ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಮುಂಡೂರು: ಪಟ್ಟೆಯಲ್ಲಿ ಜಾಗದ ವಿಚಾರದಲ್ಲಿ ಹಲ್ಲೆ: ಅಶ್ರಫ್ ಪಟ್ಟೆ ಗಂಭೀರ

Posted by Vidyamaana on 2023-02-02 15:37:47 |

Share: | | | | |


ಮುಂಡೂರು: ಪಟ್ಟೆಯಲ್ಲಿ ಜಾಗದ ವಿಚಾರದಲ್ಲಿ ಹಲ್ಲೆ: ಅಶ್ರಫ್ ಪಟ್ಟೆ ಗಂಭೀರ

ಪುತ್ತೂರು: ಮುಂಡೂರು ಪಟ್ಟೆ ಎಂಬಲ್ಲಿ ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದಿದ್ದು ಹಲ್ಲೆಯಿಂದ ಅಶ್ರಫ್ ಪಟ್ಟೆ ಎನ್ನುವವರು ಗಂಭೀರ ಗಾಯಗೊಂಡಿರುವ ಬಗ್ಗೆ ಇಂದು ಸಂಜೆ ವರದಿಯಾಗಿದೆ.ಅಶ್ರಫ್ ಪಟ್ಟೆ ಅವರನ್ನು ಪುತ್ತೂರು ಅಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಅಶ್ರಫ್ ಪಟ್ಟೆ ಮತ್ತು ಸ್ಥಳೀಯ  ಕೆಲವರ ಮಧ್ಯೆ ಜಾಗದ ವಿಚಾರವಾಗಿ ಗಲಾಟೆ ಆಗಿದ್ದು ಈ ವೇಳೆ ನಡೆದ ಹಲ್ಲೆಯಿಂದ ಅಶ್ರಫ್ ಪಟ್ಟೆ ಅವರಿಗೆ ತೀವ್ರ ಗಾಯವಾಗಿರುವುದಾಗಿ ತಿಳಿದು ಬಂದಿದೆ.ದಫನ ಭೂಮಿ ವಿಚಾರದಲ್ಲಿ ಗಲಾಟೆ ನಡೆದಿದೆ. ಎನ್ನಲಾಗುತ್ತಿದೆಯಾದರೂ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

Posted by Vidyamaana on 2024-01-31 16:02:09 |

Share: | | | | |


ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಕೆ ಗೆ ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯ

ಜ್ಞಾನವಾಪಿ ಮಸೀದಿಯಲ್ಲಿ ಪ್ರಕರಣದಲ್ಲಿ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಮಸೀದಿಯಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ. ಮಸೀದಿಯ ಕೆಳಗಿರುವ 10 ಮೊಹರು ನೆಲಮಾಳಿಗೆಗಳಲ್ಲಿ ಹಿಂದೂ ಪೂಜೆಗಳು ಇನ್ನು 7 ದಿನಗಳಲ್ಲಿ ಪ್ರಾರಂಭವಾಗಲಿವೆ. ಇದಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

“ಹಿಂದೂ ಕಡೆಯವರು ‘ವ್ಯಾಸ್ ಕಾ ತೆಖಾನಾ’ದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ್ದಾರೆ. ಏಳು ದಿನಗಳಲ್ಲಿ ಪೂಜೆ ಪ್ರಾರಂಭವಾಗಲಿದೆ. ಎಲ್ಲರಿಗೂ ಪೂಜೆ ಮಾಡುವ ಹಕ್ಕಿದೆ. ಜಿಲ್ಲಾಡಳಿತ 7 ದಿನಗಳಲ್ಲಿ ವ್ಯವಸ್ಥೆ ಮಾಡಬೇಕಿದೆ” ಎಂದು ಹಿಂದೂ ಪರ ಅರ್ಜಿದಾರರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪುರಾತತ್ವ ಇಲಾಖೆ ಮಸೀದಿಯಲ್ಲಿ ಸರ್ವೆ ನಡೆಸಿತ್ತು. ಅದರ ವರದಿಯು ಕೆಲ ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿತ್ತು.

ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಐಟಿ ದಾಳಿ

Posted by Vidyamaana on 2023-04-24 04:45:02 |

Share: | | | | |


ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಐಟಿ ದಾಳಿ

ಬೆಳ್ತಂಗಡಿ: ಮಾಜಿ ಸಚಿವ ಕೆ.ಗಂಗಾಧರ ಗೌಡ ಅವರ ಮನೆಗೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಂದಬೆಟ್ಟು, ಬೆಳ್ತಂಗಡಿಯಲ್ಲಿರುವ ಮನೆ ಸೇರಿದಂತೆ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗೆ ದಾಳಿ ನಡೆಸಿದೆ.ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಇತ್ತೀಚೆಗೆ ಟಿಕೆಟ್‌ ರಕ್ಷಿತ್ ಶಿವರಾಂ ಅವರಿಗೆ ಲಭಿಸುತ್ತಲೆ ರಾಜಕೀಯ ಓಡಾಟದಿಂದ ಹಿಂದೆ ಸರಿದಿದ್ದರು. ಇದೀಗ ಐಟಿ ದಾಳಿ ಶಾಕ್ ನೀಡಿದೆ.

ಒಕ್ಕಲಿಗರನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ವಿಫಲಗೊಳಿಸಿದ ನಿರ್ಮಲಾನಂದ ಶ್ರೀಗಳ ಕ್ರಮವನ್ನು ಸ್ವಾಗತಿಸುತ್ತೇವೆ: ಅಬ್ದುಲ್ ಮಜೀದ್ ಮೈಸೂರು

Posted by Vidyamaana on 2023-03-22 03:40:57 |

Share: | | | | |


ಒಕ್ಕಲಿಗರನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ವಿಫಲಗೊಳಿಸಿದ ನಿರ್ಮಲಾನಂದ ಶ್ರೀಗಳ ಕ್ರಮವನ್ನು ಸ್ವಾಗತಿಸುತ್ತೇವೆ: ಅಬ್ದುಲ್ ಮಜೀದ್ ಮೈಸೂರು

ಬೆಂಗಳೂರು: ಉರಿ ಗೌಡ, ನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ಮುನ್ನೆಲೆಗೆ ತರುವ ಮೂಲಕ ಒಕ್ಕಲಿಗ ಸಮುದಾಯವನ್ನು ಶತಮಾನಗಳಿಂದಲೂ ಅನ್ಯೋನ್ಯತೆಯಿಂದ ಬದುಕುತ್ತಿರುವ ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಬಿಜೆಪಿಯ ತಂತ್ರವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅರ್ಥ ಮಾಡಿಕೊಂಡು ಅದನ್ನು ವಿಫಲಗೊಳಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


ಒಕ್ಕಲಿಗ ಸಮುದಾಯ ಮತ್ತು ಟಿಪ್ಪು ಸುಲ್ತಾನ್ ನಡುವಿನ ಬಾಂಧವ್ಯ ಬಹಳ ಗಟ್ಟಿಯಾಗಿತ್ತು. ಟಿಪ್ಪು ಸುಲ್ತಾನ್ ಅವಧಿಯಲ್ಲಿ ಕೃಷಿಗೆ ಸಾಕಷ್ಟು ಒತ್ತು ನೀಡಿದ್ದರು. ಮೈಸೂರು ಪ್ರಾಂತ್ಯದ ರೈತರು ಇಂದಿಗೂ ಕೂಡ ಸಮೃದ್ಧ ನೀರಾವರಿಯನ್ನು ಹೊಂದಿರುವುದಕ್ಕೆ ಮೂಲವಾದ ಕನ್ನಂಬಾಡಿ ಕಟ್ಟೆಯನ್ನು ನಿರ್ಮಾಣಕ್ಕೆ ಅಸ್ತಿಭಾರ ಹಾಕಿದವರು ಟಿಪ್ಪು ಸುಲ್ತಾನರೆ ಆಗಿದ್ದರು.ಬಿಜೆಪಿಯ ಈ ಷಡ್ಯಂತ್ರವನ್ನು ಅರಿತ ಒಕ್ಕಲಿಗ ಸಮುದಾಯ ಅದರ ವಿರುದ್ಧ ಸೆಟೆದು ನಿಂತದ್ದು ಅಭಿನಂದನಾರ್ಹ. ಅದಕ್ಕೆ ಬಲ ತುಂಬೋ ರೀತಿಯಲ್ಲಿ ಒಕ್ಕಲಿಗ ಸಮುದಾಯದ ಶ್ರೀಗಳಾದ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿ ಅವರು ತಮ್ಮ ಎಚ್ಚರಿಕೆಯ ಮೂಲಕ ಬಿಜೆಪಿಯ ಒಡೆದಾಳುವ ತಂತ್ರಕ್ಕೆ ತಡೆ ಒಡ್ಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಅವರ ಈ ಕ್ರಮಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಮಜೀದ್ ಅವರು, ಮುಂದಿನ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಬಿಜೆಪಿಯ ಈ ಕುತಂತ್ರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಹೇಳಿದ್ದಾರೆ.

ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

Posted by Vidyamaana on 2023-08-11 16:23:55 |

Share: | | | | |


ತಲಪಾಡಿ ಗ್ರಾಪಂ ಅಧ್ಯಕ್ಷ ಚುನಾವಣೆಯಲ್ಲಿ ಎಸ್ಡಿಪಿಐಗೆ ಬೆಂಬಲ

ಉಳ್ಳಾಲ: ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಎಸ್ಡಿಪಿಐ ಗೆಲುವಿಗೆ ಕಾರಣರಾದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. 


ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿಗೆ ಬಹುಮತ ಇದ್ದ ಕಾರಣ ಸತ್ಯರಾಜ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಝ್ ಮತ್ತು ಮಹಮ್ಮದ್ ಅವರು ಎಸ್ ಡಿಪಿಐ ನಾಯಕರ ಆಸೆ, ಆಮಿಷ, ಒತ್ತಡದಿಂದ ಅಡ್ಡ ಮತದಾನ ಮಾಡಿ ಎಸ್ ಡಿಪಿಐ ಗೆಲುವಿಗೆ ಕಾರಣರಾಗಿದ್ದು ತಪ್ಪೊಪ್ಪಿಕೊಂಡಿದ್ದಾರೆ. ಆದರೂ ಅವರು ಪಕ್ಷಕ್ಕೆ ದ್ರೋಹ ಬಗೆದ ಕಾರಣ ಕ್ರಮ‌ ಕೈಗೊಳ್ಳಲಾಗಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತೌಸ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 




ಬಿಜೆಪಿ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಎಸ್ ಡಿಪಿಐಗೆ ಬೆಂಬಲ ನೀಡುವ ಅಗತ್ಯವೂ ಇಲ್ಲ. ಗ್ರಾಮ ಪಂಚಾಯತ್ ನಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಬಂದಿದ್ದು ಬಿಜೆಪಿಯಲ್ಲಿ ಪುಷ್ಪಲತಾ ಶೆಟ್ಟಿ ಮಾತ್ರ ಇದ್ದ ಕಾರಣ ಅವಿರೋಧವಾಗಿ ಉಪಾಧ್ಯಕ್ಷರಾಗಿದ್ದಾರೆ. ಎಸ್ ಡಿಪಿಐಗೆ ಬೆಂಬಲ, ಸಹಕಾರ ನೀಡಿಲ್ಲ, ಈ ಬಗ್ಗೆ ತಪ್ಪು ಸಂದೇಶ ಹೋಗಿದ್ದು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು ಎಂದು ತಿಳಿಸಿದರು. 


ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ಕರ್ಕೇರ, ಮುಖಂಡರಾದ ಕಸ್ತೂರಿ ಪಂಜ, ರಣದೀಪ್ ಕಾಂಚನ್, ನವೀನ್ ಪಾದಲ್ಪಾಡಿ, ಜಿತೇಂದ್ರ ಶೆಟ್ಟಿ ತಲಪಾಡಿಗುತ್ತು, ಪುಷ್ಪಲತಾ ಶೆಟ್ಟಿ, ಹೇಮಂತ್ ಶೆಟ್ಟಿ ದೇರಳಕಟ್ಟೆ ಸುದ್ದಿಗೋಷ್ಠಿಯಲ್ಲಿದ್ದರು.

ಆಸ್ಪತ್ರೆಯಲ್ಲೇ ಪ್ರೀ-ವೆಡ್ಡಿಂಗ್ ಶೂಟ್: ಗುತ್ತಿಗೆ ವೈದ್ಯನನ್ನು ಕೆಲಸದಿಂದ ವಜಾಗೊಳಿಸಿ ಡಿಸಿ ಆದೇಶ

Posted by Vidyamaana on 2024-02-09 19:02:36 |

Share: | | | | |


ಆಸ್ಪತ್ರೆಯಲ್ಲೇ ಪ್ರೀ-ವೆಡ್ಡಿಂಗ್ ಶೂಟ್: ಗುತ್ತಿಗೆ ವೈದ್ಯನನ್ನು ಕೆಲಸದಿಂದ ವಜಾಗೊಳಿಸಿ ಡಿಸಿ ಆದೇಶ

ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ.ಚಿತ್ರದುರ್ಗದ (Chitr

non

urga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು.


ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು.


ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ ಬೆನ್ನಲ್ಲೇ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.



Leave a Comment: