ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

Posted by Vidyamaana on 2024-06-06 11:17:26 |

Share: | | | | |


ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.

ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.

ಮಂಗಳೂರಿಗೆ ವಂದೇ ಭಾರತ್ ರೈಲು: Xನಲ್ಲಿ ತಿಳಿಸಿದ ಸಂಸದ ನಳಿನ್ ಕುಮಾರ್

Posted by Vidyamaana on 2023-11-08 09:30:21 |

Share: | | | | |


ಮಂಗಳೂರಿಗೆ ವಂದೇ ಭಾರತ್ ರೈಲು: Xನಲ್ಲಿ ತಿಳಿಸಿದ ಸಂಸದ ನಳಿನ್ ಕುಮಾರ್

ಮಂಗಳೂರು: ಮಂಗಳೂರಿಗೆ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ರೈಲು ಎಕ್ಸ್‌ಪ್ರೆಸ್‌ ಬರಬೇಕು ಎಂಬುದು ಹಲವರ ಬೇಡಿಕೆಯಾಗಿದೆ. ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಇದೀಗ ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ ಎಂದು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ Xನಲ್ಲಿ ಬರೆದಿದ್ದಾರೆ.


ಸಂಸದರು Xನಲ್ಲಿ, ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.


‘ಇನ್ನು ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದೂ ಕಟೀಲ್ ಬರೆದ್ದಾರೆ.

Watch Video : ಹೆಲಿಕಾಪ್ಟ‌ರ್ ಅಪಘಾತಕ್ಕೂ ಮುನ್ನ ಇರಾನ್‌ ಅಧ್ಯಕ್ಷ ರೈಸಿ ಕೊನೆಯ ದೃಶ್ಯಗಳು ಸೆರೆ

Posted by Vidyamaana on 2024-05-20 16:30:05 |

Share: | | | | |


Watch Video : ಹೆಲಿಕಾಪ್ಟ‌ರ್ ಅಪಘಾತಕ್ಕೂ ಮುನ್ನ ಇರಾನ್‌ ಅಧ್ಯಕ್ಷ ರೈಸಿ ಕೊನೆಯ ದೃಶ್ಯಗಳು ಸೆರೆ

ಇರಾನ್ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾಯುವ ಕೆಲವೇ ಗಂಟೆಗಳ ಮೊದಲು, ಇರಾನ್ ರಾಜ್ಯ ಮಾಧ್ಯಮವು ಭಾನುವಾರ ಹೆಲಿಕಾಪ್ಟರ್ನಲ್ಲಿದ್ದ ನಾಯಕನ ವೀಡಿಯೊಗಳನ್ನು ಹಂಚಿಕೊಂಡಿದೆ.

ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ತಮ್ಮ ಎದುರು ಕುಳಿತಿರುವುದನ್ನು ಕ್ಯಾಮೆರಾ ನೋಡುತ್ತಿರುವಾಗ ಇರಾನಿನ ನಾಯಕ ವಿಮಾನದ ಕಿಟಕಿಯಿಂದ ಹೊರಗೆ ನೋಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.

ಬಡ ವಿದ್ಯಾರ್ಥಿನಿಯ ಶುಲ್ಕ ಪಾವತಿಸಿದ ಶಾಸಕರು

Posted by Vidyamaana on 2024-01-19 22:22:22 |

Share: | | | | |


ಬಡ ವಿದ್ಯಾರ್ಥಿನಿಯ ಶುಲ್ಕ ಪಾವತಿಸಿದ ಶಾಸಕರು

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಪುತ್ತೂರು ಶಾಸಕರು ಆರ್ಥಿಕ ನೆರವು ನೀಡಿದರು.


ಬಡ ವಿದ್ಯಾರ್ಥಿನಿಯಾದ ಈಕೆಯ ತಂದೆ ಇತ್ತೀಚೆಗೆ ನಿಧನರಾಗಿದ್ದರು. ಆರ್ಥಿಕ ಸಂಕಷ್ಟದಿಂದ ಆಕೆಯ ಶಿಕ್ಷಣಕ್ಕೆ ಅಡಚಣೆಯಗಿತ್ತು. ಈ ಬಗ್ಗೆ ಕುಟುಂಬ ನೆರವು ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದರು. ವಿದ್ಯಾರ್ಥಿನಿಯ ಶಾಲೆಯ ಶುಲ್ಕವನ್ನು ಪೂರ್ತಿಯಾಗಿ ಪಾವತಿಸುವ ಮೂಲಕ ಬಡ ಕುಟುಂಬಕ್ಕೆ ಶಾಸಕರು ಆಸರೆಯಾಗಿದ್ದಾರೆ.

BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

Posted by Vidyamaana on 2024-06-23 08:20:55 |

Share: | | | | |


 BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸಲಾಗಿದೆ. 

ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.

ಪುತ್ತೂರು : ಮಳೆಗೆ ಮರ ಬಿದ್ದು ಮನೆಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ

Posted by Vidyamaana on 2023-05-12 15:30:03 |

Share: | | | | |


ಪುತ್ತೂರು : ಮಳೆಗೆ ಮರ ಬಿದ್ದು ಮನೆಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು : ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿಗೊಂಡ ಸ್ಥಳಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಭೇಟಿ ನೀಡಿದರು.ಲೋಕೇಶ್ ಮೇರ್ಲ ಎಂಬವರ ಮನೆಗೆ ಮರ ಬಿದ್ದು, ಸಂಪೂರ್ಣ ಛಾವಣಿ ಹಾನಿಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪುತ್ತಿಲ ರವರು ತಮ್ಮಿಂದಾದ ಧನ ಸಹಾಯವನ್ನು ಮಾಡಿದರು.ಪುತ್ತೂರಮೂಲೆ ಸಂತೋಷ್ ಕುಮಾರ್ ಎಂಬವರ ಮನೆಗೆ ಮರ ಬಿದ್ದು ಹಾನಿಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿ ತಮ್ಮಿಂದಾದ ಧನ ಸಹಾಯವನ್ನು ಮಾಡಿದರು.

Recent News


Leave a Comment: