ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಸುದ್ದಿಗಳು News

Posted by vidyamaana on 2024-07-25 09:34:49 |

Share: | | | | |


ಪಿಜಿ ಯುವತಿಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್

ಬೆಂಗಳೂರು : ಕೋರಮಂಗಲದ ಲೇಡಿಸ್ ಪಿಜಿ ಒಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ. ಮೃತ ಯುವತಿಯನ್ನು ಬಿಹಾರದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದ್ದು, ಆಕೆಯ ಪ್ರಿಯತಮನೇ ಕೊಲೆಗಾರ ಎಂದು ಪೊಲೀಸರು ತಿಳಿಸಿದ್ದಾರೆ .

ಕೃತಿ ಕುಮಾರಿ ತಾನು ಪ್ರೀತಿಸುತ್ತಿದ್ದ ಯುವಕನಿಂದಲೇ ಕೊಲೆಯಾಗಿದ್ದಾರೆ. ರಾತ್ರಿ 11:30ಕ್ಕೆ ಕೃತಿ ಕುಮಾರಿಯೇ ಯುವಕನನ್ನು ಕರೆದುಕೊಂಡು ಬಂದಿರುವ ಬಗ್ಗೆ ಮೇಲ್ನೋಟಕ್ಕೆ ಮಾಹಿತಿ ಸಿಕ್ಕಿದೆ. ಪಿಜಿಯಿಂದ ಹೊರ ಬಂದ ಕೃತಿ ತನ್ನ ಪ್ರಿಯತಮನ ಜತೆ ರಾತ್ರಿ ಊಟ ಮಾಡಿದ್ದರು. ಊಟ ಮುಗಿಸಿದ ಕೃತಿ ತನ್ನೊಂದಿಗೆ ಯುವಕನ್ನು ಪಿಜಿಗೆ ಕರೆತಂದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತಿಯ ರೂಂಗೆ ಆಗಮಿಸಿದ್ದ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿ ಕೊಲೆಯಾಗಿರುವ ಶಂಕೆ ಇದೆ.

ಪಿಜಿಯ ಸಿಸಿಟಿವಿ ಎಲ್ಲವನ್ನು ಕೂಡ ಪರಿಶೀಲನೆ ನಡೆಸಿದ್ದೇವೆ. ಪಿಜಿಯ ನಿರ್ಲಕ್ಷ್ಯತನದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಿ ಪತ್ತೆಗಾಗಿ ಪೊಲೀಸರ ವಿಶೇಷ ತಂಡವನ್ನ ರಚನೆ ಮಾಡಲಾಗಿದೆ ಎಂದಿದ್ದಾರೆ

 Share: | | | | |


ಸಕಲೇಶಪುರ-ಬಾಳ್ಳುಪೇಟೆ ನಡುವಿನ ಭೂಕುಸಿತದ ಮಣ್ಣು ತೆರವು: ನಾಳೆಯಿಂದ ಈ ರೈಲುಗಳ ಸಂಚಾರ ಪುನರಾರಂಭ

Posted by Vidyamaana on 2024-08-19 21:01:11 |

Share: | | | | |


ಸಕಲೇಶಪುರ-ಬಾಳ್ಳುಪೇಟೆ ನಡುವಿನ ಭೂಕುಸಿತದ ಮಣ್ಣು ತೆರವು: ನಾಳೆಯಿಂದ ಈ ರೈಲುಗಳ ಸಂಚಾರ ಪುನರಾರಂಭ

ಬೆಂಗಳೂರು: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಮಣ್ಣು ಕುಸಿದಿತ್ತು. ಇಂದು ಈ ಮಣ್ಣುನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭಿಸಲಾಗುತ್ತದೆ.

ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ.

ಮಂಗಳೂರು; ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ರಕ್ಷಿಸಿದ ಪ್ರಕರಣ

Posted by Vidyamaana on 2023-06-23 03:05:00 |

Share: | | | | |


ಮಂಗಳೂರು; ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ರಕ್ಷಿಸಿದ ಪ್ರಕರಣ

ಮಂಗಳೂರು: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ಬಳಿ ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯಪ್ರಜ್ಞೆಯಿಂದ ರಕ್ಷಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಸ್ತೆ ದಾಟಿದ ಮಹಿಳೆ ಹಾಗೂ ಬಸ್ ಚಾಲಕ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ.ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಸರಗೋಡು ಜಿಲ್ಲೆಯ ವರ್ಕಾಡಿಯ ಐಸಮ್ಮ (63) ಎಂಬವರು ರಸ್ತೆ ದಾಟುವಾಗ ನಿರ್ಲಕ್ಷ್ಯ ವಹಿಸಿರುವುದರ ವಿರುದ್ಧ ಸಂಚಾರ ನಿಯಂತ್ರಣ ನಿಯಮ ಸೆ.13 ಮತ್ತು ಸೆ.92ಜಿ ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಂದು ಸಂಚಾರ ದಕ್ಷಿಣ ಠಾಣೆಯ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.


ಮಂಗಳೂರಿನಿಂದ ಮುಡಿಪುಗೆ ತೆರಳುತ್ತಿದ್ದ ಗೋಪಾಲಕೃಷ್ಣ ಎಂಬ ಹೆಸರಿನ ಖಾಸಗಿ ಬಸ್ ತೌಡುಗೋಳಿ ಕ್ರಾಸ್ ಬಳಿ ಸಂಚರಿಸುತ್ತಿದ್ದಾಗ ವರ್ಕಾಡಿಯ ಐಸಮ್ಮ ರಸ್ತೆ ದಾಟುವಾಗ ನಿರ್ಲಕ್ಷಿಸಿದ್ದರು ಮತ್ತು ಸಂಚಾರ ನಿಯಮವನ್ನು ಪಾಲಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೊಲೀಸರು ಘಟನೆ ನಡೆದ ಎರಡು ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ ಈ ಮಹಿಳೆಯು ನ್ಯಾಯಾಲಯದ ಮೂಲಕ ದಂಡ ಪಾವತಿಸಬೇಕಾಗಿದೆ.ಮಹಿಳೆಯು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ತಕ್ಷಣ ಬಸ್ ಚಾಲಕ ಬಸ್ಸನ್ನು ಎಡಕ್ಕೆ ಸರಿಸಿದ್ದಾರೆ. ಇದರಿಂದ ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ಈ ಘಟನೆಯ ದೃಶ್ಯವು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಮಹಿಳೆಗೆ ಬಸ್ ಢಿಕ್ಕಿ ಹೊಡೆಯುವುದನ್ನು ಬಸ್ ಚಾಲಕ ತಪ್ಪಿಸಿದ್ದರೂ, ಕರ್ಕಶ ಹಾರ್ನ್‌ನೊಂದಿಗೆ ಕಿರಿದಾದ ರಸ್ತೆಯಲ್ಲಿ ಅತಿವೇಗ, ಅಜಾಗರೂಕತೆಯ ಬಸ್ ಚಾಲನೆಯ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿದ್ದರು. ಅಲ್ಲದೆ ಕರ್ಕಶ ಹಾರ್ನ್ ಕಿತ್ತು ಹಾಕಿದ್ದರು. ಇದೀಗ ಘಟನೆ ನಡೆದ ಎರಡು ದಿನದ ಬಳಿಕ ರಸ್ತೆ ದಾಟುವಾಗ ನಿರ್ಲಕ್ಷ್ಯ ವಹಿಸಿದ ಮಹಿಳೆಯ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ವಿಶ್ವಕರ್ಮ ಸಮಾಜದ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ: ಆಮಂತ್ರಣ ಬಿಡುಗಡೆ

Posted by Vidyamaana on 2022-12-15 07:40:02 |

Share: | | | | |


ವಿಶ್ವಕರ್ಮ ಸಮಾಜದ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ: ಆಮಂತ್ರಣ ಬಿಡುಗಡೆ

ಪುತ್ತೂರು: ವಿಶ್ವಕರ್ಮ ಯುವ ಸಮಾಜದ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜನವರಿ ೮ರಂದು ನಡೆಯಲಿರುವ ವಿಶ್ವಕರ್ಮ ಸಮಾಜದ ವಟುಗಳ ೮ನೇ ಬಾರಿಯ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಲಾಯಿತು.

ಸಮಾಜದ ಹಿರಿಯರು, ಕೂಡುವಳಿಕೆ ಮೊಕ್ತೇಸರ ಕೆ. ಕೃಷ್ಣ ಆಚಾರ್ಯ ದೀಪ ಬೆಳಗಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. 

ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಪ್ರಕಾಶ ಆಚಾರ್ಯ ಕೆ. ಮಾತನಾಡಿ, ಜ. ೮ರಂದು ವಿಶ್ವಕರ್ಮ ಯುವ ಸಮಾಜ ಪುತ್ತೂರು, ವಿಶ್ವಬ್ರಾಹ್ಮಣ ಸೇವಾ ಸಂಘ ಪುತ್ತೂರು ಮತ್ತು ವಿಶ್ವಕರ್ಮ ಮಹಿಳಾ ಮಂಡಲಿ ಪುತ್ತೂರು ಇದರ ಸಹಕಾರದೊಂದಿಗೆ ವಿಶ್ವಕರ್ಮ ಸಮಾಜದ ವಟುಗಳಿಗೆ ೮ನೇ ಬಾರಿಗೆ ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಬಂಟ್ವಾಳ ವಿಶ್ವಕರ್ಮ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಹಾಗೂ ಪುತ್ತೂರಿನ ನಿವೃತ್ತ ಉಪಖಜಾನಾಧಿಕಾರಿ ವಿಠಲಾಚಾರಿ ಬಿ. ಮುಖ್ಯಅತಿಥಿಯಾಗಿರುವರು. ಈಗಾಗಲೇ ವಟುಗಳ ನೊಂದಾವಣಿ ಕಾರ್ಯ ಆರಂಭವಾಗಿದ್ದು ವಿವಿಧ ಜಿಲ್ಲೆಗಳಿಂದ ಸುಮಾರು ೨೫ಕ್ಕೂ ಹೆಚ್ಚು ವಟುಗಳು ಭಾಗವಹಿಸುವ ನೀರಿಕ್ಷೆಯಿದೆ ಎಂದರು.

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಎಸ್.ಎನ್. ಜಗದೀಶ ಆಚಾರ್ಯ ಮಾತನಾಡಿ, ಉಚಿತ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮ ಯಶಸ್ವಿಯಾಗುವಂತೆ ಶುಭಹಾರೈಸಿದರು. ವಿಶ್ವಬ್ರಾಹ್ಮಣ ಸೇವಾ ಸಂಘದ ಕಾರ್ಯದರ್ಶಿ ಶ್ರೀಧರ ಆಚಾರ್ಯ ಕೊಕ್ಕಡ ಅವರು ವಿವಿಧ ಸಮಿತಿಗಳ ರಚನೆ ಹಾಗೂ ಜವಾಬ್ದಾರಿಗಳ ಹಂಚಿಕೆಯ ಬಗ್ಗೆ ತಿಳಿಸಿದರು. 

ಸಲಹಾ ಸಮಿತಿ ಸದಸ್ಯರಾದ ಭುಜಂಗ ಆಚಾರ್ಯ, ರಮೇಶ ಆಚಾರ್ಯ ಮಾಮೇಶ್ವರ, ಮಹಿಳಾ ಮಂಡಳಿ ಕಾರ್ಯದರ್ಶಿ ಭವ್ಯಶ್ರೀ ವಾದಿರಾಜ್, ಉಷಾ ಸದಾನಂದ ಆಚಾರ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಮಹೇಶ್ ಆಚಾರ್ಯ ವರದಿ ಮಂಡಿಸಿದರು. ಸಂಘಟನಾ ಕಾರ್ಯದರ್ಶಿ ಆನಂದ ಆಚಾರ್ಯ ಪ್ರಾರ್ಥಿಸಿ, ಖಜಾಂಚಿ ವಸಂತ ಆಚಾರ್ಯ ಬಿ. ವಂದಿಸಿದರು.


ಜಮ್ಮು-ಕಾಶ್ಮೀರದ ದೋಡಾದಲ್ಲಿ ಚೆನಾಬ್ ನದಿಗೆ ಉರುಳಿದ ಬಸ್: 25 ಮಂದಿ ಸಾವು, 10 ಮಂದಿಗೆ ಗಾಯ

Posted by Vidyamaana on 2023-11-15 14:07:03 |

Share: | | | | |


ಜಮ್ಮು-ಕಾಶ್ಮೀರದ ದೋಡಾದಲ್ಲಿ ಚೆನಾಬ್ ನದಿಗೆ ಉರುಳಿದ ಬಸ್: 25 ಮಂದಿ ಸಾವು, 10 ಮಂದಿಗೆ ಗಾಯ

ದೋಡಾ: ಕಿಶ್ತ್ವಾರ್ ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ದೋಡಾದಿಂದ 15 ಕಿ.ಮೀ ದೂರದಲ್ಲಿರುವ ರಾಗಿನಲ್ಲಾ ಅಸ್ಸಾರ್ ಬಳಿ ಅಪಘಾತ ಸಂಭವಿಸಿದ ಸಮಯದಲ್ಲಿ 50 ಕ್ಕೂ ಹೆಚ್ಚು ಜನರು ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.ಎಸ್‌ಎಸ್ಪಿ ದೋಡಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

Posted by Vidyamaana on 2023-09-22 21:09:47 |

Share: | | | | |


ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ಸೋಣಂದೂರಿನಲ್ಲಿ ನಡೆದಿದೆ.


ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್‌ ಮೃತಪಟ್ಟವರು.


ಪ್ರಶಾಂತ್‌ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.


ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

Posted by Vidyamaana on 2024-03-07 18:06:31 |

Share: | | | | |


ಮಾ.10 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ ಪೂರ್ಣ ಸಹಕಾರದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆದಿರುವುದು ನಿಮ್ಮೆಲ್ಲರಿಗೂ ತಿಳಿದ ವಿಚಾರ. ಶ್ರೀ ಕ್ಷೇತ್ರದ ವಾರ್ಷಿಕ ಜಾತ್ರೆ, ಬ್ರಹ್ಮರಥೋತ್ಸವದ ಲೆಕ್ಕಪತ್ರದ ಮಂಡನೆಯು‌10-03-2024 ರಂದು ಬೆಳಿಗ್ಗೆ 9 ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು ಈ ಸಂದರ್ಭ ಎಲ್ಲ ಭಗವದ್ಭಕ್ತರು ಪಾಲ್ಗೊಳ್ಳಬೇಕಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ‌ ಮಾಜಿ‌ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.



Leave a Comment: