ಎಂಬ ಅನುಮಾನವೇ ಬೇಡ ನಾನು ಯಾರಲ್ಲೂ ಹಣ ಕಲೆಕ್ಷನ್ ಮಾಡಲು ಹೇಳಿಯೂ ಇಲ್ಲ , ಮುಂದಕ್ಕೆ ಹೇಳುವುದೂ ಇಲ್ಲಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

Posted by Vidyamaana on 2024-02-12 07:37:54 |

Share: | | | | |


ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಅಭಿನಂದನೆ - ಸನ್ಮಾನ

ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು ಇತ್ತೀಚೆಗೆ ವಿವಿಧ ಹುದ್ದೆಗಳನ್ನು ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ರವರ ನೇತೃತ್ವದಲ್ಲಿ ಫೆ. 10 ರಂದು ದರ್ಬೆಯಲ್ಲಿ ನಡೆಯಿತು.


ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರು ಮಾತನಾಡಿ, ಪುತ್ತೂರಿನಲ್ಲಿ ಈ ಹಿಂದೆ ನಡೆದ ಪಿಲಿರಂಗ್, ಕಬಡ್ಡಿ ಸ್ಪರ್ಧೆ ಹಾಗೂ 31ನೇ ವರ್ಷದ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಂಡು ಎಲ್ಲಾ ಕಡೆ ಹೆಸರುಗಳಿಸಿದೆ ಇದಕ್ಕೆ ಕಾರಣೀ ಭೂತರಾದ ಹಾಗೂ ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ ಎಲ್ಲಾ ಸದಸ್ಯರಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು. ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿರಂಜನ ರೈ ಮಠಂತಬೆಟ್ಟು,ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸುರೇಂದ್ರ ರೈ ಬಳ್ಳ ಮಜಲು ನಿರ್ದೇಶಕರಾಗಿ ಆಯ್ಕೆಗೊಂಡ ರಂಜಿತ್ ಬಂಗೇರ, ಪುತ್ತೂರು ನಗರಸಭಾ ಸದಸ್ಯರಾಗಿ ಆಯ್ಕೆಗೊಂಡ ದಿನೇಶ್ ಶೇವಿರೆ ಪುತ್ತೂರು ಕೋಟಿ ಚೆನ್ನಯ ಕಂಬಳವು ಅತ್ಯಂತ ಯಶಸ್ವಿಯಾಗಿ ನೆರವೇರಲು ಅದರ ನೇತೃತ್ವವನ್ನು ವಹಿಸಿಕೊಂಡ ಚಂದ್ರಹಾಸ ಶೆಟ್ಟಿ ಹಾಗೂ ಅವರ ಟೀಮ್‌ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.ಬಳಿಕ ಮಾತನಾಡಿದ ಅವರು ಪುತ್ತೂರು ಕಂಬಳವನ್ನು ನಡೆಸಿಕೊಂಡು ಬಂದ ವಿನಯ್ ಕುಮಾರ್ ಸೊರಕೆ ಅವರು ಉಡುಪಿಯಲ್ಲಿ ಎಂ.ಪಿ. ಆದರೂ ನಾನು ಕಾಂಗ್ರೆಸ್ಸಿಗೆ ಬಂದು ಎಂಎಲ್‌ಎ ಆದೆ. ಅಶೋಕ್ ರೈ ರವರು ಪುತ್ತೂರು ಕಂಬಳಕ್ಕೆ ಸೇರಿಕೊಂಡ ಬಳಿಕ ಶಾಸಕರಾದರು ಅದೇ ರೀತಿ ಕಂಬಳದಲ್ಲಿ ತೊಡಗಿಸಿಕೊಂಡರವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸ್ಥಾನಮಾನ ದೊರಕುತ್ತಲೇ ಬರಲಿದೆ ಎಂದು ಹೇಳಿದರು. ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ.ಖಜಾಂಜಿ ಪಂಜಿಗುಡ್ಡೆ ಈಶ್ವರಭಟ್ ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೊರ್ಮಂಡ ಉಪಸಿತರಿದ್ದರು.

Recent News


Leave a Comment: